Assembly Election Results 2024: ಹರ್ಯಾಣ, ಜಮ್ಮು-ಕಾಶ್ಮೀರ ವಿಧಾನಸಭಾ ಚುನಾವಣೆ, ಮತ ಎಣಿಕೆ ಶುರು

ಜಮ್ಮು ಮತ್ತು ಕಾಶ್ಮೀರ ಹಾಗೂ ಹರ್ಯಾಣದಲ್ಲಿ ನಡೆದ ವಿಧಾನಸಭಾ ಚುನಾವಣೆಯ ಫಲಿತಾಂಶ ಇಂದು ಹೊರಬೀಳಲಿದ್ದು, ಇದೀಗ ಮತ ಎಣಿಕೆ ಕಾರ್ಯ ಆರಂಭವಾಗಿದೆ. ಹರ್ಯಾಣದಲ್ಲಿ ಬಿಜೆಪಿ ಅಧಿಕಾರ ಉಳಿಸಿಕೊಳ್ಳುವ ವಿಶ್ವಾಸದಲ್ಲಿದ್ದರೆ, ಕಾಂಗ್ರೆಸ್ ಕೂಡ 10 ವರ್ಷಗಳ ಬಳಿಕ ಮತ್ತೆ ಅಧಿಕಾರಕ್ಕೆ ಬರುವ ನಿರೀಕ್ಷೆಯಲ್ಲಿದೆ.

Assembly Election Results 2024: ಹರ್ಯಾಣ, ಜಮ್ಮು-ಕಾಶ್ಮೀರ ವಿಧಾನಸಭಾ ಚುನಾವಣೆ, ಮತ ಎಣಿಕೆ ಶುರು
ಮತ ಎಣಿಕೆ
Image Credit source: Firstpost

Updated on: Oct 08, 2024 | 8:08 AM

ಹರ್ಯಾಣ, ಜಮ್ಮು ಮತ್ತು ಕಾಶ್ಮೀರ ವಿಧಾನಸಭಾ ಚುನಾವಣೆಯ ಫಲಿತಾಂಶಕ್ಕೆ ಕ್ಷಣಗಣನೆ ಶುರುವಾಗಿದೆ. ಇದೀಗ ಮತ ಎಣಿಕೆ ಕಾರ್ಯ ಆರಂಭವಾಗಿದೆ. ಹರ್ಯಾಣದಲ್ಲಿ ಬಿಜೆಪಿ ಅಧಿಕಾರ ಉಳಿಸಿಕೊಳ್ಳುವ ವಿಶ್ವಾಸದಲ್ಲಿದ್ದರೆ, ಕಾಂಗ್ರೆಸ್ ಕೂಡ 10 ವರ್ಷಗಳ ಬಳಿಕ ಮತ್ತೆ ಅಧಿಕಾರಕ್ಕೆ ಬರುವ ನಿರೀಕ್ಷೆಯಲ್ಲಿದೆ.

ಚುನಾವಣೆಯಲ್ಲಿ ಪ್ರಮುಖ ಪಕ್ಷಗಳು ಬಿಜೆಪಿ, ಕಾಂಗ್ರೆಸ್, ಆಮ್ ಆದ್ಮಿ ಪಕ್ಷ (ಎಎಪಿ), ಭಾರತೀಯ ರಾಷ್ಟ್ರೀಯ ಲೋಕದಳ (ಐಎನ್‌ಎಲ್‌ಡಿ)-ಬಹುಜನ ಸಮಾಜ ಪಕ್ಷ (ಬಿಎಸ್‌ಪಿ) ಮತ್ತು ಜನನಾಯಕ ಜನತಾ ಪಕ್ಷ (ಜೆಜೆಪಿ)-ಆಜಾದ್ ಸಮಾಜ ಪಕ್ಷ (ಎಎಸ್‌ಪಿ). ಬಹುತೇಕ ಕ್ಷೇತ್ರಗಳಲ್ಲಿ ಬಿಜೆಪಿ-ಕಾಂಗ್ರೆಸ್ ನಡುವೆ ನೇರ ಹಣಾಹಣಿ ಏರ್ಪಡುವ ಸಾಧ್ಯತೆಯಿದ್ದು, ಜಮ್ಮು-ಕಾಶ್ಮೀರದಲ್ಲಿ ಹರ್ಯಾಣದ ಜತೆಗೆ ಮತದಾನ ನಡೆದಿದ್ದು, ಕಾಂಗ್ರೆಸ್-ಬಿಜೆಪಿ ನಡುವೆ ನೇರ ಸ್ಪರ್ಧೆ ಏರ್ಪಡುವ ಸಾಧ್ಯತೆ ಇದೆ.

ಹರ್ಯಾಣದಲ್ಲಿ 67.90% ಮತದಾನವಾಗಿದೆ, 90 ವಿಧಾನಸಭಾ ಸ್ಥಾನಗಳು, ಒಟ್ಟು 1,031 ಅಭ್ಯರ್ಥಿಗಳು, 464 ಸ್ವತಂತ್ರ ಅಭ್ಯರ್ಥಿಗಳು, 101 ಮಹಿಳೆಯರು, ಹಲವು ಎಕ್ಸಿಟ್ ಪೋಲ್ ಗಳು ಕಾಂಗ್ರೆಸ್ ಗೆಲುವಿನ ಮುನ್ಸೂಚನೆ ನೀಡಿವೆ.

