Ayodhya: ರಾಮ ಜನ್ಮಭೂಮಿ ಮೇಲೆ ದಾಳಿಗೆ ಹೊಂಚು ಹಾಕಿದ್ದ ಉಗ್ರರ ಬಂಧನ; ಕಾಶ್ಮೀರ, ದೆಹಲಿಯಲ್ಲಿ ಹೈ ಅಲರ್ಟ್

Independence Day 2021: ಆ. 15ರಂದು ಭಾರತದ ಪ್ರಮುಖ ಸ್ಥಳಗಳ ಮೇಲೆ ಉಗ್ರರು ದಾಳಿ ನಡೆಸಲು ಹೊಂಚು ಹಾಕಿರುವುದರಿಂದ ಜಮ್ಮು ಕಾಶ್ಮೀರ ಮತ್ತು ದೆಹಲಿಯ ಸುತ್ತಮುತ್ತ ಹೈ ಅಲರ್ಟ್​ ಘೋಷಣೆ ಮಾಡಲಾಗಿದೆ.

Ayodhya: ರಾಮ ಜನ್ಮಭೂಮಿ ಮೇಲೆ ದಾಳಿಗೆ ಹೊಂಚು ಹಾಕಿದ್ದ ಉಗ್ರರ ಬಂಧನ; ಕಾಶ್ಮೀರ, ದೆಹಲಿಯಲ್ಲಿ ಹೈ ಅಲರ್ಟ್
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ಸುಷ್ಮಾ ಚಕ್ರೆ

Updated on:Aug 14, 2021 | 5:18 PM

ಶ್ರೀನಗರ: ನಾಳೆ ಭಾರತದ ಸ್ವಾತಂತ್ರ್ಯ ದಿನಾಚರಣೆ (Independence Day) . ಈ ಸಂಭ್ರಮವನ್ನು ಕರಾಳ ದಿನವನ್ನಾಗಿಸಬೇಕೆಂದು ಹೊಂಚು ಹಾಕಿದ್ದ ಉಗ್ರರು ಜಮ್ಮು ಕಾಶ್ಮೀರದ ಅಡಗುತಾಣದಲ್ಲಿ ಸಂಚು ರೂಪಿಸಿದ್ದರು. ದಿನದಂದು ಪಾಕಿಸ್ತಾನ ಮೂಲದ ಜೈಷ್-ಇ-ಮೊಹಮ್ಮದ್ (JeM) ಉಗ್ರ ಸಂಘಟನೆಯ ಆ ಅಡಗುತಾಣದ ಮೇಲೆ ದಾಳಿ ನಡೆಸಿರುವ ಜಮ್ಮು ಮತ್ತು ಕಾಶ್ಮೀರ ಪೊಲೀಸರು ನಾಲ್ವರು ಉಗ್ರರನ್ನು ಬಂಧಿಸಿದ್ದಾರೆ. ಈ ಉಗ್ರರು ದೆಹಲಿಯ ಪ್ರಮುಖ ಸ್ಮಾರಕಗಳು ಹಾಗೂ ಸ್ವಾತಂತ್ರ್ಯ ದಿನಾಚರಣೆ ನಡೆಯುವ ಜಾಗ, ಅಯೋಧ್ಯೆಯ ರಾಮ ಮಂದಿರ (Ram Temple in Ayodhya) ನಿರ್ಮಾಣವಾಗುತ್ತಿರುವ ಜಾಗದಲ್ಲಿ ಬಾಂಬ್ ಸ್ಫೋಟಿಸಲು ಸಂಚು ರೂಪಿಸಿದ್ದರು ಎನ್ನಲಾಗಿದೆ. ಆದರೆ, ಆ ಉಗ್ರರನ್ನು ಪೊಲೀಸರು ಬಂಧಿಸಿರುವುದರಿಂದ ಭಾರೀ ಅನಾಹುತವೊಂದು ತಪ್ಪಿದಂತಾಗಿದೆ. ಆ. 15ರಂದು ಭಾರತದ ಪ್ರಮುಖ ಸ್ಥಳಗಳ ಮೇಲೆ ಉಗ್ರರು ದಾಳಿ ನಡೆಸಲು ಹೊಂಚು ಹಾಕಿರುವುದರಿಂದ ಜಮ್ಮು ಕಾಶ್ಮೀರ ಮತ್ತು ದೆಹಲಿಯ ಸುತ್ತಮುತ್ತ ಹೈ ಅಲರ್ಟ್​ ಘೋಷಣೆ ಮಾಡಲಾಗಿದೆ.

