AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮಮಂದಿರ ದೇಣಿಗೆ ಕಳ್ಳತನ ಪ್ರಕರಣ: ಚಂಪತ್ ರಾಯ್, ಅನಿಲ್ ಮಿಶ್ರಾಗೆ ಎಸ್​ಐಟಿ ಕ್ಲೀನ್ ಚಿಟ್

Ayodhya Ram Mandir donation theft case, Champat Rai, Anil Mishra get clean-chit: ಅಯೋಧ್ಯೆ ರಾಮಮಂದಿರ ದೇಣಿಗೆ ಕಳ್ಳತನದ ಆರೋಪಿಗಳ ಪೈಕಿ ಚಂಪತ್ ರಾಯ್ ಮತ್ತು ಅನಿಲ್ ಮಿಶ್ರಾ ಅವರ ಹೆಸರನ್ನು SIT ತನ್ನ ಅಂತಿಮ ವರದಿಯಲ್ಲಿ ಕೈಬಿಟ್ಟಿದೆ. ಚಂಪತ್ ರಾಯ್ ಅವರು ಶ್ರೀರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್​ನ ಮಾಜಿ ಪ್ರಧಾನ ಕಾರ್ಯದರ್ಶಿಯಾಗಿದ್ದಾರೆ. ಅನಿಲ್ ಮಿಶ್ರಾ ಅವರು ಟ್ರಸ್ಟ್​ನ ಮಾಜಿ ಸದಸ್ಯರಾಗಿದ್ದಾರೆ.

ರಾಮಮಂದಿರ ದೇಣಿಗೆ ಕಳ್ಳತನ ಪ್ರಕರಣ: ಚಂಪತ್ ರಾಯ್, ಅನಿಲ್ ಮಿಶ್ರಾಗೆ ಎಸ್​ಐಟಿ ಕ್ಲೀನ್ ಚಿಟ್
ಅಯೋಧ್ಯೆ ರಾಮಮಂದಿರದಲ್ಲಿ ಶ್ರೀ ರಾಮನ ಮೂರ್ತಿImage Credit source: Getty Images
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Aug 18, 2026 | 11:29 AM

Share

ನವದೆಹಲಿ, ಆಗಸ್ಟ್ 18: ಅಯೋಧ್ಯೆಯ ರಾಮಮಂದಿರದ ದೇಣಿಗೆ ಕಳ್ಳತನ ಪ್ರಕರಣಕ್ಕೆ (Ram Temple donation theft case) ಸಂಬಂಧಿಸಿದಂತೆ, ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಮಾಜಿ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟ್‌ನ ಮಾಜಿ ಸದಸ್ಯ ಅನಿಲ್ ಮಿಶ್ರಾ ಅವರಿಗೆ ವಿಶೇಷ ತನಿಖಾ ತಂಡ (SIT) ಕ್ಲೀನ್ ಚಿಟ್ ನೀಡಿದೆ ಎಂದು ಎನ್​ಡಿಟಿವಿ ವಾಹಿನಿ ವರದಿ ಮಾಡಿದೆ.

ವಿಚಾರಣೆಯ ಸಂದರ್ಭದಲ್ಲಿ, ಚಂಪತ್ ರಾಯ್ ಅವರು ತಮ್ಮ ಮೇಲಿರುವ ಆರೋಪಗಳನ್ನು ನಿರಾಕರಿಸಿದ್ದರು. ತಾವೇ ಸ್ವತಃ ಈ ಸಂಬಂಧ ದೂರು ದಾಖಲಿಸಿದ್ದಾಗಿ ಮತ್ತು ದೇಣಿಗೆ ಸಂಗ್ರಹದಲ್ಲಿ ಪಾರದರ್ಶಕತೆ ಕಾಪಾಡಲು ತಾವು ಬದ್ಧರಾಗಿದ್ದಾಗಿ ಅವರು ತಿಳಿಸಿದ್ದರು. ಪ್ರಕರಣ ಬೆಳಕಿಗೆ ಬಂದಾಗ ತಾನು ಪ್ರಾಮಾಣಿಕವಾಗಿ ನಡೆದುಕೊಂಡಿದ್ದಾಗಿಯೂ ಅವರು ವಾದಿಸಿದ್ದರು.

