Asad Kalia: ಗ್ಯಾಂಗ್​ಸ್ಟರ್ ಅತೀಕ್ ಅಹ್ಮದ್​ ಗ್ಯಾಂಗ್​ನ ಸದಸ್ಯ ಅಸದ್ ಕಾಲಿಯಾ ಬಂಧನ

ಗ್ಯಾಂಗ್​ಸ್ಟರ್ ಅತೀಕ್ ಅಹ್ಮದ್(Atiq Ahmad)  ಗ್ಯಾಂಗ್​ನ ಮತ್ತೊಬ್ಬ ಶೂಟರ್ ಅಸದ್ ಕಾಲಿಯಾನನ್ನು ಉತ್ತರ ಪ್ರದೇಶದ ಪೊಲೀಸರು ಬುಧವಾರ ಪ್ರಯಾಗ್​ರಾಜ್​ನಲ್ಲಿ ಬಂಧಿಸಿದ್ದಾರೆ.

Asad Kalia: ಗ್ಯಾಂಗ್​ಸ್ಟರ್ ಅತೀಕ್ ಅಹ್ಮದ್​ ಗ್ಯಾಂಗ್​ನ ಸದಸ್ಯ ಅಸದ್ ಕಾಲಿಯಾ ಬಂಧನ
ಅಸದ್ ಕಾಲಿಯಾ
Follow us
ನಯನಾ ರಾಜೀವ್
|

Updated on: Apr 20, 2023 | 8:50 AM

ಗ್ಯಾಂಗ್​ಸ್ಟರ್ ಅತೀಕ್ ಅಹ್ಮದ್(Atiq Ahmad)  ಗ್ಯಾಂಗ್​ನ ಮತ್ತೊಬ್ಬ ಶೂಟರ್ ಅಸದ್ ಕಾಲಿಯಾನನ್ನು ಉತ್ತರ ಪ್ರದೇಶದ ಪೊಲೀಸರು ಬುಧವಾರ ಪ್ರಯಾಗ್​ರಾಜ್​ನಲ್ಲಿ ಬಂಧಿಸಿದ್ದಾರೆ. ಕಾಲಿಯಾ ಅತೀಕ್‌ನ ಅತ್ಯಂತ ನಿಕಟ ವ್ಯಕ್ತಿಯಾಗಿದ್ದ, ಕಾಲಿಯಾ ಹಲವು ಪ್ರಕರಣಗಳಲ್ಲಿ ಬೇಕಾಗಿದ್ದ. ಈತನ ಮೇಲೆ ಪೊಲೀಸರು 50 ಸಾವಿರ ಬಹುಮಾನ ಘೋಷಿಸಿದ್ದರು. OG ಧೂಮಂಗಂಜ್ ಮತ್ತು ಪೂರಮುಫ್ತಿ ಪೊಲೀಸರು ಸುತ್ತುವರೆದು ಆತನನ್ನು ಬಂಧಿಸಿದ್ದಾರೆ. ಆತನ ಮತ್ತಿಬ್ಬರು ಸಹಚರರನ್ನು ಕೂಡ ಬಂಧಿಸಲಾಗಿದೆ.

ಡಿಸೆಂಬರ್ 2021 ರಿಂದ, ಅಸದ್ ವಿರುದ್ಧ ನಾಲ್ಕು ಬೆದರಿಕೆ ಮತ್ತು ಸುಲಿಗೆಗೆ ಸಂಬಂಧಿಸಿದ ಪ್ರಕರಣಗಳು ದಾಖಲಾಗಿದ್ದವು. ಅಸದ್ ಬಂಧನಕ್ಕೆ ಪೊಲೀಸರು 50,000 ರೂಪಾಯಿ ಬಹುಮಾನ ಘೋಷಿಸಿದ್ದರು. ಇತ್ತೀಚೆಗೆ, 2019 ರ ವೀಡಿಯೊವನ್ನು ಸಹ ಪ್ರಸಾರ ಮಾಡಲಾಗಿದ್ದು, ಇದರಲ್ಲಿ ಅಸದ್ ತನ್ನ ಸಹಚರರೊಂದಿಗೆ ವ್ಯಕ್ತಿಯ ಮನೆಗೆ ಹೋಗಿ ಬೆದರಿಕೆ ಹಾಕಿರುವುದು ಕಂಡುಬಂದಿತ್ತು.

