Narendra Modi: ಭಾರತೀಯರ ಸುರಕ್ಷತೆ ನಮ್ಮ ಹೊಣೆ ಎಂದು ಆಸ್ಟ್ರೇಲಿಯಾದ ಪ್ರಧಾನಿ ಭರವಸೆ ನೀಡಿದ್ದಾರೆ: ಮೋದಿ

ಇತ್ತೀಚೆಗೆ ಆಸ್ಟ್ರೇಲಿಯಾದಲ್ಲಿ ನಡೆದ ದೇವಾಲಯಗಳ ಧ್ವಂಸ ಘಟನೆಗಳಿಗೆ ಸಂಬಂಧಿಸಿದಂತೆ, ಭಾರತೀಯ ಸಮುದಾಯದ ಸುರಕ್ಷತೆಯ ಬಗ್ಗೆ ಆಸ್ಟ್ರೇಲಿಯಾದ ಪ್ರಧಾನಿ ಆಂಟನಿ ಅಲ್ಬನೀಸ್ ಭರವಸೆ ನೀಡಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

Follow us
TV9 Web
| Updated By: ಅಕ್ಷಯ್​ ಪಲ್ಲಮಜಲು​​

Updated on:Mar 10, 2023 | 2:28 PM

ದೆಹಲಿ: ಭಾರತಕ್ಕೆ ಭೇಟಿ ನೀಡಿರುವ ಆಸ್ಟ್ರೇಲಿಯಾದ ಪ್ರಧಾನಿ ಆಂಟನಿ ಅಲ್ಬನೀಸ್ ಮತ್ತು ಪ್ರಧಾನಿ ಮೋದಿ ನಡುವೆ ಅನೇಕ ಯೋಜನೆಗಳ ಒಪ್ಪಂದ ಮತ್ತು ವಿಚಾರಗಳ ಬಗ್ಗೆ ಚರ್ಚೆಗಳು ನಡೆದಿದೆ. ಅದರಲ್ಲಿ ಇತ್ತೀಚೆಗೆ ಆಸ್ಟ್ರೇಲಿಯಾದಲ್ಲಿ ನಡೆದ ದೇವಾಲಯಗಳ ಧ್ವಂಸ ಘಟನೆಗಳಿಗೆ ಸಂಬಂಧಿಸಿದಂತೆ, ಭಾರತೀಯ ಸಮುದಾಯದ ಸುರಕ್ಷತೆಯ ಬಗ್ಗೆ ಆಸ್ಟ್ರೇಲಿಯಾದ ಪ್ರಧಾನಿ ಆಂಟನಿ ಅಲ್ಬನೀಸ್ ಭರವಸೆ ನೀಡಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಆಸ್ಟ್ರೇಲಿಯಾದಲ್ಲಿ ದೇವಾಲಯಗಳ ಮೇಲಿನ ದಾಳಿಯ ವರದಿಗಳನ್ನು ನಾನು ನೋಡಿದ್ದೇನೆ. ನಾನು ಇದನ್ನು ಪ್ರಧಾನಿ ಅಲ್ಬನೀಸ್‌ಗೆ ತಿಳಿಸಿದ್ದೇನೆ ಮತ್ತು ಆಸ್ಟ್ರೇಲಿಯಾದಲ್ಲಿರುವ ಭಾರತೀಯ ಸಮುದಾಯದ ಸುರಕ್ಷತೆ ಮತ್ತು ಯೋಗಕ್ಷೇಮಕ್ಕೆ ಆದ್ಯತೆಯನ್ನು ನೀಡುತ್ತೇವೆ ಎಂದು ನನಗೆ ಭರವಸೆ ನೀಡಿದ್ದಾರೆ ಎಂದು ಪ್ರಧಾನಿ ಮೋದಿ ಹೇಳಿದರು.

ಕಳೆದ ವಾರ, ಬ್ರಿಸ್ಬೇನ್‌ನಲ್ಲಿರುವ ಪ್ರಮುಖ ಹಿಂದೂ ದೇವಾಲಯವಾದ ಲಕ್ಷ್ಮೀ ನಾರಾಯಣ ದೇವಾಲಯದ ಮೇಲೆ ಖಲಿಸ್ತಾನ್ ಪರ ಬೆಂಬಲಿಗರು ದಾಳಿ ನಡೆಸಿದ್ದರು. ಆಸ್ಟ್ರೇಲಿಯಾದಲ್ಲಿ ಎರಡು ತಿಂಗಳ ಅವಧಿಯಲ್ಲಿ ಹಿಂದೂ ದೇವಾಲಯಗಳ ಮೇಲೆ ನಡೆದ ಧ್ವಂಸ ಘಟನೆಗಳಲ್ಲಿ ನಾಲ್ಕನೇ ಘಟನೆ ಇದಾಗಿದೆ.

ಇದನ್ನೂ ಓದಿ: IND vs AUS 4th Test: ಆಸ್ಟ್ರೇಲಿಯಾ ಪ್ರಧಾನಿ ಆಂಥೋನಿ ಆಲ್ಬನೀಸ್, ರೋಹಿತ್ ಶರ್ಮಾ ಕೈ ಮೇಲೆತ್ತಿ ಖುಷಿ ವ್ಯಕ್ತಪಡಿಸಿದ ನರೇಂದ್ರ ಮೋದಿ

ಜನವರಿ 23 ರಂದು, ಮೆಲ್ಬೋರ್ನ್‌ನ ಆಲ್ಬರ್ಟ್ ಪಾರ್ಕ್‌ನಲ್ಲಿರುವ ಇಸ್ಕಾನ್ ದೇವಾಲಯದ ಗೋಡೆಗಳಲ್ಲಿ ಹಿಂದೂಸ್ತಾನ್ ಮುರ್ದಾಬಾದ್ ಎಂಬ ಬರಹವನ್ನು ಗೀಚಿದ್ದರು, ಜನವರಿ 16 ರಂದು, ವಿಕ್ಟೋರಿಯಾದ ಕ್ಯಾರಮ್ ಡೌನ್ಸ್‌ನಲ್ಲಿರುವ ಐತಿಹಾಸಿಕ ಶಿವ ವಿಷ್ಣು ದೇವಾಲಯವನ್ನು ಇದೇ ರೀತಿಯಲ್ಲಿ ಧ್ವಂಸಗೊಳಿಸಲಾಯಿತು.

ಜನವರಿ 12ರಂದು, ಮೆಲ್ಬೋರ್ನ್‌ನಲ್ಲಿರುವ ಸ್ವಾಮಿನಾರಾಯಣ ದೇವಸ್ಥಾನವನ್ನು ಭಾರತ ವಿರೋಧಿ ಬರಹಗಳನ್ನು ಗೀಚುಲಾಗಿತ್ತು. ಆಸ್ಟ್ರೇಲಿಯಾದಲ್ಲಿ ಹಿಂದೂ ದೇವಾಲಯಗಳ ಮೇಲಿನ ಧ್ವಂಸವನ್ನು ಭಾರತ ಪದೇ ಪದೇ ಖಂಡಿಸಿದೆ. ಈ ವಿಚಾರವಾಗಿ ಆಸ್ಟ್ರೇಲಿಯಾ ಸರ್ಕಾರದ ಮುಂದೆ ಈ ವಿಷಯವನ್ನು ಪ್ರಸ್ತಾಪಿಸಿದೆ.

Published On - 1:46 pm, Fri, 10 March 23

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್