ಆಂಧ್ರದಲ್ಲಿ ಒಂದೇ ದಿನ 10 ಸಾವಿರದಷ್ಟು ಜನರಿಗೆ ಕೊರೊನಾ ಸೋಂಕು
ಹೈದರಾಬಾದ್: ನೆರೆಯ ಆಂಧ್ರ ಪ್ರದೇಶದಲ್ಲಿ ಇಂದು ಒಂದೇ ದಿನ ಸುಮಾರು10 ಸಾವಿರದಷ್ಟು ಜನರಿಗೆ ಕೊರೊನಾ ಸೋಂಕು ತಗುಲಿದೆ. ಹೌದು ಆಂಧ್ರ ಪ್ರದೇಶದಲ್ಲಿ ಕಳೆದ 24 ಗಂಟೆಗಳಲ್ಲಿ ಕೊರೊನಾ ಪ್ರಕರಣಗಳ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿರುವ ಆಂಧ್ರ ಪ್ರದೇಶ ಸರ್ಕಾರ, ಇಂದು ಒಂದೇ ದಿನದಲ್ಲಿ ಸುಮಾರು 10 ಸಾವಿರದಷ್ಟು ಕೊರೊನಾ ಪೊಸಿಟಿವ್ ಪ್ರಕರಣಗಳು ದಾಖಲಾಗಿವೆ ಎಂದು ತಿಳಿಸಿದೆ. ಇಂದು ನಡೆದ ಟೆಸ್ಟ್‌ನಲ್ಲಿ ಒಟ್ಟು 9,996 ಕೊರೊನಾ ಪೊಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ಆಂಧ್ರಪ್ರದೇಶದಲ್ಲಿ ಇದುವರೆಗೆ ಒಟ್ಟು 2,64,142 ಕೊರೊನಾ […]
ಹೈದರಾಬಾದ್: ನೆರೆಯ ಆಂಧ್ರ ಪ್ರದೇಶದಲ್ಲಿ ಇಂದು ಒಂದೇ ದಿನ ಸುಮಾರು10 ಸಾವಿರದಷ್ಟು ಜನರಿಗೆ ಕೊರೊನಾ ಸೋಂಕು ತಗುಲಿದೆ.
ಹೌದು ಆಂಧ್ರ ಪ್ರದೇಶದಲ್ಲಿ ಕಳೆದ 24 ಗಂಟೆಗಳಲ್ಲಿ ಕೊರೊನಾ ಪ್ರಕರಣಗಳ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿರುವ ಆಂಧ್ರ ಪ್ರದೇಶ ಸರ್ಕಾರ, ಇಂದು ಒಂದೇ ದಿನದಲ್ಲಿ ಸುಮಾರು 10 ಸಾವಿರದಷ್ಟು ಕೊರೊನಾ ಪೊಸಿಟಿವ್ ಪ್ರಕರಣಗಳು ದಾಖಲಾಗಿವೆ ಎಂದು ತಿಳಿಸಿದೆ.
ಇಂದು ನಡೆದ ಟೆಸ್ಟ್‌ನಲ್ಲಿ ಒಟ್ಟು 9,996 ಕೊರೊನಾ ಪೊಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ಆಂಧ್ರಪ್ರದೇಶದಲ್ಲಿ ಇದುವರೆಗೆ ಒಟ್ಟು 2,64,142 ಕೊರೊನಾ ಪೊಸಿಟಿವ್ ಪ್ರಕರಣಗಳು ಪತ್ತೆಯಾಗಿವೆ.
ಹಾಗೇನೆ ಇಂದು 82 ಕೊರೊನಾ ಸೋಂಕಿತರು ಸಾವನ್ನಪ್ಪಿದ್ದು, ರಾಜ್ಯದಲ್ಲಿ ಇದುವರೆಗೆ ಒಟ್ಟು 2,378 ಸಾವಿನ ಪ್ರಕರಣಗಳು ದಾಖಲಾಗಿವೆ ಎಂದು ಆಂಧ್ರಪ್ರದೇಶ ಸರ್ಕಾರ ತಿಳಿಸಿದೆ.
Published On - 8:00 pm, Thu, 13 August 20