AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಸ್ಪತ್ರೆಯಲ್ಲಿ ಬೆಡ್ ಸಿಗದೆ ಗಂಟೆಗಟ್ಟಲೆ ಆಂಬ್ಯುಲೆನ್ಸ್​​ನಲ್ಲಿ ಕುಳಿತ ಅತ್ಯಾಚಾರ ಸಂತ್ರಸ್ತೆ ಸಾವು

ಆಸ್ಪತ್ರೆಯಲ್ಲಿ ಹಾಸಿಗೆ ಸಿಗದೆ ಗಂಟೆಗಟ್ಟಲೆ ಆಂಬ್ಯುಲೆನ್ಸ್​ನಲ್ಲಿ ಕುಳಿತು ಅತ್ಯಾಚಾರ ಸಂತ್ರಸ್ತೆ ಪ್ರಾಣ ಬಿಟ್ಟಿರುವ ಘಟನೆ ಬಿಹಾರದಲ್ಲಿ ನಡೆದಿದೆ.  ಪಾಟ್ನಾ ವೈದ್ಯಕೀಯ ಕಾಲೇಜು ಆಸ್ಪತ್ರೆಯ (ಪಿಎಂಸಿಎಚ್) ಹೊರಗೆ ಅತ್ಯಾಚಾರಕ್ಕೊಳಗಾದ ಅಪ್ರಾಪ್ತ ಬಾಲಕಿಯನ್ನು ಆಂಬ್ಯುಲೆನ್ಸ್​ನಲ್ಲಿ ಗಂಟೆಗಟ್ಟಲೆ ಕಾಯುವಂತೆ ಮಾಡಲಾಗಿತ್ತು. ಸಾಕಷ್ಟು ಪ್ರಯತ್ನದ ಬಳಿಕ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿತು. ಆದರೆ ಗಾಯ ತುಂಬಾ ಗಂಭೀರವಾಗಿದ್ದ ಕಾರಣ ಚಿಕಿತ್ಸೆ ಫಲಕಾರಿಯಾಗದೆ ಬಾಲಕಿ ಸಾವನ್ನಪ್ಪಿದ್ದಾರೆ.

ಆಸ್ಪತ್ರೆಯಲ್ಲಿ ಬೆಡ್ ಸಿಗದೆ ಗಂಟೆಗಟ್ಟಲೆ ಆಂಬ್ಯುಲೆನ್ಸ್​​ನಲ್ಲಿ ಕುಳಿತ ಅತ್ಯಾಚಾರ ಸಂತ್ರಸ್ತೆ ಸಾವು
ಸಾಂದರ್ಭಿಕ ಚಿತ್ರ
ನಯನಾ ರಾಜೀವ್
|

Updated on:Jun 02, 2025 | 12:00 PM

Share

ಪಾಟ್ನಾ, ಜೂನ್ 02: ಆಸ್ಪತ್ರೆಯಲ್ಲಿ ಹಾಸಿಗೆ ಸಿಗದೆ ಗಂಟೆಗಟ್ಟಲೆ ಆಂಬ್ಯುಲೆನ್ಸ್​ನಲ್ಲಿ ಕುಳಿತು ಅತ್ಯಾಚಾರ ಸಂತ್ರಸ್ತೆ ಪ್ರಾಣ ಬಿಟ್ಟಿರುವ ಘಟನೆ ಬಿಹಾರದಲ್ಲಿ ನಡೆದಿದೆ.  ಪಾಟ್ನಾ ವೈದ್ಯಕೀಯ ಕಾಲೇಜು ಆಸ್ಪತ್ರೆಯ (ಪಿಎಂಸಿಎಚ್) ಹೊರಗೆ ಅತ್ಯಾಚಾರಕ್ಕೊಳಗಾದ ಅಪ್ರಾಪ್ತ ಬಾಲಕಿಯನ್ನು ಆಂಬ್ಯುಲೆನ್ಸ್​ನಲ್ಲಿ ಗಂಟೆಗಟ್ಟಲೆ ಕಾಯುವಂತೆ ಮಾಡಲಾಗಿತ್ತು. ಸಾಕಷ್ಟು ಪ್ರಯತ್ನದ ಬಳಿಕ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿತು. ಆದರೆ ಗಾಯ ತುಂಬಾ ಗಂಭೀರವಾಗಿದ್ದ ಕಾರಣ ಚಿಕಿತ್ಸೆ ಫಲಕಾರಿಯಾಗದೆ ಬಾಲಕಿ ಸಾವನ್ನಪ್ಪಿದ್ದಾರೆ.

