Ayodhya Deepotsav: ಅಯೋಧ್ಯೆಯಲ್ಲಿ ಈ ಬಾರಿ ದೀಪಾವಳಿ ಆಚರಿಸಲಿದ್ದಾರೆ ಮೋದಿ; ದೀಪೋತ್ಸವದಲ್ಲಿ ಪ್ರಧಾನಿ ಭಾಗಿ

| Updated By: ಸುಷ್ಮಾ ಚಕ್ರೆ

Updated on: Oct 18, 2022 | 11:52 AM

ಈ ಬಾರಿ ಪ್ರಧಾನಿ ಮೋದಿ ಅಯೋಧ್ಯೆಯ ದೀಪೋತ್ಸವದಲ್ಲಿ ಪಾಲ್ಗೊಳ್ಳಲಿದ್ದಾರೆ. ಪ್ರಧಾನಿ ಮೋದಿ ಉತ್ತರ ಪ್ರದೇಶಕ್ಕೆ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಭದ್ರತಾ ವ್ಯವಸ್ಥೆಗಳನ್ನು ಹೆಚ್ಚಿಸಲಾಗಿದೆ.

Ayodhya Deepotsav: ಅಯೋಧ್ಯೆಯಲ್ಲಿ ಈ ಬಾರಿ ದೀಪಾವಳಿ ಆಚರಿಸಲಿದ್ದಾರೆ ಮೋದಿ; ದೀಪೋತ್ಸವದಲ್ಲಿ ಪ್ರಧಾನಿ ಭಾಗಿ
ಅಯೋಧ್ಯೆಯ ದೀಪೋತ್ಸವ
Image Credit source: AFP
Follow us on

ಅಯೋಧ್ಯೆ: ಪ್ರಧಾನಿ ನರೇಂದ್ರ ಮೋದಿ (Narendra Modi) ಭಾನುವಾರ (ಅಕ್ಟೋಬರ್ 23) ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ದೀಪಾವಳಿ ಹಬ್ಬವನ್ನು (Deepavali Festival) ಆಚರಿಸಲಿದ್ದಾರೆ. ಈ ಬಾರಿ ಪ್ರಧಾನಿ ಮೋದಿ ಅಯೋಧ್ಯೆಯ ದೀಪೋತ್ಸವದಲ್ಲಿ (Ayodhya Deepotsav) ಪಾಲ್ಗೊಳ್ಳಲಿದ್ದಾರೆ. ಅ. 23ರಿಂದ 3 ದಿನಗಳ ಕಾಲ ಅಯೋಧ್ಯೆಯ ದೀಪೋತ್ಸವ ನಡೆಯಲಿದೆ. ಪ್ರಧಾನಿ ಮೋದಿ ಉತ್ತರ ಪ್ರದೇಶಕ್ಕೆ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಭದ್ರತಾ ವ್ಯವಸ್ಥೆಗಳನ್ನು ಹೆಚ್ಚಿಸಲಾಗಿದೆ.

ಅ. 23ರ ಸಂಜೆ ಪ್ರಧಾನಿ ನರೇಂದ್ರ ಮೋದಿ ಅಯೋಧ್ಯೆಯ ಶ್ರೀ ರಾಮಜನ್ಮ ಭೂಮಿಯಲ್ಲಿ ಪ್ರಾರ್ಥನೆ ಸಲ್ಲಿಸುತ್ತಾರೆ. ನಂತರ ರಾಮಜನ್ಮ ಭೂಮಿ ತೀರ್ಥ ಕ್ಷೇತ್ರದ ಪ್ರವಾಸಿ ತಾಣವನ್ನು ವೀಕ್ಷಿಸುತ್ತಾರೆ. ಬಳಿಕ ಶ್ರೀರಾಮನ ‘ರಾಜ್ಯಾಭಿಷೇಕ’ ವೀಕ್ಷಿಸಲು ಪ್ರಧಾನಮಂತ್ರಿ ಶ್ರೀರಾಮ ಕಥಾ ಪಾರ್ಕ್‌ನಲ್ಲಿ ಉಪಸ್ಥಿತರಿರಲಿದ್ದಾರೆ. ಬಳಿಕ, ಸರಯೂ ಘಾಟ್‌ನಲ್ಲಿ ಆರತಿಯಲ್ಲಿ ಭಾಗವಹಿಸಲಿದ್ದಾರೆ. ನಂತರ ರಾಮ್ ಕಿ ಪೌಡಿ ಘಾಟ್‌ಗಳಲ್ಲಿ ‘ದೀಪೋತ್ಸವ’ದಲ್ಲಿ ಪ್ರಧಾನಿ ಮೋದಿ ಭಾಗವಹಿಸಲಿದ್ದಾರೆ.


