AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಯೋಧ್ಯೆ ರಾಮ ಮಂದಿರ ಆಡಳಿತ ಮಂಡಳಿಯಲ್ಲಿ ಮಹತ್ವದ ಬದಲಾವಣೆ: ಅನಿಲ್ ಮಿಶ್ರಾ ಆಪ್ತರ ವಜಾ, ಪ್ರವೇಶ ನಿರ್ಬಂಧ

ಅಯೋಧ್ಯೆ ರಾಮ ಮಂದಿರದಲ್ಲಿ ಕಾಣಿಕೆ ದುರುಪಯೋಗ ತನಿಖೆ ತೀವ್ರಗೊಂಡ ಹಿನ್ನೆಲೆಯಲ್ಲಿ ಆಡಳಿತ ಮಂಡಳಿಯಲ್ಲಿ ಪ್ರಮುಖ ಬದಲಾವಣೆಗಳಾಗಿವೆ. ಮಾಜಿ ಟ್ರಸ್ಟಿ ಅನಿಲ್ ಮಿಶ್ರಾ ಆಪ್ತ ಕೆ.ಡಿ. ತಿವಾರಿ ಮತ್ತು ಬಜರಂಗ್ ಪಾಠಕ್ ಅವರನ್ನು ವಜಾಗೊಳಿಸಿ, ಮಂದಿರ ಪ್ರವೇಶ ನಿರ್ಬಂಧಿಸಲಾಗಿದೆ. ಪಾರದರ್ಶಕತೆ ಹೆಚ್ಚಿಸಲು ಹೊಸ ಸಿಇಒ ನೇಮಕ ಪ್ರಕ್ರಿಯೆ ನಡೆಯುತ್ತಿದೆ.

ಅಯೋಧ್ಯೆ ರಾಮ ಮಂದಿರ ಆಡಳಿತ ಮಂಡಳಿಯಲ್ಲಿ ಮಹತ್ವದ ಬದಲಾವಣೆ: ಅನಿಲ್ ಮಿಶ್ರಾ ಆಪ್ತರ ವಜಾ, ಪ್ರವೇಶ ನಿರ್ಬಂಧ
ರಾಮ ಮಂದಿರ
ನಯನಾ ರಾಜೀವ್
|

Updated on: Aug 19, 2026 | 3:11 PM

Share

ಅಯೋಧ್ಯೆ, ಆಗಸ್ಟ್ 19: ಅಯೋಧ್ಯೆ(Ayodhya)ಯ ಶ್ರೀ ರಾಮ ಜನ್ಮಭೂಮಿ ಮಂದಿರದಲ್ಲಿ ನಡೆದ ಕಾಣಿಕೆ ಹಾಗೂ ದೇಣಿಗೆ ದುರುಪಯೋಗ ಪ್ರಕರಣದ ತನಿಖೆ ತೀವ್ರಗೊಂಡಿರುವ ನಡುವೆಯೇ, ದೇವಾಲಯದ ಆಡಳಿತ ವ್ಯವಸ್ಥೆಯಲ್ಲಿ ಪ್ರಮುಖ ಬದಲಾವಣೆಗಳನ್ನು ಮಾಡಲಾಗಿದೆ. ಟ್ರಸ್ಟ್‌ನ ಮಾಜಿ ಸದಸ್ಯ ಡಾ. ಅನಿಲ್ ಮಿಶ್ರಾ ಅವರ ಅತ್ಯಂತ ಆಪ್ತರಾಗಿದ್ದ ಇಬ್ಬರು ಪ್ರಮುಖ ಸಿಬ್ಬಂದಿಯನ್ನು ದೇವಾಲಯ ನಿರ್ವಹಣಾ ಸಮಿತಿಯಿಂದ ವಜಾಗೊಳಿಸಲಾಗಿದ್ದು, ಅವರ ಪ್ರವೇಶವನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ.

ಗೃಹ ಇಲಾಖೆ ರಚಿಸಿದ್ದ ವಿಶೇಷ ತನಿಖಾ ತಂಡವು (SIT) ತನ್ನ ಅಂತಿಮ ವರದಿಯನ್ನು ಮುಂದಿನ ಕ್ರಮಕ್ಕಾಗಿ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ಗೆ ಸಲ್ಲಿಸಿದ ಬೆನ್ನಲ್ಲೇ ಈ ಕಠಿಣ ಆಡಳಿತಾತ್ಮಕ ಕ್ರಮ ಜರುಗಿಸಲಾಗಿದೆ.