ಈ ಪ್ರಕರಣದಲ್ಲಿ ಮಾಡಲಾದ ಎಲ್ಲಾ ಆರೋಪಗಳನ್ನು ಪಾಟ್ನಾ ವೈದ್ಯಕೀಯ ಕಾಲೇಜಿನ ಅಧಿಕಾರಿಗಳು ಸಂಪೂರ್ಣವಾಗಿ ನಿರಾಕರಿಸಿದ್ದಾರೆ. ಈ ಘಟನೆಯ ಬಗ್ಗೆ ಮಾಹಿತಿ ಸಿಕ್ಕ ತಕ್ಷಣ, ಅವರು ತಕ್ಷಣ ಕ್ರಮ ಕೈಗೊಂಡು ಬಾಲಕಿಗೆ ಚಿಕಿತ್ಸೆ ನೀಡಲು ಪ್ರಾರಂಭಿಸಿದರು ಎಂದು ಅವರು ಹೇಳಿದ್ದಾರೆ.

ಬಾಲಕಿಯ ಚಿಕ್ಕಪ್ಪ ನೀಡಿದ್ದ ಮಾಹಿತಿ ಪ್ರಕಾರ, ನಾವು ಶನಿವಾರ ಬೇರೆ ಆಸ್ಪತ್ರೆಯಿಂದ ಪಿಎಂಸಿಎಚ್​ಗೆ ತಲುಪಿದಾಗ, ತುರ್ತು ವಿಭಾಗದ ಸಿಬ್ಬಂದಿ ಬೆಡ್ ಇಲ್ಲ ಎಂದು ಹೇಳಿದರು. ಹಲವಾರು ವಾರ್ಡ್​ಗಳಿಗೆ ನಮ್ಮನ್ನು ಅಲೆಯುವಂತೆ ಮಾಡಿದರು. ಕೊನೆಗೆ ಎಲ್ಲಿಯೂ ಬೆಡ್ ಸಿಗಲಿಲ್ಲ.

ಇದನ್ನೂ ಓದಿ
Image
ನಮ್ಮ ಹೆಣ್ಣುಮಕ್ಕಳ ಕುಂಕುಮ ಅಳಿಸಿದವರನ್ನು ಹೊಸಕಿ ಹಾಕಿದ್ದೇವೆ: ಮೋದಿ
Image
ತನ್ನ ಅಸ್ತಿತ್ವಕ್ಕೆ ಭಾರತವೇ ದೊಡ್ಡ ಬೆದರಿಕೆ ಎಂದುಕೊಂಡಿದೆ ಪಾಕಿಸ್ತಾನ
Image
ಯೂನಸ್ ಬಾಂಗ್ಲಾದೇಶವನ್ನು ಅಮೆರಿಕಕ್ಕೆ ಮಾರುತ್ತಿದ್ದಾರೆ: ಶೇಖ್ ಹಸೀನಾ
Image
ಪಾಕ್​ ಸರ್ಕಾರದೊಂದಿಗೆ ಮಾತನಾಡುವುದು ನಿಷ್ಪ್ರಯೋಜಕ: ಇಮ್ರಾನ್ ಖಾನ್

ಕೊನೆಗೆ ಮಕ್ಕಳ ಚಿಕಿತ್ಸಾ ವಿಭಾಗಕ್ಕೆ ಕಳುಹಿಸಲಾಯಿತು. ಆಕೆ ಆಂಬ್ಯುಲೆನ್ಸ್​ನಲ್ಲಿ ಗಂಟೆಗಟ್ಟಲೆ ಕಾಯುತ್ತಿದ್ದಳು. ಕೆಲವು ರಾಜಕಾರಣಿಗಳ ಮಧ್ಯಸ್ಥಿಕೆ ಬಳಿಕ ಸಂಜೆ 5 ಗಂಟೆ ಸುಮಾರಿಗೆ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ದುರದೃಷ್ಟವಶಾತ್ ಅವರು ಸಾವನ್ನಪ್ಪಿದ್ದಾರೆ.

