ನವದೆಹಲಿ: 81 ಸದಸ್ಯ ಬಲದ ಜಾರ್ಖಂಡ್ ಅಸೆಂಬ್ಲಿ ಚುನಾವಣೆ ನವೆಂಬರ್ 13 ಮತ್ತು ನವೆಂಬರ್ 20ರಂದು 2 ಹಂತಗಳಲ್ಲಿ ನಡೆದಿದೆ. ಇಂದು (ನವೆಂಬರ್ 23) ಚುನಾವಣಾ ಫಲಿತಾಂಶ ಪ್ರಟಕವಾಗುತ್ತಿದೆ. ಜಾರ್ಖಂಡ್‌ನಲ್ಲಿ ಮೊದಲ ಹಂತದಲ್ಲಿ 43 ಕ್ಷೇತ್ರಗಳಿಗೆ ಮತದಾನ ನಡೆದರೆ, ಉಳಿದ 38 ಕ್ಷೇತ್ರಗಳಿಗೆ ಎರಡನೇ ಹಂತದಲ್ಲಿ ಮತದಾನ ನಡೆದಿದೆ. ಜಾರ್ಖಂಡ್‌ನಲ್ಲಿ ಜೆಎಂಎಂ-ಕಾಂಗ್ರೆಸ್-ಆರ್‌ಜೆಡಿ ಮೈತ್ರಿಕೂಟವು ಎನ್‌ಡಿಎಗೆ ತೀವ್ರ ಪೈಪೋಟಿ ನೀಡಲಿದೆ ಎನ್ನಲಾಗಿದೆ. ಆದರೆ, ಬಿಜೆಪಿ ನೇತೃತ್ವದ ಎನ್ಡಿಎ ಮೈತ್ರಿಕೂಟ ಈ ಬಾರಿ ಜಾರ್ಖಂಡ್ ವಿಧಾನಸಭಾ ಚುನಾವಣೆಯಲ್ಲಿ ಗೆಲ್ಲುತ್ತದೆ ಎಂದು ಅಂದಾಜಿಸಲಾಗಿದೆ.
ಜಾರ್ಖಂಡ್‌ನಲ್ಲಿ ಬಿಜೆಪಿ 68 ಸ್ಥಾನಗಳಲ್ಲಿ ಸ್ಪರ್ಧಿಸಿದರೆ, ಅದರ ಮೈತ್ರಿ ಪಾಲುದಾರ ಆಲ್ ಜಾರ್ಖಂಡ್ ವಿದ್ಯಾರ್ಥಿ ಒಕ್ಕೂಟ (ಎಜೆಎಸ್‌ಯು) 10 ಸ್ಥಾನಗಳಲ್ಲಿ, ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಜೆಡಿಯು ಎರಡು ಮತ್ತು ಚಿರಾಗ್ ಪಾಸ್ವಾನ್ ನೇತೃತ್ವದ ಲೋಕ ಜನಶಕ್ತಿ ಪಕ್ಷ (ರಾಮ್ ವಿಲಾಸ್) ಕೇವಲ ಒಂದು ಸ್ಥಾನದಲ್ಲಿ ಸ್ಪರ್ಧಿಸಿದೆ. ಇಂಡಿಯಾ ಬ್ಲಾಕ್ ಘಟಕಗಳ ಪೈಕಿ, ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) 41 ಸ್ಥಾನಗಳಲ್ಲಿ, ಕಾಂಗ್ರೆಸ್ 30, ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) 6 ಮತ್ತು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ-ಲೆನಿನಿಸ್ಟ್) 4 ಸ್ಥಾನಗಳಲ್ಲಿ ಸ್ಪರ್ಧಿಸಿವೆ.
