‘ಸಿಎಂ ಹೇಮಂತ್ ಸೊರೇನ್ ಹತ್ಯೆಗೆ ಯತ್ನ’; ಬಿಜೆಪಿ ವಿರುದ್ಧ ಜಾರ್ಖಂಡ್ ಸಚಿವ ಇರ್ಫಾನ್ ಅನ್ಸಾರಿ ಗಂಭೀರ ಆರೋಪ

ಜಾರ್ಖಂಡ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ನಡುವೆ, ವಿರೋಧ ಪಕ್ಷದ ಬಿಜೆಪಿ ಶಾಸಕರು ಇಂದು ವಿಧಾನಸಭೆಯಲ್ಲಿ ಭಾರಿ ಕೋಲಾಹಲ ಸೃಷ್ಟಿಸಿದರು. ಪ್ರತಿಭಟನೆಯ ಸಮಯದಲ್ಲಿ ಬಿಜೆಪಿ ಶಾಸಕರೊಬ್ಬರು ಸದನದಲ್ಲಿ ಕರೆನ್ಸಿ ನೋಟುಗಳನ್ನು ಬೀಸಿದರು, ಇದು ವಾತಾವರಣವನ್ನು ಉದ್ವಿಗ್ನಗೊಳಿಸಿತು. ಈ ವೇಳೆ ಪ್ರತಿಪಕ್ಷಗಳನ್ನು ಗುರಿಯಾಗಿಸಿಕೊಂಡು ಆರೋಗ್ಯ ಸಚಿವ ಡಾ. ಇರ್ಫಾನ್ ಅನ್ಸಾರಿ ಕೆಲವು ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಆ ಕುರಿತು ಪೂರ್ತಿ ವಿವರ ಇಲ್ಲಿದೆ.

‘ಸಿಎಂ ಹೇಮಂತ್ ಸೊರೇನ್ ಹತ್ಯೆಗೆ ಯತ್ನ’; ಬಿಜೆಪಿ ವಿರುದ್ಧ ಜಾರ್ಖಂಡ್ ಸಚಿವ ಇರ್ಫಾನ್ ಅನ್ಸಾರಿ ಗಂಭೀರ ಆರೋಪ
Irfan Ansari
Image Credit source: TV9

Updated on: Aug 11, 2026 | 11:12 PM

ರಾಂಚಿ, ಆಗಸ್ಟ್ 11: ಜಾರ್ಖಂಡ್‌ನಲ್ಲಿ ಉದ್ಯೋಗ ನೇಮಕಾತಿ ಪರೀಕ್ಷೆಗಳ ಅಕ್ರಮ ಖಂಡಿಸಿ ವಿದ್ಯಾರ್ಥಿಗಳು ನಡೆಸುತ್ತಿರುವ ಸುದೀರ್ಘ ಹೋರಾಟದ ಬೆನ್ನಲ್ಲೇ, ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಉಂಟಾಗಿದೆ. ಜಾರ್ಖಂಡ್ (Jharkhand) ಆರೋಗ್ಯ ಸಚಿವ ಹಾಗೂ ಕಾಂಗ್ರೆಸ್ ನಾಯಕ ಇರ್ಫಾನ್ ಅನ್ಸಾರಿ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರ ನಿವಾಸದ ಹೊರಗೆ ಪ್ರತಿಭಟನೆ ನಡೆಸಿದ ಬಿಜೆಪಿ ಶಾಸಕರ ವಿರುದ್ಧ ‘ಹತ್ಯೆ ಯತ್ನ’ದ ಗಂಭೀರ ಆರೋಪ ಮಾಡಿದ್ದಾರೆ.

