AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Atishi Swearing-in Ceremony: ದೆಹಲಿ ನೂತನ ಮುಖ್ಯಮಂತ್ರಿಯಾಗಿ ಅತಿಶಿ ಪ್ರಮಾಣ ವಚನ ಸ್ವೀಕಾರ

ದೆಹಲಿಯ ಮುಖ್ಯಮಂತ್ರಿಯಾಗಿ ಆಮ್ ಆದ್ಮಿ ಪಕ್ಷದ (ಎಎಪಿ) ಹಿರಿಯ ನಾಯಕಿ ಅತಿಶಿ ಇಂದು (ಶನಿವಾರ) ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಆಪಾದಿತ ಅಬಕಾರಿ ನೀತಿ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ನಿಂದ ಜಾಮೀನು ಪಡೆದ ನಂತರ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಅರವಿಂದ್ ಕೇಜ್ರಿವಾಲ್ ಅವರ ಬದಲಿಗೆ ಇಂದು ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ ಅತಿಶಿ ದೆಹಲಿ ಇತಿಹಾಸದಲ್ಲೇ ಅತ್ಯಂತ ಕಿರಿಯ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

Atishi Swearing-in Ceremony: ದೆಹಲಿ ನೂತನ ಮುಖ್ಯಮಂತ್ರಿಯಾಗಿ ಅತಿಶಿ ಪ್ರಮಾಣ ವಚನ ಸ್ವೀಕಾರ
ಅತಿಶಿ ಪ್ರಮಾಣ ವಚನ ಸ್ವೀಕಾರ
ಸುಷ್ಮಾ ಚಕ್ರೆ
|

Updated on:Sep 21, 2024 | 5:04 PM

Share

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ಆಮ್ ಆದ್ಮಿ ಪಕ್ಷದ ನಾಯಕಿ ಅತಿಶಿ ಇಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಅಬಕಾರಿ ನೀತಿ ಹಗರಣದಲ್ಲಿ ಬಂಧಿತರಾಗಿರುವ ಆಮ್ ಆದ್ಮಿ ಪಕ್ಷದ ರಾಷ್ಟ್ರಾಧ್ಯಕ್ಷ ಅರವಿಂದ್ ಕೇಜ್ರಿವಾಲ್ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ. ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಅತಿಶಿ ಅವರನ್ನು ದೆಹಲಿಯ ಮುಂದಿನ ಸಿಎಂ ಎಂದು ಘೋಷಿಸಲಾಗಿತ್ತು. ಅತಿಶಿ ದೆಹಲಿಯ ಮೂರನೇ ಮಹಿಳಾ ಮುಖ್ಯಮಂತ್ರಿಯಾಗಿದ್ದು, ದೆಹಲಿಯ ಅತಿ ಕಿರಿಯ ವಯಸ್ಸಿನ ಸಿಎಂ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ.

ತಿಹಾರ್ ಜೈಲಿನಿಂದ ಜಾಮೀನಿನ ಮೇಲೆ ಬಿಡುಗಡೆಯಾದ ಅರವಿಂದ್ ಕೇಜ್ರಿವಾಲ್ ಅಚ್ಚರಿಯ ನಿರ್ಧಾರ ತೆಗೆದುಕೊಂಡಿದ್ದರು. ದೆಹಲಿ ಮುಖ್ಯಮಂತ್ರಿ ಸ್ಥಾನಕ್ಕೆ ಅವರು ದಿಢೀರನೆ ರಾಜೀನಾಮೆ ನೀಡಿದ್ದರು. ಅದಾದ ಬಳಿಕ ಅತಿಶಿ ಅವರನ್ನು ದೆಹಲಿ ಮುಖ್ಯಮಂತ್ರಿಯಾಗಿ ಘೋಷಣೆ ಮಾಡಲಾಗಿತ್ತು. ಅತಿಶಿ ಇಂದು ದೆಹಲಿಯ ರಾಜ್ ನಿವಾಸದಲ್ಲಿ ನಡೆದ ಸಮಾರಂಭದಲ್ಲಿ ನೂತನ ಸಚಿವ ಸಂಪುಟದ ಸಮ್ಮುಖದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ದೆಹಲಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವ ಮುನ್ನ ಅತಿಶಿ ಕೇಜ್ರಿವಾಲ್ ನಿವಾಸಕ್ಕೆ ತೆರಳಿದ್ದರು.

