Atiq Ahmad Death: ಅತೀಕ್ ಅಹ್ಮದ್, ಅಶ್ರಫ್ ಹತ್ಯೆ ಬಳಿಕ ಸಿಎಂ ಯೋಗಿ ಅಧಿಕಾರಿಗಳಿಗೆ ನೀಡಿದ ಸೂಚನೆ ಏನು?

ಉತ್ತರ ಪ್ರದೇಶದ ಪ್ರಯಾಗರಾಜ್‌ನಲ್ಲಿ ಅತೀಕ್ ಅಹ್ಮದ್ (Atiq Ahmad) )ಮತ್ತು ಅಶ್ರಫ್ ಅಹ್ಮದ್ ಹತ್ಯೆಯ ನಂತರ  ಸಿಎಂ ಯೋಗಿ ಆದಿತ್ಯನಾಥ್ (Yogi Adityanath) ಹಿರಿಯ ಅಧಿಕಾರಿಗಳಿಗೆ ಕೆಲವು ಸೂಚನೆಗಳನ್ನು ನೀಡಿದ್ದಾರೆ.

Atiq Ahmad Death: ಅತೀಕ್ ಅಹ್ಮದ್, ಅಶ್ರಫ್ ಹತ್ಯೆ ಬಳಿಕ ಸಿಎಂ ಯೋಗಿ ಅಧಿಕಾರಿಗಳಿಗೆ ನೀಡಿದ ಸೂಚನೆ ಏನು?
ಅತೀಕ್ ಅಹ್ಮದ್

Updated on: Apr 16, 2023 | 9:03 AM

ಉತ್ತರ ಪ್ರದೇಶದ ಪ್ರಯಾಗರಾಜ್‌ನಲ್ಲಿ ಅತೀಕ್ ಅಹ್ಮದ್ (Atiq Ahmad) )ಮತ್ತು ಅಶ್ರಫ್ ಅಹ್ಮದ್ ಹತ್ಯೆಯ ನಂತರ  ಸಿಎಂ ಯೋಗಿ ಆದಿತ್ಯನಾಥ್
(Yogi Adityanath) ಹಿರಿಯ ಅಧಿಕಾರಿಗಳಿಗೆ ಕೆಲವು ಸೂಚನೆಗಳನ್ನು ನೀಡಿದ್ದಾರೆ. ಎನ್​ಕೌಂಟರ್​ ನಡೆದ ಪ್ರದೇಶಕ್ಕೆ ತೆರಳುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಪ್ರಯಾಗ್‌ರಾಜ್‌ಗೆ ತೆರಳುವಂತೆ ಗೃಹ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸಂಜಯ್ ಪ್ರಸಾದ್ ಅವರಿಗೆ ಸಿಎಂ ಸೂಚನೆ ನೀಡಿದ್ದಾರೆ. ಈಗ ಗೃಹ ಪ್ರಧಾನ ಕಾರ್ಯದರ್ಶಿ ಸಂಜಯ್ ಪ್ರಸಾದ್ ಅವರು ಪ್ರಯಾಗ್‌ರಾಜ್‌ನಲ್ಲಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಇದಕ್ಕೂ ಮುನ್ನ ಡಿಜಿ ಪ್ರಶಾಂತ್ ಕುಮಾರ್ ಕೂಡ ಸಿಎಂ ಯೋಗಿ ಅವರ ಅಧಿಕೃತ ನಿವಾಸದಲ್ಲಿ ಚರ್ಚಿಸಿದರು. ಅತೀಕ್ ಮತ್ತು ಅಶ್ರಫ್ ಹತ್ಯೆಗೆ ಸಂಬಂಧಿಸಿದ ಬೆಳವಣಿಗೆಗಳು ಮತ್ತು ಪ್ರಸ್ತುತ ಪರಿಸ್ಥಿತಿಯ ಬಗ್ಗೆ ಡಿಜಿ ಸಿಎಂ ಯೋಗಿ ಅವರಿಗೆ ವಿವರಿಸಿದರು ಎಂದು ತಿಳಿದುಬಂದಿದೆ.

