AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Assembly Elections 2026 Voting: ಇಂದು ಕೇರಳ, ಅಸ್ಸಾಂ ಹಾಗೂ ಪುದುಚೇರಿಯಲ್ಲಿ ಮತದಾನ

Assam, Kerala, Puducherry Assembly Elections 2026: ಕೇರಳ, ಅಸ್ಸಾಂ ಮತ್ತು ಪುದುಚೇರಿಯಲ್ಲಿ ಇಂದು ವಿಧಾನಸಭಾ ಚುನಾವಣೆ ಮತದಾನ ಬಿರುಸಿನಿಂದ ಸಾಗುತ್ತಿದೆ. ಸರ್ಕಾರ ರಚನೆಗಾಗಿ ರಾಜಕೀಯ ಪಕ್ಷಗಳ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ. ಕೇರಳದಲ್ಲಿ ಎಲ್‌ಡಿಎಫ್, ಯುಡಿಎಫ್ ಮತ್ತು ಬಿಜೆಪಿ ನಡುವೆ, ಅಸ್ಸಾಂನಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಮೈತ್ರಿಕೂಟಗಳ ನಡುವೆ, ಪುದುಚೇರಿಯಲ್ಲಿ ಎನ್‌ಆರ್‌ಸಿ ಮತ್ತು ಬಿಜೆಪಿ ಮೈತ್ರಿಕೂಟ ಹಾಗೂ ಕಾಂಗ್ರೆಸ್ ಮೈತ್ರಿಕೂಟಗಳ ನಡುವೆ ಸಮರ ಏರ್ಪಟ್ಟಿದೆ. ಮತದಾರರು ಉತ್ಸಾಹದಿಂದ ಮತ ಚಲಾಯಿಸುತ್ತಿದ್ದಾರೆ.

Assembly Elections 2026 Voting: ಇಂದು ಕೇರಳ, ಅಸ್ಸಾಂ ಹಾಗೂ ಪುದುಚೇರಿಯಲ್ಲಿ ಮತದಾನ
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on:Apr 09, 2026 | 6:04 AM

Share

ದೆಹಲಿ, ಏ.9: ದೇಶದ ಗಮನ ಸೆಳೆದಿರುವ ಕೇರಳ, ಅಸ್ಸಾಂ ಮತ್ತು ಕೇಂದ್ರಾಡಳಿತ ಪ್ರದೇಶವಾದ ಪುದುಚೇರಿಯಲ್ಲಿ ಇಂದು ವಿಧಾನಸಭಾ ಚುನಾವಣೆಯ (Assembly Elections 2026 Voting) ಮತದಾನ ಪ್ರಕ್ರಿಯೆ ಬಿರುಸಿನಿಂದ ಸಾಗಿದೆ. ಈ ಮೂರೂ ರಾಜ್ಯಗಳಲ್ಲಿ ಸರ್ಕಾರ ರಚನೆಗಾಗಿ ರಾಜಕೀಯ ಪಕ್ಷಗಳ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ.

ಕೇರಳ: ಕೇರಳದ 140 ವಿಧಾನಸಭಾ ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಮತದಾನ ನಡೆಯುತ್ತಿದೆ. ಆಡಳಿತಾರೂಢ ಎಲ್‌ಡಿಎಫ್ (LDF) ಮತ್ತು ಪ್ರತಿಪಕ್ಷ ಯುಡಿಎಫ್ (UDF) ನಡುವೆ ನೇರ ಹಣಾಹಣಿ ಏರ್ಪಟ್ಟಿದ್ದರೆ, ಬಿಜೆಪಿ ಕೂಡ ಪ್ರಬಲ ಪೈಪೋಟಿ ನೀಡುತ್ತಿದೆ.

ಅಸ್ಸಾಂ: ಅಸ್ಸಾಂನಲ್ಲಿ ಇಂದು ಮತದಾನ ನಡೆಯುತ್ತಿದೆ. ಇಲ್ಲಿ ಬಿಜೆಪಿ ನೇತೃತ್ವದ ಮೈತ್ರಿಕೂಟ ಅಧಿಕಾರ ಉಳಿಸಿಕೊಳ್ಳಲು ಪ್ರಯತ್ನಿಸುತ್ತಿದ್ದರೆ, ಕಾಂಗ್ರೆಸ್ ಮೈತ್ರಿಕೂಟ ಅಧಿಕಾರ ಹಿಡಿಯಲು ಕಸರತ್ತು ನಡೆಸುತ್ತಿದೆ.

ಪುದುಚೇರಿ: 30 ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವ ಪುದುಚೇರಿಯಲ್ಲಿ ಇಂದು ಒಂದೇ ಹಂತದಲ್ಲಿ ಮತದಾನ ಪ್ರಕ್ರಿಯೆ ಆರಂಭವಾಗಿದೆ. ಎನ್‌ಆರ್‌ಸಿ (NRC) ಮತ್ತು ಬಿಜೆಪಿ ಮೈತ್ರಿಕೂಟ ಹಾಗೂ ಕಾಂಗ್ರೆಸ್ ನೇತೃತ್ವದ ಮೈತ್ರಿಕೂಟದ ನಡುವೆ ಇಲ್ಲಿ ಸಮರ ಏರ್ಪಟ್ಟಿದೆ.

