AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅತುಲ್​ ಸುಭಾಷ್​ ಆತ್ಮಹತ್ಯೆ​: ಕರ್ನಾಟಕ ಸೇರಿ 3 ರಾಜ್ಯಗಳಿಗೆ ಸುಪ್ರೀಂ ನೋಟಿಸ್​​

ಟೆಕ್ಕಿ ಅತುಲ್​ ಸುಭಾಷ್​ ಆತ್ಮಹತ್ಯೆ ಪ್ರಕರಣ ದೇಶಾದ್ಯಂತ ಚರ್ಚೆಯಾಗುತ್ತಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಪೊಲೀಸರು ಈಗಾಗಲೆ ಅತುಲ್​ ಸುಭಾಷ್​ ಅವರ ಪತ್ನಿ, ಅತ್ತೆ ಮತ್ತು ಭಾಮೈದನನ್ನು ಬಂಧಿಸಿದ್ದಾರೆ. ಇದೀಗ ಅತುಲ್​ ಸುಭಾಷ ಅವರ ನಾಲ್ಕು ವರ್ಷದ ಮಗನ ವಿಚಾರ ಸುಪ್ರಿಂಕೋರ್ಟ್​ ಮೆಟ್ಟಿಲೇರಿದೆ.

ಅತುಲ್​ ಸುಭಾಷ್​ ಆತ್ಮಹತ್ಯೆ​: ಕರ್ನಾಟಕ ಸೇರಿ 3 ರಾಜ್ಯಗಳಿಗೆ ಸುಪ್ರೀಂ ನೋಟಿಸ್​​
ಸುಪ್ರೀಂ ಕೋರ್ಟ್​​, ಅತುಲ್​ ಸುಭಾಷ್​
ಹರೀಶ್ ಜಿ.ಆರ್​.
| Edited By: |

Updated on:Dec 21, 2024 | 2:58 PM

Share

ಬೆಂಗಳೂರು/ನವದೆಹಲಿ, ಡಿಸೆಂಬರ್​ 21: ಉತ್ತರ ಪ್ರದೇಶ ಟೆಕ್ಕಿ ಅತುಲ್ ಸುಭಾಷ್ (Athul Subhash) ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಸೇರಿದಂತೆ ಮೂರು ರಾಜ್ಯಗಳಿಗೆ ಸುಪ್ರೀಂಕೋರ್ಟ್ (Supreme Court)​ ನೋಟಿಸ್ ನೀಡಿದೆ. ಅತುಲ್​ ಸುಭಾಷ್​ ಅವರ ತಾಯಿ ಅಂಜು ಮೋದಿಯವರು ನಾಲ್ಕು ವರ್ಷದ ಮ್ಮೊಮ್ಮಗನನ್ನು ನನ್ನ ಸುಪರ್ಧಿಗೆ ನೀಡಿ ಎಂದು ಸುಪ್ರೀಂ ಕೋರ್ಟ್​ನಲ್ಲಿ ಹೇಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಸಿದ್ದರು.

ಅರ್ಜಿ ವಿಚಾರಣೆ ನಡೆಸಿದ ನ್ಯಾ. ಬಿ.ವಿ.ನಾಗರತ್ನ ಮತ್ತು ನ್ಯಾ.ಎನ್.ಕೋಟೀಶ್ವರ್ ಸಿಂಗ್ ಅವರನ್ನೊಳಗೊಂಡ ಪೀಠವು ಪರಿಸ್ಥಿತಿಯ ಬಗ್ಗೆ ಸ್ಪಷ್ಟನೆ ನೀಡುವಂತೆ ಉತ್ತರ ಪ್ರದೇಶ, ಹರಿಯಾಣ, ಕರ್ನಾಟಕ ಸರ್ಕಾರಗಳಿಗೆ ನೋಟಿಸ್ ನೀಡಿದೆ. ಮುಂದಿನ ವಿಚಾರಣೆ ಜನವರಿ 7ಕ್ಕೆ ನಿಗದಿಪಡಿಸಿದೆ.

ಅತುಲ್​ ಸುಭಾಷ್ ಅವರ ಪತ್ನಿ ನಿಖಿತಾ ಸಿಂಘಾನಿಯಾ ಮತ್ತು ಅವರ ತಾಯಿ ಮತ್ತು ಸಹೋದರನನ್ನು ಪೊಲೀಸರು ಬಂಧಿಸಿದ್ದಾರೆ. ಆದರೆ, ನಿಖಿತಾ ಸಿಂಘಾನಿಯಾ ಅವರು ಮಗು ಎಲ್ಲಿದೆ ಎಂಬುವುದನ್ನು ಬಹಿರಂಗಪಡಿಸಿಲ್ಲ ಎಂದು ಅರ್ಜಿಯಲ್ಲಿ ಹೇಳಿದ್ದಾರೆ.