ಆಗಸ್ಟ್ 10ರಂದು ಮುಖ್ಯಮಂತ್ರಿಯ ನಿವಾಸದ ಹೊರಗೆ ಪ್ರತಿಭಟನೆ ನಡೆಸುತ್ತಿದ್ದ ಬಿಜೆಪಿ ಶಾಸಕರು ಮತ್ತು ನಾಯಕರನ್ನು ಬಂಧಿಸಿ ವಿಧಾನಸಭೆ ಪ್ರವೇಶಿಸದಂತೆ ತಡೆದ ಬಗ್ಗೆ ಮಾತನಾಡಿದ ಸಚಿವ ಇರ್ಫಾನ್ ಅನ್ಸಾರಿ, ಬಿಜೆಪಿಯವರು ಮುಖ್ಯಮಂತ್ರಿ ನಿವಾಸದ ಮೇಲೆ ದಾಳಿ ಮಾಡಲು ಪ್ರಯತ್ನಿಸಿದ್ದಾರೆ ಎಂದು ಹೇಳಿದರು. ಬುಡಕಟ್ಟು ಸಮುದಾಯದ ಮುಖ್ಯಮಂತ್ರಿಯ ನಿವಾಸದ ಮೇಲೆ ದಾಳಿ ಮಾಡಲು ಯತ್ನಿಸಿ, ಪ್ರತಿಭಟನೆಯ ನೆಪದಲ್ಲಿ ಬಿಜೆಪಿ ಶಾಸಕರು ಸದನದಿಂದ ಹೊರಬಂದಿದ್ದರು. ಮುಖ್ಯಮಂತ್ರಿ ನಿವಾಸವು ಮುಖ್ಯ ರಸ್ತೆಯಲ್ಲಿದೆ ಮತ್ತು ಅವರು ತಮ್ಮ ಇಡೀ ಕುಟುಂಬದೊಂದಿಗೆ ಅಲ್ಲಿ ವಾಸಿಸುತ್ತಿದ್ದಾರೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ತಡೆಯಲು ಈ ಕ್ರಮ ಕೈಗೊಳ್ಳಲಾಗಿದೆ. ನಾವು ಯಾರನ್ನೂ ಬಿಡುವುದಿಲ್ಲ ಎಂದಿದ್ದಾರೆ.

ಇದನ್ನೂ ಓದಿ: ಜಾರ್ಖಂಡ್​​ನಲ್ಲಿ ಪರೀಕ್ಷಾ ಅಕ್ರಮ; ಸಿಐಡಿಯಿಂದ ಜೆಪಿಎಸ್‌ಸಿ ಮಾಜಿ ಅಧ್ಯಕ್ಷ ಎಲ್. ಖಿಯಾಂಗ್ತೆ ಬಂಧನ

ಸಿಎಂ ನಿವಾಸದ ಮುಂದೆ ಧರಣಿ:

ಜಾರ್ಖಂಡ್ ವಿಧಾನಸಭೆ ಅಧಿವೇಶನ ನಡೆಯುತ್ತಿದ್ದ ವೇಳೆ ಬಿಜೆಪಿ ಶಾಸಕರು ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರ ಅಧಿಕೃತ ನಿವಾಸದ ಮುಂಭಾಗ ದಿಢೀರ್ ಪ್ರತಿಭಟನೆ ನಡೆಸಿ ಧರಣಿ ಕುಳಿತಿದ್ದರು. ಈ ಕುರಿತು ರಾಂಚಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವ ಇರ್ಫಾನ್ ಅನ್ಸಾರಿ, “ಸೋಮವಾರ ನಮ್ಮ ಮುಖ್ಯಮಂತ್ರಿಯವರು ಕೂದಲೆಳೆಯ ಅಂತರದಲ್ಲಿ ಅಪಾಯದಿಂದ ಪಾರಾಗಿದ್ದಾರೆ. ಬಿಜೆಪಿ ಶಾಸಕರು ನಡೆಸಿದ್ದು ಕೇವಲ ಸಾಂಕೇತಿಕ ಪ್ರತಿಭಟನೆಯಲ್ಲ, ಬದಲಿಗೆ ಅದು ಮುಖ್ಯಮಂತ್ರಿಯವರನ್ನು ಹತ್ಯೆ ಮಾಡಲು ನಡೆಸಿದ ಆಯೋಜಿತ ಸಂಚು” ಎಂದು ಆರೋಪಿಸಿದ್ದಾರೆ.


