Breaking News ಉತ್ತರಾಖಂಡ್​ನಲ್ಲಿ ಹಿಮಕುಸಿತ; 10 ಮಂದಿ ಸಾವು, 8 ಮಂದಿಯ ರಕ್ಷಣೆ

| Updated By: ರಶ್ಮಿ ಕಲ್ಲಕಟ್ಟ

Updated on: Oct 04, 2022 | 4:53 PM

ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ, ಎನ್​​ಡಿ ಆರ್​​ಎಫ್, ಎಸ್​​ಡಿಆರ್​​ಎಫ್, ಸೇನೆ ಮತ್ತು ಐಟಿಬಿಪಿ ಸಿಬ್ಬಂದಿಗಳು ರಕ್ಷಣಾ ಕಾರ್ಯಾಚರಣೆ ಮಾಡುತ್ತಿದ್ದಾರೆ. ನಾನು ರಕ್ಷಣಾ ಸಚಿವರ ಜತೆ ಮಾತನಾಡಿದ್ದು, ತ್ವರಿತ ರಕ್ಷಣಾ ಕಾರ್ಯಾಚರಣೆಗಾಗಿ ಸೇನಾಪಡೆಯ ಸಹಾಯ ಕೇಳಿರುವುದಾಗಿ ತಿಳಿಸಿದ್ದಾರೆ.

Breaking News ಉತ್ತರಾಖಂಡ್​ನಲ್ಲಿ ಹಿಮಕುಸಿತ; 10 ಮಂದಿ ಸಾವು, 8 ಮಂದಿಯ ರಕ್ಷಣೆ
ಪ್ರಾತಿನಿಧಿಕ ಚಿತ್ರ
Follow us on

ಉತ್ತರಾಖಂಡದ (Uttarakhand) ದ್ರೌಪದಿಯ ದಂಡ-2 ಪರ್ವತ ಶಿಖರದಲ್ಲಿ ಮಂಗಳವಾರ ಹಿಮಕುಸಿತ (Avalanche) ಸಂಭವಿಸಿದ್ದು ಅಲ್ಲಿ  ನೆಹರು ಪರ್ವತಾರೋಹಣ ಸಂಸ್ಥೆಯ ಪರ್ವತಾರೋಹಿಗಳು ಸಿಲುಕಿದ್ದಾರೆ. ಇವರಲ್ಲಿ 10 ಮಂದಿ ಸಾವಿಗೀಡಾಗಿದ್ದು 8 ಮಂದಿಯನ್ನು ರಕ್ಷಿಸಲಾಗಿದೆ. . ಜಿಲ್ಲಾಡಳಿತದಿಂದ ತ್ವರಿತ, ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಇತ್ತೀಚಿನ ಮಾಹಿತಿ ಪ್ರಕಾರ, ಎಂಟು ಪರ್ವತಾರೋಹಿಗಳನ್ನು ರಕ್ಷಿಸಲಾಗಿದೆ. ಉಳಿದ (ಅಂದಾಜು) 21 ಜನರನ್ನು ರಕ್ಷಿಸುವ ಪ್ರಯತ್ನಗಳು ನಡೆಯುತ್ತಿವೆ ಎಂದು ಉತ್ತರಕಾಶಿಯ ಜಿಲ್ಲಾ ವಿಪತ್ತು ನಿರ್ವಹಣಾ ಕೇಂದ್ರ ತಿಳಿಸಿತ್ತು. ಈ ಬಗ್ಗೆ ಟ್ವೀಟ್ ಮಾಡಿದ ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ, ಎನ್​​ಡಿ ಆರ್​​ಎಫ್, ಎಸ್​​ಡಿಆರ್​​ಎಫ್, ಸೇನೆ ಮತ್ತು ಐಟಿಬಿಪಿ ಸಿಬ್ಬಂದಿಗಳು ರಕ್ಷಣಾ ಕಾರ್ಯಾಚರಣೆ ಮಾಡುತ್ತಿದ್ದಾರೆ. ನಾನು ರಕ್ಷಣಾ ಸಚಿವರ ಜತೆ ಮಾತನಾಡಿದ್ದು, ತ್ವರಿತ ರಕ್ಷಣಾ ಕಾರ್ಯಾಚರಣೆಗಾಗಿ ಸೇನಾಪಡೆಯ ಸಹಾಯ ಕೇಳಿರುವುದಾಗಿ ತಿಳಿಸಿದ್ದಾರೆ. ಕೇಂದ್ರ ಸರ್ಕಾರದಿಂದ ಎಲ್ಲ ರೀತಿಯ ಸಹಾಯ ಮಾಡುವುದಾಗಿ ಅವರು ಭರವಸೆ ನೀಡಿದ್ದಾರೆ. ಎಲ್ಲರನ್ನೂ ರಕ್ಷಿಸಲು ಪ್ರಯತ್ನಿಸುತ್ತೇವೆ ಎಂದು ಧಾಮಿ ಹೇಳಿದ್ದಾರೆ. ಐಎಎಫ್ ಎರಡು ಚೀತಾ ಹೆಲಿಕಾಪ್ಟರ್ ಗಳನ್ನು ನಿಯೋಜಿಸಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದೆ. ಇನ್ನಿತರ ಅಗತ್ಯಗಳಿಗಾಗಿ ಇತರ ಹೆಲಿಕಾಪ್ಟರ್ ಗಳನ್ನು ಸನ್ನದ್ಧವಾಗಿರಿಸಲಾಗಿದೆ ಎಂದು ಐಎಎಫ್ ಅಧಿಕಾರಿಗಳು ಹೇಳಿದ್ದಾರೆ.