ಇದನ್ನೂ ಓದಿ: ಕೇದಾರನಾಥ ದೇಗುಲದ ಮಾಜಿ ಪ್ರಧಾನ ಅರ್ಚಕ ಗುರುಲಿಂಗಯ್ಯ ಲಿಂಗೈಕ್ಯ: ಬೆಳಗಾವಿಯಲ್ಲಿ ಇಂದು ಕ್ರಿಯಾ ಸಮಾಧಿ

ಜೂನ್ 27ರಂದು ಚಂಪತ್, ಮಿಶ್ರಾ ರಾಜೀನಾಮೆ

ದೇಣಿಗೆ ಸಂಗ್ರಹದಲ್ಲಿ ಅವ್ಯವಹಾರ ನಡೆದಿದೆ ಎಂಬ ಆರೋಪಗಳು ಕೇಳಿಬಂದಾಗ, ಜೂನ್ 27ರಂದು ಚಂಪತ್ ರಾಯ್ ಮತ್ತು ಅನಿಲ್ ಮಿಶ್ರಾ ಅವರು ನೈತಿಕ ಹೊಣೆ ಹೊತ್ತು ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಿದ್ದರು.

ಇದೇ ವೇಳೆ, ಉತ್ತರ ಪ್ರದೇಶ ಗೃಹ ಇಲಾಖೆಯು SIT ಸಲ್ಲಿಸಿದ ಈ ಅಂತಿಮ ವರದಿಯನ್ನು ಮುಂದಿನ ಕ್ರಮಕ್ಕಾಗಿ ರಾಮಮಂದಿರ ಟ್ರಸ್ಟ್‌ಗೆ ಹಸ್ತಾಂತರಿಸಿದೆ.

ಉತ್ತರಪ್ರದೇಶ ಸರ್ಕಾರ ಜೂನ್ 13ರಂದು ದೇವಸ್ಥಾನ ಟ್ರಸ್ಟ್ ಮನವಿ ಮೇರೆಗೆ ವಿಶೇಷ ತನಿಖಾ ತಂಡ ರಚಿಸಿತು. ಜೂನ್ 23ರಂದು ಪ್ರಾಥಮಿಕ ವರದಿಯನ್ನು ಈ ತಂಡ ಸಲ್ಲಿಸಿತು. ಅದಾದ ಬಳಿಕ ಟ್ರಸ್ಟ್ ಸದಸ್ಯರು ರಾಮಜನ್ಮಭೂಮಿ ಪೊಲೀಸ್ ಠಾಣೆಯಲ್ಲಿ ಲಿಖಿತ ದೂರು ದಾಖಲಿಸುತ್ತಾರೆ. ಜೂನ್ 25ರಂದು ಠಾಣೆಯಲ್ಲಿ ಎಫ್​ಐಆರ್ ದಾಖಲಾಗುತ್ತದೆ.

ಇದನ್ನೂ ಓದಿ: ವಾಲ್ಮೀಕಿ ನಿಗಮ ಹಗರಣ ಪ್ರಕರಣ: ಸುಪ್ರೀಂ ಕೋರ್ಟ್​​ನಿಂದ ಮಹತ್ವದ ತೀರ್ಪು, ಆರೋಪಿ ಕಾಕಿ ಶ್ರೀನಿವಾಸ್ ರಾವ್ ಗೆ ಜಾಮೀನು

