ತಮ್ಮನ್ನು ಮನೆಗೆ ಊಟಕ್ಕೆ ಕರೆದ ಆಟೋ ಚಾಲಕ ಮೋದಿ ಅಭಿಮಾನಿ ಎಂದು ತಿಳಿದು ಮುಜುಗರಕ್ಕೀಡಾದ ಅರವಿಂದ್ ಕೇಜ್ರಿವಾಲ್

ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರನ್ನು ಮನೆಗೆ ಊಟಕ್ಕೆ ಕರೆದಿದ್ದ ಆಟೋ ಚಾಲಕ ವಿಕ್ರಮ್ ದಾತಾನಿ ಮೋದಿ ಅಭಿಮಾನಿಯಾಗಿದ್ದಾರೆ.

ತಮ್ಮನ್ನು ಮನೆಗೆ ಊಟಕ್ಕೆ ಕರೆದ ಆಟೋ ಚಾಲಕ ಮೋದಿ ಅಭಿಮಾನಿ ಎಂದು ತಿಳಿದು ಮುಜುಗರಕ್ಕೀಡಾದ ಅರವಿಂದ್ ಕೇಜ್ರಿವಾಲ್
ಆಟೋ ಚಾಲಕನ ಮನೆಯಲ್ಲಿ ಕೇಜ್ರಿವಾಲ್ ಊಟ
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Oct 01, 2022 | 2:01 PM

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರನ್ನು ಆಟೋ ಚಾಲಕರೊಬ್ಬರು ತಮ್ಮ ಮನೆಗೆ ಊಟಕ್ಕೆ ಆಹ್ವಾನಿಸಿದ್ದರು. ಅವರ ಮನೆಗೆ ಹೋಗಿ ಅವರೊಂದಿಗೆ ಕುಳಿತು ಅರವಿಂದ್ ಕೇಜ್ರಿವಾಲ್ ಊಟ ಮಾಡುತ್ತಿರುವ ವಿಡಿಯೋ ಮತ್ತು ಫೋಟೋಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು. ಆದರೆ, ಆತ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರ ಅಭಿಮಾನಿ ಎಂಬುದು ನಂತರ ಗೊತ್ತಾಗಿದೆ. ಇದರಿಂದ ಅರವಿಂದ್ ಕೇಜ್ರಿವಾಲ್ ಮುಜುಗರಕ್ಕೀಡಾಗಿದ್ದಾರೆ.

ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರನ್ನು ಮನೆಗೆ ಊಟಕ್ಕೆ ಕರೆದಿದ್ದ ಆಟೋ ಚಾಲಕ ವಿಕ್ರಮ್ ದಾತಾನಿ ಮೋದಿ ಅಭಿಮಾನಿಯಾಗಿದ್ದಾರೆ. ಮೂಲಗಳ ಪ್ರಕಾರ, ಈ ವ್ಯಕ್ತಿ ಬಿಜೆಪಿ ಟೋಪಿ ಧರಿಸಿ ಪ್ರಧಾನಿ ನರೇಂದ್ರ ಮೋದಿ ಅವರ ರ್ಯಾಲಿಗೆ ಆಗಮಿಸಿದ್ದರು. “ನಾನು ಬಾಲ್ಯದಿಂದಲೂ ಮೋದಿ ಅವರ ಅಭಿಮಾನಿ. ನಮ್ಮ ಒಕ್ಕೂಟದ ಆದೇಶದ ಮೇರೆಗೆ ನಾನು ಅರವಿಂದ್ ಕೇಜ್ರಿವಾಲ್ ಅವರನ್ನು ನನ್ನ ಮನೆಗೆ ಆಹ್ವಾನಿಸಬೇಕಾಯಿತು” ಎಂದು ಅವರು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಇದನ್ನೂ ಓದಿ: Watch:ಗುಜರಾತ್​​ಗೆ ಕೇಜ್ರಿವಾಲ್​​ ಆಗಮಿಸಿದಾಗ ಮೊಳಗಿದ ಮೋದಿ ಜೈಕಾರ, ದೆಹಲಿ ಸಿಎಂ ಪ್ರತಿಕ್ರಿಯೆ ಹೀಗಿತ್ತು

