Chhattisgarh Mizoram Elections 2023: ಇಂದು ಛತ್ತೀಸ್​ಗಢ, ಮಿಜೋರಾಂನಲ್ಲಿ ವಿಧಾನಸಭಾ ಚುನಾವಣೆ, ಮತದಾನ ಆರಂಭ, ಬಿಗಿ ಭದ್ರತೆ

ಇಂದು ಛತ್ತೀಸ್​ಗಢ(Chhattisgarh) ಹಾಗೂ ಮಿಜೋರಾಂ(Mizoram)ನಲ್ಲಿ ವಿಧಾನಸಭಾ ಚುನಾವಣೆ(Assembly Election) ನಡೆಯುತ್ತಿದ್ದು, ಮತದಾನ ಆರಂಭವಾಗಿದೆ. ಛತ್ತೀಸ್‌ಗಢದಲ್ಲಿ ವಿಧಾನಸಭಾ ಚುನಾವಣೆಯ ಮೊದಲ ಹಂತದ ಚುನಾವಣೆಗೆ ಮತದಾನ ಶುರುವಾಗಿದೆ. ಇದಾದ ನಂತರ ನವೆಂಬರ್ 17 ರಂದು ಎರಡನೇ ಹಂತದಲ್ಲಿ 70 ಸ್ಥಾನಗಳಿಗೆ ಮತದಾನ ನಡೆಯಲಿದೆ. ಇಂದು ಬೆಳಗ್ಗೆ 7ರಿಂದ ಮಧ್ಯಾಹ್ನ 3ರವರೆಗೆ 10 ಕ್ಷೇತ್ರಗಳಿಗೆ ಮತದಾನ ನಡೆಯಲಿದ್ದು, 10 ಕ್ಷೇತ್ರಗಳಲ್ಲಿ ಬೆಳಗ್ಗೆ 8ರಿಂದ ಸಂಜೆ 5ರವರೆಗೆ ಮತದಾನ ನಡೆಯಲಿದೆ.

Chhattisgarh Mizoram Elections 2023: ಇಂದು ಛತ್ತೀಸ್​ಗಢ, ಮಿಜೋರಾಂನಲ್ಲಿ ವಿಧಾನಸಭಾ ಚುನಾವಣೆ, ಮತದಾನ ಆರಂಭ, ಬಿಗಿ ಭದ್ರತೆ
ಮತದಾನ
Follow us
ನಯನಾ ರಾಜೀವ್
|

Updated on: Nov 07, 2023 | 8:05 AM

ಇಂದು ಛತ್ತೀಸ್​ಗಢ(Chhattisgarh) ಹಾಗೂ ಮಿಜೋರಾಂ(Mizoram)ನಲ್ಲಿ ವಿಧಾನಸಭಾ ಚುನಾವಣೆ(Assembly Election) ನಡೆಯುತ್ತಿದ್ದು, ಮತದಾನ ಆರಂಭವಾಗಿದೆ. ಛತ್ತೀಸ್‌ಗಢದಲ್ಲಿ ವಿಧಾನಸಭಾ ಚುನಾವಣೆಯ ಮೊದಲ ಹಂತದ ಚುನಾವಣೆಗೆ ಮತದಾನ ಶುರುವಾಗಿದೆ. ಇದಾದ ನಂತರ ನವೆಂಬರ್ 17 ರಂದು ಎರಡನೇ ಹಂತದಲ್ಲಿ 70 ಸ್ಥಾನಗಳಿಗೆ ಮತದಾನ ನಡೆಯಲಿದೆ. ಇಂದು ಬೆಳಗ್ಗೆ 7ರಿಂದ ಮಧ್ಯಾಹ್ನ 3ರವರೆಗೆ 10 ಕ್ಷೇತ್ರಗಳಿಗೆ ಮತದಾನ ನಡೆಯಲಿದ್ದು, 10 ಕ್ಷೇತ್ರಗಳಲ್ಲಿ ಬೆಳಗ್ಗೆ 8ರಿಂದ ಸಂಜೆ 5ರವರೆಗೆ ಮತದಾನ ನಡೆಯಲಿದೆ.

ಭದ್ರತಾ ದೃಷ್ಟಿಯಿಂದ ಚುನಾವಣಾ ಆಯೋಗವು ಛತ್ತೀಸ್‌ಗಢದಲ್ಲಿ ಎರಡು ಹಂತಗಳಲ್ಲಿ ಮತದಾನ ನಡೆಸಲು ನಿರ್ಧರಿಸಿದೆ. ಈ ಬಾರಿಯ ವಿಧಾನಸಭಾ ಚುನಾವಣೆ ಹಲವು ರೀತಿಯಲ್ಲಿ ವಿಶೇಷವಾಗಿದೆ. ಸತತ ಎರಡನೇ ಬಾರಿಗೆ ಅಧಿಕಾರಕ್ಕೆ ಬರುವುದಾಗಿ ಕಾಂಗ್ರೆಸ್ ಹೇಳುತ್ತಿದ್ದರೆ, ಬಿಜೆಪಿ ಕಾಂಗ್ರೆಸ್ ಅನ್ನು ಸೋಲಿಸಲು ತನ್ನ ಹಲವು ಸಂಸದರನ್ನು ಕಣಕ್ಕಿಳಿಸಿದೆ.