ಮತ್ತಷ್ಟು ಓದಿ: ಅತ್ಯಾಚಾರ ಶಿಬಿರ, ಹಿಂದೂ ಪ್ರಾಧ್ಯಾಪಕರ ಕೊಲೆ, ಹಿಂದೂ ಗ್ರಾಮಗಳಿಗೆ ಬೆಂಕಿ ಇಟ್ಟಿದ್ದ ಅಜರುಲ್ ಇಸ್ಲಾಂ ಖುಲಾಸೆ

ಬಾಲಕಿ ಆಂಬ್ಯುಲೆನ್ಸ್​​ನಲ್ಲಿದ್ದಾಗ ಬಿಹಾರ ಕಾಂಗ್ರೆಸ್ ಅಧ್ಯಕ್ಷ ರಾಜೇಶ್ ರಾಮ್ ನೇತೃತ್ವದಲ್ಲಿ ಡಜನ್ಗಟ್ಟಲೆ ಕಾರ್ಮಿಕರು ಪಿಎಂಸಿಎಚ್ ತಲುಪಿ ಈ ನಿರ್ಲಕ್ಷ್ಯದ ವಿರುದ್ಧ ಪ್ರತಿಭಟಿಸಿದರು. ರೋಹಿತ್ ಕುಮಾರ್ ಸಾಹ್ನಿ ಎಂಬಾತ ಬಾಲಕಿಗೆ ಚಾಕೊಲೇಟ್​ ಕೊಡಿಸುವುದಾಗಿ ಆಮಿಷವೊಡ್ಡಿ ಹೊರಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ. ಬಳಿಕ ಚಾಕುವಿನಿಂದ ಕುತ್ತಿಗೆಗೆ ಇರಿದಿದ್ದಾನೆ. ಸಂಜೆ 7 ಗಂಟೆ ಸುಮಾರಿಗೆ ಆಕೆ ಕೊಳದ ಬಳಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದಳು.

ಅದೇ ರಾತ್ರಿ ಆರೋಪಿಯನ್ನು ಬಂಧಿಸಲಾಯಿತು. ಸಂತ್ರಸ್ತಳ ದೇಹದ ಮೇಲೆ ಹಲವಾರು ಗಂಭೀರ ಗಾಯಗಳಿದ್ದವು. ಕುತ್ತಿಗೆಗೆ ಗಾಯವಾಗಿದ್ದರಿಂದ ಮಾತನಾಡಲು ಸಾಧ್ಯವಾಗಲಿಲ್ಲ, ಆದರೆ ಸನ್ನೆಗಳ ಮೂಲಕ ಎಲ್ಲವನ್ನೂ ಹೇಳಿಕೊಂಡಳು.

ಆರೋಪಿ ನಮ್ಮ ಮನೆಗೆ ಮೀನು ಮಾರಾಟ ಮಾಡಲು ಬರುತ್ತಿದ್ದ. ಮಗಳನ್ನು ಕರೆದುಕೊಂಡು ಹೋಗುತ್ತಿದ್ದ. ನನಗೆ ಅನಾರೋಗ್ಯ ಇದ್ದ ಕಾರಣ ಗಮನ ಹರಿಸಲು ಸಾಧ್ಯವಾಗಲಿಲ್ಲ. ಎಚ್ಚರವಾದಾಗ ಮಗಳು ಎಲ್ಲಿಯೂ ಕಾಣಲಿಲ್ಲ. ನಂತರ ಯಾರೋ ಒಬ್ಬರು ಆಕೆಯನ್ನು ತನ್ನ ಸೈಕಲ್‌ನಲ್ಲಿ ಕರೆದುಕೊಂಡು ಹೋಗಿರುವುದಾಗಿ ಹೇಳಿದರು. ಕೂಡಲೇ ಹೋಗಿ ಹುಡುಕಿದಾಗ ಆಕೆ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದು ಕಂಡು ಬಂದಿತ್ತು. ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತು. ಬಳಿಕ ಅಲ್ಲಿಂದ ಸರ್ಕಾರಿ ಆಸ್ಪತ್ರೆಗೆ ಕರೆತರಲಾಯಿತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:56 am, Mon, 2 June 25

ರಣರೋಚಕ ಘಟ್ಟದಲ್ಲಿ ಆಸ್ಟ್ರೇಲಿಯಾ vs ಇಂಗ್ಲೆಂಡ್ ಟೆಸ್ಟ್ ಪಂದ್ಯ
ರಣರೋಚಕ ಘಟ್ಟದಲ್ಲಿ ಆಸ್ಟ್ರೇಲಿಯಾ vs ಇಂಗ್ಲೆಂಡ್ ಟೆಸ್ಟ್ ಪಂದ್ಯ
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು