AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮ ಮಂದಿರ ಹಗರಣ: ಚಂಪತ್ ರಾಯ್ ವಿರುದ್ಧ ತಿರುಗಿದ ಎಸ್‌ಐಟಿ ವರದಿ, ರೋಚಕ ರಹಸ್ಯ ಬಿಚ್ಚಿಟ್ಟ ರಹಸ್ಯ ಕ್ಯಾಮೆರಾ

ಅಯೋಧ್ಯೆ ರಾಮ ಮಂದಿರ ದೇಣಿಗೆ ಹಗರಣದಲ್ಲಿ ಎಸ್‌ಐಟಿ ವರದಿ ಸ್ಫೋಟಕ ಮಾಹಿತಿಗಳನ್ನು ಹೊರಹಾಕಿದೆ. ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ವಿರುದ್ಧ ಗಂಭೀರ ಆರೋಪಗಳು ಕೇಳಿಬಂದಿದ್ದು, ದೇಣಿಗೆ ಕಳ್ಳತನದ ಬಗ್ಗೆ ಅವರಿಗೆ ತಿಳಿದಿದ್ದರೂ ನಿರ್ಲಕ್ಷಿಸಿದ್ದರು ಎನ್ನಲಾಗಿದೆ. 40 ದಿನಗಳಲ್ಲಿ 70 ಬಾರಿ ಕಳ್ಳತನ ನಡೆದಿದ್ದು, ಚಂಪತ್ ರಾಯ್ ಆಪ್ತ ಟಿನ್ನು ಯಾದವ್ ಮುಖ್ಯ ಸೂತ್ರಧಾರಿ. ರಹಸ್ಯ ಕ್ಯಾಮೆರಾ ಅಳವಡಿಸಿ ಕಳ್ಳರ ಬಂಡವಾಳ ಬಯಲು ಮಾಡಲಾಗಿದೆ. ತನಿಖೆ ಮುಂದುವರಿದಿದೆ.

ರಾಮ ಮಂದಿರ ಹಗರಣ: ಚಂಪತ್ ರಾಯ್ ವಿರುದ್ಧ ತಿರುಗಿದ ಎಸ್‌ಐಟಿ ವರದಿ, ರೋಚಕ ರಹಸ್ಯ ಬಿಚ್ಚಿಟ್ಟ ರಹಸ್ಯ ಕ್ಯಾಮೆರಾ
ಚಂಪತ್
ನಯನಾ ರಾಜೀವ್
|

Updated on:Jun 27, 2026 | 12:30 PM

Share

ಅಯೋಧ್ಯೆ, ಜೂನ್ 27: ಅಯೋಧ್ಯೆ ರಾಮ ಮಂದಿರ(Ram Mandir)ದ ದೇಣಿಗೆ ಕಳ್ಳತನ ಹಗರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ (SIT) ಸಿದ್ಧಪಡಿಸಿರುವ ವರದಿಯು ಸ್ಪೋಟಕ ಮಾಹಿತಿಗಳನ್ನು ಹೊರಹಾಕಿದೆ. ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ನಿನ್ನೆ ದಿಢೀರ್ ರಾಜೀನಾಮೆ ನೀಡಿದ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ಅವರ ಪಾತ್ರದ ಬಗ್ಗೆ ಎಸ್‌ಐಟಿ ಗಂಭೀರ ಪ್ರಶ್ನೆಗಳನ್ನು ಎತ್ತಿದ್ದು, ಇಡೀ ಹಗರಣದಲ್ಲಿ ಇವರ ಆಪ್ತರೇ ಭಾಗಿಯಾಗಿರುವುದು ದೃಢಪಟ್ಟಿದೆ.