ಇದನ್ನೂ ಓದಿ: Atishi Marlena: ದೆಹಲಿಯ ನೂತನ ಮುಖ್ಯಮಂತ್ರಿಯಾಗಿರುವ ಅತಿಶಿ ಮಾರ್ಲೆನಾ ಯಾರು?

ಅತಿಶಿ ದೆಹಲಿಯ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಸೌರಭ್ ಭಾರದ್ವಾಜ್ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಸುಷ್ಮಾ ಸ್ವರಾಜ್ ಮತ್ತು ಶೀಲಾ ದೀಕ್ಷಿತ್ ಅವರ ಬಳಿಕ ದೆಹಲಿಯ ಮೂರನೇ ಮಹಿಳಾ ಮುಖ್ಯಮಂತ್ರಿಯೆಂಬ ಹೆಗ್ಗಳಿಕೆಗೆ ಅತಿಶಿ ಪಾತ್ರರಾಗಿದ್ದಾರೆ. ಹಾಗೇ, ತಮ್ಮ 43ನೇ ವಯಸ್ಸಿನಲ್ಲೇ ಮುಖ್ಯಮಂತ್ರಿ ಹುದ್ದೆಗೇರಿರುವ ಅವರು ದೆಹಲಿಯ ಅತಿ ಕಿರಿಯ ಮುಖ್ಯಮಂತ್ರಿಯೂ ಆಗಿದ್ದಾರೆ.

ಎಎಪಿಯ ಪ್ರಮುಖ ನಾಯಕಿಯಾಗಿ, ಮಾಜಿ ಶಿಕ್ಷಣ ಸಚಿವ ಮನೀಶ್ ಸಿಸೋಡಿಯಾ ಅವರ ಸಲಹೆಗಾರರಾಗಿ ಸೇವೆ ಸಲ್ಲಿಸಿದ ಅತಿಶಿ ದೆಹಲಿಯ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಣವನ್ನು ಸುಧಾರಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಹಿಂದಿನ ಕೇಜ್ರಿವಾಲ್ ಆಡಳಿತದಲ್ಲಿ ಅತಿಶಿ ಅವರು ಹಣಕಾಸು, ಕಂದಾಯ, ಲೋಕೋಪಯೋಗಿ ಇಲಾಖೆ (PWD), ವಿದ್ಯುತ್ ಮತ್ತು ಶಿಕ್ಷಣ ಸೇರಿದಂತೆ ವ್ಯಾಪಕ ಶ್ರೇಣಿಯ ಪೋರ್ಟ್‌ಫೋಲಿಯೊಗಳಿಗೆ ಜವಾಬ್ದಾರರಾಗಿದ್ದರು.

ಇದನ್ನೂ ಓದಿ: ಅತಿಶಿ ನೇತೃತ್ವದ ಸಚಿವ ಸಂಪುಟದಲ್ಲಿರಲಿದ್ದಾರೆ ಕೇಜ್ರಿವಾಲ್ ಸರ್ಕಾರದಲ್ಲಿದ್ದ ನಾಲ್ವರು ಸಚಿವರು

ಮುಂದಿನ ವರ್ಷ (2025) ಫೆಬ್ರವರಿಯಲ್ಲಿ ದೆಹಲಿಯಲ್ಲಿ ವಿಧಾನಸಭಾ ಚುನಾವಣೆ ನಡೆಯಲಿರುವ ಕಾರಣ ಅತಿಶಿ ಸರ್ಕಾರದ ಅಧಿಕಾರಾವಧಿಯು ಕಡಿಮೆ ಅವಧಿಯದ್ದಾಗಿರುತ್ತದೆ. ಹೀಗಾಗಿ, ಬಾಲಿ ಇರುವ ಅಲ್ಪ ಸಮಯದಲ್ಲಿ ಅತಿಶಿ ಯಾವ ರೀತಿ ತಮ್ಮ ಸರ್ಕಾರದ ಯೋಜನೆಗಳ ಮೂಲಕ ಜನರನ್ನು ತಲುಪುತ್ತಾರೆ ಎಂಬುದು ಕುತೂಹಲಕಾರಿಯಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:54 pm, Sat, 21 September 24

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