
ಇಟಾವಾ ಜಿಲ್ಲೆಯ ಆಗ್ರಾ-ಕಾನ್ಪುರ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಬುಧವಾರ ಬೆಳಗ್ಗೆ 6.30ರ ಸುಮಾರಿಗೆ ಕಾನ್ಪುರ ಕಡೆಗೆ ಹೋಗುತ್ತಿದ್ದ ಕಾರೊಂದು ನಿಯಂತ್ರಣ ತಪ್ಪಿ ಹೆದ್ದಾರಿ ಬದಿ ನಿಂತಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ನಾಲ್ವರು ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅಪಘಾತದ ನಂತರ ಸ್ಥಳದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಜಮಾಯಿಸಿದ್ದರು.
ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕಾಗಮಿಸಿ ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ. ಚಾಲಕ ನಿದ್ರೆಗೆ ಜಾರಿದದ್ದೇ ಅಪಘಾತಕ್ಕೆ ಕಾರಣ ಎಂದು ಶಂಕಿಸಲಾಗಿದೆ. ಮೃತರ ಗುರುತು ಪತ್ತೆಗೆ ಪೊಲೀಸರು ಪ್ರಯತ್ನ ನಡೆಸುತ್ತಿದ್ದಾರೆ.
ಮಾಹಿತಿ ಪ್ರಕಾರ ಕಾರಿನಲ್ಲಿ 6 ಮಂದಿ ಇದ್ದರು. ಇದರಲ್ಲಿ ಮಗುವೂ ಸೇರಿದೆ. ಅಪಘಾತ ಸಂಭವಿಸಿದ ಕೂಡಲೇ ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.
ಭೀಕರ ಅಪಘಾತ ಸಂಭವಿಸಿದ್ದು ಹೇಗೆ?
ಮಾಹಿತಿ ಪ್ರಕಾರ, ಬುಧವಾರ ಬೆಳಗ್ಗೆ 6.30ರ ಸುಮಾರಿಗೆ ಈ ಅವಘಡ ಸಂಭವಿಸಿದೆ. ಚಾಲಕನಿಗೆ ನಿದ್ದೆಯಲ್ಲಿದ್ದ ಕಾರಣ ಈ ಭೀಕರ ಅಪಘಾತ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. ಅಪಘಾತ ಸಂಭವಿಸಿದ ತಕ್ಷಣ ಇಕ್ದಿಲ್ ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಧಾವಿಸಿ ತನಿಖೆ ಆರಂಭಿಸಿದ್ದಾರೆ.
ಮತ್ತಷ್ಟು ಓದಿ:
ಚಿಕ್ಕಮಗಳೂರು: ಓವರ್ ಟೇಕ್ ಮಾಡಲು ಹೋಗಿ ಅಪಘಾತ, ಎದೆ ಝಲ್ ಅನಿಸುವ ಡೆಡ್ಲಿ ಆಕ್ಸಿಡೆಂಟ್ ವಿಡಿಯೋ ಇದೆ
ಬುಲಂದ್‌ಶಹರ್‌ನ ಪಹಸು ಪಂದ್ರಾಬಲ್ ಮಾರ್ಗದಲ್ಲಿರುವ ಚೌಧೇರಾ ಕಾಳಿ ನದಿ ಸೇತುವೆಯ ಬಳಿ ಮಂಗಳವಾರ ರಾತ್ರಿ ಅಪಘಾತ ಸಂಭವಿಸಿದೆ . ಇಲ್ಲಿ ಕಾರೊಂದು ನಿಯಂತ್ರಣ ತಪ್ಪಿ ನಾಲೆಗೆ ಪಲ್ಟಿಯಾಗಿದೆ. ಅಪಘಾತದಲ್ಲಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಬಳಿಕ ಪೊಲೀಸರು ಗಾಯಾಳುಗಳನ್ನು ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಿದ್ದಾರೆ.
ಗಾಯಾಳುಗಳನ್ನು ಅಲ್ಲಿಗೆ ಕರೆದೊಯ್ದಾಗ ಒಬ್ಬ ಮೃತಪಟ್ಟಿದ್ದಾರೆ ಎಂದು ವೈದ್ಯರು ಘೋಷಿಸಿದರು. ಈ ವೇಳೆ ಇಬ್ಬರ ಸ್ಥಿತಿ ಗಂಭೀರವಾಗಿತ್ತು.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