ಇಂದು ಭಾರತದ ಮಾಜಿ ಪ್ರಧಾನಿ ಹಾಗೂ ಬಿಜೆಪಿ ನಾಯಕ ಅಜಾತಶತ್ರು ಅಟಲ್ ಬಿಹಾರಿ ವಾಜಪೇಯಿ (Atal Bihari Vajpayee Birthday) ಅವರ 99ನೇ ಜನ್ಮದಿನವನ್ನು ಸ್ಮರಿಸಲಾಗುತ್ತಿದೆ. ಈ ಸಂದರ್ಭದಲ್ಲಿ ಭಾರತ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಅನೇಕ ಗಣ್ಯರು ‘ಸದೈವ್ ಅಟಲ್’ ಸ್ಮಾರಕಕ್ಕೆ ಭೇಟಿ ನೀಡಿ ಪುಷ್ಪ ನಮನ ಸಲ್ಲಿಸಿದರು. ರಾಷ್ಟ್ರ ಪತಿ ದ್ರೌಪದಿ ಮುರ್ಮು, ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರು ಸ್ಮಾರಕದಲ್ಲಿ ಉಪಸ್ಥಿತರಿದ್ದರು. ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಲೋಕಸಭೆ ಸ್ಪೀಕರ್ ಓಂ ಬಿರ್ಲಾ, ರಾಜ್ಯಸಭಾ ಉಪ ಸಭಾಪತಿ ಹರಿವಂಶ್ ಮುಂತಾದ ನಾಯಕರು ಈ ಸಂದರ್ಭದಲ್ಲಿ ಪುಷ್ಪ ನಮನ ಸಲ್ಲಿಸುವ ಮೂಲಕ ಗೌರವ ಸಲ್ಲಿಸಿದರು.
ಸೋಮವಾರ ಅಟಲ್ ಬಿಹಾರಿ ವಾಜಪೇಯಿ ಅವರ 99 ನೇ ಜನ್ಮದಿನವನ್ನು ಉತ್ತಮ ಆಡಳಿತ ದಿನವನ್ನಾಗಿ ಆಚರಿಸಲು ಕೇಂದ್ರ ಸರ್ಕಾರ ಕರೆ ನೀಡಿದೆ. ಇದಕ್ಕೆ ದೇಶದಲ್ಲಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಇದರ ಜತೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ದೇಶಾದ್ಯಂತ ಪಕ್ಷದ ಪದಾಧಿಕಾರಿಗಳು ಮತ್ತು ರಾಜ್ಯಾಧ್ಯಕ್ಷರುಗಳು ಅಟಲ್ ಬಿಹಾರಿ ವಾಜಪೇಯಿ ಅವರ ಭಾವಚಿತ್ರಕ್ಕೆ ಎಲ್ಲಾ ಬೂತ್‌ಗಳಲ್ಲಿ ಪುಷ್ಪ ನಮನ ಸಲ್ಲಿಸಬೇಕು ಮತ್ತು ಮಾಜಿ ಪ್ರಧಾನಿಯವರ ಅದ್ಭುತ ವ್ಯಕ್ತಿತ್ವ ಮತ್ತು ಕಾರ್ಯಗಳ ಬಗ್ಗೆ ಚರ್ಚಿಸಬೇಕು ಎಂದು ಹೇಳಿದ್ದಾರೆ.
#WATCH | Delhi: Visuals from ‘Sadaiv Atal’ memorial in Delhi where President Droupadi Murmu, Vice President Jagdeep Dhankhar, Prime Minister Narendra Modi and several other leaders have paid floral tribute to former Prime Minister Atal Bihari Vajpayee on his birth anniversary. pic.twitter.com/8BwjNingMN
— ANI (@ANI) December 25, 2023
ಪ್ರತಿ ಜಿಲ್ಲೆಯಲ್ಲೂ ಕೇಂದ್ರ ಸರ್ಕಾರ ಮತ್ತು ಬಿಜೆಪಿ ಆಡಳಿತದ ರಾಜ್ಯ ಸರ್ಕಾರಗಳ ಯೋಜನೆಗಳು ಮತ್ತು ಸಾಧನೆಗಳ ಬಗ್ಗೆ ಚರ್ಚೆ ನಡೆಯಲಿದ್ದು, ಬಡವರ ಕಲ್ಯಾಣಕ್ಕಾಗಿ ಉತ್ತಮ ಆಡಳಿತ ನೀಡಲಾಗುವುದು ಎಂಬ ಶಪಥ ಮಾಡುವಂತೆ ಹೇಳಿದ್ದಾರೆ.
ಇದನ್ನೂ ಓದಿ: ನಾನು ಅವಿವಾಹಿತ, ಬ್ರಹ್ಮಚಾರಿಯಲ್ಲ ಎಂದಿದ್ದ ವಾಜಪೇಯಿ
ಅಭಿವೃದ್ಧಿ ಹೊಂದಿದ ಭಾರತ ಎಂಬ ಗುರಿಯನ್ನು ಇಟ್ಟುಕೊಂಡು ಪ್ರತಿ ನಾಗರಿಕರು ಕೆಲಸ ಮಾಡಬೇಕಿದೆ. ಇದಕ್ಕೆ “ಅಭಿವೃದ್ಧಿ ಹೊಂದಿದ ಭಾರತದ ಬ್ರ್ಯಾಂಡ್ ಅಂಬಾಸಿಡರ್” ಎಂಬ ಅಭಿಮಾನವನ್ನು ನಮೋ ಅಪ್ಲಿಕೇಶನ್‌ನಲ್ಲಿ ಪ್ರಾರಂಭಿಸಲಾಗಿದೆ. ವಾಜಪೇಯಿ ಅವರು ಡಿಸೆಂಬರ್ 25, 1924 ರಂದು ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ಜನಿಸಿದರು ಮತ್ತು ಮೂರು ಬಾರಿ ರಾಷ್ಟ್ರದ ಪ್ರಧಾನಿಯಾಗಿ ಸೇವೆ ಸಲ್ಲಿದ್ದಾರೆ. ವಿರೋಧ ಪಕ್ಷಗಳಿಂದ ಅಜಾತ ಶತ್ರು ಎಂಬ ಪದವಿಯನ್ನು ಕೂಡ ಪಡೆದರು. ರಾಮ ಜನ್ಮಭೂಮಿಯನ್ನು ಕಟ್ಟಲೇಬೇಕು ಎಂಬ ಧ್ಯೇಯವನ್ನು ಹುಟ್ಟು ಹಾಕಿದ ಕೀರ್ತಿ ಇವರಿಗೆ ಸಲ್ಲುತ್ತದೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 12:21 pm, Mon, 25 December 23