ರಾಷ್ಟ್ರಮಟ್ಟದಲ್ಲಿ ಮೋದಿ ಒಬ್ಬ ಪವಾಡಸದೃಶ ನಾಯಕನಾಗಿದ್ದಾರೆ: ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು

ಮೋದಿ@20: ಡ್ರೀಮ್ಸ್ ಮೀಟ್ ಡೆಲಿವರಿ ಪುಸ್ತಕವು ಆಧುನಿಕ ಭಾರತದ ಅತ್ಯಂತ ಜನಪ್ರಿಯ ಮತ್ತು ಐಕಾನಿಕ್ ನಾಯಕರಲ್ಲಿ ಒಬ್ಬರಾಗಿರುವ ಮೋದಿಯವರ ರಾಜಕೀಯ ಬದುಕು ವಿಕಸನಗೊಂಡ ಬಗ್ಗೆ ಒಂದು ವಿಹಂಗಮ ಚಿತ್ರಣ ನೀಡುತ್ತದೆ ಎಂದು ನಾಯ್ಡು ಹೇಳಿದರು.

ರಾಷ್ಟ್ರಮಟ್ಟದಲ್ಲಿ ಮೋದಿ ಒಬ್ಬ ಪವಾಡಸದೃಶ ನಾಯಕನಾಗಿದ್ದಾರೆ: ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು
ಪುಸ್ತಕ ಬಿಡುಗಡೆ ಮಾಡುತ್ತಿರುವ ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು
Follow us
TV9 Web
| Updated By: ಅರುಣ್​ ಕುಮಾರ್​ ಬೆಳ್ಳಿ

Updated on: May 11, 2022 | 7:18 PM

ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ (PM Narendra Modi) ಅವರು ಕನಸುಗಳನ್ನು ಸಾಕಾರಗೊಳಿಸಿಕೊಳ್ಳುವುದು ಸಾಧ್ಯ ಅಂತ ವಿಶ್ವಕ್ಕೆ ತೋರಿಸಿಕೊಟ್ಟ ನಾಯಕನಾಗಿದ್ದಾರೆ ಎಂದು ಉಪ ರಾಷ್ಟ್ರಪತಿ ಎಮ್ ವೆಂಕಯ್ಯ ನಾಯ್ಡು (Vice President Venkaiah Naidu) ಅವರು ಬಣ್ಣಸಿದರು. ಬುಧವಾರ ನವದೆಹಲಿಯಲ್ಲಿ ನಡೆದ ಮೋದಿ@20: ಡ್ರೀಮ್ಸ್ ಮೀಟ್ ಡೆಲಿವರಿ (Modi@20: Dreams Meet Delivery) ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಮಾತಾಡಿದ ನಾಯ್ಡು ಅವರು, ರಾಷ್ಟ್ರೀಯ ಮಟ್ಟದಲ್ಲಿ ಒಬ್ಬ ಪವಾಡಸದೃಶ ನಾಯಕರೆನಿಸಿಕೊಂಡಿದ್ದಾರೆ ಎಂದರು. ಮುಂದುವರಿದು ಮಾತಾಡಿದ ಉಪರಾಷ್ಟ್ರಪತಿಗಳು, ಕಳೆದ 20 ವರ್ಷಗಳ ಅವಧಿಯಲ್ಲಿ-13 ವರ್ಷ ಗುಜರಾತಿನ ಮುಖ್ಯಮಂತ್ರಿಯಾಗಿ ಮತ್ತು ಪ್ರಧಾನ ಮಂತ್ರಿಗಳಾಗಿ ಕಳೆದ 8 ವರ್ಷಗಳ ಸಮಯದಲ್ಲಿ ಸ್ವಾತಂತ್ರ್ಯಾ ನಂತರದ ಭಾರತೀಯ ಇತಿಹಾಸದಲ್ಲಿ ಒಂದು ವಿಶಿಷ್ಟ ಸ್ಥಾನ ಪಡೆದುಕೊಂಡಿದ್ದಾರೆ ಎಂದರು.

