AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮ ಮಂದಿರ ದೇಣಿಗೆ ಹಗರಣ: ಜುಲೈ 20 ರಂದು ಸುಪ್ರೀಂಗೆ ಮಧ್ಯಂತರ ವರದಿ ಸಿಲ್ಲಿಸಲಿದೆ ಎಸ್​ಐಟಿ

ಅಯೋಧ್ಯೆ ರಾಮ ಮಂದಿರ ದೇಣಿಗೆ ಹಗರಣ ತನಿಖೆ ಅಂತಿಮ ಹಂತ ತಲುಪಿದೆ. ಜುಲೈ 20 ರಂದು ಸುಪ್ರೀಂ ಕೋರ್ಟ್‌ಗೆ ಎಸ್‌ಐಟಿ ಮಧ್ಯಂತರ ವರದಿ ಸಲ್ಲಿಸಲಿದೆ. ದೇಣಿಗೆಯಲ್ಲಿ ನಡೆದ ಆರ್ಥಿಕ ಅಕ್ರಮಗಳ ಕುರಿತ ಈ ವರದಿಯಿಂದ ಮಂದಿರ ಆಡಳಿತದಲ್ಲಿ ಬದಲಾವಣೆ ಸಾಧ್ಯತೆ ಇದೆ. ವಂಚಕರಿಗೆ ಕಠಿಣ ಶಿಕ್ಷೆಯ ಭರವಸೆ ನೀಡಿರುವ ಸರ್ಕಾರ, ದೇಶದ ಜನತೆ ತಾಳ್ಮೆಯಿಂದಿರಲು ಮನವಿ ಮಾಡಿದೆ.

ರಾಮ ಮಂದಿರ ದೇಣಿಗೆ ಹಗರಣ: ಜುಲೈ 20 ರಂದು ಸುಪ್ರೀಂಗೆ ಮಧ್ಯಂತರ ವರದಿ ಸಿಲ್ಲಿಸಲಿದೆ ಎಸ್​ಐಟಿ
ರಾಮ ಮಂದಿರ
ನಯನಾ ರಾಜೀವ್
|

Updated on: Jul 17, 2026 | 2:57 PM

Share

ಅಯೋಧ್ಯೆ, ಜುಲೈ 17: ಅಯೋಧ್ಯೆಯ ರಾಮ ಮಂದಿರ(Ram Mandir)ದ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ಗೆ ಬಂದಿರುವ ದೇಣಿಗೆಯಲ್ಲಿ ನಡೆದಿದೆ ಎನ್ನಲಾದ ಆರ್ಥಿಕ ಅಕ್ರಮಗಳ ತನಿಖೆ ಈಗ ಅಂತಿಮ ಹಂತ ತಲುಪಿದೆ. ಈ ಹಗರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡವು ಜುಲೈ 20ರಂದು ಸುಪ್ರೀಂ ಕೋರ್ಟ್‌ಗೆ ತನ್ನ ಮೊದಲ ಮಧ್ಯಂತರ ವರದಿಯನ್ನು ಸಲ್ಲಿಸಲಿದೆ ಎಂದು ಮೂಲಗಳು ತಿಳಿಸಿವೆ. ನ್ಯಾಯಾಲಯದ ಆದೇಶದಂತೆ ಎಸ್‌ಐಟಿ ತನ್ನ ಶೋಧನೆಗಳನ್ನು ನೇರವಾಗಿ ಸುಪ್ರೀಂ ಕೋರ್ಟ್‌ಗೆ ಒಪ್ಪಿಸಲಿದ್ದು, ಈ ವರದಿಯ ಆಧಾರದ ಮೇಲೆ ರಾಮ ಮಂದಿರದ ಆಡಳಿತ ಮತ್ತು ದೇಣಿಗೆ ಎಣಿಕೆ ವ್ಯವಸ್ಥೆಯಲ್ಲಿ ಭಾರಿ ಬದಲಾವಣೆಗಳಾಗುವ ಸಾಧ್ಯತೆ ಇದೆ.