ಭದ್ರತೆಯ ಆತಂಕ:

“ರಾಜ್ಯದ ಒಬ್ಬ ಆದಿವಾಸಿ ಮುಖ್ಯಮಂತ್ರಿ ರಸ್ತೆಬದಿಯ ನಿವಾಸದಲ್ಲಿ ಸೂಕ್ತ ಭದ್ರತೆಯಿಲ್ಲದೆ ವಾಸಿಸುತ್ತಿದ್ದಾರೆ. ಅವರು ಮನೆ ಒಳಗೆ ತಮ್ಮ ಪತ್ನಿ ಮತ್ತು ಮಕ್ಕಳೊಂದಿಗೆ ಇದ್ದಾಗ ಈ ರೀತಿ ಪ್ರತಿಭಟನೆ ನಡೆಸುವುದು ಎಷ್ಟು ಸರಿ? ಯಾರಾದರೂ ಗೋಡೆ ಜಿಗಿದು ಒಳಗೆ ನುಗ್ಗಿ ಅನಾಹುತ ಎಸಗಿದ್ದರೆ ಅದಕ್ಕೆ ಯಾರು ಹೊಣೆ?” ಎಂದು ಅನ್ಸಾರಿ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಜಾರ್ಖಂಡ್​ನಲ್ಲಿ 17ನೇ ದಿನಕ್ಕೆ ಕಾಲಿಟ್ಟ ವಿದ್ಯಾರ್ಥಿಗಳ ಪ್ರತಿಭಟನೆ; ವಿಧಾನಸೌಧ ಮುತ್ತಿಗೆಗೆ ಯತ್ನ; ಜಲಫಿರಂಗಿಗೂ ಬೆದರದ ಯುವಜನರು

ವಿದ್ಯಾರ್ಥಿಗಳ ನೇಮಕಾತಿ ಪರೀಕ್ಷೆಯ ಗೊಂದಲದ ನಡುವೆ ಸಚಿವರ ಈ ಹೇಳಿಕೆಯು ಜಾರ್ಖಂಡ್ ಅಸೆಂಬ್ಲಿ ಹಾಗೂ ರಾಜಕೀಯ ವಲಯದಲ್ಲಿ ತೀವ್ರ ಮಾತಿನ ಚಕಮಕಿಗೆ ಕಾರಣವಾಗಿದೆ. ಜಾರ್ಖಂಡ್‌ನಲ್ಲಿ ಉದ್ಯೋಗ ನೇಮಕಾತಿ ಪರೀಕ್ಷೆಗಳಲ್ಲಿ ನಡೆದಿರುವ ಅಕ್ರಮಗಳನ್ನು ವಿರೋಧಿಸಿ ವಿದ್ಯಾರ್ಥಿಗಳು ನಡೆಸುತ್ತಿರುವ ಪ್ರತಿಭಟನೆಯ ನಡುವೆಯೇ, ರಾಜ್ಯ ಆರೋಗ್ಯ ಸಚಿವ ಹಾಗೂ ಕಾಂಗ್ರೆಸ್ ನಾಯಕ ಇರ್ಫಾನ್ ಅನ್ಸಾರಿ ಅವರು ಭಾರತೀಯ ಜನತಾ ಪಾರ್ಟಿ (ಬಿಜೆಪಿ) ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಸೋಮವಾರ (ಆಗಸ್ಟ್ 10) ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರ ನಿವಾಸದ ಹೊರಗೆ ಪ್ರತಿಭಟನೆ ನಡೆಸಿದ ಬಿಜೆಪಿ ಶಾಸಕರು ಕೇವಲ ಧರಣಿ ನಡೆಸಲಿಲ್ಲ, ಬದಲಿಗೆ ಮುಖ್ಯಮಂತ್ರಿಯವರ ಪ್ರಾಣಕ್ಕೇ ಅಪಾಯವನ್ನುಂಟುಮಾಡಿದರು ಎಂದು ಅನ್ಸಾರಿ ಆರೋಪಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us