ಅರವಿಂದ್ ಕೇಜ್ರಿವಾಲ್ ದಾತಾನಿಯ ಮನೆಗೆ ಹೋಗಿದ್ದಾಗ, ಆತ ನಾನು ನಿಮ್ಮ ಅಭಿಮಾನಿ ಎಂದು ಹೇಳಿದ್ದರು. ಆದರೆ, ಅವರು ಪ್ರಧಾನಿ ಮೋದಿಯ ರ್ಯಾಲಿಯಲ್ಲಿ ಭಾಗವಹಿಸಿದ್ದ ಫೋಟೋಗಳು ವೈರಲ್ ಆಗುತ್ತಿದ್ದಂತೆ ತಾವು ಮೋದಿಯ ಕಟ್ಟಾ ಅಭಿಮಾನಿ ಎಂದು ಹೇಳಿಕೊಂಡಿದ್ದಾರೆ.

ಮುಂಬರುವ ವಿಧಾನಸಭಾ ಚುನಾವಣೆಯ ಆಮ್ ಆದ್ಮಿ ಪಕ್ಷದ ಪ್ರಚಾರದ ಭಾಗವಾಗಿ 2 ದಿನಗಳ ಗುಜರಾತ್ ಪ್ರವಾಸದಲ್ಲಿರುವ ಸಿಎಂ ಅರವಿಂದ್ ಕೇಜ್ರಿವಾಲ್ ನಿನ್ನೆ ಮಧ್ಯಾಹ್ನ ಅಹಮದಾಬಾದ್‌ನಲ್ಲಿ ಆಟೋ ರಿಕ್ಷಾ ಚಾಲಕರ ಸಭೆಯನ್ನು ಉದ್ದೇಶಿಸಿ ಮಾತನಾಡಿದ್ದರು. ಆಗ ನಗರದ ಘಟ್ಲೋಡಿಯಾ ಪ್ರದೇಶದ ನಿವಾಸಿ ವಿಕ್ರಂ ದಾಂತಾನಿ ಎಂಬ ಆಟೋ ರಿಕ್ಷಾ ಚಾಲಕ ಕೇಜ್ರಿವಾಲ್ ಅವರಿಗೆ ತಮ್ಮ ಮನೆಯಲ್ಲಿ ರಾತ್ರಿ ಊಟ ಮಾಡುವಂತೆ ಮನವಿ ಮಾಡಿದ್ದರು. ನಾನು ನಿಮ್ಮ ದೊಡ್ಡ ಅಭಿಮಾನಿ. ನೀವು ನನ್ನ ಮನೆಗೆ ಊಟಕ್ಕೆ ಬರುತ್ತೀರಾ? ಎಂದು ಕೇಳಿದ್ದರು. ಆದ್ದರಿಂದ ಕೇಜ್ರಿವಾಲ್ ಆತನ ಮನೆಗೆ ಊಟಕ್ಕೆ ಹೋಗಿದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಹಾರ್ದಿಕ್ ಪಾಂಡ್ಯ ತೂಫಾನ್​ಗೆ ಎದುರಾಳಿ ತಂಡ ತತ್ತರ
ಹಾರ್ದಿಕ್ ಪಾಂಡ್ಯ ತೂಫಾನ್​ಗೆ ಎದುರಾಳಿ ತಂಡ ತತ್ತರ
ಇನ್ನು ಮುಂದೆ ಸುಮ್ಮನಿರಲ್ಲ: ಚೈತ್ರಾ-ಮೋಕ್ಷಿತಾಗೆ ತ್ರಿವಿಕ್ರಮ್ ಸವಾಲು
ಇನ್ನು ಮುಂದೆ ಸುಮ್ಮನಿರಲ್ಲ: ಚೈತ್ರಾ-ಮೋಕ್ಷಿತಾಗೆ ತ್ರಿವಿಕ್ರಮ್ ಸವಾಲು
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