Atul Subhash: ಅತುಲ್​ಗೆ ನೀನ್ಯಾಕೆ ಆತ್ಮಹತ್ಯೆ ಮಾಡಿಕೊಳ್ಬಾರ್ದು ಎಂಬ ನಿಕಿತಾ ಪ್ರಶ್ನೆಗೆ ನಕ್ಕಿದ್ದ ಜಡ್ಜ್​ ರೀಟಾ

ಉತ್ತರ ಪ್ರದೇಶ ಮೂಲದ ಟೆಕ್ಕಿ ಅತುಲ್ ಸುಭಾಷ್ ಬೆಂಗಳೂರಿನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಸಾಯುವ ಮುನ್ನ 24 ಪುಟಗಳ ಡೆತ್​ನೋಟ್​ ಬರೆದಿಟ್ಟಿದ್ದಷ್ಟೇ ಅಲ್ಲದೆ 90 ನಿಮಿಷಗಳ ವಿಡಿಯೋವನ್ನು ಕೂಡ ಮಾಡಿಟ್ಟಿದ್ದಾರೆ. ಅವರ ವಿರುದ್ಧ ಪತ್ನಿ ನಿಕಿತಾ ವರದಕ್ಷಿಣೆ ಕಿರುಕುಳ ಸೇರಿದಂತೆ ಒಟ್ಟು 9 ಪ್ರಕರಣಗಳನ್ನು ದಾಖಲಿಸಿದ್ದರು. 6 ಪ್ರಕರಣಗಳು ಕೆಳ ನ್ಯಾಯಾಲಯದಲ್ಲಿದ್ದರೆ 3 ಪ್ರಕರಣಗಳು ಹೈಕೋರ್ಟ್​ನಲ್ಲಿತ್ತು.

Atul Subhash: ಅತುಲ್​ಗೆ ನೀನ್ಯಾಕೆ ಆತ್ಮಹತ್ಯೆ ಮಾಡಿಕೊಳ್ಬಾರ್ದು ಎಂಬ ನಿಕಿತಾ ಪ್ರಶ್ನೆಗೆ ನಕ್ಕಿದ್ದ ಜಡ್ಜ್​ ರೀಟಾ
ಅತುಲ್ Image Credit source: NDTV
Follow us
ನಯನಾ ರಾಜೀವ್
|

Updated on: Dec 12, 2024 | 11:12 AM

ಉತ್ತರ ಪ್ರದೇಶ ಮೂಲದ ಟೆಕ್ಕಿ ಅತುಲ್ ಸುಭಾಷ್ ಬೆಂಗಳೂರಿನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಸಾಯುವ ಮುನ್ನ 24 ಪುಟಗಳ ಡೆತ್​ನೋಟ್​ ಬರೆದಿಟ್ಟಿದ್ದಷ್ಟೇ ಅಲ್ಲದೆ 90 ನಿಮಿಷಗಳ ವಿಡಿಯೋವನ್ನು ಕೂಡ ಮಾಡಿಟ್ಟಿದ್ದಾರೆ. ಅವರ ವಿರುದ್ಧ ಪತ್ನಿ ನಿಕಿತಾ ವರದಕ್ಷಿಣೆ ಕಿರುಕುಳ ಸೇರಿದಂತೆ ಒಟ್ಟು 9 ಪ್ರಕರಣಗಳನ್ನು ದಾಖಲಿಸಿದ್ದರು. 6 ಪ್ರಕರಣಗಳು ಕೆಳ ನ್ಯಾಯಾಲಯದಲ್ಲಿದ್ದರೆ 3 ಪ್ರಕರಣಗಳು ಹೈಕೋರ್ಟ್​ನಲ್ಲಿತ್ತು.

ವಿಚಾರಣೆ ವೇಳೆ ಅತುಲ್ ಬೇಸರದಿಂದ ಈ ರೀತಿ ಕಿರುಕುಳ ಕೊಟ್ಟರೆ ಆತ್ಮಹತ್ಯೆ ಮಾಡಿಕೊಳ್ಳುವುದು ಬಿಟ್ಟು ಬೇರೆ ದಾರಿ ಇಲ್ಲ ಎಂದು ಹೇಳಿದಾಗ ನಿಕಿತಾ ಹಾಗಾದರೆ ಯಾಕಿನ್ನು ಬದುಕಿದ್ದೀಯಾ ಆತ್ಮಹತ್ಯೆ ಮಾಡಿಕೊಂಡಿಲ್ಲ ಎಂದು ಪ್ರಶ್ನಿಸಿದ್ದಳು, ಅದಕ್ಕೆ ಜಡ್ಜ್​ ರೀಟಾ ನಕ್ಕಿದ್ದರು ಈ ವಿಷಯವನ್ನು ಡೆತ್​ನೋಟ್​ನಲ್ಲಿ ಸುಭಾಷ್ ಬರೆದಿದ್ದಾರೆ.  ಅಷ್ಟೇ ಅಲ್ಲದೆ ರೀಟಾ 5 ಲಕ್ಷ ರೂ. ಲಂಚ ಕೇಳಿದ್ದರು ಎಂಬುದನ್ನೂ ಉಲ್ಲೇಖಿಸಿದ್ದಾರೆ.

