ಕಾಬೂಲ್‌ನ ಶಾಲೆ ಬಳಿ ಬಾಂಬ್ ಸ್ಫೋಟ, 40 ವಿದ್ಯಾರ್ಥಿನಿಯರ ಸಾವು
ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್‌ನಲ್ಲಿ ಕಳೆದ ಶುಕ್ರವಾರ ಅಂದಾಜು ಸಂಜೆ 4.30 ರ ಸುಮಾರಿಗೆ ಸಯೀದ್ ಉಲ್ ಶುಹಾದಾ ಬಾಲಕಿಯರ ಶಾಲೆಯೊಂದರ ಬಳಿ ಬಾಂಬ್ ಸ್ಪೋಟಗೊಂಡಿದೆ. ಉಗ್ರರು ಹೆಣ್ಣುಮಕ್ಕಳ ಶಾಲೆಯನ್ನು ಗುರಿಯಾಗಿರಿಸಿಕೊಂಡು ದಾಳಿ ನಡೆಸಿದ್ದಾರೆ.
ಅಫ್ಘಾನಿಸ್ತಾನ್: ಕಾಬೂಲ್ನ ಶಾಲೆಯೊಂದರ ಬಳಿ ಬಾಂಬ್ ಸ್ಪೋಟಗೊಂಡು 40ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಮೃತಪಟ್ಟಿದ್ದಾರೆ. ಮತ್ತು 50 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಆಂತರಿಕ ಸಚಿವಾಲಯದ ವಕ್ತಾರ ತಾರೆಕ್ ಅರಿಯನ್ ಸುದ್ದಿಗಾರರಿಗೆ ತಿಳಿಸಿದ್ದಾರೆ.
ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್‌ನಲ್ಲಿ ಕಳೆದ ಶುಕ್ರವಾರ ಅಂದಾಜು ಸಂಜೆ 4.30 ರ ಸುಮಾರಿಗೆ ಸಯೀದ್ ಉಲ್ ಶುಹಾದಾ ಬಾಲಕಿಯರ ಶಾಲೆಯೊಂದರ ಬಳಿ ಬಾಂಬ್ ಸ್ಪೋಟಗೊಂಡಿದೆ. ಉಗ್ರರು ಹೆಣ್ಣುಮಕ್ಕಳ ಶಾಲೆಯನ್ನು ಗುರಿಯಾಗಿರಿಸಿಕೊಂಡು ದಾಳಿ ನಡೆಸಿದ್ದಾರೆ. ಸಾವನ್ನಪ್ಪಿದವರಲ್ಲಿ ಹೆಚ್ಚಿನವರು ವಿದ್ಯಾರ್ಥಿನಿಯರೇ ಇದ್ದು, ಶಾಲೆಯ ಹಲವು ಅಧಿಕಾರಿಗಳು ಸಹ ಇದ್ದರು ಎಂದು ತಿಳಿದು ಬಂದಿದೆ.
ಇನ್ನು ದಾಳಿಯ ಜವಾಬ್ದಾರಿಯನ್ನು ಯಾವುದೇ ಗುಂಪು ವಹಿಸಿಕೊಂಡಿಲ್ಲ ಎನ್ನಲಾಗುತ್ತಿದ್ದು, ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ಇದನ್ನೂ ಓದಿ: 12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಸರಣಿ ಬಾಂಬ್ ಸ್ಫೋಟ ಆರೋಪಿ CCB ಬಲೆಗೆ