ವಜಾಗೊಂಡವರು ಯಾರು?: ರಾಮಲಲ್ಲಾ ವಿಗ್ರಹಕ್ಕೆ ಭಕ್ತರು ಅರ್ಪಿಸಿದ ಬೆಲೆಬಾಳುವ ಆಭರಣಗಳು ಮತ್ತು ಚಿನ್ನಾಭರಣಗಳ ಲೆಕ್ಕಪತ್ರ ನಿರ್ವಹಣೆ ನೋಡಿಕೊಳ್ಳುತ್ತಿದ್ದ ಕೆ.ಡಿ. ತಿವಾರಿ ಹಾಗೂ ವಿಐಪಿ ಭಕ್ತರಿಗೆ ಶಾಲು, ಪ್ರಸಾದ ಮತ್ತು ಕಾಣಿಕೆ ಉಡುಗೊರೆಗಳನ್ನು ವಿತರಿಸುತ್ತಿದ್ದ ಬಜರಂಗ್ ಪಾಠಕ್ ಅವರನ್ನು ವಜಾಗೊಳಿಸಲಾಗಿದೆ.

ದೂರಿನ ಹಿನ್ನೆಲೆಯಲ್ಲಿ ಇವರಿಬ್ಬರಿಗೂ ಮೊದಲು ಶೋಕಾಸ್ ನೋಟಿಸ್ ಜಾರಿ ಮಾಡಲಾಗಿತ್ತು. ನಂತರ ಮಂದಿರ ನಿರ್ವಹಣೆಯಿಂದ ಬಿಡುಗಡೆಗೊಳಿಸಿ ಬಾಗ್ ಬಿಜಾಸಿಯಲ್ಲಿರುವ ‘ತೀರ್ಥ ಕ್ಷೇತ್ರ ಪುರಂ’ಗೆ ವರ್ಗಾಯಿಸಲಾಗಿದ್ದು, ರಾಮ ಮಂದಿರ ಸಂಕೀರ್ಣಕ್ಕೆ ಪ್ರವೇಶಿಸುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

ಮತ್ತಷ್ಟು ಓದಿ: ಅಯೋಧ್ಯೆ ರಾಮಮಂದಿರಕ್ಕೆ ಶೀಘ್ರವೇ ಸಿಇಒ ನೇಮಕ: ಕಠಿಣ ಸಂದರ್ಶನ ಪೂರ್ಣಗೊಳಿಸಿದ ಉನ್ನತ ಮಟ್ಟದ ಶೋಧ ಸಮಿತಿ

ಮಂದಿರದಲ್ಲಿ ಕರ್ತವ್ಯದಲ್ಲಿದ್ದ ಮಹಿಳಾ ವೃತ್ತ ಅಧಿಕಾರಿಗೆ (CO) ಪ್ರಸಾದ ನೀಡುವ ವಿಚಾರದಲ್ಲಿ ಬಜರಂಗ್ ಪಾಠಕ್ ಅನುಚಿತವಾಗಿ ವರ್ತಿಸಿ ವಿವಾದ ಸೃಷ್ಟಿಸಿದ್ದು, ಈ ಸಂಬಂಧ ಮಹಿಳಾ ಅಧಿಕಾರಿ ನೀಡಿದ ದೂರು ಕೂಡ ಈ ತ್ವರಿತ ಕ್ರಮಕ್ಕೆ ಕಾರಣವಾಗಿದೆ.

ಉತ್ತರ ಪ್ರದೇಶ ಸರ್ಕಾರದ ಎಸ್‌ಐಟಿ ಸಲ್ಲಿಸಿದ ಅಂತಿಮ ವರದಿಯಲ್ಲಿ ಮಾಜಿ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಹಾಗೂ ಮಾಜಿ ಟ್ರಸ್ಟಿ ಅನಿಲ್ ಮಿಶ್ರಾ ಅವರ ಹೆಸರುಗಳನ್ನು ಆರೋಪಿಗಳ ಪಟ್ಟಿಯಿಂದ ಕೈಬಿಡಲಾಗಿದ್ದು, ಆಡಳಿತಾತ್ಮಕ ಲೋಪಗಳ ಕುರಿತ ಪ್ರತ್ಯೇಕ ತನಿಖೆ ಮುಂದುವರಿದಿದೆ.