40 ದಿನ, 70 ಬಾರಿ ಕಳ್ಳತನ, ಚಂಪತ್ ರಾಯ್‌ಗೆ ತಿಳಿದಿತ್ತೇ? ಎಸ್‌ಐಟಿ ಅಧಿಕಾರಿಗಳು ಏಪ್ರಿಲ್ 27 ರಿಂದ ಜೂನ್ 5 ರವರೆಗಿನ ಸಿಸಿಟಿವಿ ದೃಶ್ಯಾವಳಿಗಳನ್ನು ಜಾಲಾಡಿದಾಗ ಬೆಚ್ಚಿಬೀಳುವ ಸತ್ಯ ಬಯಲಾಗಿದೆ. ದೇಗುಲದ ಹಣ ಎಣಿಸುವ ಸಿಬ್ಬಂದಿ ಕೇವಲ 40 ದಿನಗಳ ಅವಧಿಯಲ್ಲಿ ಬರೋಬ್ಬರಿ 70 ಬಾರಿ ಕಾಣಿಕೆ ಹಣವನ್ನು ಕದ್ದಿದ್ದಾರೆ.

ಈ ಹಿಂದೆಯೇ ಹಣದ ವ್ಯತ್ಯಾಸದ ಬಗ್ಗೆ ಚಂಪತ್ ರಾಯ್ ಅವರಿಗೆ ದೂರುಗಳು ಬಂದಿದ್ದರೂ, ಅವರು ಪೊಲೀಸರಿಗೆ ದೂರು ನೀಡದೆ ಉದ್ದೇಶಪೂರ್ವಕವಾಗಿ ನಿರ್ಲಕ್ಷಿಸಿದ್ದರು ಎಂದು ವರದಿ ಹೇಳಿದೆ. ಬಂಧಿತ ಎಂಟು ಆರೋಪಿಗಳೂ ಕೂಡ ಚಂಪತ್ ರಾಯ್ ಮತ್ತು ಅನಿಲ್ ಮಿಶ್ರಾ ಅವರ ನೇರ ಶಿಫಾರಸಿನ ಮೇರೆಗೆ ಬ್ಯಾಕ್ ಗ್ರೌಂಡ್ ವೆರಿಫಿಕೇಶನ್ ಇಲ್ಲದೆ ಕೆಲಸಕ್ಕೆ ಸೇರಿದವರಾಗಿದ್ದಾರೆ.

ಹಗರಣದ ಮುಖ್ಯ ಸೂತ್ರಧಾರಿ ಚಂಪತ್ ರಾಯ್ ಅವರ ಆಪ್ತ ಸಹಾಯಕ ರಾಮ್ ಶಂಕರ್ ಯಾದವ್ ಅಲಿಯಾಸ್ ಟಿನ್ನು ಯಾದವ್ ಎಂದು ಎಸ್‌ಐಟಿ ಹೆಸರಿಸಿದೆ. ದೇಣಿಗೆ ಪೆಟ್ಟಿಗೆಗಳ (ಹುಂಡಿ) ಕೀಲಿಗಳು ಇವರ ಬಳಿಯೇ ಇರುತ್ತಿದ್ದವು. ಯಾರನ್ನು ಕೆಲಸಕ್ಕೆ ತರಬೇಕು, ಯಾರಿಗೆ ಹಣ ಎಣಿಸುವ ಜವಾಬ್ದಾರಿ ನೀಡಬೇಕು ಮತ್ತು ದೇವಸ್ಥಾನದ ಆವರಣದಲ್ಲಿ ಪೊಲೀಸರನ್ನು ಎಲ್ಲಿ ನಿಯೋಜಿಸಬೇಕು ಎಂಬುದನ್ನು ಸ್ವತಃ ಇವರೇ ನಿರ್ಧರಿಸುತ್ತಿದ್ದಷ್ಟು ಪ್ರಭಾವಶಾಲಿಯಾಗಿದ್ದರು.