ಅಂತಿಮ ವರದಿಗಾಗಿ ಹೆಚ್ಚಿನ ಸಮಯ ಕೋರಿದ ಎಸ್‌ಐಟಿ ರಾಮ ಮಂದಿರ ಟ್ರಸ್ಟ್‌ನ ಮನವಿಯ ಮೇರೆಗೆ ಜೂನ್ 13 ರಂದು ಉತ್ತರ ಪ್ರದೇಶ ಸರ್ಕಾರವು ಈ ಮೂವರು ಸದಸ್ಯರ ವಿಶೇಷ ತನಿಖಾ ತಂಡವನ್ನು (SIT) ರಚಿಸಿತ್ತು.  ಆರಂಭದಲ್ಲಿ ತನಿಖೆಗೆ ಕೇವಲ 15 ದಿನಗಳ ಕಾಲಾವಕಾಶ ನೀಡಲಾಗಿತ್ತಾದರೂ, ತನಿಖೆಯ ವ್ಯಾಪ್ತಿ ದೊಡ್ಡದಾಗಿದ್ದರಿಂದ ಜುಲೈ 1 ರಂದು ಅವಧಿಯನ್ನು ಮತ್ತೆ 15 ದಿನ ವಿಸ್ತರಿಸಲಾಗಿತ್ತು.

ಪ್ರಕರಣದ ಆಳವಾದ ಆರ್ಥಿಕ ವಹಿವಾಟುಗಳನ್ನು ಸಂಪೂರ್ಣವಾಗಿ ಪರಿಶೀಲಿಸಬೇಕಾಗಿರುವುದರಿಂದ, ಅಂತಿಮ ವರದಿ ಸಿದ್ಧಪಡಿಸಲು ತನಗೆ ಇನ್ನಷ್ಟು ಹೆಚ್ಚಿನ ಸಮಯ ನೀಡಬೇಕೆಂದು ಎಸ್‌ಐಟಿ ಈಗ ಉತ್ತರ ಪ್ರದೇಶ ಸರ್ಕಾರಕ್ಕೆ ಮನವಿ ಮಾಡಿದೆ. ಜುಲೈ 22 ರಂದು ಅಯೋಧ್ಯೆಯಲ್ಲಿ ರಾಮ ಮಂದಿರ ಟ್ರಸ್ಟ್‌ನ ಪ್ರಮುಖ ಸಭೆ ನಡೆಯಲಿದ್ದು, ಅಲ್ಲಿ ಈ ತನಿಖೆಯ ಬೆಳವಣಿಗೆಗಳ ಬಗ್ಗೆ ಸುದೀರ್ಘ ಚರ್ಚೆ ನಡೆಯಲಿದೆ.

ರಾಮ ಮಂದಿರದ ಹಣದಲ್ಲಿ ವಂಚನೆ ಮಾಡಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಉತ್ತರ ಪ್ರದೇಶ ಸರ್ಕಾರ ಭರವಸೆ ನೀಡಿದೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ರಾಜ್ಯದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ, “ನಾವೆಲ್ಲರೂ ಎಸ್‌ಐಟಿ ವರದಿಗಾಗಿ ಕಾಯುತ್ತಿದ್ದೇವೆ. ದೇಶದ ಜನತೆ ತಾಳ್ಮೆಯಿಂದಿರಲಿ, ರಾಮನ ಹಣವನ್ನು ಲೂಟಿ ಮಾಡಿದ ಯಾರನ್ನೂ ಸರ್ಕಾರ ಬಿಡುವುದಿಲ್ಲ. ಈ ಪವಿತ್ರ ಕಾರ್ಯದಲ್ಲಿ ತಪ್ಪು ಮಾಡಿದವರೆಲ್ಲರೂ ಭಗವಾನ್ ಹನುಮಂತನ ಗದೆಯ ಏಟನ್ನು ಎದುರಿಸಬೇಕಾಗುತ್ತದೆ” ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ. ಟ್ರಸ್ಟ್‌ನ ಹಿರಿಯ ಅಧಿಕಾರಿಗಳು ಕೂಡ ಸದ್ಯಕ್ಕೆ ವರದಿಗಾಗಿ ಕಾಯುತ್ತಿರುವುದಾಗಿ ತಿಳಿಸಿದ್ದಾರೆ.