ಪುಸ್ತಕವನ್ನು ಕುರಿತು ಮಾತಾಡಿದ ಉಪರಾಷ್ಟ್ರಪತಿಗಳು ಮೋದಿಯವರು ತುಂಬಾ ನಿಕಟವಾಗಿ ಗುರುತಿಸಿಕೊಂಡಿರುವ ಉತ್ಕೃಷ್ಟವಾದ ಪರಿವರ್ತನಾ ನಾಯಕತ್ವ, ಕ್ರಿಯಾಶೀಲ ಧೋರಣೆ ಮತ್ತು ಒಂದು ಭಿನ್ನ ಬಗೆ ಚಿಂತನೆಯ ಆಯಾಮಗಳನ್ನು ಅದು ಪ್ರತಿಬಿಂಬಿಸುತ್ತದೆ ಎಂದರು. ಮೋದಿ@20: ಡ್ರೀಮ್ಸ್ ಮೀಟ್ ಡೆಲಿವರಿ ಒಂದು ಅಪೂರ್ವ ಸಂಗ್ರಹಗಳ ಪುಸ್ತಕವಾಗಿದೆ. ಆಧುನಿಕ ಭಾರತದ ಅತ್ಯಂತ ಜನಪ್ರಿಯ ಮತ್ತು ಐಕಾನಿಕ್ ನಾಯಕರಲ್ಲಿ ಒಬ್ಬರಾಗಿರುವ ಮೋದಿಯವರ ರಾಜಕೀಯ ಬದುಕು ವಿಕಸನಗೊಂಡ ಬಗ್ಗೆ ಒಂದು ವಿಹಂಗಮ ಚಿತ್ರಣ ನೀಡುತ್ತದೆ ಎಂದು ನಾಯ್ಡು ಹೇಳಿದರು.

ಇದೇ ಸಂದರ್ಭದಲ್ಲಿ ಮಾತಾಡಿದ ಕೇಂದ್ರ ಗೃಹ ಖಾತೆ ಸಚಿವ ಅಮಿತ್ ಶಾ ಅವರು, ಸಾರ್ವಜನಿಕ ಬದುಕಿಗೆ ಮೋದಿಯವರು ನೀಡಿರುವ ಕೊಡುಗೆಯನ್ನು ವಿವರಿಸಿದರು. ಭೂಕಂಪದಿಂದ ತಲ್ಲಣಗೊಂಡಿದ್ದ ಗುಜರಾತಿನ ಮುಖ್ಯಮಂತ್ರಿಯಾಗುವ ಮೊದಲು ಅವರಿಗೆ ಒಂದು ಪಂಚಾಯತ್ ನಿರ್ವಹಿಸಿದ ಅನುಭವವೂ ಇರಲಿಲ್ಲ. ಆದಾಗ್ಯೂ ಅವರು ಅತ್ಯಂತ ಸಮರ್ಪಕವಾಗಿ ಆಡಳಿತ ನಡೆಸಿದರಲ್ಲದೆ ನಿರಂತರವಾಗಿ ಚುನಾವಣೆಗಳಲ್ಲಿ ಜಯಶೀಲರಾದರು ಅಂತ ಶಾ ಹೇಳಿದರು.

ವಿದೇಶಾಂಗ ವ್ಯವಹಾರಗಳ ಸಚಿವ ಡಾ ಎಸ್ ಜೈಶಂಕರ್ ಅವರು ಮಾತಾಡಿ, ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಅಭಿವೃದ್ಧಿ-ಕೇಂದ್ರಿತ ರಾಜತಾಂತ್ರಿಕತೆಯನ್ನು ಪ್ರತಿಪಾದಿಸಿದ್ದಾರೆ. ಭದ್ರತೆಗೆ ಸಂಬಂಧಿಸಿದ ಸವಾಲುಗಳೊಂದಿಗೆ ಅವರು ಬಾರ್ಡರ್ ಫ್ರ್ಯಾಕ್ಚರ್ ಅಭಿವೃದ್ಧಿಯತ್ತ ಗಮನ ಹರಿಸಿದರು ಎಂದು ಸಚಿವ ಜೈಶಂಕರ್ ಹೇಳಿದರು.

ಇದನ್ನೂ ಓದಿ:  ರಾಜಕಾರಣಕ್ಕೆ ಪಕ್ಷಾಂತರವೇ ದೊಡ್ಡ ಸಮಸ್ಯೆ: ಉಪ ರಾಷ್ಟ್ರಪತಿ ವೆಂಕಯ್ಯನಾಯ್ಡು

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್