PM Narendra Modi: ಅಟಲ್ ಬಿಹಾರಿ ವಾಜಪೇಯಿ ಜನ್ಮದಿನದಂದು ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಿ ಮೋದಿ

ಅಟಲ್ ಜಿ ಅವರಿಗೆ ಅವರ ಜಯಂತಿಯಂದು ನಮನಗಳು. ಭಾರತಕ್ಕೆ ಅವರ ಕೊಡುಗೆ ಅಳಿಸಲಾಗದು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

PM Narendra Modi: ಅಟಲ್ ಬಿಹಾರಿ ವಾಜಪೇಯಿ ಜನ್ಮದಿನದಂದು ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಮಾಜಿ ಪ್ರಧಾನಿ ದಿವಂಗತ ಅಟಲ್ ಬಿಹಾರಿ ವಾಜಪೇಯಿ ಮತ್ತು ಪ್ರಧಾನಿ ನರೇಂದ್ರ ಮೋದಿ
Follow us
TV9 Web
| Updated By: Rakesh Nayak Manchi

Updated on:Dec 25, 2022 | 12:47 PM

ದೆಹಲಿ: ಮಾಜಿ ಪ್ರಧಾನಿ ದಿವಂಗತ ಅಟಲ್ ಬಿಹಾರಿ ವಾಜಪೇಯಿ (Atal Bihari Vajpayee) ಅವರ 98ನೇ ಜನ್ಮದಿನದ (Birth Anniversary) ಪ್ರಯುಕ್ತ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಗೌರವ ನಮನ ಸಲ್ಲಿಸಿದರು. “ಅಟಲ್ ಬಿಹಾರಿ ವಾಜಪೇಯಿ ಅವರು ಭಾರತ ಮಾತೆಯ ಮಹಾನ್ ಮಗ. ಭಾರತಕ್ಕೆ ಅವರ ಕೊಡುಗೆ ಅವಿಸ್ಮರಣೀಯವಾಗಿದೆ” ಎಂದು ಪ್ರಧಾನಿ ಮೋದಿ ಅವರು ಹೇಳಿದ್ದಾರೆ. ವಾಜಪೇಯಿ ಅವರು 90ರ ದಶಕದಲ್ಲಿ ಬಿಜೆಪಿಯನ್ನು ಕೇಂದ್ರದಲ್ಲಿ ಅಧಿಕಾರಕ್ಕೆ ತಂದಿದ್ದರು ಮತ್ತು ಒಟ್ಟಾರೆಯಾಗಿ ಆರು ವರ್ಷಗಳ ಕಾಲ ಭಾರತದ ಪ್ರಧಾನಿಯಾಗಿ ದೇಶಕ್ಕೆ ತಮ್ಮದೇ ಆದ ಕೊಡುಗೆ ನೀಡಿದ್ದರು.

ವಾಜಪೇಯಿ ಜನ್ಮದಿನದ ಪ್ರಯುಕ್ತ ಟ್ವೀಟ್ ಮಾಡದಿ ಪ್ರಧಾನಿ ಮೋದಿ, “ಅಟಲ್​ಜಿ ಅವರಿಗೆ ಅವರ ಜಯಂತಿಯಂದು ನಮನಗಳು. ಭಾರತಕ್ಕೆ ಅವರು ನೀಡಿದ ಕೊಡುಗೆ ಅಳಿಸಲಾಗದು. ಅವರ ನಾಯಕತ್ವ ಮತ್ತು ದೂರದೃಷ್ಟಿ ಲಕ್ಷಾಂತರ ಜನರನ್ನು ಪ್ರೇರೇಪಿಸುತ್ತದೆ” ಎಂದರು.

ಇದನ್ನೂ ಓದಿ: Good Governance Day 2022: ಇಂದು ಮಾಜಿ ಪ್ರಧಾನಿ ದಿ.ವಾಜಪೇಯಿ ಅವರ 98ನೇ ಜನ್ಮದಿನ, ದೇಶಾದ್ಯಂತ ಉತ್ತಮ ಆಡಳಿತ ದಿನ ಆಚರಣೆ

ಇದನ್ನೂ ಓದಿ: Mann Ki Baat: ಮೋದಿ ಮನ್ ಕಿ ಬಾತ್​​ನಲ್ಲಿ ಅಟಲ್ ಸ್ಮರಣೆ; ಭಾರತದ ಸಾಧನೆಗಳ ಮೆಲುಕು ಹಾಕಿ 2022ಕ್ಕೆ ವಿದಾಯ ಹೇಳಿದ ಪ್ರಧಾನಿ

ಸ್ವಾತಂತ್ರ್ಯ ಹೋರಾಟಗಾರ ಮತ್ತು ಶಿಕ್ಷಣ ತಜ್ಞ ಮದನ್ ಮೋಹನ್ ಮಾಳವೀಯ ಅವರ ಜನ್ಮದಿನವೂ ಇಂದೇ ಆಗಿದೆ. ಹೀಗಾಗಿ ಇವರಿಗೂ ಪ್ರಧಾನಿಯವರು ಗೌರವ ನಮನ ಸಲ್ಲಿಸಿದರು. ಬನಾರಸ್ ಹಿಂದೂ ವಿಶ್ವವಿದ್ಯಾನಿಲಯದ ಅಡಿಪಾಯದ ಹಿಂದಿನ ಪ್ರಮುಖ ವ್ಯಕ್ತಿ ಮಾಳವೀಯ ಅವರು ಶಿಕ್ಷಣ ಕ್ಷೇತ್ರದ ಸಬಲೀಕರಣಕ್ಕಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟರು ಮತ್ತು ಇದಕ್ಕಾಗಿ ಅವರು ಯಾವಾಗಲೂ ಸ್ಮರಣೀಯರಾಗಿದ್ದಾರೆ ಎಂದು ಪ್ರಧಾನಿ ಮೋದಿ ಹೇಳಿದರು.

ದೇಶದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:47 pm, Sun, 25 December 22

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್