ಮತ್ತಷ್ಟು ಓದಿ: ಅಯೋಧ್ಯೆ ರಾಮ ಮಂದಿರ ದೇಣಿಗೆ ಕಳ್ಳತನ: ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಆಪ್ತ ಸಹಾಯಕ ಸೇರಿ 8 ಮಂದಿ ಬಂಧನ

ಸಿಸಿಟಿವಿ ಆಫ್ ಮಾಡ್ತಿದ್ದರು; ಸಿಕ್ಕಿಬಿದ್ದದ್ದು ಹೇಗೆ? ಆರೋಪಿಗಳಾದ ಟಿನ್ನು ಯಾದವ್, ಮನೀಶ್, ಲವ್ ಕುಶ್ ಮತ್ತು ಅನುಕಲ್ಪ್ ಅವರಿಗೆ ಎಣಿಕೆ ಕೊಠಡಿಯಲ್ಲಿದ್ದ ಸಾಮಾನ್ಯ ಸಿಸಿಟಿವಿ ಕ್ಯಾಮೆರಾಗಳು ಎಲ್ಲೆಲ್ಲಿವೆ ಮತ್ತು ಅವುಗಳ ಕಣ್ಣು ತಪ್ಪಿಸುವ ‘ಬ್ಲೈಂಡ್ ಸ್ಪಾಟ್‌ಗಳು’ ಯಾವುವು ಎಂಬುದು ಚೆನ್ನಾಗಿ ಗೊತ್ತಿತ್ತು.

ಹಣವನ್ನು ಜೇಬಿಗೆ ಇಳಿಸುವಾಗ ಇವರು ಸಿಸಿಟಿವಿ ಕ್ಯಾಮೆರಾಗಳನ್ನು ಆಫ್ ಮಾಡುತ್ತಿದ್ದರು ಅಥವಾ ಅದರ ವೀಕ್ಷಣೆಗೆ ಅಡ್ಡಿಪಡಿಸುತ್ತಿದ್ದರು. ಆದರೆ, ತನಿಖಾಧಿಕಾರಿಗಳು ಆ ಕೊಠಡಿಯೊಳಗೆ ಯಾರಿಗೂ ತಿಳಿಯದಂತೆ ಅಳವಡಿಸಿದ್ದ ‘ಗುಪ್ತ ಕಣ್ಗಾವಲು ಕ್ಯಾಮೆರಾ’ (Hidden Spy Camera) ಬಗ್ಗೆ ಆರೋಪಿಗಳಿಗೆ ಸುಳಿವಿರಲಿಲ್ಲ. ಈ ರಹಸ್ಯ ಕ್ಯಾಮೆರಾದಲ್ಲಿ ಇವರು ನಗದು ಕದಿಯುವ ದೃಶ್ಯಗಳು ಡಿಜಿಟಲ್ ಸಾಕ್ಷಿಯಾಗಿ ಸೆರೆಯಾಗಿದ್ದು, ಇಡೀ ಗ್ಯಾಂಗ್ ಜೈಲು ಪಾಲಾಗುವಂತೆ ಮಾಡಿದೆ.

ಬಂಧಿತರಲ್ಲಿ ಟಿನ್ನು ಯಾದವ್ ಮತ್ತು ಸುಭಾಷ್ ಟ್ರಸ್ಟ್‌ನ ನೌಕರರಾದರೆ, ಉಳಿದ ಆರು ಜನ ಎಣಿಕೆಗೆ ಸಹಾಯ ಮಾಡಲು ಬಂದಿದ್ದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI)ದ ಸಿಬ್ಬಂದಿಯಾಗಿದ್ದಾರೆ. ಸದ್ಯ ಈ ಆರೋಪಗಳ ಕುರಿತು ನ್ಯಾಯಾಲಯದಲ್ಲಿ ಅಂತಿಮ ತೀರ್ಪು ಬರಬೇಕಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 12:29 pm, Sat, 27 June 26

