ಅಯೋಧ್ಯೆ ಭೂ ಒಪ್ಪಂದ: ಸುಪ್ರೀಂಕೋರ್ಟ್ ಮಧ್ಯಪ್ರವೇಶಕ್ಕೆ ಮಾಯಾವತಿ, ಪ್ರಿಯಾಂಕಾ ಗಾಂಧಿ ಆಗ್ರಹ

ಅಯೋಧ್ಯೆ ಭೂ ಒಪ್ಪಂದ: ಸುಪ್ರೀಂಕೋರ್ಟ್ ಮಧ್ಯಪ್ರವೇಶಕ್ಕೆ ಮಾಯಾವತಿ, ಪ್ರಿಯಾಂಕಾ ಗಾಂಧಿ ಆಗ್ರಹ
ಪ್ರಿಯಾಂಕಾ - ಮಾಯಾವತಿ

Ayodhya land deal ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ  ಪ್ರಿಯಾಂಕಾ  ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣವಾಗುತ್ತಿರುವ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಟ್ ಸ್ವಯಂ ಪ್ರೇರಿತವಾಗಿ ಈ ವಿಷಯದ ಬಗ್ಗೆ ಮಧ್ಯಸ್ಥಿಕೆ ವಹಿಸಬೇಕು ಎಂದಿದ್ದಾರೆ.

TV9kannada Web Team

| Edited By: Rashmi Kallakatta

Dec 23, 2021 | 4:59 PM

ದೆಹಲಿ: 2019 ರ ನವೆಂಬರ್ 9ರಂದು ರಾಮ ಮಂದಿರ (Ram temple) ನಿರ್ಮಾಣಕ್ಕೆ ಅನುಮತಿ ನೀಡಿದ ಸುಪ್ರೀಂಕೋರ್ಟ್ ತೀರ್ಪಿನ ನಂತರ ಚುನಾಯಿತ ಸಾರ್ವಜನಿಕ ಪ್ರತಿನಿಧಿಗಳು ಮತ್ತು ರಾಜ್ಯ ಸರ್ಕಾರದ ಅಧಿಕಾರಿಗಳ ಸಂಬಂಧಿಕರು ಅಯೋಧ್ಯೆಯಲ್ಲಿ(Ayodhya) ಭೂಮಿಯನ್ನು ಖರೀದಿಸಿದ್ದಾರೆ ಎಂಬ ತನಿಖಾ ವರದಿಯ ಬಹಿರಂಗಪಡಿಸುವಿಕೆಯ ಕುರಿತು ಬಹುಜನ ಸಮಾಜ ಪಕ್ಷದ (BSP) ಮುಖ್ಯಸ್ಥೆ ಮಾಯಾವತಿ (Mayawati) ಗುರುವಾರ ಉನ್ನತ ಮಟ್ಟದ ತನಿಖೆಗೆ ಒತ್ತಾಯಿಸಿದರು. ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿಗೆ ಪ್ರತಿಕ್ರಿಯಿಸಿದ ಮಾಯಾವತಿ, ಸುಪ್ರೀಂಕೋರ್ಟ್ ಮಧ್ಯಪ್ರವೇಶಿಸಬೇಕು. ಈ ಭೂ ವ್ಯವಹಾರಗಳನ್ನು ರದ್ದುಗೊಳಿಸುವಂತೆ ಕೇಂದ್ರವು ಉತ್ತರ ಪ್ರದೇಶ ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಹೇಳಿದರು. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ (Yogi Adityanath) ಅವರು ಈ ಬಗ್ಗೆ ತನಿಖೆಗೆ ಆದೇಶಿಸಿದ ನಂತರ ಮತ್ತು ಒಂದು ವಾರದೊಳಗೆ ವರದಿಯನ್ನು ಕೋರಿದ ನಂತರ ಯುಪಿ ಮಾಜಿ ಮುಖ್ಯಮಂತ್ರಿಯ ಹೇಳಿಕೆ ಬಂದಿದೆ. ಏತನ್ಮಧ್ಯೆ, ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ(Priyanka Gandhi Vadra) ಅವರು ಅಯೋಧ್ಯೆ ಭೂ ಹಗರಣದ ಕುರಿತು ಉತ್ತರ ಪ್ರದೇಶ ಸರ್ಕಾರವು ಆದೇಶಿಸಿದ ತನಿಖೆಯು ತೋರಿಕೆಯದ್ದು ಎಂದು ಹೇಳಿದ್ದು ಸುಪ್ರೀಂಕೋರ್ಟ್ ಮಧ್ಯಸ್ಥಿಕೆಗೆ ಒತ್ತಾಯಿಸಿದರು. ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ  ಪ್ರಿಯಾಂಕಾ  ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣವಾಗುತ್ತಿರುವ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಟ್ ಸ್ವಯಂ ಪ್ರೇರಿತವಾಗಿ ಈ ವಿಷಯದ ಬಗ್ಗೆ ಮಧ್ಯಸ್ಥಿಕೆ ವಹಿಸಬೇಕು.  ಆಡಳಿತಾರೂಢ ಬಿಜೆಪಿಯನ್ನು ಗುರಿಯಾಗಿಸಿಕೊಂಡು, ಅದರ ನಾಯಕರು “ಲೂಟಿ” ಮಾಡುತ್ತಿದ್ದಾರೆ ಮತ್ತು ಜನರ ನಂಬಿಕೆಯನ್ನು ಘಾಸಿಗೊಳಿಸುತ್ತಿದ್ದಾರೆ ಎಂದು ಆರೋಪಿಸಿದರು.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟ್ವೀಟ್ ಮಾಡಿ ಹಿಂದೂ ಸತ್ಯದ ಹಾದಿಯಲ್ಲಿ ನಡೆಯುತ್ತಾನೆ. ಹಿಂದುತ್ವ ಧರ್ಮದ ನೆಪದಲ್ಲಿ ದರೋಡೆ ಮಾಡುತ್ತಿದೆ ಎಂದಿದ್ದಾರೆ.

