AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಲೆ ಯತ್ನ ಪ್ರಕರಣ: ಲಕ್ಷದ್ವೀಪ ಸಂಸದನ ಶಿಕ್ಷೆಗೆ ತಡೆ ನೀಡಿದ ಕೇರಳ ಹೈಕೋರ್ಟ್ ಆದೇಶವನ್ನು ರದ್ದುಗೊಳಿಸಿದ ಸುಪ್ರೀಂ

ಕೇಂದ್ರ ಸಚಿವ ಪಿಎಂ ಸಯೀದ್ ಅವರ ಅಳಿಯ ಮೊಹಮ್ಮದ್ ಸಾಲಿಹ್ ಅವರನ್ನು ಕೊಲೆ ಮಾಡಲು ಪ್ರಯತ್ನಿಸಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಲಕ್ಷದ್ವೀಪದ ಲೋಕಸಭಾ ಸಂಸದ ಮೊಹಮ್ಮದ್ ಫೈಜಲ್ ಅವರ ಅಪರಾಧ ಮತ್ತು ಶಿಕ್ಷೆಯನ್ನು ಅಮಾನತುಗೊಳಿಸಿದ ಕೇರಳ ಹೈಕೋರ್ಟ್ ಆದೇಶವನ್ನು ಇಂದು (ಆ.22) ಸುಪ್ರೀಂ ಕೋರ್ಟ್​ ರದ್ದುಗೊಳಿಸಿದೆ.

ಕೊಲೆ ಯತ್ನ ಪ್ರಕರಣ: ಲಕ್ಷದ್ವೀಪ ಸಂಸದನ ಶಿಕ್ಷೆಗೆ ತಡೆ ನೀಡಿದ ಕೇರಳ ಹೈಕೋರ್ಟ್ ಆದೇಶವನ್ನು ರದ್ದುಗೊಳಿಸಿದ ಸುಪ್ರೀಂ
ಮೊಹಮ್ಮದ್ ಫೈಜಲ್
ಅಕ್ಷಯ್​ ಪಲ್ಲಮಜಲು​​
|

Updated on: Aug 22, 2023 | 2:51 PM

Share

ದೆಹಲಿ, ಆ.22: ಕೇಂದ್ರ ಸಚಿವ ಪಿಎಂ ಸಯೀದ್ ಅವರ ಅಳಿಯ ಮೊಹಮ್ಮದ್ ಸಾಲಿಹ್ ಅವರನ್ನು ಕೊಲೆ ಮಾಡಲು ಪ್ರಯತ್ನಿಸಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಲಕ್ಷದ್ವೀಪದ ಲೋಕಸಭಾ (Lakshadweep Lok Sabha) ಸಂಸದ ಮೊಹಮ್ಮದ್ ಫೈಜಲ್ (Mohammed Faizal) ಅವರ ಅಪರಾಧ ಮತ್ತು ಶಿಕ್ಷೆಯನ್ನು ಅಮಾನತುಗೊಳಿಸಿದ ಕೇರಳ ಹೈಕೋರ್ಟ್ ಆದೇಶವನ್ನು ಇಂದು (ಆ.22) ಸುಪ್ರೀಂ ಕೋರ್ಟ್​ ರದ್ದುಗೊಳಿಸಿದೆ. ಮತ್ತೆ ಈ ಬಗ್ಗೆ ವಿಚಾರಣೆ ನಡೆಸುವಂತೆ, ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆ ನಡೆಸುವಂತೆ ಪ್ರಕರಣವನ್ನು ಸುಪ್ರೀಂ ಕೋರ್ಟ್​ ಕೇರಳ ಹೈಕೋರ್ಟ್​ಗೆ ಹಿಂತಿರುಗಿಸಿದೆ. ಸುಪ್ರೀಂ ಕೋರ್ಟ್​ನ ನ್ಯಾಯಮೂರ್ತಿಗಳಾದ ಬಿ.ವಿ.ನಾಗರತ್ನ ಮತ್ತು ಉಜ್ಜಲ್ ಭುಯಾನ್ ಅವರನ್ನೊಳಗೊಂಡ ಪೀಠವು ಈ ಪ್ರಕರಣದಲ್ಲಿ ಲೋಕಸಭೆಯ ಸಂಸದರ ಅಪರಾಧ ಮತ್ತು ಶಿಕ್ಷೆಯನ್ನು ಅಮಾನತುಗೊಳಿಸುವಲ್ಲಿ ಹೈಕೋರ್ಟ್‌ನ ವಿಧಾನವು ತಪ್ಪು ಎಂದು ಹೇಳಿದೆ.