Follow Us
ರಾಯಚೂರು ಜಿಲ್ಲೆಯಲ್ಲಿ 318 ಶೂನ್ಯ ಶಿಕ್ಷಕ ಸರ್ಕಾರಿ ಶಾಲೆಗಳು!
ರಾಯಚೂರು ಜಿಲ್ಲೆಯಲ್ಲಿ 318 ಶೂನ್ಯ ಶಿಕ್ಷಕ ಸರ್ಕಾರಿ ಶಾಲೆಗಳು!
ಈ ರಾಶಿಯವರಿಗೆ ಇಂದು ಅದೃಷ್ಟ ಕೂಡಿ ಬರಲಿದೆ
ಈ ರಾಶಿಯವರಿಗೆ ಇಂದು ಅದೃಷ್ಟ ಕೂಡಿ ಬರಲಿದೆ
ಚಿಕ್ಕಬಳ್ಳಾಪುರ: ಅನ್ನಭಾಗ್ಯ ಯೋಜನೆಯ ಗೋಧಿ ಅಕ್ರಮ ಸಾಗಾಟ, 14 ಟನ್ ವಶಕ್ಕೆ
ಚಿಕ್ಕಬಳ್ಳಾಪುರ: ಅನ್ನಭಾಗ್ಯ ಯೋಜನೆಯ ಗೋಧಿ ಅಕ್ರಮ ಸಾಗಾಟ, 14 ಟನ್ ವಶಕ್ಕೆ
ಮೈಸೂರು ರಸ್ತೆ To ಮಾಗಡಿ ರಸ್ತೆ ಕೇವಲ 15 ನಿಮಿಷ: ಹೇಗಿದೆ ನೋಡಿ ಕೃಷ್ಣ ಪಥ
ಮೈಸೂರು ರಸ್ತೆ To ಮಾಗಡಿ ರಸ್ತೆ ಕೇವಲ 15 ನಿಮಿಷ: ಹೇಗಿದೆ ನೋಡಿ ಕೃಷ್ಣ ಪಥ
ಒಂದೇ ದಿನ 15 ಲಕ್ಷ ಸಸಿನೆಟ್ಟು ಗಿನ್ನಿಸ್​​ ದಾಖಲೆ ಬರೆಯಲು ಮುಂದಾದ ಬಿಡಿಎ
ಒಂದೇ ದಿನ 15 ಲಕ್ಷ ಸಸಿನೆಟ್ಟು ಗಿನ್ನಿಸ್​​ ದಾಖಲೆ ಬರೆಯಲು ಮುಂದಾದ ಬಿಡಿಎ
‘ಮೀಸಲಾತಿ ನಂಬಿದ್ರೆ ಶಾಸಕನೇ ಆಗ್ತಿರಲಿಲ್ಲ
‘ಮೀಸಲಾತಿ ನಂಬಿದ್ರೆ ಶಾಸಕನೇ ಆಗ್ತಿರಲಿಲ್ಲ
5 ಜನ ಜಲಸಮಾಧಿ:ಕಾವೇರಿ ನದಿ ದಡದಲ್ಲಿ ಬ್ಯಾರಿಕೇಡ್ ಅಳವಡಿಕೆಗೆ ಸೂಚನೆ
5 ಜನ ಜಲಸಮಾಧಿ:ಕಾವೇರಿ ನದಿ ದಡದಲ್ಲಿ ಬ್ಯಾರಿಕೇಡ್ ಅಳವಡಿಕೆಗೆ ಸೂಚನೆ
ವಿಜಯೇಂದ್ರರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲು ಅಡ್ಡಮತದಾನ ಮಾಡಿದ್ರಾ?
ವಿಜಯೇಂದ್ರರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲು ಅಡ್ಡಮತದಾನ ಮಾಡಿದ್ರಾ?
ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಹರಿದುಬಂದ ಪ್ರವಾಸಿಗರ ದಂಡು, ಭಕ್ತ ಸಾಗರ
ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಹರಿದುಬಂದ ಪ್ರವಾಸಿಗರ ದಂಡು, ಭಕ್ತ ಸಾಗರ
ಮಳೆಯಿಲ್ಲದೇ ಬರಿದಾಯ್ತು ಭೀಮಾ ನದಿ: ಜಾನುವಾರುಗಳಿಗೂ ಕುಡಿಯಲು ನೀರಿಲ್ಲ
ಮಳೆಯಿಲ್ಲದೇ ಬರಿದಾಯ್ತು ಭೀಮಾ ನದಿ: ಜಾನುವಾರುಗಳಿಗೂ ಕುಡಿಯಲು ನೀರಿಲ್ಲ