Five State Election Results: ಚುನಾವಣಾ ಫಲಿತಾಂಶ: ಮತಗಟ್ಟೆ ಸಮೀಕ್ಷೆಯನ್ನು ನಿಜವಾಗಿಸಿತೇ ಆರಂಭಿಕ ಟ್ರೆಂಡ್​​? ಇಲ್ಲಿದೆ ವಿವರ

Assembly Election Results 2023: ಪಂಚ ರಾಜ್ಯ ಚುನಾವಣೆ ಪೈಕಿ ನಾಲ್ಕು ರಾಜ್ಯಗಳ ಮತ ಎಣಿಕೆ ಪ್ರಗತಿಯಲ್ಲಿದೆ. ಆರಂಭಿಕ ಟ್ರೆಂಡ್​​ಗಳ ಪ್ರಕಾರ, ಮಧ್ಯ ಪ್ರದೇಶದಲ್ಲಿ ಹಾಗೂ ರಾಜಸ್ಥಾನದಲ್ಲಿ ಬಿಜೆಪಿ ಮುನ್ನಡೆ ಕಾಯ್ದುಕೊಂಡಿವೆ. ಛತ್ತೀಸ್​ಗಢದಲ್ಲಿ ಕಾಂಗ್ರೆಸ್ ಮುನ್ನಡೆಯಲ್ಲಿದ್ದರೆ, ತೆಲಂಗಾಣದಲ್ಲಿಯೂ ಬಿಆರ್​ಎಸ್​​ ಅನ್ನು ಕಾಂಗ್ರೆಸ್ ಹಿಂದಿಕ್ಕಿದೆ.

Five State Election Results: ಚುನಾವಣಾ ಫಲಿತಾಂಶ: ಮತಗಟ್ಟೆ ಸಮೀಕ್ಷೆಯನ್ನು ನಿಜವಾಗಿಸಿತೇ ಆರಂಭಿಕ ಟ್ರೆಂಡ್​​? ಇಲ್ಲಿದೆ ವಿವರ
ನಾಲ್ಕು ರಾಜ್ಯ ಚುನಾವಣಾ ಫಲಿತಾಂಶ
Follow us
Ganapathi Sharma
|

Updated on:Dec 03, 2023 | 10:35 AM

ನವದೆಹಲಿ, ಡಿಸೆಂಬರ್ 3: ಪಂಚ ರಾಜ್ಯ ವಿಧಾನಸಭೆಗೆ (Five State Assembly Election Results 2023) ನಡೆದ ಚುನಾವಣೆ ಪೈಕಿ ನಾಲ್ಕು ರಾಜ್ಯಗಳ ಮತ ಎಣಿಕೆ (Vote Counting) ಪ್ರಗತಿಯಲ್ಲಿದೆ. ರಾಜಸ್ಥಾನ, ಮಧ್ಯ ಪ್ರದೇಶ, ತೆಲಂಗಾಣ ಹಾಗೂ ಛತ್ತೀಸ್​​ಗಢದ ಮತ ಎಣಿಕೆ ನಡೆಯುತ್ತಿದ್ದು, ಮಿಜೋರಾಂನ ಫಲಿತಾಂಶ ಸೋಮವಾರ ಪ್ರಕಟವಾಗಲಿದೆ. ಮತ ಎಣಿಕೆಯ ಆರಂಭಿಕ ಟ್ರೆಂಡ್​ಗಳು ಬಹುತೇಕ ಮತಗಟ್ಟೆ ಸಮೀಕ್ಷೆಗಳನ್ನು ನಿಜವಾಗಿಸುವತ್ತ ಹೆಜ್ಜೆ ಇಟ್ಟಿವೆ. ಮಧ್ಯ ಪ್ರದೇಶ ಹಾಗೂ ರಾಜಸ್ಥಾನದಲ್ಲಿ ಬಿಜೆಪಿ ಮುನ್ನಡೆ ಕಾಯ್ದುಕೊಂಡಿದ್ದರೆ, ಛತ್ತೀಸ್​ಗಢದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಮಧ್ಯ ತೀವ್ರ ಪೈಪೋಟಿ ಏರ್ಪಟ್ಟಿದೆ. ತೆಲಂಗಾಣದಲ್ಲಿ ಆಡಳಿತಾರೂಢ ಬಿಆರ್​ಎಸ್​​ ಅನ್ನು ಹಿಂದಿಕ್ಕಿ ಕಾಂಗ್ರೆಸ್​ ಮುನ್ನಡೆ ಕಾಯ್ದುಕೊಂಡಿದೆ.

ಚುನಾವಣಾ ಪ್ರಕ್ರಿಯೆ ಮುಗಿಯುತ್ತಿದ್ದಂತೆಯೇ ಪ್ರಕಟವಾಗಿದ್ದ ಬಹುತೇಕ ಮತಗಟ್ಟೆ ಸಮೀಕ್ಷೆಗಳು ನೀಡಿದ್ದ ಸುಳಿವಿನಂತೆಯೇ ಮತ ಎಣಿಕೆಯ ಆರಂಭಿಕ ಟ್ರೆಂಡ್​​​ಗಳು ಕಂಡುಬಂದಿವೆ.