ಜಮ್ಮು ಕಾಶ್ಮೀರ
90 ವಿಧಾನಸಭಾ ಸ್ಥಾನಗಳಿಗೆ ಮೂರು ಹಂತಗಳಲ್ಲಿ ಮತದಾನವಾಗಿದೆ,  873 ಅಭ್ಯರ್ಥಿಗಳ ಭವಿಷ್ಯ ಅತಂತ್ರವಾಗಿದೆ, 2019 ರಲ್ಲಿ 370 ನೇ ವಿಧಿಯನ್ನು ರದ್ದುಗೊಳಿಸಿದ ನಂತರ, ಕೇಂದ್ರಾಡಳಿತ ಪ್ರದೇಶದಲ್ಲಿ ಮೊದಲ ಚುನಾಯಿತ ಸರ್ಕಾರ ರಚನೆಗೆ ದಾರಿ ಸುಗಮವಾಗಲಿದೆ.

ಹಿಂದಿನ ರಾಜ್ಯವನ್ನು ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್ ಕೇಂದ್ರಾಡಳಿತ ಪ್ರದೇಶಗಳಾಗಿ ವಿಂಗಡಿಸಿದ ಐದು ವರ್ಷಗಳ ನಂತರ ಈ ಚುನಾವಣೆ ನಡೆಯುತ್ತಿದೆ.

ಮುಖ ಪಕ್ಷಗಳಾದ ಕಾಂಗ್ರೆಸ್-ನ್ಯಾಷನಲ್ ಕಾನ್ಫರೆನ್ಸ್ (NC) ಮೈತ್ರಿ, ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ (PDP) ಮತ್ತು ಭಾರತೀಯ ಜನತಾ ಪಕ್ಷ (BJP). ಜಮ್ಮು ಮತ್ತು ಕಾಶ್ಮೀರದಲ್ಲಿ ಮೂರು ಹಂತಗಳಲ್ಲಿ ವಿಧಾನಸಭೆ ಚುನಾವಣೆ ನಡೆದಿದೆ. ಮೊದಲ ಹಂತದಲ್ಲಿ ಸೆಪ್ಟೆಂಬರ್ 18 ರಂದು 24 ಸ್ಥಾನಗಳಿಗೆ ಮತದಾನ ನಡೆದಿತ್ತು. ಎರಡನೇ ಹಂತದಲ್ಲಿ ಸೆಪ್ಟೆಂಬರ್ 25 ರಂದು 26 ಸ್ಥಾನಗಳಿಗೆ ಮತದಾನ ನಡೆಯಿತು. ಮೂರನೇ ಹಂತದಲ್ಲಿ ಅಕ್ಟೋಬರ್ 1 ರಂದು 40 ಸ್ಥಾನಗಳಿಗೆ ಮತದಾನ ನಡೆದಿತ್ತು. ಇಂದು ಈ 90 ಕ್ಷೇತ್ರಗಳ ಮತ ಎಣಿಕೆ ನಂತರ ಫಲಿತಾಂಶ ಪ್ರಕಟವಾಗಲಿದೆ.

ಜಮ್ಮು ಮತ್ತು ಕಾಶ್ಮೀರದ 90 ವಿಧಾನಸಭಾ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ 873 ಅಭ್ಯರ್ಥಿಗಳು ಕಣದಲ್ಲಿದ್ದರು. ಇಂದು ಮತ ಎಣಿಕೆ ಬಳಿಕ ಫಲಿತಾಂಶ ಬಂದ ತಕ್ಷಣ ಅವರ ಭವಿಷ್ಯ ನಿರ್ಧಾರವಾಗಲಿದೆ. ಜಮ್ಮು ಮತ್ತು ಕಾಶ್ಮೀರದ 20 ಜಿಲ್ಲೆಗಳಲ್ಲಿ ಮತ ಎಣಿಕೆ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಇಲ್ಲಿ 700 ವೀಕ್ಷಕರನ್ನು ಸಹ ನಿಯೋಜಿಸಲಾಗಿದೆ. ಇದರೊಂದಿಗೆ 10 ಸಾವಿರಕ್ಕೂ ಹೆಚ್ಚು ಹೆಚ್ಚುವರಿ ಭದ್ರತಾ ಪಡೆಗಳನ್ನು ಕೂಡ ಭದ್ರತೆಗೆ ನಿಯೋಜಿಸಲಾಗುವುದು.

ಭಾರೀ ಕುತೂಹಲ ಮೂಡಿಸಿರುವ ಜಮ್ಮು ಮತ್ತು ಕಾಶ್ಮೀರ ಹಾಗೂ ಹರ್ಯಾಣ ವಿಧಾನಸಭೆಯ ಚುನಾವಣಾ ಮತ ಎಣಿಕೆ ಇಂದು ನಡೆಯಲಿದ್ದು, ಮಧ್ಯಾಹ್ನದ ವೇಳೆ ಫಲಿತಾಂಶ ಕುರಿತು ಸ್ಪಷ್ಟ ಚಿತ್ರಣಗಳು ಲಭ್ಯವಾಗುವ ನಿರೀಕ್ಷೆಗಳಿವೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:03 am, Tue, 8 October 24

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us