Jammu Kashmir Election Results: ಜಮ್ಮು ಕಾಶ್ಮೀರದಲ್ಲಿ ಬಿಜೆಪಿ ಸೋಲಿಗೆ ಕಾರಣವೇನು?
ಹರಿಯಾಣದಲ್ಲಿ ಹ್ಯಾಟ್ರಿಕ್ ಸಾಧನೆ ಮಾಡಿರುವ ಬಿಜೆಪಿ 3ನೇ ಅವಧಿಗೆ ಸರ್ಕಾರ ರಚಿಸುವ ಸಿದ್ಧತೆಯಲ್ಲಿದೆ. ಆದರೆ, ಈ ಬಾರಿ ಬಿಜೆಪಿ ಭಾರೀ ನಿರೀಕ್ಷೆ ಇಟ್ಟುಕೊಂಡಿದ್ದ ಜಮ್ಮು ಮತ್ತು ಕಾಶ್ಮೀರದಲ್ಲಿ ಬಿಜೆಪಿಗೆ ಸೋಲುಂಟಾಗಿದೆ. ಕಳೆದ 1 ದಶಕದ ಬಳಿಕ ಜಮ್ಮು ಕಾಶ್ಮೀರದಲ್ಲಿ ನಡೆದ ಮೊದಲ ವಿಧಾನಸಭಾ ಚುನಾವಣೆ ಇದಾಗಿದ್ದರಿಂದ ಸಹಜವಾಗಿಯೇ ನಿರೀಕ್ಷೆ ಸಾಕಷ್ಟಿತ್ತು.
ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಭಾರೀ ಹಿನ್ನಡೆಯಾಗಿದೆ. ಈ ಬಾರಿ ಜಮ್ಮು ಕಾಶ್ಮೀರದಲ್ಲಿ ಗೆಲುವಿನ ನಿರೀಕ್ಷೆಯಲ್ಲಿದ್ದ ಬಿಜೆಪಿ ನಾಯಕರಿಗೆ ನಿರಾಸೆಯಾಗಿದೆ. ಹರಿಯಾಣದಲ್ಲಿ ಭರ್ಜರಿ ಗೆಲುವು ಕಂಡಿರುವ ಬಿಜೆಪಿಗೆ ಜಮ್ಮು ಕಾಶ್ಮೀರದಲ್ಲಿ ಸೋಲು ಉಂಟಾಗಿದೆ. ಜಮ್ಮು ಕಾಶ್ಮೀರದಲ್ಲಿ ಬಿಜೆಪಿ 29 ಸ್ಥಾನಗಳನ್ನು ಗಳಿಸಿದ್ದರೆ ನ್ಯಾಷನಲ್ ಕಾನ್ಫರೆನ್ಸ್ ಮತ್ತು ಕಾಂಗ್ರೆಸ್ ಮೈತ್ರಿ 48 ಸ್ಥಾನಗಳನ್ನು ಗಳಿಸಿದೆ. ಜಮ್ಮು ಕಾಶ್ಮೀರದಲ್ಲಿ ಬಿಜೆಪಿ ಸೋಲಿಗೆ ಕಾರಣವೇನು? ಎಂಬುದರ ಬಗ್ಗೆ ಮಾಹಿತಿ ಇಲ್ಲಿದೆ.
ಜಮ್ಮು ಕಾಶ್ಮೀರದಲ್ಲಿ ಆರ್ಟಿಕಲ್ 370 ರದ್ದು, ಹೊಸ ಕಾಶ್ಮೀರ ಮನವೊಲಿಕೆ ಮಾಡುವಲ್ಲಿ ವಿಫಲವಾಗಿದ್ದು ಈ ಬಾರಿಯ ಬಿಜೆಪಿ ಸೋಲಿಗೆ ಮುಖ್ಯ ಕಾರಣ ಎನ್ನಲಾಗುತ್ತಿದೆ. ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ), ಪಿಡಿಪಿಯಂತಹ ಪ್ರಾದೇಶಿಕ ಪಕ್ಷಗಳು ಕಾಶ್ಮೀರಿ ವಿರೋಧಿ ನೀತಿ ಎಂದು ಬಿಜೆಪಿ ವಿರುದ್ಧ ಅಸ್ತ್ರ ಮಾಡಿಕೊಂಡವು. ಭಯೋತ್ಪಾದನೆ ನಿಗ್ರಹದ ಹೆಸರಿನಲ್ಲಿ ಕಾಶ್ಮೀರದಲ್ಲಿ ಭಾರಿ ಭದ್ರತೆ ನಿಯೋಜಿಸಿದ್ದು ಕೂಡ ಬಿಜೆಪಿಗೆ ಹಿನ್ನಡೆಯಾಯಿತು. ವಾಕ್ ಸ್ವಾತಂತ್ರ್ಯದ ಹಕ್ಕನ್ನು ನಿಗ್ರಹಿಸಲಾಗುತ್ತಿದೆ ಎಂದು ಸ್ಥಳೀಯ ಪಕ್ಷಗಳು ಪ್ರಚಾರ ಮಾಡಿದವು.