ಮತ್ತಷ್ಟು ಓದಿ: Atiq Ahmed: ಗ್ಯಾಂಗ್​ಸ್ಟರ್​ ಅತೀಕ್ ಅಹ್ಮದ್ ಹತ್ಯೆ ಪ್ರಕರಣ: 5 ಪೊಲೀಸ್ ಅಧಿಕಾರಿಗಳು ಅಮಾನತು

ಶನಿವಾರ ರಾತ್ರಿ ಪ್ರಯಾಗರಾಜ್‌ನ ಶಾಹಗಂಜ್ ಪ್ರದೇಶದ ಆಸ್ಪತ್ರೆಯೊಂದರ ಹೊರಗೆ ಅತೀಕ್ ಮತ್ತು ಅವರ ಸಹೋದರ ಅಶ್ರಫ್ ನನ್ನು ಮೂವರು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದರು. ಆ ಭಯಾನಕ ಹತ್ಯೆಯ ದೃಶ್ಯಾವಳಿಗಳು ಆಸ್ಪತ್ರೆಯ ಹೊರಗಡೆಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಮರಣೋತ್ತರ ಪರೀಕ್ಷೆಯ ಸಮಯದಲ್ಲಿ ದರೋಡೆಕೋರನ ದೇಹದಲ್ಲಿ ಒಂಬತ್ತು ಗುಂಡೇಟುಗಳು ಕಂಡುಬಂದಿವೆ. ಅವರ ಸಹೋದರ ಅಶ್ರಫ್ ಅಹ್ಮದ್ ಅವರ ದೇಹದಿಂದ ಐದು ಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ವರದಿಯಾಗಿದೆ.

