AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Assembly By Elections 2022: ಉಪಚುನಾವಣೆ ಹೋರಾಟದಲ್ಲಿ ಟೀಮ್ ಠಾಕ್ರೆ vs ಟೀಮ್ ಶಿಂಧೆ, ಭಾರೀ ಕುತೂಹಲ ಸೃಷ್ಟಿಸಿದೆ ಅಂಧೇರಿ ಕ್ಷೇತ್ರದ ಚುನಾವಣೆ

ಶಿವಸೇನೆ ನಾಯಕತ್ವದ ವಿರುದ್ಧ ಬಂಡಾಯವೆದ್ದ ನಂತರ, ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಬಣವು ಶಿವಸೇನೆಯ ಶಾಸಕ ದಿವಂಗತ ರಮೇಶ್ ಲಟ್ಕೆ ಪ್ರತಿನಿಧಿಸುತ್ತಿದ್ದ ಮುಂಬೈನ ಅಂಧೇರಿ (ಪೂರ್ವ) ವಿಧಾನಸಭಾ ಕ್ಷೇತ್ರಕ್ಕೆ ನವೆಂಬರ್ 3 ರಂದು ನಡೆಯಲಿರುವ ಉಪಚುನಾವಣೆಯಲ್ಲಿ ತನ್ನ ಮೊದಲ ಜನಭಿಪ್ರಾಯದ ಪರೀಕ್ಷೆಯನ್ನು ಎದುರಿಸಲಿದೆ.

Assembly By Elections 2022: ಉಪಚುನಾವಣೆ ಹೋರಾಟದಲ್ಲಿ ಟೀಮ್ ಠಾಕ್ರೆ vs ಟೀಮ್ ಶಿಂಧೆ, ಭಾರೀ ಕುತೂಹಲ ಸೃಷ್ಟಿಸಿದೆ ಅಂಧೇರಿ ಕ್ಷೇತ್ರದ ಚುನಾವಣೆ
Assembly By Elections 2022
TV9 Web
| Updated By: ಅಕ್ಷಯ್​ ಪಲ್ಲಮಜಲು​​|

Updated on:Oct 03, 2022 | 5:50 PM

Share

ಮುಂಬೈ: ಶಿವಸೇನೆ ನಾಯಕತ್ವದ ವಿರುದ್ಧ ಬಂಡಾಯವೆದ್ದ ನಂತರ, ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಬಣವು ಶಿವಸೇನೆಯ ಶಾಸಕ ದಿವಂಗತ ರಮೇಶ್ ಲಟ್ಕೆ ಪ್ರತಿನಿಧಿಸುತ್ತಿದ್ದ ಮುಂಬೈನ ಅಂಧೇರಿ (ಪೂರ್ವ) ವಿಧಾನಸಭಾ ಕ್ಷೇತ್ರಕ್ಕೆ ನವೆಂಬರ್ 3 ರಂದು ನಡೆಯಲಿರುವ ಉಪಚುನಾವಣೆಯಲ್ಲಿ ತನ್ನ ಮೊದಲ ಜನಭಿಪ್ರಾಯದ ಪರೀಕ್ಷೆಯನ್ನು ಎದುರಿಸಲಿದೆ.

ಶಿವಸೇನೆಯ ಎರಡೂ ಬಣಗಳು ಶಿವಸೇನೆಯ “ಬಿಲ್ಲು ಮತ್ತು ಬಾಣ” ಗುರುತಿನಲ್ಲಿ ಸ್ಪರ್ಧಿಸುತ್ತಿರುವುದರಿಂದ, ಈಗ ಮಹಾರಾಷ್ಟ್ರದ ಉಪಚುನಾವಣೆ ಸ್ಪರ್ಧೆಯು ತೀವ್ರ ಕುತೂಹಲವನ್ನು ಹುಟ್ಟುಹಾಕಿದೆ. ಯಾರಿಗೆ ಈ ಚುನಾವಣೆಯ ಗೆಲ್ಲುವು ಎಂಬುದನ್ನು ಕಾದುನೋಡಬೇಕಿದೆ. ಈಗಾಗಲೇ ಎರಡು ಪಕ್ಷದ ಗುರುತಿಗಾಗಿ ಕಿತ್ತಾಟ ನಡೆಯುತ್ತಿದೆ. ಈ ವಿಚಾರದ ಬಗ್ಗೆ ಚುನಾವಣಾ ಆಯೋಗವು ಪ್ರಸ್ತುತ ಮನವಿಗಳನ್ನು ಆಲಿಸುತ್ತಿದೆ.

