ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಶ್ರೀನಿವಾಸ್ ವಿರುದ್ಧ ಅಸ್ಸಾಂ ಯುವ ಕಾಂಗ್ರೆಸ್ ಅಧ್ಯಕ್ಷೆ ಅಂಕಿತಾ ದತ್ತಾರಿಂದ ಕಿರುಕುಳ ಆರೋಪ
ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ ಬಿ.ವಿ. ಶ್ರೀನಿವಾಸ್ ಅವರ ವಿರುದ್ಧ ಅಸ್ಸಾಂನ ಯುವ ಕಾಂಗ್ರೆಸ್ ಅಧ್ಯಕ್ಷೆ ಡಾ. ಅಂಕಿತಾ ದತ್ತಾ ಕಿರುಕುಳ ಆರೋಪ ಮಾಡಿದ್ದಾರೆ.
ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ ಬಿ.ವಿ. ಶ್ರೀನಿವಾಸ್ ಅವರ ವಿರುದ್ಧ ಅಸ್ಸಾಂನ ಯುವ ಕಾಂಗ್ರೆಸ್ ಅಧ್ಯಕ್ಷೆ ಡಾ. ಅಂಕಿತಾ ದತ್ತಾ ಕಿರುಕುಳ ಆರೋಪ ಮಾಡಿದ್ದಾರೆ. ಈ ಕುರಿತು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ(Rahul Gandhi) ಹಾಗೂ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ವಾದ್ರಾ ಅವರ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ಶ್ರೀನಿವಾಸ್ ಬಿವಿ ಅವರು ಸತತವಾಗಿ ನನಗೆ ಕಿರುಕುಳ ನೀಡಿದ್ದಾರೆ. ಲಿಂಗ ತಾರತಮ್ಯ ಮಾಡಿದ್ದಾರೆ, ಹೆಣ್ಣು ಎಂಬ ಕಾರಣಕ್ಕೆ ನನಗೆ ಮಾನಸಿಕ ಹಿಂಸೆ ನೀಡಿದ್ದಾರೆ ಎಂದು ಅಂಕಿತಾ ದೂರಿದ್ದಾರೆ. ನೀವು ಓಡ್ಕಾ ಕುಡಿಯುತ್ತೀರಾ ಎಂದು ವ್ಯಂಗ್ಯವಾಗಿ ಪ್ರಶ್ನೆಗಳನ್ನು ಕೇಳಿದ್ದಾರೆ.
ನನ್ನ ಮೌಲ್ಯಗಳು ಹಾಗೂ ಶಿಕ್ಷಣವು ಇದಕ್ಕೆಲ್ಲಾ ಅವಕಾಶ ನೀಡುವುದಿಲ್ಲ, ಈ ಬಗ್ಗೆ ಈಗಾಘಲೇ ಪ್ರಿಯಾಂಕಾ ವಾದ್ರಾ, ರಾಹುಲ್ ಗಾಂಧಿ ಅವರ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ, ಈ ಕಾರಣಕ್ಕಾಗಿ ಬಹಿರಂಗವಾಗಿ ಈ ವಿಷಯ ಪ್ರಸ್ತಾಪಿಸುವುದು ಅನಿವಾರ್ಯವಾಗಿದೆ ಎಂದಿದ್ದಾರೆ.
ಈ ಬಗ್ಗೆ ಬಿಜೆಪಿ ಪ್ರತಿಕ್ರಿಯೆ ನೀಡಿದ್ದು, ಶ್ರೀನಿವಾಸ್ ಮೇಲಿನ ಆರೋಪ ಗಂಭೀರದದ್ದು ಎಂದು ಹೇಳಿದೆ. ಸಮಗ್ರ ತನಿಖೆ ನಡೆಸುವ ಬದಲು ಕಾನೂನು ಕ್ರಮದ ಬೆದರಿಕೆ ಒಡ್ಡಲಾಗುತ್ತಿದೆ. ಬಿಜೆಪಿ ವಕ್ತಾರ ಶಹಜಾದ್ ಪೂನಾವಾಲಾ ವಿಡಿಯೋ ಬಿಡುಗಡೆ ಮಾಡಿ, ‘ಲಡ್ಕಿ ಹೂಂ, ಲಡ್ ಸಕ್ತೀ ಹೂಂ’ ಎಂಬ ಘೋಷಣೆ ನೀಡಿದ ಪಕ್ಷ ಸಂಪೂರ್ಣ ಮೌನವಾಗಿರುವುದು ಬೇಸರ ತಂದಿದೆ. ಪ್ರಿಯಾಂಕಾ ಗಾಂಧಿ ಮತ್ತು ರಾಹುಲ್ ಗಾಂಧಿ ಎಲ್ಲಿದ್ದಾರೆ? ಎಂದು ಪ್ರಶ್ನಿಸಿದ್ದಾರೆ.
#WATCH | “For the past 6 months, Indian Youth Congress (IYC) president Srinivas BV & his IYC secretary in-charge Vardhan Yadav have been harassing me continuously. I’ve complained about this to the leadership but till now no enquiry committee has been initiated against them,”… pic.twitter.com/jbJIPldDHa
— ANI (@ANI) April 19, 2023
ಕಾಂಗ್ರೆಸ್ ಹೇಳಿದ್ದೇನು? ಭಾರತೀಯ ಯುವ ಕಾಂಗ್ರೆಸ್ ಅಂಕಿತಾ ಅವರ ಆರೋಪಗಳನ್ನು ಅಸಂಬದ್ಧ ಮತ್ತು ಆಧಾರರಹಿತ ಎಂದು ಹೇಳಿದೆ. ಶಾರದಾ ಚಿಟ್ ಫಂಡ್ ಪ್ರಕರಣದಲ್ಲಿ ಅಂಕಿತಾ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುತ್ತಿದ್ದು, ಹೀಗಾಗಿ ಬಿಜೆಪಿ ಸೇರುತ್ತಿದ್ದಾರೆ ಎಂದು ಯುವ ಕಾಂಗ್ರೆಸ್ ಹೇಳಿಕೊಂಡಿದೆ. ಬಿಜೆಪಿಯವರ ಒತ್ತಾಯದ ಮೇರೆಗೆ ಅವರು ಇಂತಹ ಆರೋಪ ಮಾಡಿದ್ದಾರೆ.
ಈ ಆರೋಪಗಳು ಸಂಪೂರ್ಣವಾಗಿ ನಿರಾಧಾರ ಎಂದು ಯುವ ಕಾಂಗ್ರೆಸ್‌ನ ಸಂಘಟನಾ ಕಾರ್ಯದರ್ಶಿ ಮತ್ತು ಅಸ್ಸಾಂ ಉಸ್ತುವಾರಿ ವರ್ಧನ್ ಯಾದವ್ ಹೇಳಿದ್ದಾರೆ. ಶೀಘ್ರದಲ್ಲೇ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುತ್ತೇವೆ. ಅವರಿಗೆ ಲೀಗಲ್ ನೋಟಿಸ್ ಕಳುಹಿಸಲಾಗುತ್ತಿದೆ ಎಂದಿದ್ದಾರೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