Atiq Ahmad: ಅವರು ನನ್ನನ್ನು ಕೊಲ್ಲಲು ಬಯಸುತ್ತಾರೆ, ನನಗೆ ಜೀವ ಬೆದರಿಕೆ ಇದೆ ಎಂದ ಗ್ಯಾಂಗ್​​ಸ್ಟರ್ ಅತೀಕ್ ಅಹ್ಮದ್

|

Updated on: Apr 11, 2023 | 5:23 PM

ಅತೀಕ್ ಅಹ್ಮದ್​​ನ್ನು ಎಂಪಿ/ಎಂಎಲ್ಎ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ವಕೀಲ ಉಮೇಶ್ ಪಾಲ್ ಅವರ ಅಪಹರಣ ಪ್ರಕರಣದಲ್ಲಿ ಅತೀಕ್ ಮತ್ತು ಇತರ ಇಬ್ಬರಿಗೆ ಕಠಿಣ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ.

Atiq Ahmad: ಅವರು ನನ್ನನ್ನು ಕೊಲ್ಲಲು ಬಯಸುತ್ತಾರೆ, ನನಗೆ ಜೀವ ಬೆದರಿಕೆ ಇದೆ ಎಂದ ಗ್ಯಾಂಗ್​​ಸ್ಟರ್ ಅತೀಕ್ ಅಹ್ಮದ್
ಅತೀಕ್ ಅಹ್ಮದ್
Follow us on

ಅಹಮದಾಬಾದ್‌ನ (Ahmedabad) ಸಬರಮತಿ ಜೈಲಿನಿಂದ ಉತ್ತರ ಪ್ರದೇಶ ಪೊಲೀಸ್ ಸಿಬ್ಬಂದಿ ತಂಡ ಪ್ರಯಾಗ್‌ರಾಜ್‌ಗೆ ಕರೆದೊಯ್ಯುತ್ತಿರುವಾಗ ಗ್ಯಾಂಗ್‌ಸ್ಟರ್-ರಾಜಕಾರಣಿ ಅತೀಕ್ ಅಹ್ಮದ್ (Atiq Ahmad) ತನಗೆ ಜೀವ ಬೆದರಿಕೆ ಇದೆ ಎಂದು ಮತ್ತೊಮ್ಮೆ ಹೇಳಿದ್ದಾರೆ. ಇದು ಸರಿಯಲ್ಲ. ಅವರು ನನ್ನನ್ನು ಕೊಲ್ಲಲು ಬಯಸುತ್ತಾರೆ ಎಂದು ಯುಪಿ ಪೊಲೀಸ್ ವ್ಯಾನ್‌ನಲ್ಲಿ ಕರೆದೊಯ್ಯುವಾಗ ಅತೀಕ್ ಅಹ್ಮದ್ ಹೇಳಿದ್ದಾರೆ. ಉಮೇಶ್ ಪಾಲ್ ಹತ್ಯೆ ಪ್ರಕರಣದ ವಿಚಾರಣೆಗೆ ಸಂಬಂಧಿಸಿದಂತೆ ರಾಜಕಾರಣಿ ಅತೀಕ್ ಅಹ್ಮದ್​​ನ್ನು ಪ್ರಯಾಗ್‌ರಾಜ್‌ಗೆ ಕರೆದೊಯ್ಯಲಾಗುತ್ತಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಯಾಗ್‌ರಾಜ್ ನ್ಯಾಯಾಲಯ ಬಿ ವಾರೆಂಟ್ ಜಾರಿ ಮಾಡಿದೆ.  ಇದಕ್ಕೂ ಮುನ್ನ ಅಹ್ಮದ್‌ನನ್ನು ಬಿಗಿ ಭದ್ರತೆಯ ನಡುವೆ ಮಾರ್ಚ್ 28 ರಂದು ಸಬರಮತಿ ಜೈಲಿನಿಂದ ಪ್ರಯಾಗ್‌ರಾಜ್‌ಗೆ ಕರೆತರಲಾಯಿತು. ಅವರನ್ನು ಎಂಪಿ/ಎಂಎಲ್ಎ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ವಕೀಲ ಉಮೇಶ್ ಪಾಲ್ ಅವರ ಅಪಹರಣ ಪ್ರಕರಣದಲ್ಲಿ ಅತೀಕ್ ಮತ್ತು ಇತರ ಇಬ್ಬರಿಗೆ ಕಠಿಣ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಪಾಲ್ ಕುಟುಂಬಕ್ಕೆ ₹ 1 ಲಕ್ಷ ಪರಿಹಾರ ನೀಡುವಂತೆ ಅಪರಾಧಿಗಳಿಗೆ ಆದೇಶಿಸಲಾಗಿದೆ.

