ಅಸ್ಸಾಂನಲ್ಲಿ ಉಗ್ರರಿಂದ ಟ್ರಕ್​ಗಳ ಮೇಲೆ ಗುಂಡಿನ ದಾಳಿ; ಐವರು ಸಾವು, ಒಬ್ಬರ ಸ್ಥಿತಿ ಗಂಭೀರ

Assam Terror Attack: ಗುರುವಾರ ರಾತ್ರಿ ಮಾರ್ಗ ಮಧ್ಯೆ ಟ್ರಕ್​ಗಳನ್ನು ಅಡ್ಡ ಹಾಕಿದ ಉಗ್ರರು ಈ ಕೃತ್ಯ ಎಸಗಿದ್ದಾರೆ. ದಾಳಿ ನಡೆಸಿದವರು ದಿಮಾಸಾ ನ್ಯಾಷನಲ್ ಲಿಬರೇಷನ್ ಆರ್ಮಿ (ಡಿಎನ್​ಎಲ್​ಎ) ಸಂಘಟನೆಗೆ ಸೇರಿದ ಉಗ್ರರು ಎನ್ನಲಾಗಿದೆ.

ಅಸ್ಸಾಂನಲ್ಲಿ ಉಗ್ರರಿಂದ ಟ್ರಕ್​ಗಳ ಮೇಲೆ ಗುಂಡಿನ ದಾಳಿ; ಐವರು ಸಾವು, ಒಬ್ಬರ ಸ್ಥಿತಿ ಗಂಭೀರ
ಅಸ್ಸಾಂನಲ್ಲಿ ಟ್ರಕ್ ಮೇಲೆ ದಾಳಿ
Follow us
TV9 Web
| Updated By: ಸುಷ್ಮಾ ಚಕ್ರೆ

Updated on:Aug 27, 2021 | 12:57 PM

ಗುವಾಹಟಿ: ಅಸ್ಸಾಂ ರಾಜ್ಯದ ದಿಮಾ ಹಸಾವೋ (Dima Hasao) ಜಿಲ್ಲೆಯಲ್ಲಿ ನಿನ್ನೆ ರಾತ್ರಿ ಶಂಕಿತ ಉಗ್ರರು 7 ಟ್ರಕ್​ಗಳ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಈ ಘಟನೆಯಲ್ಲಿ ಐವರು ಸಾವನ್ನಪ್ಪಿದ್ದು, ಒಬ್ಬರಿಗೆ ಗಂಭೀರ ಗಾಯಗಳಾಗಿವೆ. ಗುಂಡಿನ ದಾಳಿ ನಡೆಸಿದ ಬಳಿಕ ಉಗ್ರರು ಆ ಟ್ರಕ್​ಗಳಿಗೆ ಬೆಂಕಿ ಹಚ್ಚಿದ್ದಾರೆ. ಇದರಿಂದ 7 ಟ್ರಕ್​ಗಳು ಕೂಡ ಸುಟ್ಟು ಕರಕಲಾಗಿವೆ. 

ಗುರುವಾರ ರಾತ್ರಿ ಮಾರ್ಗ ಮಧ್ಯೆ ಟ್ರಕ್​ಗಳನ್ನು ಅಡ್ಡ ಹಾಕಿದ ಉಗ್ರರು ಈ ಕೃತ್ಯ ಎಸಗಿದ್ದಾರೆ. ದಾಳಿ ನಡೆಸಿದವರು ದಿಮಾಸಾ ನ್ಯಾಷನಲ್ ಲಿಬರೇಷನ್ ಆರ್ಮಿ (ಡಿಎನ್​ಎಲ್​ಎ) ಸಂಘಟನೆಗೆ ಸೇರಿದ ಉಗ್ರರು ಎನ್ನಲಾಗಿದೆ. ಈ ದಾಳಿಯಲ್ಲಿ 5 ಮಂದಿ ಸಾವನ್ನಪ್ಪಿದ್ದು, ಓರ್ವನ ಸ್ಥಿತಿ ಗಂಭೀರವಾಗಿದೆ. ರಸ್ತೆಯಲ್ಲಿ ಅಡ್ಡ ಹಾಕಿದ ಉಗ್ರರು ಟ್ರಕ್ ಹಾಗೂ ಟ್ರಕ್ ಚಾಲಕರ ಮೇಲೆ ಹಲವು ಸುತ್ತು ಗುಂಡು ಹಾರಿಸಿದ್ದಾರೆ.