ಮಗುವನ್ನು ಫರಿದಾಬಾದ್ ಬೋರ್ಡಿಂಗ್ ಶಾಲೆಗೆ ದಾಖಲಿಸಲಾಗಿದೆ ಮತ್ತು ನನ್ನ ಚಿಕ್ಕಪ್ಪ ಸುಶೀಲ್ ಸಿಂಘಾನಿಯಾ ಅವರ ಬಳಿ ಇದೆ ಎಂದು ನಿಖಿತಾ ಪೊಲೀಸರಿಗೆ ತಿಳಿಸಿದ್ದಾರೆ ಎಂದು ವರದಿಯಾಗಿದೆ. ಆದರೆ, ಆದರೆ ಮಗು ಇರುವ ಸ್ಥಳದ ಬಗ್ಗೆ ಮಾಹಿತಿ ಇಲ್ಲ ಎಂದು ಸುಶೀಲ್ ಹೇಳಿದ್ದಾರೆ.

ಇದನ್ನೂ ಓದಿ: ಅತುಲ್ ಸುಭಾಷ್ ಆತ್ಮಹತ್ಯೆ ಕೇಸ್​: ಪುರುಷರ ಮೇಲೆ ದೌರ್ಜನ್ಯ, ಬದಲಾಗುತ್ತಾ ಕಾನೂನು? ಪರಮೇಶ್ವರ್​ ಹೇಳಿದ್ದಿಷ್ಟು

ಹೀಗಾಗಿ, ಅಂಜು ಮೋದಿಯವರು ಸುಪ್ರೀಂಕೋರ್ಟ್​ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿ ವಿಚಾರಣೆ ನಡೆಸಿದ ನ್ಯಾಯಪೀಠ ಘಟನೆಯ ಬಗ್ಗೆ ಸ್ಪಷ್ಟನೆ ನೀಡುವಂತೆ ಉತ್ತರ ಪ್ರದೇಶ, ಹರಿಯಾಣ, ಕರ್ನಾಟಕ ಸರ್ಕಾರಗಳಿಗೆ ನೋಟಿಸ್ ನೀಡಿದೆ.

ಡಿಸೆಂಬರ್​ 9 ರಂದು ಬೆಂಗಳೂರಿನಲ್ಲಿ ಅತುಲ್​ ಸುಭಾಷ್​ ಆತ್ಮಹತ್ಯೆ ಮಾಡಿಕೊಂಡಿದ್ದರು. ಇದಕ್ಕೂ ಮುನ್ನ 24 ಪುಟಗಳ ಪತ್ರ ಹಾಗೂ ಒಂದು ಗಂಟೆ ಅವಧಿಯ ವಿಡಿಯೋ ರೆಕಾರ್ಡ್​ ಮಾಡಿದ್ದರು. ವಿಡಿಯೋದಲ್ಲಿ ತಾವು ಎದುರಿಸಿದ್ದ ಕಷ್ಟಗಳನ್ನು ಬಹಿರಂಗಪಡಿಸಿದ್ದರು.

ಪತ್ನಿ ತನ್ನನ್ನು ಸುಳ್ಳು ಪ್ರಕರಣದಲ್ಲಿ ಸಿಲುಕಿಸಿದ್ದಾರೆ ಎಂದು ಆರೋಪಿಸಿದ್ದರು. ಈ ಪ್ರಕರಣದಲ್ಲಿ ಅತುಲ್​ ಪತ್ನಿ ನಿಖಿತಾ ಸಿಂಘಾನಿಯಾ ಮತ್ತು ತಾಯಿ ನಿಶಾ ಸಿಂಘಾನಿ ಮತ್ತು ಸಹೋದರ ಅನುರಾಗ್​ ಸಿಂಘಾನಿಯಾ ಅವರನ್ನು ಡಿಸೆಂಬರ್​ 16 ರಂದು ಬಂಧಿಸಲಾಗಿದೆ. ಮೂವರ ವಿರುದ್ಧ ಆತ್ಮಹತ್ಯೆ ಪ್ರಚೋದನೆ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 12:03 pm, Sat, 21 December 24

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