ತೆಲಂಗಾಣದ ಅಧಿಕಾರಿಯೊಬ್ಬರ ಮನೆಯಲ್ಲಿ 40 ಲಕ್ಷ ರೂ. ನಗದು, 40 ಐಫೋನ್​ಗಳು, 100 ಕೋಟಿ ರೂ. ಮೌಲ್ಯದ ಆಸ್ತಿ ಪತ್ತೆ

|

Updated on: Jan 25, 2024 | 12:10 PM

ತೆಲಂಗಾಣ ಭ್ರಷ್ಟಾಚಾರ ನಿಗ್ರಹ ದಳ(ACB) ಹೈದರಾಬಾದ್​ನ ನಗರ ಯೋಜನಾ ಅಧಿಕಾರಿಯೊಬ್ಬರ ಮನೆ ಮೇಲೆ ದಾಳಿ ನಡೆಸಿದ್ದು 40 ಲಕ್ಷ ರೂ. ನಗದು ಹಾಗೂ 100 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಪತ್ತೆ ಮಾಡಿದ್ದಾರೆ. ಅಧಿಕಾರಿಯನ್ನು ಶಿವ ಬಾಲಕೃಷ್ಣ ಎಂದು ಗುರುತಿಸಲಾಗಿದೆ. ಅಧಿಕಾರಿಗೆ ಸಂಬಂಧಿಸಿದ ಸ್ಥಳಗಳಲ್ಲಿ 14 ತಂಡಗಳು ಶೋಧ ನಡೆಸಿವೆ ಎಂದು ಭ್ರಷ್ಟಾಚಾರ ನಿಗ್ರಹ ದಳ ತಿಳಿಸಿದೆ. ಶೋಧ ಕಾರ್ಯ ಗುರುವಾರವೂ ಮುಂದುವರೆದಿದೆ ಎಂದು ಪಿಟಿಐ ವರದಿ ಮಾಡಿದೆ.

ತೆಲಂಗಾಣದ ಅಧಿಕಾರಿಯೊಬ್ಬರ ಮನೆಯಲ್ಲಿ 40 ಲಕ್ಷ ರೂ. ನಗದು, 40 ಐಫೋನ್​ಗಳು, 100 ಕೋಟಿ ರೂ. ಮೌಲ್ಯದ ಆಸ್ತಿ ಪತ್ತೆ
ಎಸಿಬಿ
Image Credit source: Asianet Newsable
Follow us on

ತೆಲಂಗಾಣ ಭ್ರಷ್ಟಾಚಾರ ನಿಗ್ರಹ ದಳ(ACB) ಹೈದರಾಬಾದ್​ನ ನಗರ ಯೋಜನಾ ಅಧಿಕಾರಿಯೊಬ್ಬರ ಮನೆ ಮೇಲೆ ದಾಳಿ ನಡೆಸಿದ್ದು 40 ಲಕ್ಷ ರೂ. ನಗದು ಹಾಗೂ 100 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಪತ್ತೆ ಮಾಡಿದ್ದಾರೆ. ಅಧಿಕಾರಿಯನ್ನು ಶಿವ ಬಾಲಕೃಷ್ಣ ಎಂದು ಗುರುತಿಸಲಾಗಿದೆ. ಅಧಿಕಾರಿಗೆ ಸಂಬಂಧಿಸಿದ ಸ್ಥಳಗಳಲ್ಲಿ 14 ತಂಡಗಳು ಶೋಧ ನಡೆಸಿವೆ ಎಂದು ಭ್ರಷ್ಟಾಚಾರ ನಿಗ್ರಹ ದಳ ತಿಳಿಸಿದೆ. ಶೋಧ ಕಾರ್ಯ ಗುರುವಾರವೂ ಮುಂದುವರೆದಿದೆ ಎಂದು ಪಿಟಿಐ ವರದಿ ಮಾಡಿದೆ.