ಇದುವರೆಗೆ ಸಿಕ್ಕಿರುವ ಮಾಹಿತಿ ಪ್ರಕಾರ ಇಂದು ಬೆಳಗ್ಗೆ 9 ಗಂಟೆ ಸುಮಾರಿಗೆ 16,000 ಅಡಿ ಎತ್ತರದಲ್ಲಿ ತಂಡ ಹಿಮಪಾತದಲ್ಲಿ ಸಿಲುಕಿದೆ.  ಪರ್ವತಾರೋಹಿಗಳನ್ನು  13,000 ಅಡಿ ಎತ್ತರದಲ್ಲಿರುವ ಹತ್ತಿರದ ಹೆಲಿಪ್ಯಾಡ್‌ಗೆ ಕರೆತಂದು  ನಂತರ ಡೆಹ್ರಾಡೂನ್‌ಗೆ ಕರೆತರಲಾಗುತ್ತದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ದುಃಖ ವ್ಯಕ್ತ ಪಡಿಸಿದ ರಾಜನಾಥ್ ಸಿಂಗ್
ದುರಂತದಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳಿಗೆ ಸಿಂಗ್ ಸಾಂತ್ವನ ಹೇಳಿದರು. “ಉತ್ತರಕಾಶಿಯ ನೆಹರು ಪರ್ವತಾರೋಹಣ ಸಂಸ್ಥೆಯು ನಡೆಸಿದ ಪರ್ವತಾರೋಹಣ  ವೇಳೆ ಸಂಭವಿಸಿದ ಭೂಕುಸಿತದಿಂದಾಗ ಅಮೂಲ್ಯ ಜೀವಗಳನ್ನು ಕಳೆದುಕೊಂಡಿದ್ದರಿಂದ ತೀವ್ರ ದುಃಖವಾಗಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡಿರುವ ಕುಟುಂಬಗಳಿಗೆ ನನ್ನ ಸಂತಾಪ” ಎಂದು ಅವರು ಟ್ವೀಟ್ ಮಾಡಿದ್ದಾರೆ.

ಇದಲ್ಲದೆ, ನಾನು ಸಿಎಂ ಜೊತೆ ಮಾತನಾಡಿ ಪರಿಸ್ಥಿತಿಯನ್ನು ಅವಲೋಕಿಸಿದ್ದೇನೆ ಎಂದು ಸಿಂಗ್ ಹೇಳಿದರು. ರಕ್ಷಣಾ ಮತ್ತು ಪರಿಹಾರ ಕಾರ್ಯಗಳನ್ನು ಆರೋಹಿಸಲು ನಾನು IAF ಗೆ ಸೂಚನೆ ನೀಡಿದ್ದೇನೆ ಎಂದು ಅವರು ಹೇಳಿದರು. ಸ್ವಲ್ಪ ಸಮಯದ ನಂತರ, ಹಿಮಪಾತದಲ್ಲಿ ಸಿಲುಕಿರುವ ಪರ್ವತರೋಹಿಗಳನ್ನು ರಕ್ಷಿಸಲು SDRF ತಂಡಗಳು ಡೆಹ್ರಾಡೂನ್‌ನ ಸಹಸ್ತ್ರಧಾರಾ ಹೆಲಿಪ್ಯಾಡ್‌ನಿಂದ  ಹೊರಟಿವೆ.

Published On - 1:50 pm, Tue, 4 October 22