AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Atal Bihari Vajpayee Birthday: ಅಜಾತಶತ್ರು ಅಟಲ್​​​ ಬಿಹಾರಿ ವಾಜಪೇಯಿಗೆ ನಮಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ಮೋದಿ

ಇಂದು ದೇಶದ ಮಾಜಿ ಪ್ರಧಾನಿ ಅಟಲ್​​​ ಬಿಹಾರಿ ವಾಜಪೇಯಿ ಅವರ 99ನೇ ಜನ್ಮದಿನ, ಈ ದಿನದಂದು ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ ಸೇರಿದ ಅನೇಕ ಗಣ್ಯರು 'ಸದೈವ್ ಅಟಲ್' ಸ್ಮಾರಕಕ್ಕೆ ಗೌರವ ಸಲ್ಲಿಸಿದ್ದಾರೆ. ಈ ಪ್ರಯುಕ್ತ ದೇಶಾದ್ಯಂತ ಅನೇಕ ಕಾರ್ಯಕ್ರಮಗಳನ್ನು ಬಿಜೆಪಿ ಆಯೋಜಿಸಿದೆ.

Atal Bihari Vajpayee Birthday: ಅಜಾತಶತ್ರು ಅಟಲ್​​​ ಬಿಹಾರಿ ವಾಜಪೇಯಿಗೆ ನಮಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ಮೋದಿ
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on:Dec 25, 2023 | 12:32 PM

Share

ಇಂದು ಭಾರತದ ಮಾಜಿ ಪ್ರಧಾನಿ ಹಾಗೂ ಬಿಜೆಪಿ ನಾಯಕ ಅಜಾತಶತ್ರು ಅಟಲ್​​​ ಬಿಹಾರಿ ವಾಜಪೇಯಿ (Atal Bihari Vajpayee Birthday) ಅವರ 99ನೇ ಜನ್ಮದಿನವನ್ನು ಸ್ಮರಿಸಲಾಗುತ್ತಿದೆ. ಈ ಸಂದರ್ಭದಲ್ಲಿ ಭಾರತ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಅನೇಕ ಗಣ್ಯರು ‘ಸದೈವ್ ಅಟಲ್’ ಸ್ಮಾರಕಕ್ಕೆ ಭೇಟಿ ನೀಡಿ ಪುಷ್ಪ ನಮನ ಸಲ್ಲಿಸಿದರು. ರಾಷ್ಟ್ರ ಪತಿ ದ್ರೌಪದಿ ಮುರ್ಮು, ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರು ಸ್ಮಾರಕದಲ್ಲಿ ಉಪಸ್ಥಿತರಿದ್ದರು. ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಲೋಕಸಭೆ ಸ್ಪೀಕರ್ ಓಂ ಬಿರ್ಲಾ, ರಾಜ್ಯಸಭಾ ಉಪ ಸಭಾಪತಿ ಹರಿವಂಶ್ ಮುಂತಾದ ನಾಯಕರು ಈ ಸಂದರ್ಭದಲ್ಲಿ ಪುಷ್ಪ ನಮನ ಸಲ್ಲಿಸುವ ಮೂಲಕ ಗೌರವ ಸಲ್ಲಿಸಿದರು.

