ಸೆಪ್ಟೆಂಬರ್ 21ರಂದು ದೆಹಲಿ ಸಿಎಂ ಆಗಿ ಅತಿಶಿ ಪ್ರಮಾಣವಚನ ಸ್ವೀಕಾರ
ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ.ಕೆ ಸಕ್ಸೇನಾ ಅವರು ನಿರ್ಗಮಿತ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ರಾಜೀನಾಮೆ ಪತ್ರವನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ರವಾನಿಸಿದ್ದಾರೆ. ಸೆಪ್ಟೆಂಬರ್ 21ರಂದು ತಮ್ಮ ಉತ್ತರಾಧಿಕಾರಿಯ ಪ್ರಮಾಣ ವಚನ ಸಮಾರಂಭದ ದಿನಾಂಕವನ್ನು ಕೇಜ್ರಿವಾಲ್ ಪ್ರಸ್ತಾಪಿಸಿದ್ದಾರೆ. ಅದರಂತೆ ಅತಿಶಿ ದೆಹಲಿ ನೂತನ ಮುಖ್ಯಮಂತ್ರಿಯಾಗಿ ಸೆ. 21ರಂದು ಅಧಿಕಾರ ಸ್ವೀಕರಿಸಲಿದ್ದಾರೆ.
ನವದೆಹಲಿ: ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕಿ ಮತ್ತು ದೆಹಲಿ ಸಚಿವೆ ಅತಿಶಿ ಅವರು ಸೆಪ್ಟೆಂಬರ್ 21ರಂದು ದೆಹಲಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ಕಾರ್ಯಕ್ರಮವು ದೆಹಲಿ ಸರ್ಕಾರದಲ್ಲಿ ಅವರ ಮುಂದುವರಿದ ಪಾತ್ರವನ್ನು ಅಧಿಕೃತಗೊಳಿಸುತ್ತದೆ ಮತ್ತು ಪಕ್ಷದೊಳಗೆ ಅವರ ಸ್ಥಾನವನ್ನು ಇನ್ನಷ್ಟು ಬಲಪಡಿಸುತ್ತದೆ.
ಇಂಡಿಯಾ ಟುಡೇ ಮೂಲಗಳ ಪ್ರಕಾರ, ಹೊಸ ಸರ್ಕಾರ ರಚನೆಗಾಗಿ ಅತಿಶಿ ಅವರು ಎಲ್‌ಜಿಗೆ ಬರೆದ ಪತ್ರದಲ್ಲಿ ಪ್ರಮಾಣ ವಚನ ಸಮಾರಂಭಕ್ಕೆ ಯಾವುದೇ ಆದ್ಯತೆಯ ದಿನಾಂಕವನ್ನು ನಮೂದಿಸಿಲ್ಲ. ತನ್ನ ಕ್ಯಾಬಿನೆಟ್ ಸಚಿವರ ಹೆಸರನ್ನು ನಂತರ ಸಲ್ಲಿಸುವುದಾಗಿ ಅವರು ಹೇಳಿದ್ದಾರೆ. ಹೀಗಾಗಿ, ಅತಿಶಿ ಒಬ್ಬರೇ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ಹೆಚ್ಚಾಗಿದೆ.
ಇದನ್ನೂ ಓದಿ: ದೆಹಲಿಗೆ ಒಬ್ಬರೇ ಸಿಎಂ ಅದು ಅರವಿಂದ್ ಕೇಜ್ರಿವಾಲ್: ಅತಿಶಿ
ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ.ಕೆ. ಸಕ್ಸೇನಾ ಅವರು ಅರವಿಂದ್ ಕೇಜ್ರಿವಾಲ್ ಅವರ ರಾಜೀನಾಮೆಯ ನಂತರ ವಿ.ಕೆ. ಸಕ್ಸೇನಾ ಇಂದು ನಿಯೋಜಿತ ಮುಖ್ಯಮಂತ್ರಿ ಅತಿಶಿ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಸೆಪ್ಟೆಂಬರ್ 21ರಂದು ದಿನಾಂಕವನ್ನು ಪ್ರಸ್ತಾಪಿಸಿದ್ದಾರೆ. ಅರವಿಂದ್ ಕೇಜ್ರಿವಾಲ್ ಅವರ ರಾಜೀನಾಮೆ ಪತ್ರವನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ರವಾನಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಇದನ್ನೂ ಓದಿ: Atishi Marlena: ದೆಹಲಿಯ ನೂತನ ಮುಖ್ಯಮಂತ್ರಿಯಾಗಿರುವ ಅತಿಶಿ ಮಾರ್ಲೆನಾ ಯಾರು?
ಎಎಪಿ ಶಾಸಕಾಂಗ ಪಕ್ಷದ ನಾಯಕಿಯಾಗಿ ಅವಿರೋಧವಾಗಿ ಆಯ್ಕೆಯಾದ ಅತಿಶಿ ದೆಹಲಿಯ ಮೂರನೇ ಮಹಿಳಾ ಮುಖ್ಯಮಂತ್ರಿಯಾಗಲಿದ್ದಾರೆ. ಮುಂಬರುವ ದೆಹಲಿ ವಿಧಾನಸಭಾ ಚುನಾವಣೆಗೆ ಮುನ್ನ ಕಾರ್ಯತಂತ್ರದ ಕ್ರಮದಲ್ಲಿ ಅರವಿಂದ್ ಕೇಜ್ರಿವಾಲ್ ರಾಜೀನಾಮೆ ನೀಡಿದ ನಂತರ ಅವರು ನಾಯಕತ್ವವನ್ನು ವಹಿಸಿಕೊಂಡರು. ಅರವಿಂದ್ ಕೇಜ್ರಿವಾಲ್ ಮತ್ತು ಮನೀಶ್ ಸಿಸೋಡಿಯಾ ಅವರ ಆಪ್ತ ಮಿತ್ರರಾದ ಅತಿಶಿ ಅವರು ಅರವಿಂದ್ ಕೇಜ್ರಿವಾಲ್ ಅವರನ್ನು ಮತ್ತೆ ಸಿಎಂ ಆಗಿ ತರಲು ಪಣ ತೊಟ್ಟಿದ್ದಾರೆ. ಸೆಪ್ಟೆಂಬರ್ 26-27ರವರೆಗೆ ಅಧಿವೇಶನ ನಡೆಯಲಿದ್ದು, ದೆಹಲಿ ಅಸೆಂಬ್ಲಿಯಲ್ಲಿ ಅವರು ತಮ್ಮ ಸರ್ಕಾರದ ಬಹುಮತವನ್ನು ಸಾಬೀತುಪಡಿಸಬೇಕಾಗಿದೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