ಅನಂತಪುರ: ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯ ಮುಳಕಲೇಡು ಗ್ರಾಮದಲ್ಲಿ ಇಂದು ಮನೆಯೊಂದರ ಗೋಡೆ ಕುಸಿದು ನಾಲ್ವರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಗಾಯಗೊಂಡಿದ್ದಾರೆ. ಪಕ್ಕದ ಮನೆಯೊಂದರಲ್ಲಿ ಗ್ಯಾಸ್ ಸಿಲಿಂಡರ್ (LPG Cylinder) ಸ್ಫೋಟಗೊಂಡ ಬಳಿಕ ಮನೆಯ ಗೋಡೆ ಕುಸಿದಿದೆ. ಮಾಹಿತಿ ತಿಳಿದ ಕೂಡಲೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ
ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯ ಮುಳಕಲೇಡು ಗ್ರಾಮದ ಪಕ್ಕದ ಕಟ್ಟಡದಲ್ಲಿ ಇಂದು ಮುಂಜಾನೆ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡ ನಂತರ ಮನೆಯ ಗೋಡೆ ಕುಸಿದು ನಾಲ್ಕು ಜನರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಗಾಯಗೊಂಡಿದ್ದಾರೆ. “ಇಂದು ಬೆಳ್ಳಂಬೆಳಗ್ಗೆ ಅನಂತಪುರದ ಮುಳಕಲೇಡು ಗ್ರಾಮದ ನಿವಾಸದಲ್ಲಿ ಸಿಲಿಂಡರ್ ಸ್ಫೋಟಗೊಂಡಿದೆ. ಸ್ಫೋಟದ ಪರಿಣಾಮ ಅಕ್ಕಪಕ್ಕದ ಮನೆಯ ಗೋಡೆ ಕುಸಿದು ನಾಲ್ವರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ” ಎಂದು ಅನಂತಪುರದ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಫಕೀರಪ್ಪ ತಿಳಿಸಿದ್ದಾರೆ.
Andhra Pradesh | Four people died, two injured after the wall of a house collapsed following a gas cylinder explosion at a neighbouring house in Mulakaledu Village of Anantpur district. Police officials at the spot. A case is being registered and further investigation is underway pic.twitter.com/j1MtTVj6Rk
— ANI (@ANI) May 28, 2022
ಈ ಘಟನೆ ಕುರಿತು ಮಾಹಿತಿ ಪಡೆದ ಪೊಲೀಸರು ತಕ್ಷಣ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದಾರೆ ಎಂದು ಎಸ್ಪಿ ಫಕೀರಪ್ಪ ತಿಳಿಸಿದ್ದಾರೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಶವಾಗಾರಕ್ಕೆ ಕೊಂಡೊಯ್ಯಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ನಡೆಸಲಾಗುತ್ತಿದೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