AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nagpur Violence: ನಾಗ್ಪುರ ಹಿಂಸಾಚಾರ, ಶಾಂತಿ ಕಾಪಾಡುವಂತೆ ಸಿಎಂ ದೇವೇಂದ್ರ ಫಡ್ನವಿಸ್ ಮನವಿ

ಮಹಾರಾಷ್ಟ್ರದಲ್ಲಿ ಔರಂಗಜೇಬ(Aurangzeb)ನ ಸಮಾಧಿಯ ಕುರಿತು ನಡೆಯುತ್ತಿರುವ ವಿವಾದ ಸೋಮವಾರ ಹಿಂಸಾತ್ಮಕ ತಿರುವು ಪಡೆದುಕೊಂಡಿತು. ಈ ವಿಷಯಕ್ಕೆ ಸಂಬಂಧಿಸಿದಂತೆ ಸೋಮವಾರ ರಾತ್ರಿ ನಾಗ್ಪುರದ ಮಹಲ್ ಪ್ರದೇಶದಲ್ಲಿ ಎರಡು ಗುಂಪುಗಳ ನಡುವೆ ತೀವ್ರ ವಾಗ್ವಾದ ನಡೆಯಿತು. ಎರಡೂ ಕಡೆಯಿಂದ ಕಲ್ಲು ತೂರಾಟ, ಧ್ವಂಸ ಮತ್ತು ವಾಹನಗಳಿಗೆ ಬೆಂಕಿ ಹಚ್ಚುವ ಕೃತ್ಯಗಳು ನಡೆದವು.

Nagpur Violence: ನಾಗ್ಪುರ ಹಿಂಸಾಚಾರ, ಶಾಂತಿ ಕಾಪಾಡುವಂತೆ ಸಿಎಂ ದೇವೇಂದ್ರ ಫಡ್ನವಿಸ್ ಮನವಿ
ನಾಗ್ಪುರ Image Credit source: The Hindu
ನಯನಾ ರಾಜೀವ್
|

Updated on:Mar 18, 2025 | 9:33 AM

Share

ನಾಗ್ಪುರ, ಮಾರ್ಚ್​ 18: ನಾಗ್ಪುರದಲ್ಲಿ ಶಾಂತಿ ಕಾಪಾಡುವಂತೆ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್(Devendra Fadnavis) ಜನರಲ್ಲಿ ಮನವಿ ಮಾಡಿದ್ದಾರೆ.  ಮಹಾರಾಷ್ಟ್ರದಲ್ಲಿ ಔರಂಗಜೇಬ(Aurangzeb)ನ ಸಮಾಧಿಯ ಕುರಿತು ನಡೆಯುತ್ತಿರುವ ವಿವಾದ ಸೋಮವಾರ ಹಿಂಸಾತ್ಮಕ ತಿರುವು ಪಡೆದುಕೊಂಡಿತು. ಈ ವಿಷಯಕ್ಕೆ ಸಂಬಂಧಿಸಿದಂತೆ ಸೋಮವಾರ ರಾತ್ರಿ ನಾಗ್ಪುರದ ಮಹಲ್ ಪ್ರದೇಶದಲ್ಲಿ ಎರಡು ಗುಂಪುಗಳ ನಡುವೆ ತೀವ್ರ ವಾಗ್ವಾದ ನಡೆಯಿತು. ಎರಡೂ ಕಡೆಯಿಂದ ಕಲ್ಲು ತೂರಾಟ, ಧ್ವಂಸ ಮತ್ತು ವಾಹನಗಳಿಗೆ ಬೆಂಕಿ ಹಚ್ಚುವ ಕೃತ್ಯಗಳು ನಡೆದವು. ಅಶಿಸ್ತಿನ ಗುಂಪನ್ನು ಚದುರಿಸಲು ಪೊಲೀಸರು ಬಲಪ್ರಯೋಗ ಮಾಡಬೇಕಾಯಿತು.

ಕಲ್ಲು ತೂರಾಟಗಾರರನ್ನು ತಡೆಯಲು ಪ್ರಯತ್ನಿಸುತ್ತಿದ್ದಾಗ ಪೊಲೀಸರೂ ಗಾಯಗೊಂಡರು. ಕಲ್ಲು ತೂರಾಟದಲ್ಲಿ 8 ರಿಂದ 10 ಪೊಲೀಸರು ಗಾಯಗೊಂಡಿದ್ದಾರೆ. ಬೆಂಕಿ ನಂದಿಸಲು ಬಂದ ನಾಲ್ವರು ಅಗ್ನಿಶಾಮಕ ದಳದ ಸಿಬ್ಬಂದಿಯೂ ಗಾಯಗೊಂಡಿದ್ದಾರೆ. ನಿನ್ನೆಯ ಘಟನೆಯ ನಂತರ ನಾಗ್ಪುರದಲ್ಲಿ ಈಗ ಉದ್ವಿಗ್ನ ವಾತಾವರಣ ನೆಲೆಸಿದೆ.