ಚುನಾವಣಾ ಆಯೋಗ ಇಂದು ( ಸೋಮವಾರ) ಉಪಚುನಾವಣೆಯ ವೇಳಾಪಟ್ಟಿಯನ್ನು ಪ್ರಕಟಿಸಿದೆ. ನವೆಂಬರ್ 6 ರಂದು ಮತ ಎಣಿಕೆ ನಡೆಯಲಿದೆ. ಸತತ ಎರಡು ಬಾರಿ ಗೆದ್ದಿದ್ದ ಲಟ್ಕೆ ಅವರ ನಿಧನದ ನಂತರ ಅಂಧೇರಿ (ಪೂರ್ವ) ಸ್ಥಾನವು ಮೇ ತಿಂಗಳಲ್ಲಿ ತೆರವಾಗಿತ್ತು.

ಆಡಳಿತಾರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಮತ್ತು ಶಿಂಧೆ ಬಣವು ಮುಂಬೈ ನಾಗರಿಕ ಸಂಸ್ಥೆಯ ಮಾಜಿ ಕಾರ್ಪೊರೇಟರ್ ಮುರ್ಜಿ ಪಟೇಲ್ ಅವರನ್ನು ಉಪಚುನಾವಣೆಯಲ್ಲಿ ಕಣಕ್ಕಿಳಿಸಿದೆ. ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ ದಿವಂಗತ ಲಟ್ಕೆ ಅವರ ಪತ್ನಿ ರುತುಜಾ ಲಟ್ಕೆ ಅವರನ್ನು ಕಣಕ್ಕಿಳಿಸುವ ಸಾಧ್ಯತೆಯಿದೆ. ಸೋಮವಾರ ಪುಣೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್, ಉಪಚುನಾವಣೆಯಲ್ಲಿ ತಮ್ಮ ಪಕ್ಷವು ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆಯನ್ನು ಬೆಂಬಲಿಸುತ್ತದೆ ಎಂದು ಹೇಳಿದೆ.

ಮುಂಬೈ ಬಿಜೆಪಿ ಮುಖ್ಯಸ್ಥ ಆಶಿಶ್ ಶೆಲಾರ್ ಅವರು ಉಪನಗರ ಅಂಧೇರಿಯಲ್ಲಿ ಉಪಚುನಾವಣೆಯ ಪಕ್ಷದ ಕೇಂದ್ರ ಕಚೇರಿಯನ್ನು ಭಾನುವಾರ ಉದ್ಘಾಟಿಸಿದರು. ಮುರ್ಜಿ ಪಟೇಲ್ ಸ್ಥಳೀಯ ಜನರಲ್ಲಿ ಹೆಚ್ಚಿನ ಬೆಂಬಲವನ್ನು ಹೊಂದಿದ್ದಾರೆ ಎಂದು ಅವರು ಟ್ವೀಟ್ ಮಾಡಿದ್ದಾರೆ.

ಇದನ್ನು ಓದಿ: ನವೆಂಬರ್ 3ರಂದು ಆರು ರಾಜ್ಯಗಳ ವಿಧಾನಸಭಾ ಉಪಚುನಾವಣೆ , ನ.6ರಂದು ಫಲಿತಾಂಶ ಪ್ರಕಟ

ಅಂಧೇರಿ ಪೂರ್ವ ವಿಧಾನಸಭಾ ಕ್ಷೇತ್ರವು ಮುಂಬೈ ಉಪನಗರ ಜಿಲ್ಲೆಯಲ್ಲಿರುವ 26 ಕ್ಷೇತ್ರಗಳಲ್ಲಿ ಒಂದಾಗಿದೆ. ಇದು ಮುಂಬೈ ವಾಯುವ್ಯ ಲೋಕಸಭಾ ಕ್ಷೇತ್ರದ ಭಾಗವಾಗಿದೆ. ದಿವಂಗತ ಲಟ್ಕೆ ಅವರು 2014 ರಲ್ಲಿ ಕಾಂಗ್ರೆಸ್‌ನಿಂದ ಸ್ಥಾನವನ್ನು ಪಡೆದುಕೊಂಡಿದ್ದು. 2009 ರಲ್ಲಿ ಕಾಂಗ್ರೆಸ್‌ನ ಸುರೇಶ್ ಶೆಟ್ಟಿ ಪ್ರತಿನಿಧಿಸಿದ್ದರು.