ನಗದು ಎಣಿಕೆ ಕೊಠಡಿಯಲ್ಲಿ ಕಳ್ಳತನ ನಡೆಸಿದ ಆರೋಪದ ಮೇಲೆ ಎಂಟು ಮಂದಿ ಹೊರಗುತ್ತಿಗೆ ನೌಕರರನ್ನು ಈಗಾಗಲೇ ಬಂಧಿಸಿ ಜೈಲಿಗಟ್ಟಲಾಗಿದೆ. ಎಸ್‌ಐಟಿ ವರದಿ ಟ್ರಸ್ಟ್ ಕೈಸೇರುತ್ತಿದ್ದಂತೆ ಚಂಪತ್ ರಾಯ್ ಮತ್ತು ಅನಿಲ್ ಮಿಶ್ರಾ ಅವರು ಅಯೋಧ್ಯೆಯ ಪ್ರಮುಖ ಸಾಧು-ಸಂತರನ್ನು ಭೇಟಿಯಾಗಿ ಮಾತುಕತೆ ನಡೆಸುತ್ತಿದ್ದಾರೆ. ಹಲವು ಸಂತರು ಚಂಪತ್ ರಾಯ್ ಪರವಾಗಿ ಬೆಂಬಲ ಸೂಚಿಸಿದ್ದು, ತಮ್ಮ ವಿರುದ್ಧ ಕೇಳಿಬಂದ ಆರೋಪಗಳು ಸುಳ್ಳು ಪಿತೂರಿ ಎಂದು ಮಿಶ್ರಾ ಪ್ರತಿಪಾದಿಸಿದ್ದಾರೆ.

ಲಕ್ನೋ ವಲಯದ ಐಜಿ ಕಿರಣ್ ಎಸ್, ಅಯೋಧ್ಯೆ ಡಿಐಜಿ ಸೋಮೆನ್ ವರ್ಮಾ ಹಾಗೂ ಎಸ್‌ಎಸ್‌ಪಿ ಗೌರವ್ ಗ್ರೋವರ್ ನೇತೃತ್ವದ ಎರಡನೇ ಎಸ್‌ಐಟಿ ತಂಡವು ಭಾರತದ ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಸ್ವತಂತ್ರ ತನಿಖೆ ಮುಂದುವರಿಸಿದ್ದು, ಸೀಲ್ ಮಾಡಿದ ಲಕೋಟೆಯಲ್ಲಿ ತನ್ನ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲಿದೆ.

ದೇವಾಲಯದ ಆಡಳಿತದಲ್ಲಿ ಪಾರದರ್ಶಕತೆ ತರಲು ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ಗೆ ನೂತನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯನ್ನು (CEO) ನೇಮಿಸಲು ಶೋಧನಾ ಸಮಿತಿ ಈಗಾಗಲೇ 16 ಮಂದಿ ಅಭ್ಯರ್ಥಿಗಳ ಸಂದರ್ಶನ ಪ್ರಕ್ರಿಯೆ ಪೂರ್ಣಗೊಳಿಸಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ
ದೇವರ ಮೂರ್ತಿ ಎದುರಲ್ಲೇ ಕಿರಣ್ ಶಾಸ್ತ್ರಿ ಕಳ್ಳಾಟ; ಬಯಲು ಮಾಡಿದ ಸುದೀಪ್
ದೇವರ ಮೂರ್ತಿ ಎದುರಲ್ಲೇ ಕಿರಣ್ ಶಾಸ್ತ್ರಿ ಕಳ್ಳಾಟ; ಬಯಲು ಮಾಡಿದ ಸುದೀಪ್
ಹೆಚ್ಚುತ್ತಿರುವ ಕಸ್ತೂರಿ ರಂಗನ್ ಕಿಚ್ಚು ನಾಳೆ ಶೃಂಗೇರಿ ಬಂದ್​​ಗೆ ಕರೆ!
ಹೆಚ್ಚುತ್ತಿರುವ ಕಸ್ತೂರಿ ರಂಗನ್ ಕಿಚ್ಚು ನಾಳೆ ಶೃಂಗೇರಿ ಬಂದ್​​ಗೆ ಕರೆ!
ಇಸ್ಲಾಂಪೇಟೆಯಲ್ಲಿ ಮತ್ತೆ ಗಣಪತಿ ಮೆರವಣಿಗೆಗೆ ಶಾಸಕ ಕೃಷ್ಣಾನಾಯಕ್ ಚಾಲನೆ!
ಇಸ್ಲಾಂಪೇಟೆಯಲ್ಲಿ ಮತ್ತೆ ಗಣಪತಿ ಮೆರವಣಿಗೆಗೆ ಶಾಸಕ ಕೃಷ್ಣಾನಾಯಕ್ ಚಾಲನೆ!