SIT ತನ್ನ ಅಂತಿಮ ವರದಿಯಲ್ಲಿ 8 ಜನರನ್ನು ಮಾತ್ರ ಆರೋಪಿಗಳೆಂದು ಹೆಸರಿಸಿದೆ. ಅವಿನಾಶ್ ಶುಕ್ಲಾ, ಅನುಕಲ್ಪ್ ಮಿಶ್ರಾ, ಲವಕುಶ ಮಿಶ್ರಾ, ಮನೀಶ್ ಕುಮಾರ್ ಯಾದವ್, ಕರುಣೇಶ್ ಪಾಂಡೆ, ರಾಮಶಂಕರ್ ಮಿಶ್ರಾ, ಸುಭಾಷ್ ಶ್ರೀವಾಸ್ತವ ಮತ್ತು ರಾಮಶಂಕರ್ ಯಾದವ್ ಅವರು ಈ ಆರೋಪಿಗಳಾಗಿದ್ದಾರೆ. ಇವರನ್ನು ಈಗಾಗಲೇ ಬಂಧಿಸಲಾಗಿದ್ದು, ಪ್ರಕರಣದ ತನಿಖೆ ಮುಂದುವರಿದಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಸುಗ್ಗನಹಳ್ಳಿ ವಿಜಯಸಾರಥಿ
ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಧಾರವಾಡ ಕೃಷಿ ಮೇಳದಲ್ಲಿ ಎಲ್ಲರ ಗಮನ ಸೆಳೆದ ವಿವಿಧ ತಳಿಯ ಜಾನುವಾರು!
ಧಾರವಾಡ ಕೃಷಿ ಮೇಳದಲ್ಲಿ ಎಲ್ಲರ ಗಮನ ಸೆಳೆದ ವಿವಿಧ ತಳಿಯ ಜಾನುವಾರು!
ಬೆಂಗಳೂರು ಪಿಂಕ್ ಲೈನ್ ಮೆಟ್ರೋ ಮಾರ್ಗಕ್ಕೆ ಸ್ಥಳೀಯರಿಂದಲೇ ಚಾಲನೆ!
ಬೆಂಗಳೂರು ಪಿಂಕ್ ಲೈನ್ ಮೆಟ್ರೋ ಮಾರ್ಗಕ್ಕೆ ಸ್ಥಳೀಯರಿಂದಲೇ ಚಾಲನೆ!
ಚುನಾವಣಾ ಆಯೋಗದ ವಿರುದ್ಧ 84 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಾದಯಾತ್ರೆ
ಚುನಾವಣಾ ಆಯೋಗದ ವಿರುದ್ಧ 84 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಾದಯಾತ್ರೆ
‘ಬಿಗ್ ಬಾಸ್​ಗೆ ಮೂರು ಬಿಟ್ಟು ಬರ್ತಾರೆ ಅಂದುಕೊಂಡಿರಲಿಲ್ಲ’; ವೈಷ್ಣವಿ
‘ಬಿಗ್ ಬಾಸ್​ಗೆ ಮೂರು ಬಿಟ್ಟು ಬರ್ತಾರೆ ಅಂದುಕೊಂಡಿರಲಿಲ್ಲ’; ವೈಷ್ಣವಿ
ಕೆಪಿಎಸ್​ಸಿ ಅಕ್ರಮ: ಬಸವರಾಜ್ ಕನ್ನಾಳೆ ಡೈರಿಯಲ್ಲಿ ಸಿಕ್ತು ಸ್ಫೋಟಕ ಮಾಹಿತಿ
ಕೆಪಿಎಸ್​ಸಿ ಅಕ್ರಮ: ಬಸವರಾಜ್ ಕನ್ನಾಳೆ ಡೈರಿಯಲ್ಲಿ ಸಿಕ್ತು ಸ್ಫೋಟಕ ಮಾಹಿತಿ
ಬಿಜೆಪಿ ಶಾಸಕ ಮುನಿರತ್ನ ಮನೆ ಬಳಿ ಭಾರಿ ಹೈಡ್ರಾಮಾ
ಬಿಜೆಪಿ ಶಾಸಕ ಮುನಿರತ್ನ ಮನೆ ಬಳಿ ಭಾರಿ ಹೈಡ್ರಾಮಾ
ಛತ್ತೀಸ್​ಗಢ: 48 ಗಂಟೆಗಳ ಮಳೆಗೆ ಕುಸಿದ ಬೆಟ್ಟ
ಛತ್ತೀಸ್​ಗಢ: 48 ಗಂಟೆಗಳ ಮಳೆಗೆ ಕುಸಿದ ಬೆಟ್ಟ
ಲಾರಿ ಅಡ್ಡಗಟ್ಟಿದ ಗಜಪಡೆ: ಛಂಗನೆ ನೆಗೆದು ರಸ್ತೆ ದಾಟಿದ ಬೃಹತ್ ಚಿರತೆ!
ಲಾರಿ ಅಡ್ಡಗಟ್ಟಿದ ಗಜಪಡೆ: ಛಂಗನೆ ನೆಗೆದು ರಸ್ತೆ ದಾಟಿದ ಬೃಹತ್ ಚಿರತೆ!
'ಮನೆಯಲ್ಲಿ ಅಮ್ಮ ಇರಲಿಲ್ಲ, ಹೀಗಾಗಿ ಬರೋದು ತಡವಾಯ್ತು': ಸಚಿವ ಯತೀಂದ್ರ
'ಮನೆಯಲ್ಲಿ ಅಮ್ಮ ಇರಲಿಲ್ಲ, ಹೀಗಾಗಿ ಬರೋದು ತಡವಾಯ್ತು': ಸಚಿವ ಯತೀಂದ್ರ
ಸಮಯ ಪ್ರಜ್ಞೆ ಇಲ್ವೇನ್ರೀ: ಯತೀಂದ್ರ ಬಗ್ಗೆ ತನ್ವೀರ್ ಸೇಠ್ ಬಹಿರಂಗ ಅಸಮಾಧಾನ
ಸಮಯ ಪ್ರಜ್ಞೆ ಇಲ್ವೇನ್ರೀ: ಯತೀಂದ್ರ ಬಗ್ಗೆ ತನ್ವೀರ್ ಸೇಠ್ ಬಹಿರಂಗ ಅಸಮಾಧಾನ