ಮ್ಯಾಟ್ರಿಜ್ ಚುನಾವಣೋತ್ತರ ಸಮೀಕ್ಷೆ ಎನ್‌ಡಿಎಗೆ 42-47 ಸ್ಥಾನಗಳನ್ನು, ಇಂಡಿಯಾ ಬ್ಲಾಕ್‌ಗೆ 25-30 ಸ್ಥಾನಗಳನ್ನು ಮತ್ತು ಇತರರಿಗೆ 1-4 ಸ್ಥಾನ ಸಿಗಲಿದೆ ಎಂದು ಭವಿಷ್ಯ ನುಡಿದಿದೆ. ಪೀಪಲ್ಸ್ ಪಲ್ಸ್ ಎನ್‌ಡಿಎಗೆ 44-53 ಸ್ಥಾನಗಳು, ಇಂಡಿಯಾ ಬ್ಲಾಕ್‌ಗೆ 25-37 ಮತ್ತು ಇತರರಿಗೆ 5-9 ಸ್ಥಾನಗಳು ಸಿಗಲಿವೆ ಎಂದು ಭವಿಷ್ಯ ನುಡಿದಿದೆ.
ಇದನ್ನೂ ಓದಿ: Jharkhand Exit Poll: ಜಾರ್ಖಂಡ್‌ನಲ್ಲಿ ಬಿಜೆಪಿ ನೇತೃತ್ವದ ಎನ್ಡಿಎ ಪರ ಎಕ್ಸಿಟ್ ಪೋಲ್ ಫಲಿತಾಂಶ
ಮಹಾರಾಷ್ಟ್ರ ಚುನಾವಣೆ:
ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗೆ ಬುಧವಾರ ಒಂದೇ ಹಂತದಲ್ಲಿ ಮತದಾನ ಮಾಡಲಾಗಿದ್ದು, ನವೆಂಬರ್ 23ರಂದು ಫಲಿತಾಂಶ ಹೊರಬೀಳಲಿದೆ. ಭಾರತೀಯ ಜನತಾ ಪಕ್ಷ (ಬಿಜೆಪಿ) ನೇತೃತ್ವದ ಮಹಾಯುತಿ ಮೈತ್ರಿಕೂಟವು ಅಧಿಕಾರವನ್ನು ಉಳಿಸಿಕೊಳ್ಳುವ ಗುರಿಯನ್ನು ಹೊಂದಿದೆ. ಆದರೆ ಮಹಾ ವಿಕಾಸ್ ಅಘಾಡಿ (ಎಂವಿಎ) ಮತ್ತೆ ಅಧಿಕಾರಕ್ಕೇರುವ ನಿರೀಕ್ಷೆಯಲ್ಲಿದೆ.
ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಮೈತ್ರಿಕೂಟವಾದ ಮಹಾವಿಕಾಸ್ ಅಘಾಡಿಯನ್ನು ಹಿಂದಿಕ್ಕಿ ಬಿಜೆಪಿ ಮೈತ್ರಿಕೂಟ ಮಹಾಯುತಿ ಮತ್ತೊಮ್ಮೆ ಅಧಿಕಾರಕ್ಕೇರುವ ಸಾಧ್ಯತೆಗಳು ಹೆಚ್ಚಾಗಿವೆ. ಮಹಾರಾಷ್ಟ್ರ ವಿಧಾನಸಭೆಯ ಎಲ್ಲಾ 288 ಕ್ಷೇತ್ರಗಳಲ್ಲಿ ನವೆಂಬರ್ 20ರಂದು ಒಂದೇ ಹಂತದಲ್ಲಿ ಮತದಾನ ನಡೆಯಿತು. ಮಹಾರಾಷ್ಟ್ರ ಅಸೆಂಬ್ಲಿಯಲ್ಲಿ ಒಟ್ಟು ಸ್ಥಾನಗಳ ಸಂಖ್ಯೆ 288 ಆಗಿದ್ದು, ರಾಜ್ಯದಲ್ಲಿ ಸರ್ಕಾರ ರಚಿಸಲು ಪಕ್ಷ ಅಥವಾ ಮೈತ್ರಿಕೂಟವು ಪಡೆಯಬೇಕಾದ ಬಹುಮತದ ಸಂಖ್ಯೆ 145 ಆಗಿದೆ.
