AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಿಳುನಾಡು: ಅಸ್ಸಾಂ ಮಹಿಳೆ ಮೇಲೆ ಮೂವರಿಂದ ಸಾಮೂಹಿಕ ಅತ್ಯಾಚಾರ, ಪತಿಯ ಮೇಲೆ ಹಲ್ಲೆ

ಅಸ್ಸಾಂ ಮೂಲದ ಮಹಿಳೆ ಮೇಲೆ ಮೂವರು ಪುರುಷರು ಸಾಮೂಹಿಕ ಅತ್ಯಾಚಾರ(Gang Rape)ವೆಸಗಿರುವ ಘಟನೆ ತಮಿಳುನಾಡಿನ ತೂತುಕುಡಿಯಲ್ಲಿ ನಡೆದಿದೆ. 24 ವರ್ಷದ ಮಹಿಳೆ ಮೇಲೆ ಅತ್ಯಾಚಾರವೆಸಗಿದ್ದಲ್ಲದೆ ಆಕೆಯ ಪತಿ ಮೇಲೂ ಕೂಡ ಹಲ್ಲೆ ನಡೆಸಿದ್ದಾರೆ. ಮಹಿಳೆ ಮತ್ತು ಆಕೆಯ ಪತಿ ಇಟ್ಟಿಗೆ ತಯಾರಿಕಾ ಘಟಕದಲ್ಲಿ ಕೆಲಸ ಮಾಡಲು ಅಸ್ಸಾಂನಿಂದ ಬಂದಿದ್ದರು. ನಂತರ ದಂಪತಿ ಕೆಲಸ ಬಿಟ್ಟು ಕೆಲಸ ಬಿಡಲು ನಿರ್ಧರಿಸಿದರು.

ತಮಿಳುನಾಡು: ಅಸ್ಸಾಂ ಮಹಿಳೆ ಮೇಲೆ ಮೂವರಿಂದ ಸಾಮೂಹಿಕ ಅತ್ಯಾಚಾರ, ಪತಿಯ ಮೇಲೆ ಹಲ್ಲೆ
ಕ್ರೈಂImage Credit source: Shutterstock
ನಯನಾ ರಾಜೀವ್
|

Updated on: Dec 16, 2025 | 11:56 AM

Share

ಚೆನ್ನೈ, ಡಿಸೆಂಬರ್ 16: ಅಸ್ಸಾಂ ಮೂಲದ ಮಹಿಳೆ ಮೇಲೆ ಮೂವರು ಪುರುಷರು ಸಾಮೂಹಿಕ ಅತ್ಯಾಚಾರ(Gang Rape)ವೆಸಗಿರುವ ಘಟನೆ ತಮಿಳುನಾಡಿನ ತೂತುಕುಡಿಯಲ್ಲಿ ನಡೆದಿದೆ. 24 ವರ್ಷದ ಮಹಿಳೆ ಮೇಲೆ ಅತ್ಯಾಚಾರವೆಸಗಿದ್ದಲ್ಲದೆ ಆಕೆಯ ಪತಿ ಮೇಲೂ ಕೂಡ ಹಲ್ಲೆ ನಡೆಸಿದ್ದಾರೆ. ಮಹಿಳೆ ಮತ್ತು ಆಕೆಯ ಪತಿ ಇಟ್ಟಿಗೆ ತಯಾರಿಕಾ ಘಟಕದಲ್ಲಿ ಕೆಲಸ ಮಾಡಲು ಅಸ್ಸಾಂನಿಂದ ಬಂದಿದ್ದರು. ನಂತರ ದಂಪತಿ ಕೆಲಸ ಬಿಟ್ಟು ಕೆಲಸ ಬಿಡಲು ನಿರ್ಧರಿಸಿದರು.

ದೂರಿನ ಪ್ರಕಾರ, ಅವರ ನಿರ್ಧಾರದ ಬಗ್ಗೆ ತಿಳಿದ ನಂತರ, ಪ್ರಮುಖ ಆರೋಪಿ ದಂಪತಿ ಹೊರಹೋಗದಂತೆ ತಡೆಯಲು ಇತರ ಇಬ್ಬರು ಪುರುಷರನ್ನು ಆಟೋದಲ್ಲಿ ಕರೆತಂದಿದ್ದ. ಸಂಬಳದಕ್ಕೆ ಸಂಬಂಧಿಸಿದಂತೆ ಕೆಲವು ಆರೋಪಗಳನ್ನು ಹೊರಿಸಿ ಅವರ ಆ ಪ್ರದೇಶದಿಂದ ಹೊರಗೆ ಹೋಗದಂತೆ ತಡೆಯಲು ಪ್ರಯತ್ನಿಸಿದ್ದರು.

ಮಹಿಳೆಯನ್ನು ಆಟೋದಲ್ಲಿ ನಿರ್ಜನ ಸ್ಥಳಕ್ಕೆ ಕರೆದೊಯ್ದು, ಅಲ್ಲಿ ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ, ಆಕೆಯ ಪತಿಯ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಮೂವರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಮತ್ತಷ್ಟು ಓದಿ: ಕೌಟುಂಬಿಕ ನ್ಯಾಯಾಲಯದ ಆವರಣದಲ್ಲಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ

ನವೆಂಬರ್‌ನಲ್ಲಿ ನಡೆದ ಮತ್ತೊಂದು ಘಟನೆಯಲ್ಲಿ, ತಮಿಳುನಾಡಿನ ಕೊಯಮತ್ತೂರಿನಲ್ಲಿ ಕಾಲೇಜು ವಿದ್ಯಾರ್ಥಿನಿಯೊಬ್ಬಳನ್ನು ನಗರದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಮೂವರು ವ್ಯಕ್ತಿಗಳು ಅಪಹರಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದರು. ನಂತರ ಆಕೆಯ ಸ್ನೇಹಿತೆಯ ಮೇಲೆ ಹಲ್ಲೆ ನಡೆಸಲಾಗಿತ್ತು. ಆರೋಪಿಗಳನ್ನು ಪತ್ತೆ ಹಚ್ಚಲು ಪೊಲೀಸರು ವಿಶೇಷ ತಂಡಗಳನ್ನು ನಿಯೋಜಿಸಿದ್ದರು. ಮೂವರು ಆರೋಪಿಗಳು ಪರಾರಿಯಾಗಲು ಯತ್ನಿಸಿದಾಗ ಪೊಲೀಸರು ಗುಂಡು ಹಾರಿಸಿ ಬಂಧಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