AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ayodhya Ram Mandir: ಅಯೋಧ್ಯೆಯ ರಾಮಲಲ್ಲಾಗೆ 11 ಕೋಟಿ ರೂ. ಮೌಲ್ಯದ ವಜ್ರದ ಕಿರೀಟ ದಾನ ಮಾಡಿದ ಗುಜರಾತ್​ನ ವಜ್ರ ವ್ಯಾಪಾರಿ

ಅಯೋಧ್ಯೆಯ ರಾಮ ಮಂದಿರದಲ್ಲಿ ಪ್ರತಿಷ್ಠಾಪಿಸಲಾಗಿರುವ ರಾಮಲಲ್ಲಾ ವಿಗ್ರಹಕ್ಕೆ ವಜ್ರದ ಕಿರೀಟ ದಾನವಾಗಿ ಬಂದಿದೆ. ಗುಜರಾತ್​ನ ವಜ್ರದ ವ್ಯಾಪಾರಿ 11 ಕೋಟಿ ರೂ. ಮೌಲ್ಯದ ಕಿರೀಟವನ್ನು ದೇವಸ್ಥಾನಕ್ಕೆ ಅರ್ಪಿಸಿದ್ದಾರೆ.

Ayodhya Ram Mandir: ಅಯೋಧ್ಯೆಯ ರಾಮಲಲ್ಲಾಗೆ 11 ಕೋಟಿ ರೂ. ಮೌಲ್ಯದ ವಜ್ರದ ಕಿರೀಟ ದಾನ ಮಾಡಿದ ಗುಜರಾತ್​ನ ವಜ್ರ ವ್ಯಾಪಾರಿ
ವಜ್ರ ವ್ಯಾಪಾರಿImage Credit source: India Today
ನಯನಾ ರಾಜೀವ್
|

Updated on:Jan 23, 2024 | 10:38 AM

Share

ಅಯೋಧ್ಯೆ(Ayodhya)ಯ ರಾಮ ಮಂದಿರದಲ್ಲಿ ಪ್ರತಿಷ್ಠಾಪನೆಗೊಂಡಿರುವ ರಾಮಲಲ್ಲಾಗೆ ಗುಜರಾತ್​ನ ವಜ್ರದ ವ್ಯಪಾರಿಯು 11 ಕೋಟಿ ರೂ. ಮೌಲ್ಯದ ಕಿರೀಟವನ್ನು ಉಡುಗೊರೆಯಾಗಿ ನೀಡಿದ್ದಾರೆ. 1 ಕೋಟಿ ಮೌಲ್ಯದ ಕಿರೀಟವನ್ನು ಹೊಸದಾಗಿ ನಿರ್ಮಿಸಲಾಗಿಗಿರುವ ರಾಮ ಮಂದಿರದ ರಾಮನಿಗಾಗಿ ವಿಶೇಷವಾಗಿ ರಚಿಸಲಾಗಿದೆ. ಸೂರತ್‌ನ ಗ್ರೀನ್ ಲ್ಯಾಬ್ ಡೈಮಂಡ್ ಕಂಪನಿಯ ಮಾಲೀಕ ಮುಖೇಶ್ ಪಟೇಲ್ ಅವರು 6 ಕಿಲೋಗ್ರಾಂ ತೂಕದ ಕಿರೀಟವನ್ನು ಭಗವಂತ ರಾಮನಿಗೆ ಅರ್ಪಿಸಿದರು, ಚಿನ್ನ, ವಜ್ರಗಳು ಮತ್ತು ಅಮೂಲ್ಯವಾದ ರತ್ನಗಳಿಂದ ಅಲಂಕರಿಸಲಾಗಿದೆ. ಮುಕೇಶ್ ಪಟೇಲ್ ಅವರು ತಮ್ಮ ಕುಟುಂಬದೊಂದಿಗೆ ಖುದ್ದಾಗಿ ಅಯೋಧ್ಯೆಗೆ ಭೇಟಿ ನೀಡಿ ದೇವಾಲಯದ ಟ್ರಸ್ಟ್ ಅಧಿಕಾರಿಗಳಿಗೆ ಕಿರೀಟವನ್ನು ಅರ್ಪಿಸಿದರು.

ರಾಮಮಂದಿರದ ಪ್ರಧಾನ ಅರ್ಚಕರು ಮತ್ತು ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಟ್ರಸ್ಟಿಗಳ ಉಪಸ್ಥಿತಿಯಲ್ಲಿ, ಪ್ರಾಣ ಪ್ರತಿಷ್ಠಾ ಸಮಾರಂಭದಲ್ಲಿ ಮುಖೇಶ್ ಪಟೇಲ್ ಅವರು ಕಿರೀಟವನ್ನು ಹಸ್ತಾಂತರಿಸಿದರು.