ನಿನ್ನೆ ರಾತ್ರಿ 8.30ರ ಸುಮಾರಿಗೆ ಅಸ್ಸಾಂನ ಶಸ್ತ್ರಸಜ್ಜಿತ ಉಗ್ರರ ಗುಂಪು ದಿಮಾ ಹಸಾವೊ ಜಿಲ್ಲೆಯಲ್ಲಿ ಈ ದಾಳಿ ನಡೆಸಿದ್ದು, ಗಾಯಗೊಂಡ ಚಾಲಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆತನ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಗುಂಡು ಹಾರಿಸಿದ ಬಳಿಕ ಬೆಂಕಿ ಹಚ್ಚಿದ್ದರಿಂದ ಸಿಮೆಂಟ್ ಸಾಗಿಸುತ್ತಿದ್ದ 6 ಟ್ರಕ್​ಗಳು ಮತ್ತು ಕಲ್ಲಿದ್ದಲು ತುಂಬಿದ 1 ಟ್ರಕ್ ಸುಟ್ಟು ಕರಕಲಾಗಿವೆ ಎಂದು ಸ್ಥಳೀಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಹೆಚ್ಚುವರಿ ಪೊಲೀಸ್ ಪಡೆಗಳನ್ನು ಕಳುಹಿಸಲಾಗಿದೆ. ಘಟನೆಯಲ್ಲಿ ಭಾಗಿಯಾಗಿರುವವರನ್ನು ಬಂಧಿಸಲು ಕೂಂಬಿಂಗ್ ಕಾರ್ಯಾಚರಣೆ ನಡೆಯುತ್ತಿದೆ. ಮೊದಲು ಉಗ್ರರು ಆಟೋಮ್ಯಾಟಿಕ್ ಗನ್​ಗಳಿಂದ ಗುಂಡು ಹಾರಿಸಿದ್ದಾರೆ. ನಂತರ ಟ್ರಕ್​ಗಳಿಗೆ ಬೆಂಕಿ ಹಚ್ಚಿದ್ದಾರೆ. ಈ ದಾಳಿಯ ಹಿಂದೆ ಡಿಎನ್​ಎಲ್​ಎ ಉಗ್ರರ ಕೈವಾಡವಿರುವ ಶಂಕೆ ವ್ಯಕ್ತವಾಗಿದೆ. ಸಾವನ್ನಪ್ಪಿರುವ ಐವರಲ್ಲಿ ಟ್ರಕ್ ಚಾಲಕರು ಹಾಗೂ ಸಹಾಯಕರು ಸೇರಿದ್ದಾರೆ ಎಂದು ದಿಮಾ ಹಸಾವೋ ಜಿಲ್ಲೆಯ ಎಸ್​ಪಿ ಜಯಂತ್ ಸಿಂಗ್ ತಿಳಿಸಿದ್ದಾರೆ.

Assam Attack

ಅಸ್ಸಾಂನಲ್ಲಿ ಟ್ರಕ್ ಮೇಲೆ ದಾಳಿ

ಈ ದಾಳಿಗೆ ಕಾರಣವೇನೆಂಬ ಬಗ್ಗೆ ಇನ್ನೂ ಖಚಿತ ಮಾಹಿತಿ ಲಭ್ಯವಾಗಿಲ್ಲ. ಪೊಲೀಸರು ಈ ಬಗ್ಗೆ ತನಿಖೆ ನಡೆಸಲು ವಿಶೇಷ ತಂಡಗಳನ್ನು ರಚಿಸಿದ್ದು, ತನಿಖೆ ನಡೆಯುತ್ತಿದೆ.

ಇದನ್ನೂ ಓದಿ: Kazakhstan Blast: ಕಾಬೂಲ್ ಬೆನ್ನಲ್ಲೇ ಕಜಕಿಸ್ತಾನದ ಸೇನಾ ನೆಲೆ ಬಳಿಯೂ ಭಾರೀ ಸ್ಫೋಟ

Kabul Blast: ಇವನೇ ನೋಡಿ ಕಾಬೂಲ್ ಸೂಸೈಡ್​ ಬಾಂಬರ್​; ಹೊಣೆಹೊತ್ತ ISIS-Kಯಿಂದ ಅಬ್ದುಲ್ ರೆಹಮಾನ್ ಫೋಟೋ ರಿಲೀಸ್

(Assam Terror Attack: 5 Killed In Assams Dima Hasao District After Suspected Militants Attack and Sets Trucks On Fire)