ಅತೀಕ್ ಅಹ್ಮದ್ ತಲೆಗೆ ಒಂದು ಬಾರಿ ಮತ್ತು ಎದೆ ಮತ್ತು ಬೆನ್ನಿನ ಮೇಲೆ ಎಂಟು ಬಾರಿ ಗುಂಡು ಹಾರಿಸಿರುವುದು ಮರಣೋತ್ತರ ಪರೀಕ್ಷೆಯಲ್ಲಿ ಪತ್ತೆಯಾಗಿದೆ. ಅಶ್ರಫ್ ಅವರ ಮುಖದ ಮೇಲೆ ಒಂದು, ಬೆನ್ನಿನ ಮೇಲೆ ನಾಲ್ಕು ಗುಂಡೇಟುಗಳು ಕಂಡುಬಂದಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ನಾನಿಲ್ಲದಿದ್ದರೂ ಕಾಂಗ್ರೆಸ್ ಅಸ್ತಿತ್ವಕ್ಕೆ ಯಾವುದೇ ತೊಂದರೆಯಿಲ್ಲ: ಡಿಕೆಶಿ
ನಾನಿಲ್ಲದಿದ್ದರೂ ಕಾಂಗ್ರೆಸ್ ಅಸ್ತಿತ್ವಕ್ಕೆ ಯಾವುದೇ ತೊಂದರೆಯಿಲ್ಲ: ಡಿಕೆಶಿ
ಕ್ಯಾಪ್ಟನ್​ ಆಗೋಕೆ ಬಿಗ್ ಬಾಸ್ ಬೆಡ್​ರೂಂನಲ್ಲಿ ದೊಡ್ಡ ಡೀಲಿಂಗ್
ಕ್ಯಾಪ್ಟನ್​ ಆಗೋಕೆ ಬಿಗ್ ಬಾಸ್ ಬೆಡ್​ರೂಂನಲ್ಲಿ ದೊಡ್ಡ ಡೀಲಿಂಗ್
ಸಾಯೋವರೆಗೂ ಕುಮಾರಣ್ಣ ಮತ್ತು ದೇವೇಗೌಡರ ಜೊತೆ ಇರ್ತೀವಿ :ಸಾರಾ ಮಹೇಶ್
ಸಾಯೋವರೆಗೂ ಕುಮಾರಣ್ಣ ಮತ್ತು ದೇವೇಗೌಡರ ಜೊತೆ ಇರ್ತೀವಿ :ಸಾರಾ ಮಹೇಶ್
ನೋಡ ನೋಡ್ತಿದ್ದಂತೆಯೇ ಹತ್ತಾರು ಲೀಟರ್ ಹಾಲು ರಸ್ತೆಗೆ ಸುರಿದರು!
ನೋಡ ನೋಡ್ತಿದ್ದಂತೆಯೇ ಹತ್ತಾರು ಲೀಟರ್ ಹಾಲು ರಸ್ತೆಗೆ ಸುರಿದರು!
ವಕ್ಫ್ ಬೋರ್ಡ್ ವಿರುದ್ಧ 5 ಜಿಲ್ಲೆಗಳಲ್ಲಿ ನಡೆಯಲಿದೆ ಯತ್ನಾಳ್ ತಂಡದ ಅಭಿಯಾನ
ವಕ್ಫ್ ಬೋರ್ಡ್ ವಿರುದ್ಧ 5 ಜಿಲ್ಲೆಗಳಲ್ಲಿ ನಡೆಯಲಿದೆ ಯತ್ನಾಳ್ ತಂಡದ ಅಭಿಯಾನ
ಜನಪ್ರತಿನಿಧಿಗಳ ನಿರ್ಲಕ್ಷ್ಯ ಜಲಾಶಯದಲ್ಲಿ ಸೋರುವಿಕೆಗೆ ಕಾರಣವಾಯಿತೆ?
ಜನಪ್ರತಿನಿಧಿಗಳ ನಿರ್ಲಕ್ಷ್ಯ ಜಲಾಶಯದಲ್ಲಿ ಸೋರುವಿಕೆಗೆ ಕಾರಣವಾಯಿತೆ?
ಮುಡಾ ಪ್ರಕರಣದಲ್ಲಿ ಲೋಕಾಯುಕ್ತವೇ ಅಪರಾಧಿ ಸ್ಥಾನದಲ್ಲಿದೆ: ಸ್ನೇಹಮಯಿ ಕೃಷ್ಣ
ಮುಡಾ ಪ್ರಕರಣದಲ್ಲಿ ಲೋಕಾಯುಕ್ತವೇ ಅಪರಾಧಿ ಸ್ಥಾನದಲ್ಲಿದೆ: ಸ್ನೇಹಮಯಿ ಕೃಷ್ಣ
ಮಹಾರಾಜನಾಗಿ ದರ್ಪ ತೋರಿದ್ರು; ಉಳಿದವರ ಉಪವಾಸ ಕೆಡವಿ ತಾನು ಊಟ ಮಾಡಿದ ಮಂಜು
ಮಹಾರಾಜನಾಗಿ ದರ್ಪ ತೋರಿದ್ರು; ಉಳಿದವರ ಉಪವಾಸ ಕೆಡವಿ ತಾನು ಊಟ ಮಾಡಿದ ಮಂಜು
ಚಲಿಸುತ್ತಿದ್ದ ರೈಲಿನಿಂದ ಹಾರಿದ ಮಹಿಳೆಯ ಜೀವ ಉಳಿಸಿದ ರೈಲ್ವೆ ಪೊಲೀಸ್
ಚಲಿಸುತ್ತಿದ್ದ ರೈಲಿನಿಂದ ಹಾರಿದ ಮಹಿಳೆಯ ಜೀವ ಉಳಿಸಿದ ರೈಲ್ವೆ ಪೊಲೀಸ್
ಕಾರ್ತಿಕ ಮಾಸದ ಕೊನೆ ಸೋಮವಾರ ಶಿವನ ಆರಾಧನೆ ಹೇಗೆ ಮಾಡುವುದು? ತಿಳಿಯಿರಿ
ಕಾರ್ತಿಕ ಮಾಸದ ಕೊನೆ ಸೋಮವಾರ ಶಿವನ ಆರಾಧನೆ ಹೇಗೆ ಮಾಡುವುದು? ತಿಳಿಯಿರಿ