ಮತ್ತಷ್ಟು ಓದಿ:ರಾಮ ಮಂದಿರ ಹಗರಣ: ಸಂತೋಷ್ ದುಬೆ ವಿಚಾರಣೆ, ಮಹತ್ವದ ಸಾಕ್ಷಿ ಸಲ್ಲಿಕೆಗೆ ಇಂದೇ ಗಡುವು

ಏನಿದು ರಾಮ ಮಂದಿರ ದೇಣಿಗೆ ಪ್ರಕರಣ? ಭಾರತ ಮಾತ್ರವಲ್ಲದೆ ಜಗತ್ತಿನಾದ್ಯಂತ ಕೋಟ್ಯಂತರ ಭಕ್ತರು ಅಯೋಧ್ಯೆ ರಾಮ ಮಂದಿರ ನಿರ್ಮಾಣಕ್ಕಾಗಿ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ಗೆ ನಗದು, ಆನ್‌ಲೈನ್ ಹಾಗೂ ಚೆಕ್‌ಗಳ ಮೂಲಕ ಭಾರಿ ಪ್ರಮಾಣದ ದೇಣಿಗೆ ನೀಡಿದ್ದಾರೆ. ಆದರೆ, ಈ ದೇಣಿಗೆ ಸಂಗ್ರಹ, ಬ್ಯಾಂಕ್ ಖಾತೆಗಳ ನಿರ್ವಹಣೆ ಮತ್ತು ನಗದು ಎಣಿಕೆ ಪ್ರಕ್ರಿಯೆಯಲ್ಲಿ ದೊಡ್ಡ ಮಟ್ಟದ ಆರ್ಥಿಕ ಅಕ್ರಮಗಳು ನಡೆದಿವೆ ಎಂಬ ಗಂಭೀರ ಆರೋಪಗಳು ಕೇಳಿಬಂದಿದ್ದವು. ಸದ್ಯಕ್ಕೆ ತನಿಖೆ ಮುಂದುವರೆದಿದ್ದು, ಇಡೀ ದೇಶದ ಕಣ್ಣು ಜುಲೈ 20 ರಂದು ಸುಪ್ರೀಂ ಕೋರ್ಟ್‌ಗೆ ಸಲ್ಲಿಕೆಯಾಗಲಿರುವ ಎಸ್‌ಐಟಿ ವರದಿಯ ಮೇಲಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More
ಘರ್ ವಾಪ್ಸಿ: ಬಿಜೆಪಿಗೆ ವಾಪಸ್ ಆಗೋ ಬಗ್ಗೆ ಸ್ಫೋಟಕ ಸುಳಿವು ಕೊಟ್ಟ ಈಶ್ವರಪ್ಪ
ಘರ್ ವಾಪ್ಸಿ: ಬಿಜೆಪಿಗೆ ವಾಪಸ್ ಆಗೋ ಬಗ್ಗೆ ಸ್ಫೋಟಕ ಸುಳಿವು ಕೊಟ್ಟ ಈಶ್ವರಪ್ಪ
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
‘ರಾಕ್ಷಸ ಮಂಜ’ನಿಗಾಗಿ ಹಾಡು ಹಾಡಿದ ಕಿರಣ್ ಶಾಸ್ತ್ರಿ: ವಿಡಿಯೋ ನೋಡಿ
‘ರಾಕ್ಷಸ ಮಂಜ’ನಿಗಾಗಿ ಹಾಡು ಹಾಡಿದ ಕಿರಣ್ ಶಾಸ್ತ್ರಿ: ವಿಡಿಯೋ ನೋಡಿ
ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ
ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ
ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ
ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ
ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ
ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ
ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ
ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ
ಮುಸ್ಲಿಂ ಮತದಾರರ ಹೆಸರು ಡಿಲೀಟ್ ಆರೋಪ
ಮುಸ್ಲಿಂ ಮತದಾರರ ಹೆಸರು ಡಿಲೀಟ್ ಆರೋಪ