ಭೂ ದಾಖಲೆಗಳ ಬಗ್ಗೆ ಇಂಡಿಯನ್ ಎಕ್ಸ್‌ಪ್ರೆಸ್‌ನ ತನಿಖೆಯು ಅಯೋಧ್ಯೆಯಲ್ಲಿ ಕನಿಷ್ಠ 15 ಭೂಮಿಯನ್ನು ಖರೀದಿಸಿದವರಲ್ಲಿ ಸ್ಥಳೀಯ ಶಾಸಕರು, ಅಯೋಧ್ಯೆಯಲ್ಲಿ ಸೇವೆ ಸಲ್ಲಿಸುತ್ತಿರುವ ಅಥವಾ ಸೇವೆ ಸಲ್ಲಿಸುತ್ತಿರುವ ಅಧಿಕಾರಶಾಹಿಗಳ ನಿಕಟ ಸಂಬಂಧಿಗಳು ಮತ್ತು ಭೂ ವಹಿವಾಟುಗಳನ್ನು ದೃಢೀಕರಿಸುವ ಕೆಲಸವಾಗಿದ್ದ ಸ್ಥಳೀಯ ಕಂದಾಯ ಅಧಿಕಾರಿಗಳು ಸೇರಿದ್ದಾರೆ ಎಂದು ಪತ್ತೆ ಹಚ್ಚಿತ್ತು.

ಈ ಕುರಿತು ರಾಜ್ಯ ಸರ್ಕಾರದ ತನಿಖೆಯನ್ನು ದೃಢಪಡಿಸಿದ ಉತ್ತರ ಪ್ರದೇಶದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ (ಕಂದಾಯ) ಮನೋಜ್ ಕುಮಾರ್ ಸಿಂಗ್, ಮುಖ್ಯಮಂತ್ರಿಯವರು ಮುಂದಿನ 5-7 ದಿನಗಳಲ್ಲಿ ಸೂಕ್ತ ದಾಖಲೆಗಳೊಂದಿಗೆ ವರದಿ ಕೇಳಿದ್ದಾರೆ. “ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಪತ್ರಿಕೆಯ ವರದಿಯನ್ನು ಗಮನಕ್ಕೆ ತೆಗೆದುಕೊಂಡಿದ್ದಾರೆ. ಅವರ ನಿರ್ದೇಶನದ ಮೇರೆಗೆ ತನಿಖೆಗೆ ಆದೇಶಿಸಲಾಗಿದೆ. ವಿಶೇಷ ಕಾರ್ಯದರ್ಶಿ ಶ್ರೇಣಿಯ ಅಧಿಕಾರಿಯೊಬ್ಬರಿಗೆ ತನಿಖೆ ನಡೆಸುವಂತೆ ಸೂಚಿಸಲಾಗಿದೆ ಎಂದು ಹೇಳಿದ್ದಾರೆ.

ಕಂದಾಯ ಇಲಾಖೆಯ ವಿಶೇಷ ಕಾರ್ಯದರ್ಶಿ ರಾಧೇ ಶ್ಯಾಮ್ ಮಿಶ್ರಾ ಅವರಿಗೆ ತನಿಖೆ ನಡೆಸಲು ತಿಳಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದನ್ನೂ ಓದಿ: PM Modi in Varanasi ಗೋವುಗಳ ಬಗ್ಗೆ ಗೇಲಿ ಮಾಡುವವರು ಕೋಟಿಗಟ್ಟಲೆ ಜನರ ಜೀವನೋಪಾಯವೇ ಅವು ಎಂಬುದನ್ನು ಮರೆಯುತ್ತಾರೆ: ಮೋದಿ

Follow us on

Related Stories

Most Read Stories

Click on your DTH Provider to Add TV9 Kannada