ಮಹಾರಾಷ್ಟ್ರ-ಜಾರ್ಖಂಡ್​ನಲ್ಲಿ ಯಾರಿಗೆ ಮುನ್ನಡೆ, ಯಾರಿಗೆ ಹಿನ್ನಡೆ, ಟ್ರೆಂಡ್ ಹೇಗಿದೆ?

Assembly Election Results 2024: ಮಹಾರಾಷ್ಟ್ರ ಹಾಗೂ ಜಾರ್ಖಂಡ್​ ವಿಧಾನಸಭಾ ಚುನಾವಣೆಗಳು ಹಾಗೂ ಉಪ ಚುನಾವಣೆಗಳ ಫಲಿತಾಂಶ ಇನ್ನು ಕೆಲವೇ ಗಂಟೆಗಳಲ್ಲಿ ಹೊರಬರಲಿದೆ. ಈ ಚುನಾವಣೆಯಲ್ಲಿ, ಆಡಳಿತಾರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ನೇತೃತ್ವದ ಮಹಾಯುತಿ ಮತ್ತು ಮಹಾ ವಿಕಾಸ್ ಅಘಾಡಿ (ಎಂವಿಎ) ನಡುವಿನ ಸ್ಪರ್ಧೆಯ ಫಲಿತಾಂಶದ ಮೇಲೆ ಎಲ್ಲರ ಚಿತ್ತವಿದೆ.

ಮಹಾರಾಷ್ಟ್ರ-ಜಾರ್ಖಂಡ್​ನಲ್ಲಿ ಯಾರಿಗೆ ಮುನ್ನಡೆ, ಯಾರಿಗೆ ಹಿನ್ನಡೆ, ಟ್ರೆಂಡ್ ಹೇಗಿದೆ?
ಆದಿತ್ಯ ಠಾಕ್ರೆ, ಅಜಿತ್ ಪವಾರ್
Follow us
ನಯನಾ ರಾಜೀವ್
|

Updated on: Nov 23, 2024 | 10:24 AM

ಮಹಾರಾಷ್ಟ್ರ ಹಾಗೂ ಜಾರ್ಖಂಡ್​ ವಿಧಾನಸಭಾ ಚುನಾವಣೆಗಳು ಹಾಗೂ ಉಪ ಚುನಾವಣೆಗಳ ಫಲಿತಾಂಶ ಇನ್ನು ಕೆಲವೇ ಗಂಟೆಗಳಲ್ಲಿ ಹೊರಬರಲಿದೆ. ಈ ಚುನಾವಣೆಯಲ್ಲಿ, ಆಡಳಿತಾರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ನೇತೃತ್ವದ ಮಹಾಯುತಿ ಮತ್ತು ಮಹಾ ವಿಕಾಸ್ ಅಘಾಡಿ (ಎಂವಿಎ) ನಡುವಿನ ಸ್ಪರ್ಧೆಯ ಫಲಿತಾಂಶದ ಮೇಲೆ ಎಲ್ಲರ ಚಿತ್ತವಿದೆ. ಭಾರತೀಯ ಜನತಾ ಪಕ್ಷ (ಬಿಜೆಪಿ) ನೇತೃತ್ವದ ಆಡಳಿತಾರೂಢ ಮೈತ್ರಿಯು ಮಹಾರಾಷ್ಟ್ರದಲ್ಲಿ ಆರಂಭಿಕ ಟ್ರೆಂಡ್ ಪ್ರಕಾರ 288 ರಲ್ಲಿ 177 ಸ್ಥಾನಗಳೊಂದಿಗೆ ಮುನ್ನಡೆ ಸಾಧಿಸಿದೆ ಮತ್ತು ಆಪ್ ಇಂಡಿಯಾ ಬ್ಲಾಕ್ 93 ಸ್ಥಾನಗಳೊಂದಿಗೆ ದೂರದ ಎರಡನೇ ಸ್ಥಾನದಲ್ಲಿದೆ ಎಂದು ಇಂಡಿಯಾ ಟುಡೇ ವರದಿ ಮಾಡಿದೆ.

ಇಂಡಿಯಾ ಬ್ಲಾಕ್ ಮತ್ತು ನ್ಯಾಷನಲ್ ಡೆಮಾಕ್ರಟಿಕ್ ಅಲಯನ್ಸ್ (ಎನ್‌ಡಿಎ) 81 ಸ್ಥಾನಗಳಲ್ಲಿ 41 ಮತ್ತು 37 ರಲ್ಲಿ ಮುನ್ನಡೆಯೊಂದಿಗೆ ಜಾರ್ಖಂಡ್‌ನಲ್ಲಿ ನೆಕ್​ ಟು ನೆಕ್ ಫೈಟ್ ಇದೆ. ಮಹಾರಾಷ್ಟ್ರದ ವಿಧಾನಸಭಾ ಚುನಾವಣೆಯಲ್ಲಿ ಪ್ರತಿಪಕ್ಷ ಮಹಾ ವಿಕಾಸ್ ಅಘಾಡಿ (ಎಂವಿಎ) ವಿರುದ್ಧ ಆಡಳಿತಾರೂಢ ಮಹಾಯುತಿ ಮೇಲುಗೈ ಸಾಧಿಸುವ ಸಾಧ್ಯತೆಯಿದೆ.