ಅಯೋಧ್ಯೆಯಲ್ಲಿ ರಾಮಲಲ್ಲಾನ ವಿಗ್ರಹದ ಪ್ರಾಣ ಪ್ರತಿಷ್ಠೆಯನ್ನು ಅಯೋಧ್ಯೆಯಲ್ಲಿ ಅದ್ಧೂರಿಯಾಗಿ ಮಾಡಲಾಯಿತು. ಪ್ರಧಾನಿ ನರೇಂದ್ರ ಮೋದಿ ಅವರು ಧಾರ್ಮಿಕ ವಿಧಿಗಳಲ್ಲಿ ಮುಖ್ಯ ಯಜಮಾನರಾಗಿ ಪಾಲ್ಗೊಂಡಿದ್ದರು. ದೇವಸ್ಥಾನಕ್ಕೆ ಏನು ನೀಡಬೇಕು ಎನ್ನುವ ಗೊಂದಲದಲ್ಲಿದ್ದರು, ಬಳಿಕ ವಜ್ತದ ಕಿರೀಟವನ್ನು ನೀಡಲು ನಿರ್ಧರಿಸಿದರು.

ಮತ್ತಷ್ಟು ಓದಿ: ವಿಡಿಯೋ ನೋಡಿ: ಅಯೋಧ್ಯೆ ರಾಮ ಮಂದಿರದಲ್ಲಿ ರಾಮ ಲಲ್ಲಾ ದರ್ಶನಕ್ಕೆ ಮೊದಲ ದಿನ ಹೇಗಿತ್ತು ಭಕ್ತರ ರೆಸ್ಪಾನ್ಸ್?

ಪಟೇಲ್ ಚಿನ್ನ ಮತ್ತು ಇತರ ಆಭರಣಗಳಿಂದ ಮಾಡಿದ ಕಿರೀಟವನ್ನು ದಾನ ಮಾಡಲು ನಿರ್ಧರಿಸಿದರು. ಪ್ರತಿಮೆಯನ್ನು ಅಳೆಯಲು ಕಂಪನಿಯ ಇಬ್ಬರು ಉದ್ಯೋಗಿಗಳನ್ನು ಅಯೋಧ್ಯೆಗೆ ಕಳುಹಿಸಲಾಯಿತು, ಅದರ ನಂತರ ಕಿರೀಟದ ತಯಾರಿಕೆಯು ಪ್ರಾರಂಭವಾಯಿತು.

ಮತ್ತಷ್ಟು ಓದಿ: ಅಯೋಧ್ಯೆ: ರಾಮಲಲ್ಲಾನ ದರ್ಶನ ಪಡೆಯಲು ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರ ಆಗಮನ, ನೂಕುನುಗ್ಗಲು

ಕಿರೀಟವು ವಿವಿಧ ಗಾತ್ರದ ವಜ್ರಗಳು, ಮಾಣಿಕ್ಯಗಳು, ಮುತ್ತುಗಳು ಮತ್ತು ನೀಲಮಣಿಗಳ ಜೊತೆಗೆ 4 ಕಿಲೋಗ್ರಾಂಗಳಷ್ಟು ಚಿನ್ನವನ್ನು ಒಳಗೊಂಡಿದೆ.

ಪ್ರಧಾನಿ ಮೋದಿ  ನೇತೃತ್ವದ ಕಾರ್ಯಕ್ರಮದಲ್ಲಿ ಅಯೋಧ್ಯೆ ದೇವಸ್ಥಾನದಲ್ಲಿ ಹೊಸ ರಾಮಲಲ್ಲಾ ವಿಗ್ರಹವನ್ನು ಪ್ರತಿಷ್ಠಾಪಿಸಲಾಯಿತು ಮತ್ತು ಲಕ್ಷಾಂತರ ಜನರು ತಮ್ಮ ಮನೆಗಳಲ್ಲಿ ಮತ್ತು ದೇಶಾದ್ಯಂತದ ದೇವಾಲಯಗಳಲ್ಲಿ ಟಿವಿಯಲ್ಲಿ ವೀಕ್ಷಿಸಿದರು. ಮೈಸೂರು ಮೂಲದ ಶಿಲ್ಪಿ ಅರುಣ್ ಯೋಗಿರಾಜ್ ಅವರು ರಾಮಲಲ್ಲಾ ಮೂರ್ತಿಯನ್ನು ಕೆತ್ತಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 10:34 am, Tue, 23 January 24

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!