2005ರಲ್ಲಿ ಬಹುಜನ ಸಮಾಜ ಪಕ್ಷದ ಶಾಸಕ ರಾಜು ಪಾಲ್ ಅವರ ಹತ್ಯೆಯ ಸಾಕ್ಷಿ ಉಮೇಶ್ ಪಾಲ್ ಅವರನ್ನು ಫೆಬ್ರವರಿ 24 ರಂದು ಪ್ರಯಾಗರಾಜ್‌ನಲ್ಲಿ ಅವರ ಇಬ್ಬರು ಭದ್ರತಾ ಸಿಬ್ಬಂದಿಯೊಂದಿಗೆ ಗುಂಡಿಕ್ಕಿ ಕೊಲ್ಲಲಾಗಿತ್ತು.

2006ರಲ್ಲಿ ಅಹ್ಮದ್ ಮತ್ತು ಅವರ ಸಹಾಯಕರು ಉಮೇಶ್ ಪಾಲ್ ಅವರನ್ನು ಅಪಹರಿಸಿ ನ್ಯಾಯಾಲಯದಲ್ಲಿ ತಮ್ಮ ಪರವಾಗಿ ಹೇಳಿಕೆ ನೀಡುವಂತೆ ಒತ್ತಾಯಿಸಿದರು. ಈ ಸಂಬಂಧ ವಕೀಲರು ದೂರು ದಾಖಲಿಸಿದ್ದರು.

ಇದನ್ನೂ ಓದಿ: ಮೌನವಾಗಿ ಕುಳಿತು ಭಾರತದ ಸಮಸ್ಯೆಗಳನ್ನು ಪರಿಹರಿಸಲು ಸಾಧ್ಯವಿಲ್ಲ: ಕೇಂದ್ರ ವಿರುದ್ಧ ಸೋನಿಯಾ ಗಾಂಧಿ ವಾಗ್ದಾಳಿ

ಇತ್ತೀಚಿನ ಉಮೇಶ್ ಪಾಲ್ ಹತ್ಯೆ ಪ್ರಕರಣ ಸೇರಿದಂತೆ 100ಕ್ಕೂ ಹೆಚ್ಚು ಕ್ರಿಮಿನಲ್ ಪ್ರಕರಣಗಳಲ್ಲಿ ಅಹ್ಮದ್ ಹೆಸರು ಇದೆ ಎಂದು ಪೊಲೀಸರು ತಿಳಿಸಿದ್ದಾರೆ. ಕಳೆದ ತಿಂಗಳು, ತಾನು ಮತ್ತು ತನ್ನ ಕುಟುಂಬ ಸದಸ್ಯರನ್ನು ಕೊಲೆ ಪ್ರಕರಣದಲ್ಲಿ ತಪ್ಪಾಗಿ ಸಿಲುಕಿಸಲಾಗಿದೆ. ಪಾಲ್ ಉತ್ತರ ಪ್ರದೇಶ ಪೊಲೀಸರು ನಕಲಿ ಎನ್‌ಕೌಂಟರ್‌ನಲ್ಲಿ ಕೊಲ್ಲಲ್ಪಟ್ಟಿರಬಹುದು ಎಂದು ಆರೋಪಿಸಿ ರಕ್ಷಣೆಗಾಗಿ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:55 pm, Tue, 11 April 23