AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮ ಮಂದಿರ ದೇಣಿಗೆ ಹಗರಣದ ತನಿಖೆ ವೇಳೆ ಬಯಲಾಯ್ತು ನಕಲಿ ನೇಮಕಾತಿ ದಂಧೆ, ಸಿಗದ ಉದ್ಯೋಗ ದಾಖಲೆಗಳು

ಅಯೋಧ್ಯೆ ರಾಮ ಮಂದಿರದ ದೇಣಿಗೆ ಹಗರಣದ ತನಿಖೆಯಲ್ಲಿ ನಕಲಿ ನೇಮಕಾತಿ ದಂಧೆ ಬಯಲಾಗಿದೆ. ಅಧಿಕೃತ ದಾಖಲೆಗಳಿಲ್ಲದೆ ಹಲವು ಸಿಬ್ಬಂದಿ ನೇಮಕಗೊಂಡಿದ್ದು, ಲಂಚ ಪಡೆದ ಶಂಕೆ ಇದೆ. ಆರೋಪಿಗಳ ಮನೆಗಳ ಮೇಲೆ ದಾಳಿ ನಡೆಸಿ 80 ಲಕ್ಷ ರೂ. ನಗದು ವಶಪಡಿಸಿಕೊಳ್ಳಲಾಗಿದೆ. ಟ್ರಸ್ಟ್ ಸದಸ್ಯರ ಸಂಬಂಧಿಕರೂ ಇದರಲ್ಲಿ ಭಾಗಿಯಾಗಿದ್ದು, ಭೂ ಹಗರಣವೂ ತನಿಖೆಯ ವ್ಯಾಪ್ತಿಗೆ ಬಂದಿದೆ.

ರಾಮ ಮಂದಿರ ದೇಣಿಗೆ ಹಗರಣದ ತನಿಖೆ ವೇಳೆ ಬಯಲಾಯ್ತು ನಕಲಿ ನೇಮಕಾತಿ ದಂಧೆ, ಸಿಗದ ಉದ್ಯೋಗ ದಾಖಲೆಗಳು
ರಾಮ ಮಂದಿರ
ನಯನಾ ರಾಜೀವ್
|

Updated on: Jul 02, 2026 | 9:30 AM

Share

ಅಯೋಧ್ಯೆ, ಜುಲೈ 02: ಅಯೋಧ್ಯೆ ರಾಮ ಮಂದಿರ(Ram Mandir)ದ ದೇಣಿಗೆ ಕಳ್ಳತನ ಹಗರಣವು ಈಗ ಕೇವಲ ಹಣದ ದುರುಪಯೋಗಕ್ಕೆ ಸೀಮಿತವಾಗಿರದೆ, ಅದರ ಹಿಂದೆ ದೊಡ್ಡ ಮಟ್ಟದ ‘ನಕಲಿ ನೇಮಕಾತಿ ದಂಧೆ’ ನಡೆದಿರುವ ಆಘಾತಕಾರಿ ಸುಳಿವು ಪೊಲೀಸರಿಗೆ ಸಿಕ್ಕಿದೆ. ಉತ್ತರ ಪ್ರದೇಶದ ವಿಶೇಷ ತನಿಖಾ ತಂಡ (SIT) ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ವರದಿ ಸಲ್ಲಿಸಿದ ಬೆನ್ನಲ್ಲೇ, ಅಯೋಧ್ಯಾ ಪೊಲೀಸರು ಆರೋಪಿಗಳ ಮನೆಗಳ ಮೇಲೆ ಏಕಕಾಲಕ್ಕೆ ಭೀಕರ ದಾಳಿ ನಡೆಸಿದ್ದಾರೆ.