ಸೋಮವಾರ ಅಟಲ್ ಬಿಹಾರಿ ವಾಜಪೇಯಿ ಅವರ 99 ನೇ ಜನ್ಮದಿನವನ್ನು ಉತ್ತಮ ಆಡಳಿತ ದಿನವನ್ನಾಗಿ ಆಚರಿಸಲು ಕೇಂದ್ರ ಸರ್ಕಾರ ಕರೆ ನೀಡಿದೆ. ಇದಕ್ಕೆ ದೇಶದಲ್ಲಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಇದರ ಜತೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ದೇಶಾದ್ಯಂತ ಪಕ್ಷದ ಪದಾಧಿಕಾರಿಗಳು ಮತ್ತು ರಾಜ್ಯಾಧ್ಯಕ್ಷರುಗಳು ಅಟಲ್ ಬಿಹಾರಿ ವಾಜಪೇಯಿ ಅವರ ಭಾವಚಿತ್ರಕ್ಕೆ ಎಲ್ಲಾ ಬೂತ್‌ಗಳಲ್ಲಿ ಪುಷ್ಪ ನಮನ ಸಲ್ಲಿಸಬೇಕು ಮತ್ತು ಮಾಜಿ ಪ್ರಧಾನಿಯವರ ಅದ್ಭುತ ವ್ಯಕ್ತಿತ್ವ ಮತ್ತು ಕಾರ್ಯಗಳ ಬಗ್ಗೆ ಚರ್ಚಿಸಬೇಕು ಎಂದು ಹೇಳಿದ್ದಾರೆ.

ಪ್ರತಿ ಜಿಲ್ಲೆಯಲ್ಲೂ ಕೇಂದ್ರ ಸರ್ಕಾರ ಮತ್ತು ಬಿಜೆಪಿ ಆಡಳಿತದ ರಾಜ್ಯ ಸರ್ಕಾರಗಳ ಯೋಜನೆಗಳು ಮತ್ತು ಸಾಧನೆಗಳ ಬಗ್ಗೆ ಚರ್ಚೆ ನಡೆಯಲಿದ್ದು, ಬಡವರ ಕಲ್ಯಾಣಕ್ಕಾಗಿ ಉತ್ತಮ ಆಡಳಿತ ನೀಡಲಾಗುವುದು ಎಂಬ ಶಪಥ ಮಾಡುವಂತೆ ಹೇಳಿದ್ದಾರೆ.

ಇದನ್ನೂ ಓದಿ: ನಾನು ಅವಿವಾಹಿತ, ಬ್ರಹ್ಮಚಾರಿಯಲ್ಲ ಎಂದಿದ್ದ ವಾಜಪೇಯಿ

ಅಭಿವೃದ್ಧಿ ಹೊಂದಿದ ಭಾರತ ಎಂಬ ಗುರಿಯನ್ನು ಇಟ್ಟುಕೊಂಡು ಪ್ರತಿ ನಾಗರಿಕರು ಕೆಲಸ ಮಾಡಬೇಕಿದೆ. ಇದಕ್ಕೆ “ಅಭಿವೃದ್ಧಿ ಹೊಂದಿದ ಭಾರತದ ಬ್ರ್ಯಾಂಡ್ ಅಂಬಾಸಿಡರ್” ಎಂಬ ಅಭಿಮಾನವನ್ನು ನಮೋ ಅಪ್ಲಿಕೇಶನ್‌ನಲ್ಲಿ ಪ್ರಾರಂಭಿಸಲಾಗಿದೆ. ವಾಜಪೇಯಿ ಅವರು ಡಿಸೆಂಬರ್ 25, 1924 ರಂದು ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ಜನಿಸಿದರು ಮತ್ತು ಮೂರು ಬಾರಿ ರಾಷ್ಟ್ರದ ಪ್ರಧಾನಿಯಾಗಿ ಸೇವೆ ಸಲ್ಲಿದ್ದಾರೆ. ವಿರೋಧ ಪಕ್ಷಗಳಿಂದ ಅಜಾತ ಶತ್ರು ಎಂಬ ಪದವಿಯನ್ನು ಕೂಡ ಪಡೆದರು. ರಾಮ ಜನ್ಮಭೂಮಿಯನ್ನು ಕಟ್ಟಲೇಬೇಕು ಎಂಬ ಧ್ಯೇಯವನ್ನು ಹುಟ್ಟು ಹಾಕಿದ ಕೀರ್ತಿ ಇವರಿಗೆ ಸಲ್ಲುತ್ತದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 12:21 pm, Mon, 25 December 23

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