ಬಗೆಹರಿಯದ ನಿರುದ್ಯೋಗ ಸಮಸ್ಯೆ, ಬಿಜೆಪಿ ಭರವಸೆಗೂ ವಾಸ್ತವಕ್ಕೂ ಅಂತರವಿದ್ದುದು, ಬಿಜೆಪಿ ಬೆಂಬಲಿತ ಪಕ್ಷಗಳಿಗೆ ಕಾಶ್ಮೀರದಲ್ಲಿ ಮಾನ್ಯತೆ ಸಿಗದಿದ್ದುದು ಕೂಡ ಈ ಚುನಾವಣೆಯಲ್ಲಿ ಬಿಜೆಪಿ ಸೋಲಿಗೆ ಕಾರಣವಾಯಿತು. ಅಪ್ನಿ ಪಾರ್ಟಿ ಮತ್ತು ಪೀಪಲ್ಸ್ ಕಾನ್ಫರೆನ್ಸ್ ಪಕ್ಷಗಳ ಜೊತೆ ಬಿಜೆಪಿ ಚುನಾವಣಾ ಹೊಂದಾಣಿಕೆ ಮಾಡಿಕೊಂಡಿದ್ದರಿಂದ NC ಮತ್ತು PDP ಪಕ್ಷಗಳ ಪ್ರಾಬಲ್ಯದ ಮುಂದೆ ಬಿಜೆಪಿ ಬೆಂಬಲಿತ ಪಕ್ಷಗಳು ಮಂಡಿಯೂರಿದವು.
ಇದನ್ನೂ ಓದಿ: Assembly Election Results 2024: ಹರ್ಯಾಣ, ಜಮ್ಮು-ಕಾಶ್ಮೀರ ವಿಧಾನಸಭಾ ಚುನಾವಣೆ, ಮತ ಎಣಿಕೆ ಶುರು
ಈ ಬಾರಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾರತ್ ಜೋಡೊ ಯಾತ್ರೆ ಹೆಚ್ಚು ಜನಪ್ರಿಯವಾಗಿತ್ತು. ಬಿಜೆಪಿಯ ವಿರುದ್ಧ ಕಾಶ್ಮೀರಿ ವಿರೋಧಿ ನಿರೂಪಣೆ ರೂಪಿಸುವಲ್ಲಿ ಕಾಂಗ್ರೆಸ್, ಎನ್‌ಸಿ ಯಶಸ್ವಿಯಾದವು. ಇದೆಲ್ಲವೂ ಜಮ್ಮು ಕಾಶ್ಮೀರದಲ್ಲಿ ಭರ್ಜರಿ ಪ್ರಚಾರದ ಹೊರತಾಗಿಯೂ ಬಿಜೆಪಿ ಸೋಲಿಗೆ ಕಾರಣವಾಯಿತು.
VIDEO | “We set our agenda and target, we fought well, we fought together. All the leaders fought unitedly. We have 98 pc success rate in Jammu and we got votes in Kashmir for the first time. I have full faith we will work harder and serve the people. There is no absolute… pic.twitter.com/dQIJS3Ybnj
— Press Trust of India (@PTI_News) October 8, 2024
ಬಿಜೆಪಿ ಹಿಂದೂ ಸಮುದಾಯದವರ ಪ್ರಾಬಲ್ಯ ಹೆಚ್ಚಾಗಿದ್ದ ಜಮ್ಮು ಪ್ರದೇಶದ ಎರಡು ಅಸೆಂಬ್ಲಿ ಸ್ಥಾನಗಳಾದ ಬಾನಿ ಮತ್ತು ರಾಂಬನ್‌ನಲ್ಲಿ ಸೋಲನ್ನು ಅನುಭವಿಸಿದೆ. ಜಮ್ಮು ಮತ್ತು ಕಾಶ್ಮೀರದ ಬನಿ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಪಕ್ಷವು 18,672 ಮತಗಳಿಂದ ಸ್ವತಂತ್ರ ಅಭ್ಯರ್ಥಿಗೆ ಸೋತಿತು. ಆದರೆ, ರಾಂಬನ್‌ನಲ್ಲಿ ಬಿಜೆಪಿ 8,869 ಮತಗಳ ಅಂತರದಿಂದ ನ್ಯಾಷನಲ್ ಕಾನ್ಫರೆನ್ಸ್ ವಿರುದ್ಧ ಸೋತಿದೆ.
