ಗಂಡ-ಹೆಂಡತಿಯನ್ನು ಜೀವಂತವಾಗಿ ಸುಟ್ಟುಹಾಕಿದ ಗ್ರಾಮಸ್ಥರು; ಕಾರಣ ಕೇಳಿದರೆ ಶಾಕ್ ಆಗ್ತೀರ

ಅಸ್ಸಾಂನಲ್ಲಿ ಗ್ರಾಮಸ್ಥರು ಗಂಡ-ಹೆಂಡತಿಯನ್ನು ಜೀವಂತವಾಗಿ ಸುಟ್ಟುಹಾಕಿರುವ ಹೃದಯವಿದ್ರಾವಕ ಘಟನೆ ನಡೆದಿದೆ. ಈ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಆ ದಂಪತಿ ಮಾಟಮಂತ್ರದಲ್ಲಿ ತೊಡಗಿದ್ದಾರೆ, ಇದರಿಂದಾಗಿಯೇ ಊರಿನಲ್ಲಿ ಅನಾರೋಗ್ಯ ಉಂಟಾಗಿದೆ ಎಂದು ಗ್ರಾಮಸ್ಥರು ಶಂಕಿಸಿದ್ದಾರೆ. ಹೀಗಾಗಿ ಗುಂಪು ಕಟ್ಟಿಕೊಂಡು ಹೋಗಿ ಆ ದಂಪತಿಯನ್ನು ಸಜೀವದಹನ ಮಾಡಿದ್ದಾರೆ.

ಗಂಡ-ಹೆಂಡತಿಯನ್ನು ಜೀವಂತವಾಗಿ ಸುಟ್ಟುಹಾಕಿದ ಗ್ರಾಮಸ್ಥರು; ಕಾರಣ ಕೇಳಿದರೆ ಶಾಕ್ ಆಗ್ತೀರ
Fire

Updated on: Dec 31, 2025 | 10:25 PM

ನವದೆಹಲಿ, ಡಿಸೆಂಬರ್ 31: ಅಸ್ಸಾಂನಲ್ಲೊಂದು (Assam) ಅಮಾನವೀಯ ಘಟನೆ ನಡೆದಿದೆ. ಇಲ್ಲಿನ ಕರ್ಬಿ ಆಂಗ್ಲಾಂಗ್ ಜಿಲ್ಲೆಯಲ್ಲಿ ಗ್ರಾಮಸ್ಥರ ಗುಂಪೊಂದು ದಂಪತಿಯನ್ನು ಹರಿತವಾದ ಆಯುಧಗಳಿಂದ ಹೊಡೆದು ಜೀವಂತವಾಗಿ ಸುಟ್ಟುಹಾಕಿದ್ದಾರೆ. ಆ ದಂಪತಿ ಮಾಟಮಂತ್ರ ಮಾಡುತ್ತಿದ್ದರು ಎಂದು ಗ್ರಾಮಸ್ಥರು ಶಂಕಿಸಿದ್ದಾರೆ. ಹೀಗಾಗಿಯೇ ಅವರನ್ನು ಸುಟ್ಟುಹಾಕಲಾಗಿದೆ. ಮೃತರನ್ನು ಗಾರ್ಡಿ ಬಿರೋವಾ (43) ಮತ್ತು ಅವರ ಪತ್ನಿ ಮೀರಾ ಬಿರೋವಾ (33) ಎಂದು ಗುರುತಿಸಲಾಗಿದೆ.

ಇಲ್ಲಿನ ಬೆಲೋಗುರಿ ಮುಂಡಾ ಗ್ರಾಮದಲ್ಲಿ ಮಂಗಳವಾರ ಸಂಜೆ ಈ ಭೀಕರ ಘಟನೆ ನಡೆದಿದೆ. ಈ ಘಟನೆಯ ಬಗ್ಗೆ ರಾತ್ರಿ 9 ಗಂಟೆ ಸುಮಾರಿಗೆ ಪೊಲೀಸರಿಗೆ ಮಾಹಿತಿ ನೀಡಲಾಯಿತು. “ಈ ಕೃತ್ಯ ಎಸಗಲು ಬಹುತೇಕ ಇಡೀ ಗ್ರಾಮದ ಜನರು ಒಗ್ಗೂಡಿದ್ದರು. ಹೀಗಾಗಿ ಅವರು ಯಾರೂ ಪೊಲೀಸರಿಗೆ ಮಾಹಿತಿ ನೀಡಲಿಲ್ಲ. ನಮ್ಮ ಆರಂಭಿಕ ತನಿಖೆಯ ಪ್ರಕಾರ, ಪತಿ ಮತ್ತು ಪತ್ನಿಯನ್ನು ಮೊದಲು ಥಳಿಸಿ ನಂತರ ಬೆಂಕಿ ಹಚ್ಚಲಾಯಿತು. ಅವರ ಮೂಳೆಗಳನ್ನು ಸಹ ನಮಗೆ ಪಡೆಯಲು ಸಾಧ್ಯವಾಗಲಿಲ್ಲ” ಎಂದು ಕರ್ಬಿ ಅಂಗ್ಲಾಂಗ್ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಎಸ್‌ಪಿ) ಪುಷ್ಪರಾಜ್ ಸಿಂಗ್ ಹೇಳಿದ್ದಾರೆ.

ಇದನ್ನೂ ಓದಿ: ಗ್ರಹಚಾರ ಎಂದರೆ ಇದೇ ನೋಡಿ; ಸೋಫಾದಿಂದ ಏಳುವಾಗ ಆಕಸ್ಮಿಕವಾಗಿ ಗುಂಡು ಹಾರಿ ಎನ್​ಆರ್​ಐ ಸಾವು

ದುಷ್ಕರ್ಮಿಗಳು ಆರಂಭದಲ್ಲಿ ದಂಪತಿಗಳ ಮೇಲೆ ಮನೆಯೊಳಗೆ ಹಲ್ಲೆ ನಡೆಸಿದರು. ನಂತರ ಮನೆ ಸುಟ್ಟು ಭಸ್ಮವಾಯಿತು. ಬಳಿಕ ಆ ದಂಪತಿ ಬೆಂಕಿಯಲ್ಲಿ ಸಾವನ್ನಪ್ಪಿದರು. ಗ್ರಾಮಸ್ಥರು ದಂಪತಿಗಳು ಮಾಟಮಂತ್ರದಲ್ಲಿ ತೊಡಗಿದ್ದಾರೆಂದು ಶಂಕಿಸಿದ್ದರು. ಇದರಿಂದಾಗಿ ಆ ಊರಿನಲ್ಲಿ ಕೆಟ್ಟ ಘಟನೆಗಳು ಮತ್ತು ಅನಾರೋಗ್ಯ ಉಂಟಾಗಿದೆ ಎಂಬುದು ಅವರ ನಂಬಿಕೆಯಾಗಿತ್ತು. ಬೆಂಕಿ ಹಚ್ಚಿದ ಎಲ್ಲಾ ಅಪರಾಧಿಗಳನ್ನು ಗುರುತಿಸಲು ಮತ್ತು ಬಂಧಿಸಲು ಪೊಲೀಸರು ತನಿಖೆಯನ್ನು ಪ್ರಾರಂಭಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:24 pm, Wed, 31 December 25