ಇದನ್ನೂ ಓದಿ: ಇಂದು ಕೇರಳ, ಅಸ್ಸಾಂ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆ, ಮೇ 4ಕ್ಕೆ ಫಲಿತಾಂಶ

ಬೆಳಗ್ಗೆ 7 ಗಂಟೆಯಿಂದಲೇ ಮತದಾನ ಆರಂಭವಾಗಲಿದೆ, ಜನರು ಉತ್ಸಾಹದಿಂದ ಮತಗಟ್ಟೆಗಳತ್ತ ಧಾವಿಸುತ್ತಿದ್ದಾರೆ. ಬಿಸಿಲಿನ ತಾಪ ಹೆಚ್ಚಾಗುವ ಮುನ್ನವೇ ಮತ ಚಲಾಯಿಸಲು ಹಿರಿಯ ನಾಗರಿಕರು ಕೂಡ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿದ್ದಾರೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.

ದೇಶದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:04 am, Thu, 9 April 26

Follow Us
ಅಕ್ಷಯ್​ ಪಲ್ಲಮಜಲು​​
ಅಕ್ಷಯ್​ ಪಲ್ಲಮಜಲು​​

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
ಒಂದು ವರ್ಷದಲ್ಲಿ 13 ಸಿನಿಮಾ: ಹಳೆಯ ದಿನಗಳ ನೆನೆದ ಶ್ರುತಿ
ಒಂದು ವರ್ಷದಲ್ಲಿ 13 ಸಿನಿಮಾ: ಹಳೆಯ ದಿನಗಳ ನೆನೆದ ಶ್ರುತಿ
ಗೃಹಲಕ್ಷ್ಮಿ ಯೋಜನೆಗೆ ಮೇಜರ್ ಸರ್ಜರಿ: ಮಹತ್ವದ ಅಪ್ಡೇಟ್ ನೀಡಿದ ಸಿಎಂ ಡಿಕೆಶಿ
ಗೃಹಲಕ್ಷ್ಮಿ ಯೋಜನೆಗೆ ಮೇಜರ್ ಸರ್ಜರಿ: ಮಹತ್ವದ ಅಪ್ಡೇಟ್ ನೀಡಿದ ಸಿಎಂ ಡಿಕೆಶಿ
ಪೊಲೀಸರಿಗೂ ಎಚ್ಚರಿಕೆ ಕೊಟ್ಟ ಗೃಹ ಸಚಿವ ಪ್ರಿಯಾಂಕ್ ಖರ್ಗೆ
ಪೊಲೀಸರಿಗೂ ಎಚ್ಚರಿಕೆ ಕೊಟ್ಟ ಗೃಹ ಸಚಿವ ಪ್ರಿಯಾಂಕ್ ಖರ್ಗೆ
ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಭೇಟಿಯಾದ ಡಿಕೆ ಶಿವಕುಮಾರ್
ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಭೇಟಿಯಾದ ಡಿಕೆ ಶಿವಕುಮಾರ್
36 ಸಾವಿರ ಕೋಟಿ ರೂ. ಲೂಟಿ ಆರೋಪ:ಲೋಕಾಯುಕ್ತಕ್ಕೂ ಬಿಜೆಪಿ ದೂರು
36 ಸಾವಿರ ಕೋಟಿ ರೂ. ಲೂಟಿ ಆರೋಪ:ಲೋಕಾಯುಕ್ತಕ್ಕೂ ಬಿಜೆಪಿ ದೂರು
ಜೂನ್​​ 12ರಂದು ಕೊಲ್ಲೂರಿಗೆ ತಮಿಳುನಾಡು ಸಿಎಂ ವಿಜಯ್​​ ಭೇಟಿ
ಜೂನ್​​ 12ರಂದು ಕೊಲ್ಲೂರಿಗೆ ತಮಿಳುನಾಡು ಸಿಎಂ ವಿಜಯ್​​ ಭೇಟಿ
ಬಿಸಿಎಂ ಹಾಸ್ಟೆಲ್​​​​​ನಲ್ಲಿ ಹುಡುಗ-ಹುಡುಗಿಯರಿಂದ ಬಿಂದಾಸ್ ಎಣ್ಣೆ ಪಾರ್ಟಿ
ಬಿಸಿಎಂ ಹಾಸ್ಟೆಲ್​​​​​ನಲ್ಲಿ ಹುಡುಗ-ಹುಡುಗಿಯರಿಂದ ಬಿಂದಾಸ್ ಎಣ್ಣೆ ಪಾರ್ಟಿ
ನಾಮಪತ್ರ ರದ್ದಾಗಲೆಂದೇ ಕಾಂಗ್ರೆಸ್ ಫಾರ್ಮ್ ತುಂಬಿತ್ತಾ? ಬಿಜೆಪಿ ಲೇವಡಿ
ನಾಮಪತ್ರ ರದ್ದಾಗಲೆಂದೇ ಕಾಂಗ್ರೆಸ್ ಫಾರ್ಮ್ ತುಂಬಿತ್ತಾ? ಬಿಜೆಪಿ ಲೇವಡಿ
ಏನಿದು ಕಸದಿಂದ ಕಾಸು? ಎಳೆ ಎಳೆಯಾಗಿ ಬಿಚ್ಚಿಟ್ಟ ಆರ್ ಅಶೋಕ್
ಏನಿದು ಕಸದಿಂದ ಕಾಸು? ಎಳೆ ಎಳೆಯಾಗಿ ಬಿಚ್ಚಿಟ್ಟ ಆರ್ ಅಶೋಕ್
ಕೇರಳದಲ್ಲಿ ಶಿಗೆಲ್ಲ ಮಾರಿಗೆ ಮಗು ಬಲಿ; ಏನಿದು ಶಿಗೆಲ್ಲ, ಇದು ಹರಡುವುದೇಗೆ?
ಕೇರಳದಲ್ಲಿ ಶಿಗೆಲ್ಲ ಮಾರಿಗೆ ಮಗು ಬಲಿ; ಏನಿದು ಶಿಗೆಲ್ಲ, ಇದು ಹರಡುವುದೇಗೆ?