ಚುನಾವಣಾ ಆಯೋಗದ ಪ್ರಕಾರ, ಸ್ವತಂತ್ರ ಅಭ್ಯರ್ಥಿ ಡಾ. ರಾಮೇಶ್ವರ್ ಸಿಂಗ್ ಅವರು ಬಾನಿ ಕ್ಷೇತ್ರದಲ್ಲಿ ಬಿಜೆಪಿಯ ಜೇವನ್ ಲಾಲ್ ಅವರನ್ನು 18,672 ಮತಗಳ ಅಂತರದಿಂದ ಸೋಲಿಸಿದ್ದಾರೆ. 2014ರ ವಿಧಾನಸಭೆ ಚುನಾವಣೆಯಲ್ಲಿ ಜೇವನ್ ಲಾಲ್ ಈ ಕ್ಷೇತ್ರದಿಂದ ಗೆದ್ದಿದ್ದರು.
ಇದನ್ನೂ ಓದಿ: ಹರಿಯಾಣದಲ್ಲಿ ಬಿಜೆಪಿಗೆ ದೊಡ್ಡ ಶಾಕ್; ಅಶೋಕ್ ತನ್ವಾರ್ ಕಾಂಗ್ರೆಸ್‌ಗೆ ಮರು ಸೇರ್ಪಡೆ
ರಾಂಬನ್‌ನಲ್ಲಿ ನ್ಯಾಷನಲ್ ಕಾನ್ಫರೆನ್ಸ್ ಅಭ್ಯರ್ಥಿ ಅರ್ಜುನ್ ಸಿಂಗ್ ರಾಜು ಅವರು ಬಿಜೆಪಿ ಬಂಡಾಯ ಅಭ್ಯರ್ಥಿ ಸೂರಜ್ ಸಿಂಗ್ ಪರಿಹಾರ್ ಅವರನ್ನು 8,869 ಮತಗಳಿಂದ ಸೋಲಿಸಿದರು. ಬಿಜೆಪಿಯ ರಾಕೇಶ್ ಸಿಂಗ್ ಠಾಕೂರ್ 17,254 ಮತಗಳನ್ನು ಪಡೆದು ಮೂರನೇ ಸ್ಥಾನ ಪಡೆದರು. 2014ರ ವಿಧಾನಸಭೆ ಚುನಾವಣೆಯಲ್ಲಿ ಈ ಕ್ಷೇತ್ರದಿಂದ ಬಿಜೆಪಿ ಗೆಲುವು ಸಾಧಿಸಿತ್ತು.
Jammu & Kashmir Election Results 2024: Congress-NC alliance takes unassailable lead as Valley votes after 10 years; here’s what latest trends show:#JammuKashmirElection2024 #JammuKashmirAssemblyElection pic.twitter.com/FH8v8dfC7k
— Press Trust of India (@PTI_News) October 8, 2024
2014ರ ಅಸೆಂಬ್ಲಿ ಚುನಾವಣೆಯಲ್ಲಿ ಬಿಜೆಪಿ 25 ಸ್ಥಾನಗಳನ್ನು ಗೆದ್ದರೆ, ಪಿಡಿಪಿ ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿತ್ತು. ಸೆಪ್ಟೆಂಬರ್ 18, 25 ಮತ್ತು ಅಕ್ಟೋಬರ್ 1ರಂದು ಜಮ್ಮು ಮತ್ತು ಕಾಶ್ಮೀರದಲ್ಲಿ 3 ಹಂತಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಿತು. ಇದು ಕಳೆದ ಒಂದು ದಶಕದಲ್ಲಿ ನಡೆದ ಮೊದಲ ಚುನಾವಣೆಯಾಗಿದೆ. ಜಮ್ಮು ಕಾಶ್ಮೀರದಲ್ಲಿ 370ನೇ ವಿಧಿಯನ್ನು ರದ್ದುಗೊಳಿಸಿದ ನಂತರ ನಡೆದ ಮೊದಲ ಚುನಾವಣೆಯಾಗಿದೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 3:47 pm, Tue, 8 October 24