ವಿಶಾಖಪಟ್ಟಣಂ: ಲಾರಿಗೆ ಡಿಕ್ಕಿ ಹೊಡೆದ ಆಟೋ, 8 ಮಕ್ಕಳಿಗೆ ಗಂಭೀರ ಗಾಯ, ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ

|

Updated on: Nov 22, 2023 | 2:14 PM

ಆಟೋವೊಂದು ಬಸ್​ಗೆ ಡಿಕ್ಕಿ ಹೊಡೆದ ಪರಿಣಾಮ 8 ಮಕ್ಕಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ವಿಶಾಖಪಟ್ಟಣಂನಲ್ಲಿ ನಡೆದಿದೆ. ವಿಶಾಖಪಟ್ಟಣಂನ ಸಂಗಮ್ ಶರತ್ ಥಿಯೇಟರ್ ಬಳಿ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಬೆಥನಿ ಶಾಲೆಯ ಎಂಟು ಮಕ್ಕಳು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಸುದ್ದಿ ಸಂಸ್ಥೆ ANI ಗೆ ತಿಳಿಸಿದ್ದಾರೆ. ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

ವಿಶಾಖಪಟ್ಟಣಂ: ಲಾರಿಗೆ ಡಿಕ್ಕಿ ಹೊಡೆದ ಆಟೋ, 8 ಮಕ್ಕಳಿಗೆ ಗಂಭೀರ ಗಾಯ, ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಆಟೋ
Image Credit source: Hindustan Times
Follow us on

ಆಟೋವೊಂದು ಬಸ್​ಗೆ ಡಿಕ್ಕಿ ಹೊಡೆದ ಪರಿಣಾಮ 8 ಮಕ್ಕಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ವಿಶಾಖಪಟ್ಟಣಂನಲ್ಲಿ ನಡೆದಿದೆ. ವಿಶಾಖಪಟ್ಟಣಂನ ಸಂಗಮ್ ಶರತ್ ಥಿಯೇಟರ್ ಬಳಿ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಬೆಥನಿ ಶಾಲೆಯ ಎಂಟು ಮಕ್ಕಳು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಸುದ್ದಿ ಸಂಸ್ಥೆ ANI ಗೆ ತಿಳಿಸಿದ್ದಾರೆ. ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

ವೇಗವಾಗಿ ಬರುತ್ತಿದ್ದ ಲಾರಿಗೆ ಆಟೋ ನೇರವಾಗಿ ಡಿಕ್ಕಿ ಹೊಡೆಯುತ್ತಿರುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಅಪಘಾತ ಸಂಭವಿಸಿದ ತಕ್ಷಣ, ಪಲ್ಟಿಯಾಗಿ 2-3 ಮಕ್ಕಳು ವಾಹನದಿಂದ ಹೊರಗೆ ಬಿದ್ದಿದ್ದರು, ಇನ್ನೂ ಕೆಲವರು ಆಟೋದಲ್ಲೇ ಸಿಲುಕಿದ್ದರು. ಅಪಘಾತ ಸಂಭವಿಸಿದ ಸ್ಥಳದಿಂದ 100 ಮೀಟರ್ ಮುಂದೆ ಲಾರಿ ಚಾಲಕ ತನ್ನ ವಾಹನವನ್ನು ನಿಲ್ಲಿಸಿದ್ದಾನೆ ಎಂದು ವರದಿಯಾಗಿದೆ.

ಮತ್ತಷ್ಟು ಓದಿ: ತಮಿಳುನಾಡು: ಕಾರಿಗೆ ಟ್ರಕ್ ಡಿಕ್ಕಿ ಹೊಡೆದು ಐವರು ಸಾವು

ಡಿಸಿಪಿ ಶ್ರೀನಿವಾಸ ರಾವ್ ಪ್ರಕಾರ, ಗಾಯಗೊಂಡ ನಾಲ್ವರು ಡಿಸ್ಚಾರ್ಜ್ ಆಗಿದ್ದು, ಮೂವರು ವಿದ್ಯಾರ್ಥಿಗಳು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿಸಿದ್ದಾರೆ.

ಎಂಟು ಶಾಲಾ ಮಕ್ಕಳು ಗಾಯಗೊಂಡಿದ್ದು, ಆಸ್ಪತ್ರೆಗೆ ರವಾನಿಸಲಾಗಿದೆ. ಅವರಲ್ಲಿ ನಾಲ್ವರು ಡಿಸ್ಚಾರ್ಜ್ ಆಗಿದ್ದಾರೆ. ಮೂವರು ವಿದ್ಯಾರ್ಥಿಗಳು ಚಿಕಿತ್ಸೆ ಪಡೆಯುತ್ತಿದ್ದಾರೆ. ಒಬ್ಬ ವಿದ್ಯಾರ್ಥಿಯ ಸ್ಥಿತಿ ಚಿಂತಾಜನಕವಾಗಿದೆ, ಎಂದು ಡಿಸಿಪಿ ಹೇಳಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