ಉದ್ಯೋಗ ದಾಖಲೆಗಳೇ ಮಾಯ, ಸಿಕ್ಕಿಬಿದ್ದ ಆಪ್ತರು ದೇವಾಲಯದ ಒಳಗೆ ಕಾಣಿಕೆ ಹಣ ಎಣಿಸಲು ನೇಮಕಗೊಂಡಿದ್ದ ಸಿಬ್ಬಂದಿಯ ದಾಖಲೆಗಳನ್ನು ಪೊಲೀಸರು ಪರಿಶೀಲಿಸಿದಾಗ ದೊಡ್ಡ ವಂಚನೆ ಬೆಳಕಿಗೆ ಬಂದಿದೆ. ಜೈಲು ಪಾಲಾಗಿರುವ ಹಲವು ಸಿಬ್ಬಂದಿಯ ಅಧಿಕೃತ ನೇಮಕಾತಿ ಪತ್ರಗಳು ಉದ್ಯೋಗ ಒಪ್ಪಂದಗಳು ಅಥವಾ ಯಾವುದೇ ದಾಖಲೆಗಳು ಪೊಲೀಸರಿಗೆ ಇದುವರೆಗೆ ಪತ್ತೆಯಾಗಿಲ್ಲ!

ಸದ್ಯ ನ್ಯಾಯಾಂಗ ಬಂಧನದಲ್ಲಿರುವ ಲವ್ ಕುಶ್ ಮಿಶ್ರಾ ಮತ್ತು ಅನುಕಲ್ಪ್ ಮಿಶ್ರಾ ಎಂಬ ಇಬ್ಬರು ಪ್ರಮುಖ ಆರೋಪಿಗಳು, ತನಿಖೆಯ ವ್ಯಾಪ್ತಿಯಲ್ಲಿರುವ ಟ್ರಸ್ಟ್‌ನ ಉನ್ನತ ಅಧಿಕಾರಿಗಳ ಹತ್ತಿರದ ಸಂಬಂಧಿಕರಾಗಿದ್ದಾರೆ. ಇವರ ಶಿಫಾರಸಿನ ಮೇರೆಗೆ ಬ್ಯಾಕ್ ಡೋರ್ ಎಂಟ್ರಿ ಮೂಲಕ ಯಾರ ನಿರ್ದೇಶನದ ಮೇರೆಗೆ ಇವರನ್ನು ಸೇರಿಸಿಕೊಳ್ಳಲಾಗಿತ್ತು ಎಂಬುದನ್ನು ಪತ್ತೆಹಚ್ಚಲು ಪೊಲೀಸರು ಟ್ರಸ್ಟ್ ಸದಸ್ಯರ ವಿಚಾರಣೆಗೆ ಸಜ್ಜಾಗಿದ್ದಾರೆ.

ಮತ್ತಷ್ಟು ಓದಿ: ರಾಮ ಮಂದಿರ ದೇಣಿಗೆ ಹಗರಣ; 8 ಆರೋಪಿಗಳಿಗೂ 14 ದಿನಗಳ ನ್ಯಾಯಾಂಗ ಬಂಧನ

ಈ ನೇಮಕಗಳ ಹಿಂದೆ ಕೋಟ್ಯಂತರ ರೂಪಾಯಿ ಲಂಚ ಮತ್ತು ಕಮಿಷನ್ ದಂಧೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ಹೀಗಾಗಿ ಬಂಧಿತ ಆರೋಪಿಗಳ ಮತ್ತು ಆಪಾದಿತ ಜಾಲದ ಇತರ ಸದಸ್ಯರ ಎಲ್ಲಾ ಬ್ಯಾಂಕ್ ಖಾತೆಗಳನ್ನು ಪೊಲೀಸರು ಜಾಲಾಡುತ್ತಿದ್ದಾರೆ.