Published On - 12:54 pm, Fri, 27 August 21

Video: ಕಜಾಕಿಸ್ತಾನ ವಿಮಾನ ಪತನದ ಮೊದಲು ಹಾಗೂ ನಂತರದ ಭಯಾನಕ ವಿಡಿಯೋ
Video: ಕಜಾಕಿಸ್ತಾನ ವಿಮಾನ ಪತನದ ಮೊದಲು ಹಾಗೂ ನಂತರದ ಭಯಾನಕ ವಿಡಿಯೋ
ಸುಖಾಸುಮ್ಮನೆ ವಿರಾಟ್ ಕೊಹ್ಲಿ ಕಿರಿಕ್: ತಿರುಗಿ ನಿಂತ ಸ್ಯಾಮ್ ಕೊನ್​ಸ್ಟಾಸ್
ಸುಖಾಸುಮ್ಮನೆ ವಿರಾಟ್ ಕೊಹ್ಲಿ ಕಿರಿಕ್: ತಿರುಗಿ ನಿಂತ ಸ್ಯಾಮ್ ಕೊನ್​ಸ್ಟಾಸ್
ಬಡತನದಿಂದ ಮುಕ್ತಿ ಹೊಂದಲು, ಮನೆಯಲ್ಲಿ ನೆಮ್ಮದಿಗೆ ಇಲ್ಲಿದೆ ಸುಲಭ ಉಪಾಯ
ಬಡತನದಿಂದ ಮುಕ್ತಿ ಹೊಂದಲು, ಮನೆಯಲ್ಲಿ ನೆಮ್ಮದಿಗೆ ಇಲ್ಲಿದೆ ಸುಲಭ ಉಪಾಯ
ಸಫಲ ಏಕಾದಶಿಯ ಈ ದಿನ ನಿಮ್ಮ ರಾಶಿ ಭವಿಷ್ಯ ಹೇಗಿರಲಿದೆ ನೋಡಿ
ಸಫಲ ಏಕಾದಶಿಯ ಈ ದಿನ ನಿಮ್ಮ ರಾಶಿ ಭವಿಷ್ಯ ಹೇಗಿರಲಿದೆ ನೋಡಿ
ಕ್ರಿಸ್​ಮಸ್ ಸಂಭ್ರಮ: ಬೆಂಗಳೂರಿನಲ್ಲಿ ಟ್ರಾಫಿಕ್ ​​ಜಾಮ್, ಸವಾರರು ಪರದಾಟ
ಕ್ರಿಸ್​ಮಸ್ ಸಂಭ್ರಮ: ಬೆಂಗಳೂರಿನಲ್ಲಿ ಟ್ರಾಫಿಕ್ ​​ಜಾಮ್, ಸವಾರರು ಪರದಾಟ
ಜೊಮ್ಯಾಟೊ ಡೆಲಿವರಿ ಬಾಯ್​ ಧರಿಸಿದ್ದ ಸಾಂತಾಕ್ಲಾಸ್​ ಡ್ರೆಸ್ ಬಿಚ್ಚಿಸಿದ ಹಿಂ
ಜೊಮ್ಯಾಟೊ ಡೆಲಿವರಿ ಬಾಯ್​ ಧರಿಸಿದ್ದ ಸಾಂತಾಕ್ಲಾಸ್​ ಡ್ರೆಸ್ ಬಿಚ್ಚಿಸಿದ ಹಿಂ
ದೇವರು ನನ್ನ ಹೊಟ್ಟೆಗೆ ಕಲ್ಲು ಮಣ್ಣು ತುಂಬಿಸಿ ಬಿಟ್ಟ: ತಾಯಿ ಆಕ್ರಂದನ
ದೇವರು ನನ್ನ ಹೊಟ್ಟೆಗೆ ಕಲ್ಲು ಮಣ್ಣು ತುಂಬಿಸಿ ಬಿಟ್ಟ: ತಾಯಿ ಆಕ್ರಂದನ
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಮುನಿರತ್ನ ಮೇಲೆ ಒತ್ತಡ: ವಿಜಯೇಂದ್ರ
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಮುನಿರತ್ನ ಮೇಲೆ ಒತ್ತಡ: ವಿಜಯೇಂದ್ರ
ಸಿಟಿ ರವಿ ಬಂಧನ ಕೇಸ್: ಸಿಪಿಐನ ಅಮಾನತು ಮಾಡಿದ್ಯಾಕೆ? ಕಾರಣ ಕೊಟ್ಟ ಸಿಎಂ
ಸಿಟಿ ರವಿ ಬಂಧನ ಕೇಸ್: ಸಿಪಿಐನ ಅಮಾನತು ಮಾಡಿದ್ಯಾಕೆ? ಕಾರಣ ಕೊಟ್ಟ ಸಿಎಂ
ಡಿ 31ರಿಂದ ಬಸ್​ಗಳು ಸಂಚರಿಸುವುದಿಲ್ಲ: ಪ್ರಯಾಣಿಕರಿಗೆ ಕರಪತ್ರ ಹಂಚಿಕೆ
ಡಿ 31ರಿಂದ ಬಸ್​ಗಳು ಸಂಚರಿಸುವುದಿಲ್ಲ: ಪ್ರಯಾಣಿಕರಿಗೆ ಕರಪತ್ರ ಹಂಚಿಕೆ