ಮಹಲ್ ಪ್ರದೇಶದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಪೊಲೀಸರು ಮನೆ ಮನೆಗೆ ತೆರಳಿ ನಡೆಸಿದ ಕೂಂಬಿಂಗ್ ಕಾರ್ಯಾಚರಣೆಯಲ್ಲಿ ಸುಮಾರು 50 ಜನರನ್ನು ಬಂಧಿಸಿದ್ದಾರೆ. ಏತನ್ಮಧ್ಯೆ, ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ನಾಗ್ಪುರದ ಜನರಿಗೆ ಶಾಂತಿ ಕಾಪಾಡುವಂತೆ ಮನವಿ ಮಾಡಿದ್ದಾರೆ. ನಾಗ್ಪುರದ ಎಲ್ಲಾ ಜನರು ಕಾನೂನು ಮತ್ತು ಸುವ್ಯವಸ್ಥೆಯನ್ನು ಪಾಲಿಸಬೇಕೆಂದು ನಾನು ವಿನಂತಿಸುತ್ತೇನೆ.

ಮತ್ತಷ್ಟು ಓದಿ: ಔರಂಗಜೇಬನ ಸಮಾಧಿ ಸಂಬಂಧಿತ ವಿವಾದ, ನಾಗ್ಪುರದಲ್ಲಿ ಹಿಂಸಾಚಾರ

ನಾಗ್ಪುರ ನಗರವು ಜನರು ಸಾಮರಸ್ಯದಿಂದ ವಾಸಿಸುವ ನಗರ. ಆದ್ದರಿಂದ, ಯಾರೂ ಶಾಂತಿಯನ್ನು ಭಂಗಗೊಳಿಸಬಾರದು. ‘‘ಗಲಭೆ ನಡೆಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ನಾಗ್ಪುರ ಪೊಲೀಸ್ ಆಯುಕ್ತರಿಗೆ ಸ್ಪಷ್ಟವಾಗಿ ಹೇಳಿದ್ದೇನೆ. ಯಾರಾದರೂ ಪೊಲೀಸರ ಮೇಲೆ ದಾಳಿ ಮಾಡುತ್ತಿದ್ದರೆ, ಅದನ್ನು ಗಂಭೀರವಾಗಿ ಪರಿಗಣಿಸಲಾಗುವುದು. ಆದ್ದರಿಂದ, ಎಲ್ಲರೂ ಶಾಂತಿ ಕಾಪಾಡುವಂತೆ ನಾನು ವಿನಂತಿಸುತ್ತೇನೆ’’ ಎಂದು ಫಡ್ನವಿಸ್ ಹೇಳಿದ್ದಾರೆ.

ನಾಗ್ಪುರದಲ್ಲಿ ಸೆಕ್ಷನ್ 144 ಜಾರಿ ನಾಗ್ಪುರ ನಗರದಲ್ಲಿ ಸೆಕ್ಷನ್ 144 ಜಾರಿಗೊಳಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಅನಿನ್ನೆ ನಾಗ್ಪುರದ ಮಹಲ್ ಪ್ರದೇಶದಲ್ಲಿ ಸಮಾಜ ವಿರೋಧಿ ಶಕ್ತಿಗಳು ಅತಿರೇಕವಾಗಿ ಓಡಾಡುತ್ತಿದ್ದವು ಎಂದು ನಾಗ್ಪುರದ ಸ್ಥಳೀಯ ಬಿಜೆಪಿ ಶಾಸಕ ಪ್ರವೀಣ್ ದಾಟ್ಕೆ ಹೇಳಿದ್ದಾರೆ.

ಘಟನೆ ಏನು? ಸೋಮವಾರ ನಾಗ್ಪುರದ ಮಹಲ್ ಗಾಂಧಿ ಗೇಟ್ ಸಂಕೀರ್ಣದಲ್ಲಿರುವ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆಯ ಮುಂದೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಮತ್ತು ಬಜರಂಗದಳ ಕಾರ್ಯಕರ್ತರು ಔರಂಗಜೇಬನ ಪ್ರತಿಮೆಯನ್ನು ದಹಿಸಿದಾಗ ವಿವಾದ ಆರಂಭವಾಯಿತು. ಈ ಸಂಘಟನೆಗಳು ಖುಲ್ದಾಬಾದ್ (ಛತ್ರಪತಿ ಸಂಭಾಜಿನಗರ) ದಲ್ಲಿರುವ ಔರಂಗಜೇಬನ ಸಮಾಧಿಯನ್ನು ತೆಗೆದುಹಾಕಬೇಕು ಎಂದು ಒತ್ತಾಯಿಸಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 9:31 am, Tue, 18 March 25

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್