ಚುನಾವಣಾ ಆಯೋಗದ ಅಧಿಕಾರಿಗಳು ಈ ಮಾಹಿತಿ ನೀಡಿದ್ದಾರೆ. ರಾಜ್ಯದಲ್ಲಿ ನವೆಂಬರ್ 13 ಮತ್ತು 20 ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆದಿತ್ತು. ಒಟ್ಟು 81 ಸ್ಥಾನಗಳ ಪೈಕಿ ಮೊದಲ ಹಂತದಲ್ಲಿ 43 ಕ್ಷೇತ್ರಗಳಲ್ಲಿ ಮತದಾನ ನಡೆದರೆ, ಎರಡನೇ ಹಂತದಲ್ಲಿ 38 ಕ್ಷೇತ್ರಗಳಲ್ಲಿ ಮತದಾನ ನಡೆದಿದೆ.

ಮತ್ತಷ್ಟು ಓದಿ: ಮಹಾರಾಷ್ಟ್ರ: ಫಲಿತಾಂಶಕ್ಕೂ ಮುನ್ನವೇ ರಾರಾಜಿಸುತ್ತಿವೆ ಅಜಿತ್ ಪವಾರ್​ರದ್ದೇ ಗೆಲುವೆಂಬ ಬ್ಯಾನರ್​ಗಳು

ವರ್ಲಿ ವಿಧಾನಸಭಾ ಕ್ಷೇತ್ರದಲ್ಲಿ ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ಪುತ್ರ ಆದಿತ್ಯ ಮುನ್ನಡೆ ಸಾಧಿಸಿದ್ದಾರೆ. ಶಿವಸೇನೆ ನಾಯಕ ಮಿಲಿಂದ್ ದಿಯೋರಾ ವಿರುದ್ಧ ಸ್ಪರ್ಧಿಸುತ್ತಿದ್ದಾರೆ. ಆದಿತ್ಯ ಠಾಕ್ರೆ ವರ್ಲಿ ಕ್ಷೇತ್ರದ ಹಾಲಿ ಶಾಸಕರಾಗಿದ್ದಾರೆ. 2019 ರ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ, ಆದಿತ್ಯ ಠಾಕ್ರೆ ಶೇಕಡಾ 69 ಕ್ಕಿಂತ ಹೆಚ್ಚು ಮತಗಳನ್ನು ಗಳಿಸಿದರು, ಎನ್‌ಸಿಪಿಯ ಸುರೇಶ್ ಮಾನೆ ಅವರನ್ನು ಸೋಲಿಸಿದರು.

ಬಾರಾಮತಿಯಲ್ಲಿ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮುನ್ನಡೆ ಸಾಧಿಸಿದ್ದಾರೆ. ಅವರ ವಿರುದ್ಧ ಅವರ ಸಹೋದರನ ಮಗ ಯುಗೇಂದ್ರ ಪವಾರ್ ಕಣದಲ್ಲಿದ್ದಾರೆ. ನಾಗ್ಪುರದಲ್ಲಿ ದೇವೇಂದ್ರ ಫಡ್ನವಿಸ್ ಮುನ್ನಡೆ ಸಾಧಿಸಿದ್ದಾರೆ. ವಯನಾಡಿನಲ್ಲಿ ಪ್ರಿಯಾಂಕಾ ಗಾಂಧಿ ಮುನ್ನಡೆ ಸಾಧಿಸಿದ್ದಾರೆ. ಜೀಶಾನ್ ಸಿದ್ದಿಕಿ ಕೂಡ ಮುನ್ನಡೆ ಸಾಧಿಸಿದ್ದಾರೆ. ಜಾರ್ಖಂಡ್​ನಲ್ಲಿ ಚಂಪೈ ಸೊರೆನ್ ಮುನ್ನಡೆ ಸಾಧಿಸಿದ್ದಾರೆ.

ಮಹಾರಾಷ್ಟ್ರ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ 149 ಸ್ಥಾನಗಳಲ್ಲಿ ಸ್ಪರ್ಧಿಸಿದ್ದರೆ, ಶಿವಸೇನೆ 81 ಸ್ಥಾನಗಳಲ್ಲಿ ಮತ್ತು ಎನ್‌ಸಿಪಿ 59 ಸ್ಥಾನಗಳಲ್ಲಿ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಅದೇ ಸಮಯದಲ್ಲಿ, ಕಾಂಗ್ರೆಸ್ 101 ಸ್ಥಾನಗಳಲ್ಲಿ, ಶಿವಸೇನೆ (ಯುಬಿಟಿ) 95 ಮತ್ತು ಎನ್‌ಸಿಪಿ (ಎಸ್‌ಪಿ) 86 ಸ್ಥಾನಗಳಲ್ಲಿ ಚುನಾವಣೆಯಲ್ಲಿ ಸ್ಪರ್ಧಿಸಿದೆ. ಈ ಚುನಾವಣೆಯಲ್ಲಿ ಉದ್ಧವ್ ಶಿವಸೇನೆ ಮತ್ತು ಶಿಂಧೆ ಶಿವಸೇನೆ ಅಭ್ಯರ್ಥಿಗಳು 50 ಸ್ಥಾನಗಳಲ್ಲಿ ಮುಖಾಮುಖಿಯಾಗಿದ್ದಾರೆ.

ಎನ್‌ಸಿಪಿಯ ಪ್ರತಿಸ್ಪರ್ಧಿ ಬಣಗಳು 37 ಸ್ಥಾನಗಳಲ್ಲಿ ಪರಸ್ಪರ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದವು. ರಾಜ್ಯದ 288 ವಿಧಾನಸಭಾ ಕ್ಷೇತ್ರಗಳಿಗೆ ನವೆಂಬರ್ 20 ರಂದು ಮತದಾನ ನಡೆದಿದ್ದು, ನವೆಂಬರ್ 23 ರಂದು ಫಲಿತಾಂಶ ಪ್ರಕಟವಾಗಲಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