ಅತೀಕ್ ಮತ್ತು ಅಶ್ರಫ್ ಹತ್ಯೆಯ ನಂತರ, ಪ್ರಯಾಗ್ರಾಜ್ನಲ್ಲಿ ಸೆಕ್ಷನ್ 144 ಅನ್ನು ವಿಧಿಸಲಾಗಿದೆ. ಇದಲ್ಲದೇ ಸುತ್ತಮುತ್ತಲ ಜಿಲ್ಲೆಗಳಿಂದಲೂ ಪಡೆ ಕರೆಸಿಕೊಳ್ಳಲಾಗಿದೆ. ಇದರೊಂದಿಗೆ PAC ಮತ್ತು RAF ಪಡೆಗಳನ್ನು ಸಹ ನಿಯೋಜಿಸಲಾಗಿದೆ. ಇದಲ್ಲದೇ ಜಿಲ್ಲೆಯ ಗಡಿಯನ್ನು ಮುಚ್ಚಲಾಗಿದೆ.
ಕೂಡಲೇ ಉನ್ನತ ಮಟ್ಟದ ಸಭೆ ಕರೆದು ಇಡೀ ಪ್ರಕರಣದ ಕುರಿತು ಉನ್ನತ ಮಟ್ಟದ ತನಿಖೆಗೆ ಆದೇಶಿಸಿದ್ದಾರೆ. ಮೂವರು ಸದಸ್ಯರ ನ್ಯಾಯಾಂಗ ಆಯೋಗ (ನ್ಯಾಯಾಂಗ ವಿಚಾರಣಾ ಆಯೋಗ) ರಚನೆಗೂ ಮುಖ್ಯಮಂತ್ರಿ ಸೂಚನೆ ನೀಡಿದರು. ಮೂವರು ದಾಳಿಕೋರರು ಸ್ಥಳದಲ್ಲೇ ಸಿಕ್ಕಿಬಿದ್ದಿದ್ದಾರೆ. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಮತ್ತಷ್ಟು ಓದಿ:  Atiq Ahmad: ಉತ್ತರಪ್ರದೇಶದ ಮಾಫಿಯಾ ಡಾನ್‌ ಅತೀಕ್ ಅಹ್ಮದ್‌ ಮತ್ತು ಸಹೋದರನನ್ನು ಗುಂಡಿಕ್ಕಿ ಹತ್ಯೆ; ಮೂವರು ಅರೆಸ್ಟ್

ಶನಿವಾರ ರಾತ್ರಿ ಪ್ರಯಾಗ್‌ರಾಜ್‌ನ ಮೆಡಿಕಲ್ ಕಾಲೇಜ್ ಬಳಿ ಗ್ಯಾಂಗ್‌ಸ್ಟರ್-ರಾಜಕಾರಣಿ ಅತೀಕ್ ಅಹ್ಮದ್ ಮತ್ತು ಅವರ ಸಹೋದರ ಅಶ್ರಫ್ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದು, ಇಬ್ಬರೂ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಗುಂಡು ತಗುಲಿದ ಅಹ್ಮದ್ ಮತ್ತು ಅಶ್ರಫ್ ಅವರನ್ನು ಪೊಲೀಸರು ಸ್ಥಳದಿಂದ ಕರೆದೊಯ್ದಿರುವುದು ಕಂಡುಬಂದಿದೆ.

2005ರ ಉಮೇಶ್ ಪಾಲ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ವಿಚಾರಣೆಗಾಗಿ ಇಬ್ಬರನ್ನೂ ಇಲ್ಲಿಗೆ ಕರೆತರಲಾಗಿತ್ತು. ಏಪ್ರಿಲ್ 13 ರಂದು, ಝಾನ್ಸಿಯಲ್ಲಿ ಪೊಲೀಸ್ ಎನ್‌ಕೌಂಟರ್‌ನಲ್ಲಿ ಅಹ್ಮದ್ ಅವರ ಮಗ ಮತ್ತು ಅವರ ಸಹಚರರೊಬ್ಬರನ್ನು ಹತ್ಯೆ ಮಾಡಲಾಗಿತ್ತು.