ಮೊದಲ ಹಂತದಲ್ಲಿ ಇಂದು ಛತ್ತೀಸ್‌ಗಢದ 9 ಜಿಲ್ಲೆಗಳ 20 ವಿಧಾನಸಭಾ ಸ್ಥಾನಗಳಿಗೆ ಮತದಾನ ನಡೆಯಲಿದೆ. ಈ ಜಿಲ್ಲೆಗಳಲ್ಲಿ ಹೆಚ್ಚಿನವು ನಕ್ಸಲ್ ಪೀಡಿತವಾಗಿವೆ ಮತ್ತು ಎಲ್ಲವೂ ಬುಡಕಟ್ಟು ಪ್ರಾಬಲ್ಯದ ಪ್ರದೇಶಗಳಾಗಿವೆ.

ಈ 20 ಸ್ಥಾನಗಳಲ್ಲಿ 12 ಎಸ್‌ಟಿಗೆ ಮೀಸಲಾಗಿದೆ. 2018 ರಲ್ಲಿ ನಡೆದ ಚುನಾವಣೆಯಲ್ಲಿ, ಈ 9 ಜಿಲ್ಲೆಗಳ ಒಟ್ಟಾರೆ ಮತದಾನದ ಪ್ರಮಾಣವು 77.23% ಆಗಿತ್ತು.

ಮತ್ತಷ್ಟು ಓದಿ: ನಾಳೆ ಮಿಜೋರಾಂ ವಿಧಾನಸಭಾ ಚುನಾವಣೆ, ಈ ನಾಲ್ಕು ಕ್ಷೇತ್ರಗಳ ಮೇಲೆ ಎಲ್ಲರ ಚಿತ್ತ

ಚುನಾವಣೆಗೂ ಮುನ್ನ ಐಇಡಿ ಸ್ಫೋಟ ಚುನಾವಣೆಗೂ ಮುನ್ನವೇ ಛತ್ತೀಸ್​ಗಢದಲ್ಲಿ ಸುಧಾರಿತ ಬಾಂಬ್ ಸ್ಫೋಟಗೊಂಡಿದ್ದು, ಮತಗಟ್ಟೆಯ ಎರಡು ಸಿಬ್ಬಂದಿ ಹಾಗೂ ಬಿಎಸ್​ಎಫ್​ ಸಿಬ್ಬಂದಿಗೆ ಗಾಯಗಳಾಗಿವೆ.

ಮಿಜೋರಾಂ ವಿಧಾನಸಭಾ ಚುನಾವಣೆ ಮಿಜೋರಾಂ ವಿಧಾನಸಭಾ ಚುನಾವಣೆಗೆ ಒಂದೇ ಹಂತದಲ್ಲಿ ಮತದಾನ ನಡೆಯುತ್ತಿದೆ. 40 ವಿಧಾನಸಭಾ ಸ್ಥಾನಗಳನ್ನು ಹೊಂದಿರುವ ಮಿಜೋರಾಂನಲ್ಲಿ 8.57 ಲಕ್ಷಕ್ಕೂ ಹೆಚ್ಚು ಮತದಾರರಿದ್ದು, ಮಂಗಳವಾರ ಬೆಳಗ್ಗೆಯಿಂದ ಮತದಾನ ಆರಂಭಿಸಿದ್ದಾರೆ. ಈಶಾನ್ಯ ರಾಜ್ಯದಲ್ಲಿ 174 ಅಭ್ಯರ್ಥಿಗಳು ತಮ್ಮ ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದಾರೆ. ಸುದ್ದಿ ಸಂಸ್ಥೆ ಪಿಟಿಐ ಪ್ರಕಾರ, ಮಿಜೋರಾಂನಲ್ಲಿ ಒಟ್ಟು 1276 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ, ಅದರಲ್ಲಿ ಮತದಾನವು ಬೆಳಿಗ್ಗೆ 7 ರಿಂದ ಪ್ರಾರಂಭವಾಯಿತು, ಸಂಜೆ 4 ರವರೆಗೆ ಮುಂದುವರೆಯಲಿದೆ.

ಯಾರ ನಡುವೆ ಸ್ಪರ್ಧೆ ಇದೆ?

ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು 3,000 ಪೊಲೀಸ್ ಸಿಬ್ಬಂದಿ ಮತ್ತು 5,400 ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳನ್ನು ನಿಯೋಜಿಸಲಾಗಿದೆ. ಇಲ್ಲಿ ಆಡಳಿತಾರೂಢ ಮಿಜೋ ನ್ಯಾಷನಲ್ ಫ್ರಂಟ್ (ಎಂಎನ್‌ಎಫ್), ಪ್ರಮುಖ ವಿರೋಧ ಪಕ್ಷವಾದ ಜೋರಾಮ್ ಪೀಪಲ್ಸ್ ಮೂವ್‌ಮೆಂಟ್ (ಝಡ್‌ಪಿಎಂ) ಮತ್ತು ಕಾಂಗ್ರೆಸ್ ನಡುವೆ ಪೈಪೋಟಿ ಏರ್ಪಟ್ಟಿದೆ. ಈ ಮೂರು ಪಕ್ಷಗಳು ಎಲ್ಲಾ 40 ಸ್ಥಾನಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿವೆ. ಅದೇ ಸಮಯದಲ್ಲಿ, ಬಿಜೆಪಿ ಮತ್ತು ಹೊಸ ಆಮ್ ಆದ್ಮಿ ಪಕ್ಷ (ಎಎಪಿ) ಕ್ರಮವಾಗಿ 23 ಮತ್ತು 4 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿವೆ. 27 ಸ್ವತಂತ್ರ ಅಭ್ಯರ್ಥಿಗಳು ಕಣದಲ್ಲಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