ರಾಜಸ್ಥಾನ ಹಾಗೂ ಮಧ್ಯ ಪ್ರದೇಶದಲ್ಲಿ ಬಿಜೆಪಿ ಮುನ್ನಡೆ ಕಾಯ್ದುಕೊಂಡಿದೆ. ಬೆಳಿಗ್ಗೆ 9.45ರ ವೇಳೆಗೆ ಗಂಟೆ ವೇಳೆಗೆ ಮಧ್ಯ ಪ್ರದೇಶದಲ್ಲಿ ಬಿಜೆಪಿ 135 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಇಲ್ಲಿ ಬಹುಮತಕ್ಕೆ 116 ಸ್ಥಾನ ಅಗತ್ಯ. ರಾಜಸ್ಥಾನದಲ್ಲಿ ಕಮಲ ಪಡೆಯು 108 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಇಲ್ಲಿ ಬಹುಮತಕ್ಕೆ 100 ಸ್ಥಾನ ಬೇಕಿದೆ.

ಮತ್ತೊಂದೆಡೆ, ತೆಲಂಗಾಣದಲ್ಲಿ ಬೆಳಿಗ್ಗೆ 9.45ರ ವೇಳೆಗೆ ಕಾಂಗ್ರೆಸ್​​ 62 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದರೆ, ಆಡಳಿತಾರೂಢ ಬಿಆರ್​​ಎಸ್ 47 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಈ ರಾಜ್ಯದಲ್ಲಿ ಬಹುಮತಕ್ಕೆ 60 ಸ್ಥಾನ ಬೇಕು.

ಛತ್ತೀಸ್​ಗಢದಲ್ಲಿ ಪೈಪೋಟಿ

ಛತ್ತೀಸ್​​ಗಢದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಮಧ್ಯ ತೀವ್ರ ಪೈಪೋಟಿ ಏರ್ಪಟ್ಟಿದೆ.  ಕಾಂಗ್ರೆಸ್​ 43 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದರೆ, ಬಿಜೆಪಿ 45 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಇಲ್ಲಿ ಬಹುಮತಕ್ಕೆ 46 ಸ್ಥಾನ ಬೇಕಿದೆ.

ಫಲಿತಾಂಶದ ಕ್ಷಣಕ್ಷಣದ ಅಪ್​ಡೇಟ್​ಗಳಿಗೆ ಓದಿ: Assembly Election Results 2023 LIVE: ಎಂಪಿ ಮತ್ತು ರಾಜಸ್ಥಾನದಲ್ಲಿ ಬಿಜೆಪಿ, ತೆಲಂಗಾಣದಲ್ಲಿ ಕಾಂಗ್ರೆಸ್ ಮುನ್ನಡೆ

ಪ್ರಮುಖ ಸುದ್ದಿವಾಹಿನಿಗಳು ಮತ್ತು ಸಂಸ್ಥೆಗಳು ನಡೆಸಿದ್ದ ಮತಗಟ್ಟೆ ಸಮೀಕ್ಷೆಗಳು ಛತ್ತೀಸ್‌ಗಢದಲ್ಲಿ ಕಾಂಗ್ರೆಸ್ ಅಧಿಕಾರವನ್ನು ಉಳಿಸಿಕೊಳ್ಳಬಹುದು ಮತ್ತು ತೆಲಂಗಾಣದಲ್ಲಿ ಬಿಆರ್‌ಎಸ್ ಅನ್ನು ಸೋಲಿಸಿ ಅಧಿಕಾರಕ್ಕೆ ಏರಬಹುದು ಎಂದು ಭವಿಷ್ಯ ನುಡಿದಿದ್ದವು. ಹೆಚ್ಚಿನ ಸಮೀಕ್ಷೆಗಳು ಮಧ್ಯಪ್ರದೇಶದಲ್ಲಿ ಬಿಜೆಪಿಗೆ ಮುನ್ನಡೆಯಾಗಲಿದೆ ಎಂದು ಹೇಳಿದ್ದರೂ, ರಾಜಸ್ಥಾನದಲ್ಲಿ ಆಡಳಿತಾರೂಢ ಕಾಂಗ್ರೆಸ್​​ಗೆ ಹಿನ್ನಡೆಯಾಗಲಿದೆ ಎಂದು ಹೇಳಿದ್ದವು. ಆದರೆ ಮಿಜೋರಾಂನಲ್ಲಿ ಅತಂತ್ರ ವಿಧಾನಸಭೆ ನಿರ್ಮಾಣವಾಗಲಿದೆ ಎಂದು ಸುಳಿವು ನೀಡಿದ್ದವು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 9:45 am, Sun, 3 December 23

ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್