ಅತೀಕ್ ಅಹ್ಮದ್ ಹತ್ಯೆ
-ಅತೀಕ್ ಅಹ್ಮದ್ ಹಾಗೂ ಸಹೋದರ ಅಶ್ರಫ್​ ಅವರನ್ನು ತಪಾಸಣೆಗಾಗಿ ವೈದ್ಯಕೀಯ ಕಾಲೇಜಿಗೆ ಕರೆದೊಯ್ಯುತ್ತಿದ್ದಾಗ, ಪತ್ರಕರ್ತರಂತೆ ನಟಿಸುತ್ತಿದ್ದ ಮೂವರಿಂದ ಗುಂಡಿನ ದಾಳಿ ನಡೆದಿದ್ದು, ಅತೀಶ್​ ಹಾಗೂ ಅಶ್ರಫ್ ಸ್ಥಳದಲ್ಲೇ ಸಾವನ್ನಪ್ಪಿದ್ದರು.

-ಹತ್ಯೆಯ ಸಂದರ್ಭದಲ್ಲಿ ಇಬ್ಬರ ಕೈಯಲ್ಲೂ ಕೋಳವಿತ್ತು.

-ಮೂವರು ಆರೋಪಿಗಳನ್ನು ಅರುಣ್ ಮೌರ್ಯ, ಲವಲೇಶ್ ತಿವಾರಿ ಮತ್ತು ಸನ್ನಿ ಎಂದು ಗುರುತಿಸಲಾಗಿದೆ ಎಂದು ಪೊಲೀಸರು ವರದಿಯಲ್ಲಿ ತಿಳಿಸಿದ್ದಾರೆ.

-ತಡರಾತ್ರಿಯ ಸಭೆಯಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ರಾಜ್ಯ ಪೊಲೀಸ್ ಅಧಿಕಾರಿಗಳಿಗೆ ಹೆಚ್ಚಿನ ಜಾಗರೂಕರಾಗಿರಲು ಮತ್ತು ರಾಜ್ಯಾದ್ಯಂತ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವುದನ್ನು ಖಚಿತಪಡಿಸಿಕೊಳ್ಳಲು ಸೂಚನೆ ನೀಡಿದರು.

-ಘಟನೆಯ ಬಗ್ಗೆ ವದಂತಿಗಳಿಗೆ ಯಾರೂ ಕೂಡ ಕಿವಿಕೊಡಬಾರದು ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿದರು.

-ಮುಖ್ಯಮಂತ್ರಿಯವರ ನಿವಾಸದಲ್ಲಿ ನಡೆದ ಸಭೆಯಲ್ಲಿ ಯುಪಿ ಗೃಹ ಕಾರ್ಯದರ್ಶಿ ಸಂಜಯ್ ಪ್ರಸಾದ್, ಯುಪಿ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಆರ್ ಕೆ ವಿಶ್ವಕರ್ಮ ಮತ್ತು ಇತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

-ಪ್ರಯಾಗ್‌ರಾಜ್ ಘಟನೆಗೆ ಸಂಬಂಧಿಸಿದ ಆನ್‌ಲೈನ್ ಪೋಸ್ಟ್‌ಗಳನ್ನು ಮೇಲ್ವಿಚಾರಣೆ ಮಾಡಲು ಮತ್ತು ಈ ನಿಟ್ಟಿನಲ್ಲಿ ಆಕ್ಷೇಪಾರ್ಹ ವಿಷಯವನ್ನು ಪೋಸ್ಟ್ ಮಾಡುವ ಜನರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವಂತೆ ಪೊಲೀಸ್ ಅಧಿಕಾರಿಗಳಿಗೆ ತಿಳಿಸಿದ್ದಾರೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us