80 ಲಕ್ಷ ರೂ. ನಗದು ವಶ; ಎಸ್‌ಬಿಐಗೂ ತಟ್ಟಿದ ಬಿಸಿ ಜೂನ್ 25 ರಂದು ದಾಖಲಾದ ಎಫ್‌ಐಆರ್ (FIR) ಬಳಿಕ ಈವರೆಗೆ ಎಂಟು ಜನರನ್ನು ಬಂಧಿಸಲಾಗಿದೆ. ಈ ಪೈಕಿ ಆರು ಆರೋಪಿಗಳಿಂದ ಪೊಲೀಸರು ಈಗಾಗಲೇ ಸುಮಾರು 80 ಲಕ್ಷ ರೂಪಾಯಿ ನಗದು ಮತ್ತು ಭಾರಿ ಪ್ರಮಾಣದ ವಿದೇಶಿ ಕರೆನ್ಸಿಯನ್ನು ಜಪ್ತಿ ಮಾಡಿದ್ದಾರೆ.

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಶಾಖೆಗೆ ಕೇವಲ ಸಿಬ್ಬಂದಿಯನ್ನು ಪೂರೈಸಿದ್ದ ಖಾಸಗಿ ಏಜೆನ್ಸಿಗೂ ಈ ಅಕ್ರಮಕ್ಕೂ ಸಂಬಂಧವಿಲ್ಲ ಎಂದು ತಿಳಿದುಬಂದಿದೆ. ಆದರೆ, ಬ್ಯಾಂಕಿನ ವೇತನದಾರರಾಗಿದ್ದುಕೊಂಡು ಕಳ್ಳತನಕ್ಕೆ ಸಾಥ್ ನೀಡಿದ ಸಿಬ್ಬಂದಿ ಹಾಗೂ ಟ್ರಸ್ಟ್ ಅಧಿಕಾರಿಗಳ ನಡುವಿನ ಲಿಂಕ್ ಬಗ್ಗೆ ತನಿಖೆ ನಡೆಯುತ್ತಿದೆ.