ಜಮ್ಮುವಿನಲ್ಲಿದ್ದ ಜೈಷ್-ಇ-ಮೊಹಮ್ಮದ್ ಸಂಘಟನೆಯ ನಾಲ್ವರು ಉಗ್ರರು ಪಾಕಿಸ್ತಾನದ ಜೈಷ್ ಕಮಾಂಡರ್​ಗಳ ಜೊತೆ ನಿಕಟ ಸಂಪರ್ಕದಲ್ಲಿದ್ದಾರೆ ಎಂಬ ಮಾಹಿತಿ ಜಮ್ಮು ಕಾಶ್ಮೀರದ ಪೊಲೀಸರಿಗೆ ಲಭ್ಯವಾಗಿತ್ತು. ಆ ನಾಲ್ವರಲ್ಲಿ ಒಬ್ಬನಾದ ಇಜಾಹರ್ ಖಾನ್ ಉತ್ತರ ಪ್ರದೇಶದ ಶಾಮ್ಲಿಯವನಾಗಿದ್ದು, ಆತನನ್ನು ಅಯೋಧ್ಯೆಯ ರಾಮಜನ್ಮಭೂಮಿ ಹಾಗೂ ಪಾಣಿಪತ್ ಮೇಲೆ ದಾಳಿ ಮಾಡಲು ನಿಯೋಜನೆ ಮಾಡಲಾಗಿತ್ತು. ಆದರೆ, ಆ ಉಗ್ರರು ಅಯೋಧ್ಯೆ ಹಾಗೂ ದೆಹಲಿಯ ನಾನಾ ಭಾಗಗಳಲ್ಲಿ ದಾಳಿ ನಡೆಸುವ ಮೊದಲೇ ಜಮ್ಮು ಕಾಶ್ಮೀರದ ಪೊಲೀಸರನ್ನು ಅವರನ್ನು ಬಂಧಿಸಿದ್ದಾರೆ.

ಕಾಶ್ಮೀರದಲ್ಲಿದ್ದ ಜೈಷ್​-ಇ-ಮೊಹಮ್ಮದ್ ಅಡಗುತಾಣಗಳ ಮೇಲೆ ಇಂದು ಜಮ್ಮು ಮತ್ತು ಕಾಶ್ಮೀರ ಪೊಲೀಸರು ದಾಳಿ ನಡೆಸಿದ್ದು, ನಾಲ್ವರು ಉಗ್ರರನ್ನು ಬಂಧಿಸಿದ್ದಾರೆ. ಬಂಧಿತ ನಾಲ್ವರು ಉಗ್ರರು ಜೈಷ್-ಇ-ಮೊಹಮ್ಮದ್ ಉಗ್ರ ಸಂಘಟನೆಗೆ ಸೇರಿದವರಾಗಿದ್ದಾರೆ. ಈ ಉಗ್ರರು ಸ್ವಾತಂತ್ರ್ಯ ದಿನಾಚರಣೆಯ ದಿನದಂದು ದಾಳಿ ನಡೆಸಲು ಶಸ್ತ್ರಾಸ್ತ್ರಗಳನ್ನು ಸಂಗ್ರಹಿಸಿ ಡ್ರೋಣ್ ಮೂಲಕ ಕಾಶ್ಮೀರದಲ್ಲಿರುವ ಉಗ್ರರಿಗೆ ರವಾನಿಸುತ್ತಿದ್ದರು. ಈ ಹಿನ್ನೆಲೆಯಲ್ಲಿ ದೆಹಲಿಯಿಂದ ಜಮ್ಮು ಕಾಶ್ಮೀರದವರೆಗೆ ಭದ್ರತೆಯನ್ನು ಹೆಚ್ಚಿಸಲಾಗಿದೆ. ಭದ್ರತಾ ಪಡೆ ಸಿಬ್ಬಂದಿ ದೆಹಲಿಯ ಎಲ್ಲೆಡೆ ಬೀಡುಬಿಟ್ಟಿದ್ದಾರೆ. ಈ ಭಾಗಗಳಲ್ಲಿ ಡ್ರೋನ್​ಗಳನ್ನು ಹಾರಿಸದಂತೆ ಆದೇಶ ಹೊರಡಿಸಲಾಗಿದೆ.

ನಾಳೆಯ ಸ್ವಾತಂತ್ರ್ಯ ದಿನಾಚರಣೆಗೆ ಉಗ್ರರಿಂದ ಅಡ್ಡಿಯಾಗುವ ಆತಂಕ ಇರುವುದರಿಂದ ದೇಶದ ಐತಿಹಾಸಿಕ ಮತ್ತು ಧಾರ್ಮಿಕ ಸ್ಥಳಗಳಲ್ಲಿ ಮಫ್ತಿಯಲ್ಲಿರುವ ಪೊಲೀಸರನ್ನು ನಿಯೋಜಿಸಲಾಗಿದೆ. ಹಾಗೇ ಇಂದು ಸಂಜೆಯಿಂದ ದೆಹಲಿಯಲ್ಲಿ ಸೆಕ್ಷನ್ 144 ಜಾರಿಗೊಳಿಸಲಾಗಿದೆ.

ಇದನ್ನೂ ಓದಿ: Kinnaur Landslide: ಹಿಮಾಚಲ ಪ್ರದೇಶದಲ್ಲಿ ಭೂಕುಸಿತ; ಸಾವನ್ನಪ್ಪಿದವರ ಸಂಖ್ಯೆ 23ಕ್ಕೆ ಏರಿಕೆ

ನರಕವಾಗಿದೆ ಅಫ್ಘಾನಿಸ್ತಾನ; ಆಟವಾಡುವ ಮಕ್ಕಳೂ ಇಲ್ಲಿ ತಾಲಿಬಾನ್ ಉಗ್ರರ ಲೈಂಗಿಕ ಕ್ರಿಯೆಗೆ ಮೀಸಲು!

(Attack on Ayodhya Ram Temple Failed as Jammu Kashmir Police Arrested 4 Jaish Terrorists amid of Independence Day)

Published On - 5:17 pm, Sat, 14 August 21

ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!