ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ಆಮ್ ಆದ್ಮಿ ಪಕ್ಷದ ನಾಯಕಿ ಅತಿಶಿ ಇಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಅಬಕಾರಿ ನೀತಿ ಹಗರಣದಲ್ಲಿ ಬಂಧಿತರಾಗಿರುವ ಆಮ್ ಆದ್ಮಿ ಪಕ್ಷದ ರಾಷ್ಟ್ರಾಧ್ಯಕ್ಷ ಅರವಿಂದ್ ಕೇಜ್ರಿವಾಲ್ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ. ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಅತಿಶಿ ಅವರನ್ನು ದೆಹಲಿಯ ಮುಂದಿನ ಸಿಎಂ ಎಂದು ಘೋಷಿಸಲಾಗಿತ್ತು. ಅತಿಶಿ ದೆಹಲಿಯ ಮೂರನೇ ಮಹಿಳಾ ಮುಖ್ಯಮಂತ್ರಿಯಾಗಿದ್ದು, ದೆಹಲಿಯ ಅತಿ ಕಿರಿಯ ವಯಸ್ಸಿನ ಸಿಎಂ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ.
ತಿಹಾರ್ ಜೈಲಿನಿಂದ ಜಾಮೀನಿನ ಮೇಲೆ ಬಿಡುಗಡೆಯಾದ ಅರವಿಂದ್ ಕೇಜ್ರಿವಾಲ್ ಅಚ್ಚರಿಯ ನಿರ್ಧಾರ ತೆಗೆದುಕೊಂಡಿದ್ದರು. ದೆಹಲಿ ಮುಖ್ಯಮಂತ್ರಿ ಸ್ಥಾನಕ್ಕೆ ಅವರು ದಿಢೀರನೆ ರಾಜೀನಾಮೆ ನೀಡಿದ್ದರು. ಅದಾದ ಬಳಿಕ ಅತಿಶಿ ಅವರನ್ನು ದೆಹಲಿ ಮುಖ್ಯಮಂತ್ರಿಯಾಗಿ ಘೋಷಣೆ ಮಾಡಲಾಗಿತ್ತು. ಅತಿಶಿ ಇಂದು ದೆಹಲಿಯ ರಾಜ್ ನಿವಾಸದಲ್ಲಿ ನಡೆದ ಸಮಾರಂಭದಲ್ಲಿ ನೂತನ ಸಚಿವ ಸಂಪುಟದ ಸಮ್ಮುಖದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ದೆಹಲಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವ ಮುನ್ನ ಅತಿಶಿ ಕೇಜ್ರಿವಾಲ್ ನಿವಾಸಕ್ಕೆ ತೆರಳಿದ್ದರು.
#WATCH | AAP leader Atishi takes oath as Chief Minister of Delhi pic.twitter.com/R1iomGAaS9
— ANI (@ANI) September 21, 2024
ಇದನ್ನೂ ಓದಿ: Atishi Marlena: ದೆಹಲಿಯ ನೂತನ ಮುಖ್ಯಮಂತ್ರಿಯಾಗಿರುವ ಅತಿಶಿ ಮಾರ್ಲೆನಾ ಯಾರು?
ಅತಿಶಿ ದೆಹಲಿಯ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಸೌರಭ್ ಭಾರದ್ವಾಜ್ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಸುಷ್ಮಾ ಸ್ವರಾಜ್ ಮತ್ತು ಶೀಲಾ ದೀಕ್ಷಿತ್ ಅವರ ಬಳಿಕ ದೆಹಲಿಯ ಮೂರನೇ ಮಹಿಳಾ ಮುಖ್ಯಮಂತ್ರಿಯೆಂಬ ಹೆಗ್ಗಳಿಕೆಗೆ ಅತಿಶಿ ಪಾತ್ರರಾಗಿದ್ದಾರೆ. ಹಾಗೇ, ತಮ್ಮ 43ನೇ ವಯಸ್ಸಿನಲ್ಲೇ ಮುಖ್ಯಮಂತ್ರಿ ಹುದ್ದೆಗೇರಿರುವ ಅವರು ದೆಹಲಿಯ ಅತಿ ಕಿರಿಯ ಮುಖ್ಯಮಂತ್ರಿಯೂ ಆಗಿದ್ದಾರೆ.
PHOTO | AAP leaders Atishi (@AtishiAAP), Gopal Rai (@AapKaGopalRai), Saurabh Bharadwaj (@Saurabh_MLAgk) and others met party national convener Arvind Kejriwal (@ArvindKejriwal) at his residence in Delhi. Atishi is scheduled to take oath as Delhi CM shortly.
(Image Source: Third… pic.twitter.com/px3YM4SV1L
— Press Trust of India (@PTI_News) September 21, 2024
ಎಎಪಿಯ ಪ್ರಮುಖ ನಾಯಕಿಯಾಗಿ, ಮಾಜಿ ಶಿಕ್ಷಣ ಸಚಿವ ಮನೀಶ್ ಸಿಸೋಡಿಯಾ ಅವರ ಸಲಹೆಗಾರರಾಗಿ ಸೇವೆ ಸಲ್ಲಿಸಿದ ಅತಿಶಿ ದೆಹಲಿಯ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಣವನ್ನು ಸುಧಾರಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಹಿಂದಿನ ಕೇಜ್ರಿವಾಲ್ ಆಡಳಿತದಲ್ಲಿ ಅತಿಶಿ ಅವರು ಹಣಕಾಸು, ಕಂದಾಯ, ಲೋಕೋಪಯೋಗಿ ಇಲಾಖೆ (PWD), ವಿದ್ಯುತ್ ಮತ್ತು ಶಿಕ್ಷಣ ಸೇರಿದಂತೆ ವ್ಯಾಪಕ ಶ್ರೇಣಿಯ ಪೋರ್ಟ್‌ಫೋಲಿಯೊಗಳಿಗೆ ಜವಾಬ್ದಾರರಾಗಿದ್ದರು.
ಇದನ್ನೂ ಓದಿ: ಅತಿಶಿ ನೇತೃತ್ವದ ಸಚಿವ ಸಂಪುಟದಲ್ಲಿರಲಿದ್ದಾರೆ ಕೇಜ್ರಿವಾಲ್ ಸರ್ಕಾರದಲ್ಲಿದ್ದ ನಾಲ್ವರು ಸಚಿವರು
ಮುಂದಿನ ವರ್ಷ (2025) ಫೆಬ್ರವರಿಯಲ್ಲಿ ದೆಹಲಿಯಲ್ಲಿ ವಿಧಾನಸಭಾ ಚುನಾವಣೆ ನಡೆಯಲಿರುವ ಕಾರಣ ಅತಿಶಿ ಸರ್ಕಾರದ ಅಧಿಕಾರಾವಧಿಯು ಕಡಿಮೆ ಅವಧಿಯದ್ದಾಗಿರುತ್ತದೆ. ಹೀಗಾಗಿ, ಬಾಲಿ ಇರುವ ಅಲ್ಪ ಸಮಯದಲ್ಲಿ ಅತಿಶಿ ಯಾವ ರೀತಿ ತಮ್ಮ ಸರ್ಕಾರದ ಯೋಜನೆಗಳ ಮೂಲಕ ಜನರನ್ನು ತಲುಪುತ್ತಾರೆ ಎಂಬುದು ಕುತೂಹಲಕಾರಿಯಾಗಿದೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 4:54 pm, Sat, 21 September 24