Published On - 5:50 pm, Mon, 3 October 22

ಮನೆಯಲ್ಲಿ ಅಡುಗೆ ಕೋಣೆ ಯಾವ ದಿಕ್ಕಿನಲ್ಲಿರಬೇಕು? ವಾಸ್ತು ವಿವರಣೆ ಇಲ್ಲಿದೆ
ಮನೆಯಲ್ಲಿ ಅಡುಗೆ ಕೋಣೆ ಯಾವ ದಿಕ್ಕಿನಲ್ಲಿರಬೇಕು? ವಾಸ್ತು ವಿವರಣೆ ಇಲ್ಲಿದೆ
ಸುಬ್ರಹ್ಮಣ್ಯನ ಲಹರಿಗಳಿರುವ ಈ ದಿನದ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸುಬ್ರಹ್ಮಣ್ಯನ ಲಹರಿಗಳಿರುವ ಈ ದಿನದ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಗಂಡನ ಗೆಳೆಯನೊಂದಿಗೆ ಪ್ರೇಮ ಸಲ್ಲಾಪ: ಮದ್ವೆ ಆಸೆ ತೋರಿಸಿ ಕೈಕೊಟ್ಟ ಪ್ರಿಯಕರ!
ಗಂಡನ ಗೆಳೆಯನೊಂದಿಗೆ ಪ್ರೇಮ ಸಲ್ಲಾಪ: ಮದ್ವೆ ಆಸೆ ತೋರಿಸಿ ಕೈಕೊಟ್ಟ ಪ್ರಿಯಕರ!
ಭಾಷೆಯಿಂದ ನಾವು, ನಮ್ಮಿಂದ ಭಾಷೆ ಅಲ್ಲ: ಗೋಲ್ಡನ್ ಸ್ಟಾರ್ ಗಣೇಶ್
ಭಾಷೆಯಿಂದ ನಾವು, ನಮ್ಮಿಂದ ಭಾಷೆ ಅಲ್ಲ: ಗೋಲ್ಡನ್ ಸ್ಟಾರ್ ಗಣೇಶ್
ಎಲ್ಲರ ಅಪೇಕ್ಷೆಯಂತೆ ಬಿಜೆಪಿಯಲ್ಲಿ ಖಂಡಿತ ಬದಲಾವಣೆಗಳು ಆಗಲಿವೆ: ಈಶ್ವರಪ್ಪ
ಎಲ್ಲರ ಅಪೇಕ್ಷೆಯಂತೆ ಬಿಜೆಪಿಯಲ್ಲಿ ಖಂಡಿತ ಬದಲಾವಣೆಗಳು ಆಗಲಿವೆ: ಈಶ್ವರಪ್ಪ
ಸುರ್ಜೇವಾಲಾ ನನಗೆ ಬಾಯ್ಮುಚ್ಚಿಕೊಂಡಿರುವಂತೆ ಹೇಳಿದ್ದಾರೆ: ಮಧು ಬಂಗಾರಪ್ಪ
ಸುರ್ಜೇವಾಲಾ ನನಗೆ ಬಾಯ್ಮುಚ್ಚಿಕೊಂಡಿರುವಂತೆ ಹೇಳಿದ್ದಾರೆ: ಮಧು ಬಂಗಾರಪ್ಪ
ಯಾವಾಗಲೂ ಕುಮಾರ್ ಬಂಗಾರಪ್ಪ ಮನೆಯಲ್ಲಿ ಸಭೆ ನಡೆಸುತ್ತಿದ್ದ ರೆಬೆಲ್​ಗಳು
ಯಾವಾಗಲೂ ಕುಮಾರ್ ಬಂಗಾರಪ್ಪ ಮನೆಯಲ್ಲಿ ಸಭೆ ನಡೆಸುತ್ತಿದ್ದ ರೆಬೆಲ್​ಗಳು
ನೀರಿಗಿಳಿಯಬಾರದೆಂಬ ಸೂಚನೆಯಿದ್ದರೂ ಉಲ್ಲಂಘಿಸುತ್ತಿರುವ ಪ್ರವಾಸಿಗರು
ನೀರಿಗಿಳಿಯಬಾರದೆಂಬ ಸೂಚನೆಯಿದ್ದರೂ ಉಲ್ಲಂಘಿಸುತ್ತಿರುವ ಪ್ರವಾಸಿಗರು
ಸಿಎಂ, ಡಿಸಿಎಂ ಆದಿಯಾಗಿ ಎಲ್ಲರೂ ಫೋನ್ ರಿಸೀವ್ ಮಾಡುತ್ತಾರೆ: ಲಕ್ಷ್ಮಣ ಸವದಿ
ಸಿಎಂ, ಡಿಸಿಎಂ ಆದಿಯಾಗಿ ಎಲ್ಲರೂ ಫೋನ್ ರಿಸೀವ್ ಮಾಡುತ್ತಾರೆ: ಲಕ್ಷ್ಮಣ ಸವದಿ
ಕವಡೆ ಶಾಸ್ತ್ರವೇ ನಿಜವಾದರೆ ಕಾಂಗ್ರೆಸ್ ನಾಯಕರು ಆಗೇನು ಹೇಳುತ್ತಾರೆ? ಅಶೋಕ
ಕವಡೆ ಶಾಸ್ತ್ರವೇ ನಿಜವಾದರೆ ಕಾಂಗ್ರೆಸ್ ನಾಯಕರು ಆಗೇನು ಹೇಳುತ್ತಾರೆ? ಅಶೋಕ