ಆದರೆ ಒಂದು ಜೀವದ ಪ್ರಶ್ನೆ ಬಂದಾಗ ಕೋರ್ಟ್​ನಲ್ಲಿ ನ್ಯಾಯದ ಪರ ನಿಲ್ಲಬೇಕಾದವರೇ ಈ ವಿಚಾರವನ್ನು ಗಂಭೀರವಾಗಿ ತೆಗೆದುಕೊಳ್ಳದೆ ನಕ್ಕಿದ್ದರು ಎನ್ನುವ ವಿಚಾರದ ಬಗ್ಗೆ ಎಲ್ಲರೂ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಸುಭಾಷ್ ತಮ್ಮನೂ ಮಾತನಾಡಿದ್ದಾರೆ.  ಸುಭಾಷ್ ಪ್ರಕರಣದ ವಿಚಾರಣೆಗಾಗಿ 40 ಬಾರಿ ಬೆಂಗಳೂರಿನಿಂದ ಜೌನ್​ಪುರಕ್ಕೆ ಪ್ರಯಾಣಬೆಳೆಸಿದ್ದ ಎಂದು ಪೋಷಕರು ತಿಳಿಸಿದ್ದಾರೆ.

ಮತ್ತಷ್ಟು ಓದಿ: Atul Subhash: ಬೆಂಗಳೂರಿನಲ್ಲಿ ಟೆಕ್ಕಿ ಅತುಲ್ ಸುಭಾಷ್ ಆತ್ಮಹತ್ಯೆ ಪ್ರಕರಣ, ಕ್ರಿಮಿನಲ್ ಲಾಯರ್ ವಿಕಾಸ್ ಹೇಳಿದ್ದೇನು?

ಅಷ್ಟೇ ಅಲ್ಲದೆ 1 ಕೋಟಿ ರೂ. ಕೊಟ್ಟರೆ ಪ್ರಕರಣಗಳಿಂದ ಮುಕ್ತಗೊಳಿಸಿತ್ತೇನೆ ಎಂದಿದ್ದ ಆಕೆ ಆಮೇಲೆ 3 ಕೋಟಿ ರೂ.ಗೆ ಬೇಡಿಕೆ ಇಟ್ಟಿದ್ದಳು. ಅಷ್ಟೇ ಅಲ್ಲದೆ ಪ್ರಕರಣ ಇತ್ಯರ್ಥ ಮಾಡಿಕೊಡಲು ನ್ಯಾಯಾಧೀಶೆ ಕೂಡ 5 ಲಕ್ಷ ರೂ.ಗೆ ಬೇಡಿಕೆ ಇಟ್ಟಿರುವುದಾಗಿ ಅವರು ಡೆತ್​ನೋಟ್​ನಲ್ಲಿ ಬರೆದಿದ್ದಾರೆ.

ನನ್ನ ಮಗನಿಗೆ ಚಿತ್ರಹಿಂಸೆ ಕೊಟ್ಟರು, ನಮಗೂ ನೋವು ಕೊಟ್ಟಿದ್ದಾರೆ, ಆದರೆ ಮಗ ಇದೆಲ್ಲವನ್ನೂ ಸಹಿಸಿಕೊಂಡಿದ್ದ. 2019ರಲ್ಲಿ ಮದುವೆಯಾಗಿತ್ತು, 2020ರಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದಳು. ಆಕೆಯ ಮನೆಯವರು ಪದೇ ಪದೇ ಹಣಕ್ಕೆ ಬೇಡಿಕೆ ಇಡುತ್ತಿದ್ದರು. ನಿರಾಕರಿಸಿದ್ದರಿಂದ ಆಕೆ ಮಗನನ್ನು ಕರೆದುಕೊಂಡು 2021ರಲ್ಲಿ ಮನೆ ಬಿಟ್ಟು ಹೋಗಿದ್ದಳು.

ಅದಾದ ಬಳಿಕ ವರದಕ್ಷಿಣೆ ಪ್ರಕರಣ ಸೇರಿ ಆತನ ಮೇಲೆ 9 ಪ್ರಕರಣಗಳನ್ನು ದಾಖಲಿಸಿದ್ದಳು. ಜತೆಗೆ ಆಕೆಯ ತಂದೆಗೆ ಮೊದಲೇ ಹೃದಯ ಸಂಬಂಧಿ ಕಾಯಿಲೆ ಇದ್ದರೂ ಅದನ್ನು ಮುಚ್ಚಿಟ್ಟು ಅವರ ಸಾವಿಗೆ ಅತುಲ್​ ಕಾರಣ ಎಂದು ಬಿಂಬಿಸಲು ಟ್ರೈ ಮಾಡಿದ್ದಳು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