ಶಿವ ಬಾಲಕೃಷ್ಣ ಅವರು ತೆಲಂಗಾಣ ರಾಜ್ಯ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ (TSRERA) ಕಾರ್ಯದರ್ಶಿ ಮತ್ತು ಹೈದರಾಬಾದ್ ಮಹಾನಗರ ಅಭಿವೃದ್ಧಿ ಪ್ರಾಧಿಕಾರದ (HMDA) ಮಾಜಿ ನಿರ್ದೇಶಕರಾಗಿದ್ದಾರೆ. 2 ಕೆಜಿಗೂ ಅಧಿಕ ಚಿನ್ನಾಭರಣ ಪತ್ತೆಯಾಗಿದೆ. ಮನೆಯಲ್ಲಿ 40 ಐಫೋನ್‌ಗಳು ಮತ್ತು ಲ್ಯಾಪ್‌ಟಾಪ್‌ಗಳಿವೆ. ಬ್ಯಾಂಕ್ ಠೇವಣಿ, ವಿಲ್ಲಾಗಳ ದಾಖಲೆಗಳು ಮತ್ತು ನಿವೇಶನಗಳನ್ನು ಜಪ್ತಿ ಮಾಡಲಾಗಿದೆ.

ಬೇನಾಮಿ ಹೆಸರಿನಲ್ಲಿ ಅಪಾರ ಆಸ್ತಿ ಇರುವ ಬಗ್ಗೆ ಎಸಿಬಿ ತೀವ್ರ ತನಿಖೆ ನಡೆಸುತ್ತಿದೆ. ಶಿವಬಾಲಕೃಷ್ಣ ಅವರನ್ನು ಬಂಧಿಸಲಾಗಿದ್ದು, ಎಸಿಬಿ ಅಧಿಕಾರಿಗಳು ಇಂದು ನ್ಯಾಯಾಲಯಕ್ಕೆ ಹಾಜರುಪಡಿಸಬಹುದು. ಬಾಲಕೃಷ್ಣ ಅವರಿಗೆ ಸಂಬಂಧಿಸಿದ 20 ಸ್ಥಳಗಳಲ್ಲಿ ಬುಧವಾರ ಬೆಳಗ್ಗೆ 5 ಗಂಟೆಯಿಂದ ಎಸಿಬಿ ದಾಳಿ ನಡೆಸಿತ್ತು.

ಮತ್ತಷ್ಟು ಓದಿ: 21 ಸರ್ಕಾರಿ ಅಧಿಕಾರಿಗಳ ಮನೆ ಮೇಲೆ ಎಸಿಬಿ ದಾಳಿ; ಅಧಿಕಾರಿಗಳ ಆಸ್ತಿ ವಿವರ ಇಲ್ಲಿದೆ

ಎಸಿಬಿ ತಂಡಗಳು ಎಚ್‌ಎಂಡಿಎ ಮತ್ತು ರೇರಾ ಕಚೇರಿಗಳಲ್ಲಿ ಶೋಧ ನಡೆಸಿದ್ದು, ಬಾಲಕೃಷ್ಣ ಅವರ ಮನೆ ಮತ್ತು ತನಿಖೆಗೆ ಸಂಬಂಧಿಸಿದ ಇತರ ಪ್ರಮುಖ ಸ್ಥಳಗಳಲ್ಲಿ ದಾಳಿ ನಡೆಸಲಾಗಿದೆ.

ಬಾಲಕೃಷ್ಣ 200 ಕೋಟಿ ರೂ.ಗೂ ಹೆಚ್ಚು ಆಸ್ತಿ ಸಂಗ್ರಹಿಸಿದ್ದಾರೆ ಎಂದು ಎಸಿಬಿ ಶಂಕೆ ವ್ಯಕ್ತಪಡಿಸಿದೆ. ಶಿವಬಾಲಕೃಷ್ಣ ಮನೆಯಲ್ಲಿ ಎಸಿಬಿ ಶೋಧ ಎರಡನೇ ದಿನವೂ ಮುಂದುವರಿದಿದೆ. ಎಸಿಬಿ ಈಗ ಅವರ ಬ್ಯಾಂಕ್ ಲಾಕರ್‌ಗಳು ಮತ್ತು ಇತರ ಅಘೋಷಿತ ಆಸ್ತಿಗಳ ಬಗ್ಗೆ ತನಿಖೆ ನಡೆಸುತ್ತಿದೆ. ಇಂದು ಕುಟುಂಬ ಸದಸ್ಯರ ಸಮ್ಮುಖದಲ್ಲಿ ಎಸಿಬಿ ಅಧಿಕಾರಿಗಳು ಬ್ಯಾಂಕ್ ಲಾಕರ್ ತೆರೆಯಲಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