ಅಯೋಧ್ಯಾ ಪೊಲೀಸರು ಸ್ಥಳೀಯ ಮ್ಯಾಜಿಸ್ಟ್ರೇಟ್‌ಗಳ ಸಮ್ಮುಖದಲ್ಲಿ ಲವ್ ಕುಶ್ ಮಿಶ್ರಾ, ಅವಿನಾಶ್ ಶುಕ್ಲಾ ಮತ್ತು ರಾಮಶಂಕರ್ ಯಾದವ್ ಸೇರಿದಂತೆ ಎಲ್ಲಾ ಎಂಟು ಆರೋಪಿಗಳ ಮನೆಗಳ ಮೇಲೆ ಏಕಕಾಲಕ್ಕೆ ದಾಳಿ ನಡೆಸಿ ಮಹತ್ವದ ಸಾಕ್ಷ್ಯಗಳನ್ನು ವಶಪಡಿಸಿಕೊಂಡಿದ್ದಾರೆ. ಇದಲ್ಲದೆ, ದೇವಸ್ಥಾನದ ಸುತ್ತಮುತ್ತ ನಡೆದಿರುವ ಜಮೀನು ಖರೀದಿ (ಭೂ ಹಗರಣ) ಪ್ರಕ್ರಿಯೆಯನ್ನೂ ಸಹ ಈಗ ತನಿಖೆಯ ವ್ಯಾಪ್ತಿಗೆ ತರಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಗುರುವಾರ ಯಾವ ರಾಶಿಗೆ ವೃತ್ತಿಯಲ್ಲಿ ಬಡ್ತಿ?
ಗುರುವಾರ ಯಾವ ರಾಶಿಗೆ ವೃತ್ತಿಯಲ್ಲಿ ಬಡ್ತಿ?
ಭಾರೀ ಮಳೆ ಮುನ್ಸೂಚನೆ: ಜು.2ರಂದು ಈ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ
ಭಾರೀ ಮಳೆ ಮುನ್ಸೂಚನೆ: ಜು.2ರಂದು ಈ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ
ರಾಮಮಂದಿರದ ಹುಂಡಿ ಲೂಟಿ: ಆರೋಪಿಗಳ ಬಳಿ ಇದ್ದ ಹಣ ಜಪ್ತಿ
ರಾಮಮಂದಿರದ ಹುಂಡಿ ಲೂಟಿ: ಆರೋಪಿಗಳ ಬಳಿ ಇದ್ದ ಹಣ ಜಪ್ತಿ
ಪಿಚ್ಚರ್ ಚಿತ್ರದ ಮೂಲಕ ಗಾಯಕಿಯಾದ ಶಿಲ್ಪಾ ಗಣೇಶ್; ಬರ್ತಿವೆ ಭರ್ಜರಿ ಆಫರ್ಸ್
ಪಿಚ್ಚರ್ ಚಿತ್ರದ ಮೂಲಕ ಗಾಯಕಿಯಾದ ಶಿಲ್ಪಾ ಗಣೇಶ್; ಬರ್ತಿವೆ ಭರ್ಜರಿ ಆಫರ್ಸ್
ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಬಗ್ಗೆ ಸ್ಪಷ್ಟನೆ ನೀಡಿದ ಸಚಿವ ವಿ ಸೋಮಣ್ಣ
ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಬಗ್ಗೆ ಸ್ಪಷ್ಟನೆ ನೀಡಿದ ಸಚಿವ ವಿ ಸೋಮಣ್ಣ
ಮೊಮ್ಮಕ್ಕಳನ್ನು ಹೇಗೆ ಸಾಕಲಿ’: ಗೋಳಾಡಿದ ಬೀದಿ ವ್ಯಾಪಾರಿ ಅಜ್ಜಿ
ಮೊಮ್ಮಕ್ಕಳನ್ನು ಹೇಗೆ ಸಾಕಲಿ’: ಗೋಳಾಡಿದ ಬೀದಿ ವ್ಯಾಪಾರಿ ಅಜ್ಜಿ
ಸೋಶಿಯಲ್ ಮೀಡಿಯಾ ಹಿರೋ ಆಗಬೇಕು ಅನ್ಕೊಂಡಿದ್ದಿಯಾ? ರೌಡಿಗೆ ಕಮಿಷನರ್ ವಾರ್ನ್
ಸೋಶಿಯಲ್ ಮೀಡಿಯಾ ಹಿರೋ ಆಗಬೇಕು ಅನ್ಕೊಂಡಿದ್ದಿಯಾ? ರೌಡಿಗೆ ಕಮಿಷನರ್ ವಾರ್ನ್
ಸಿ.ಟಿ. ರವಿ ತನ್ನ ಬಾಸ್​​ ಎಂದ ಉಪರಾಷ್ಟ್ರಪತಿ​​: ವಿಡಿಯೋ ವೈರಲ್
ಸಿ.ಟಿ. ರವಿ ತನ್ನ ಬಾಸ್​​ ಎಂದ ಉಪರಾಷ್ಟ್ರಪತಿ​​: ವಿಡಿಯೋ ವೈರಲ್
ಆಪರೇಷನ್ ಫುಟ್​​ಪಾತ್ ಬಗ್ಗೆ ಸಚಿವ ಕೃಷ್ಣಭೈರೇಗೌಡ ಖಡಕ್ ಮಾತು
ಆಪರೇಷನ್ ಫುಟ್​​ಪಾತ್ ಬಗ್ಗೆ ಸಚಿವ ಕೃಷ್ಣಭೈರೇಗೌಡ ಖಡಕ್ ಮಾತು
ಚಾಮುಂಡಿ ಬೆಟ್ಟಕ್ಕೆ ಮೆಟ್ಟಿಲು ಹತ್ತಿ ಬರೋರಿಗೆ ಹಾಲು ಬಿಸ್ಕೆಟ್ ವ್ಯವಸ್ಥೆ!
ಚಾಮುಂಡಿ ಬೆಟ್ಟಕ್ಕೆ ಮೆಟ್ಟಿಲು ಹತ್ತಿ ಬರೋರಿಗೆ ಹಾಲು ಬಿಸ್ಕೆಟ್ ವ್ಯವಸ್ಥೆ!