ಮಹಾರಾಷ್ಟ್ರದಲ್ಲಿ ಬಿಜೆಪಿ 149 ಸ್ಥಾನಗಳಲ್ಲಿ, ಶಿವಸೇನೆ 81 ಸ್ಥಾನಗಳಲ್ಲಿ ಮತ್ತು ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ 59 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ವಿರೋಧ ಪಕ್ಷದ ಮೈತ್ರಿಯಲ್ಲಿ ಕಾಂಗ್ರೆಸ್ 101 ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಶಿವಸೇನೆ (ಯುಬಿಟಿ) 95, ಮತ್ತು ಎನ್‌ಸಿಪಿ (ಎಸ್‌ಪಿ) 86 ಸ್ಥಾನಗಳಲ್ಲಿ ಸ್ಪರ್ಧಿಸಿದೆ. ಆಡಳಿತಾರೂಢ ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟದಲ್ಲಿ ಬಿಜೆಪಿ, ಶಿವಸೇನೆ ಮತ್ತು ಎನ್‌ಸಿಪಿ (ಅಜಿತ್ ಪವಾರ್ ಬಣ) ಸೇರಿವೆ. ಪ್ರತಿಪಕ್ಷ ಮಹಾವಿಕಾಸ್ ಅಘಾಡಿ (ಎಂವಿಎ)ಯಲ್ಲಿ ಕಾಂಗ್ರೆಸ್, ಶಿವಸೇನೆ (UBT), ಮತ್ತು NCP (ಶರದ್ ಪವಾರ್ ಬಣ) ಸೇರಿದೆ.
ಭಾರತೀಯ ಜನತಾ ಪಕ್ಷ (ಬಿಜೆಪಿ), ಕಾಂಗ್ರೆಸ್, ಶಿವಸೇನೆ, ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷ (ಎನ್‌ಸಿಪಿ), ಶಿವಸೇನೆ-ಉದ್ಧವ್ ಬಾಳಾಸಾಹೇಬ್ ಠಾಕ್ರೆ (ಎಸ್‌ಎಚ್‌ಎಸ್-ಯುಬಿಟಿ), ಮತ್ತು ನ್ಯಾಶನಲಿಸ್ಟ್ ಕಾಂಗ್ರೆಸ್ ಪಾರ್ಟಿ-ಶರದ್ಚಂದ್ರ ಪವಾರ್ (ಎನ್‌ಸಿಪಿ-ಎಸ್‌ಪಿ) ಮಹಾರಾಷ್ಟ್ರದ ಪ್ರಮುಖ ಪಕ್ಷಗಳಾಗಿವೆ. ಬಿಜೆಪಿಯು ಏಕನಾಥ್ ಶಿಂಧೆ ಅವರ ಶಿವಸೇನೆ ಮತ್ತು ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿಯೊಂದಿಗೆ ಮೈತ್ರಿ ಮಾಡಿಕೊಂಡಿದ್ದರೆ, ಕಾಂಗ್ರೆಸ್ ಉದ್ಧವ್ ಠಾಕ್ರೆ ಅವರ ಶಿವಸೇನೆ ಮತ್ತು ಎನ್‌ಸಿಪಿಯ ಶರದ್ ಪವಾರ್ ನೇತೃತ್ವದ ಬಣದೊಂದಿಗೆ ಮೈತ್ರಿ ಮಾಡಿಕೊಂಡಿದೆ. ಬಿಜೆಪಿ, ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ), ಕಾಂಗ್ರೆಸ್ ಮತ್ತು ಆಲ್ ಜಾರ್ಖಂಡ್ ಸ್ಟೂಡೆಂಟ್ಸ್ ಯೂನಿಯನ್ (ಎಜೆಎಸ್‌ಯು) ಜಾರ್ಖಂಡ್‌ನಲ್ಲಿ ಪ್ರಮುಖ ಪಕ್ಷಗಳಾಗಿವೆ. ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ), ಜನತಾ ದಳ-ಯುನೈಟೆಡ್ (ಜೆಡಿಯು), ಮತ್ತು ಜೈರಾಮ್ ಕುಮಾರ್ ಮಹತೋ ಅವರ ಜಾರ್ಖಂಡ್ ಲೋಕತಾಂತ್ರಿಕ್ ಕ್ರಾಂತಿಕಾರಿ ಮೋರ್ಚಾ (ಜೆಎಲ್‌ಕೆಎಂ) ಇತರ ಪ್ರಮುಖ ಪಕ್ಷಗಳಾಗಿವೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 6:44 pm, Fri, 22 November 24