ಉತ್ತರ ಪ್ರದೇಶದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಾಗಿನಿಂದಲೂ ಯೋಗಿ ಆದಿತ್ಯನಾಥ್ ಅವರ ಸರ್ಕಾರ ಮೆಗಾ ‘ದೀಪೋತ್ಸವ’ವನ್ನು ಆಯೋಜಿಸುತ್ತದೆ. 2021ರಲ್ಲಿ, ಅಯೋಧ್ಯೆಯ ಸರಯೂ ನದಿಯ ದಡದಲ್ಲಿ 9 ಲಕ್ಷಕ್ಕೂ ಹೆಚ್ಚು ಮಣ್ಣಿನ ಹಣತೆಗಳನ್ನು ಬೆಳಗಿಸುವ ಮೂಲಕ ವಿಶ್ವ ದಾಖಲೆಯನ್ನು ನಿರ್ಮಿಸಲಾಗಿತ್ತು. ಇದಕ್ಕೂ ಮೊದಲು 2020ರಲ್ಲಿ 5.84 ಲಕ್ಷ ದೀಪಗಳನ್ನು ಬೆಳಗಿಸಿ ದಾಖಲೆ ಸೃಷ್ಟಿಸಲಾಗಿತ್ತು. ಈ ವರ್ಷ ಶ್ರೀರಾಮನ ನಾಡಿನಲ್ಲಿ ದಾಖಲೆಯ 15 ಲಕ್ಷ ದೀಪಗಳು ಬೆಳಗಲಿವೆ.

ಇದನ್ನೂ ಓದಿ: ಗುಜರಾತ್‌ನಲ್ಲಿ 50 ಲಕ್ಷ ಆರೋಗ್ಯ ಆಯುಷ್ಮಾನ್ ಕಾರ್ಡ್‌ಗಳ ವಿತರಿಸಿದ ಪ್ರಧಾನಿ ನರೇಂದ್ರ ಮೋದಿ, ಅದರಿಂದ ಸಿಗುವ ಲಾಭಗಳು ಹೀಗಿವೆ

ನಾಳೆ (ಬುಧವಾರ) ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ದೀಪೋತ್ಸವ ಆಚರಣೆಯ ಸಿದ್ಧತೆಗಳನ್ನು ಪರಿಶೀಲಿಸಲು ಅಯೋಧ್ಯೆಗೆ ಭೇಟಿ ನೀಡಲಿದ್ದಾರೆ. ಕಳೆದ ಒಂದು ತಿಂಗಳ ಅವಧಿಯಲ್ಲಿ ಅಯೋಧ್ಯೆಗೆ ಯೋಗಿ ಆದಿತ್ಯನಾಥ್ ಅವರ ನಾಲ್ಕನೇ ಭೇಟಿ ಇದಾಗಿದೆ.

ಭಾನುವಾರದಿಂದ ಪ್ರಾರಂಭವಾಗುವ 3 ದಿನಗಳ ದೀಪೋತ್ಸವ ಆಚರಣೆಯಲ್ಲಿ, ರಷ್ಯಾ, ಮಲೇಷ್ಯಾ, ಶ್ರೀಲಂಕಾ ಮತ್ತು ಫಿಜಿ ಕಲಾವಿದರಿಂದ ರಾಮಲೀಲಾ ಪ್ರದರ್ಶನಗಳು ಪ್ರಮುಖ ಮುಖ್ಯಾಂಶಗಳಾಗಿವೆ. ಹೊಸ ದಾಖಲೆಯನ್ನು ಸೃಷ್ಟಿಸಲು ನಿರ್ಧರಿಸಲಾಗಿದ್ದು, 17 ಲಕ್ಷ ದೀವಟಿಗೆಗಳು ಅಥವಾ ದೀಪಗಳು – ಅವುಗಳಲ್ಲಿ ಹಲವು ಹಸುವಿನ ಸಗಣಿಯಿಂದ ಮಾಡಲ್ಪಟ್ಟಿದೆ – ಮೂರು ದಿನಗಳ ಸಂಭ್ರಮದ ಸಮಯದಲ್ಲಿ ಬೆಳಗಲಾಗುತ್ತದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