2023ರ ಜನವರಿಯಲ್ಲಿ ಕೇಂದ್ರ ಸಚಿವ ಪಿಎಂ ಸಯೀದ್ ಅವರ ಅಳಿಯ ಮೊಹಮ್ಮದ್ ಸಾಲಿಹ್ ಅವರನ್ನು ಕೊಲ್ಲಲು ಪ್ರಯತ್ನಿಸಿದ್ದಕ್ಕಾಗಿ ಮೊಹಮ್ಮದ್ ಫೈಜಲ್ ಅವರಿಗೆ 10 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಲಾಯಿತು. ಬಳಿಕ ಅವರು ಕೆಳ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಕೇರಳ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದರು.

ವಿಚಾರಣಾ ನ್ಯಾಯಾಲಯದ ಆದೇಶದ ವಿರುದ್ಧದ ಮೇಲ್ಮನವಿಯನ್ನು ವಿಚಾರಣೆ ಮಾಡುವವರೆಗೆ ಎನ್‌ಸಿಪಿ ನಾಯಕ ಮೊಹಮ್ಮದ್ ಫೈಜಲ್ ಅವರ ಅಪರಾಧ ಮತ್ತು ಶಿಕ್ಷೆಯನ್ನು ಅಮಾನತುಗೊಳಿಸುವುದಾಗಿ ಹೈಕೋರ್ಟ್ ಹೇಳಿತ್ತು. ಹೈಕೋರ್ಟ್​ನ ಈ ಆದೇಶವನ್ನು ಲಕ್ಷದ್ವೀಪ ಸರ್ಕಾರವು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿತ್ತು. ಮೊಹಮ್ಮದ್ ಫೈಜಲ್ ಅವರ ಪರವಾಗಿ ನೀಡಿರುವ ಈ ಆದೇಶವು, ನ್ಯಾಯಾಂಗದ ಮೇಲಿನ ನಂಬಿಕೆ ಜನರಲ್ಲಿ ಹೋಗುತ್ತದೆ ಎಂದು ಸರ್ಕಾರ ತಿಳಿಸಿದೆ.

ಇದನ್ನೂ ಓದಿ: ಕೊಲೆ ಯತ್ನ ಪ್ರಕರಣದಲ್ಲಿ ಲಕ್ಷದ್ವೀಪದ ಸಂಸದ ಮೊಹಮ್ಮದ್ ಫೈಝಲ್​ಗೆ 10 ವರ್ಷ ಜೈಲು ಶಿಕ್ಷೆ ಪ್ರಕಟ

ಪ್ರಾಸಿಕ್ಯೂಷನ್ ಪ್ರಕಾರ, ಮೊಹಮ್ಮದ್ ಫೈಜಲ್ ಮತ್ತು ಇತರ ಕೆಲವು ವ್ಯಕ್ತಿಗಳು ಮಾರಣಾಂತಿಕ ಶಸ್ತ್ರಾಸ್ತ್ರಗಳನ್ನು ಹಿಡಿದು ಮೊಹಮ್ಮದ್ ಸಾಲಿಹ್ ಮೇಲೆ ದಾಳಿ ಮಾಡಿದ್ದರು ಎಂದು ಹೇಳಲಾಗಿದೆ. ಈ ಪ್ರಕರಣದಲ್ಲಿ 37 ಆರೋಪಿಗಳಿದ್ದು, ಅವರಲ್ಲಿ ಇಬ್ಬರು ವಿಚಾರಣೆ ವೇಳೆ ಸಾವನ್ನಪ್ಪಿದ್ದಾರೆ. ಉಳಿದ 35 ಜನರಲ್ಲಿ, ಅನರ್ಹಗೊಂಡ ಸಂಸದ ಮತ್ತು ಅವರ ಸಹೋದರ ಸೇರಿದಂತೆ ನಾಲ್ವರು ಆರೋಪಿಗಳಿಗೆ 10 ವರ್ಷಗಳ ಜೈಲು ಶಿಕ್ಷೆಯನ್ನು ನೀಡಲಾಗಿತ್ತು. ಇನ್ನು ಉಳಿದವರನ್ನು ಖುಲಾಸೆಗೊಳಿಸಲಾಯಿತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಅಕ್ಷಯ್​ ಪಲ್ಲಮಜಲು​​
ಅಕ್ಷಯ್​ ಪಲ್ಲಮಜಲು​​

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್