ಅಯೋಧ್ಯೆ ರಾಮ ಮಂದಿರ ಉದ್ಘಾಟನೆ: ರಾಮಲಲ್ಲಾ ಗರ್ಭ ಗೃಹದ ಚಿನ್ನದ ಬಾಗಿಲು ಪೂರ್ಣ, ಹೀಗಿದೆ ನೋಡಿ

Ayodhya Ram Mandir consecration: ದೇವಾಲಯದ ಚಿನ್ನ ಲೇಪಿತ ಬಾಗಿಲುಗಳ ಚಿತ್ರವನ್ನು ಇತ್ತೀಚೆಗೆ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗಿತ್ತು. ಇದೀಗ ಚಿನ್ನ ಲೇಪಿತ ಬಾಗಿಲುಗಳ ಸ್ಥಾಪನೆಯೊಂದಿಗೆ ನೆಲ ಮಹಡಿಯ ಎಲ್ಲಾ ಚಿನ್ನದ ಬಾಗಿಲುಗಳ ಸ್ಥಾಪನೆಯ ಕಾರ್ಯವು ಪೂರ್ಣಗೊಂಡಿದೆ ಎಂದು ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ತಿಳಿಸಿದೆ.

ಅಯೋಧ್ಯೆ ರಾಮ ಮಂದಿರ ಉದ್ಘಾಟನೆ: ರಾಮಲಲ್ಲಾ ಗರ್ಭ ಗೃಹದ ಚಿನ್ನದ ಬಾಗಿಲು ಪೂರ್ಣ, ಹೀಗಿದೆ ನೋಡಿ
ರಾಮಲಲ್ಲಾ ಗರ್ಭ ಗೃಹದ ಚಿನ್ನದ ಬಾಗಿಲು ಪೂರ್ಣ
Follow us
Ganapathi Sharma
|

Updated on:Jan 16, 2024 | 7:02 AM

ಅಯೋಧ್ಯೆ, ಜನವರಿ 16: ಅಯೋಧ್ಯೆಯ ರಾಮ ಮಂದಿರ ಉದ್ಘಾಟನೆ (Ayodhya Ram Mandir Inaguration) ಸಮೀಪಿಸುತ್ತಿದ್ದಂತೆಯೇ ನಿರ್ಮಾಣ ಕಾರ್ಯ ಭರದಿಂದ ಸಾಗುತ್ತಿದ್ದು, ರಾಮಲಲ್ಲಾನ ಗರ್ಭ ಗೃಹದ ಚಿನ್ನದ ಬಾಗಿಲುಗಳ ಸ್ಥಾಪನೆ ಕಾರ್ಯ ಪೂರ್ಣಗೊಂಡಿದೆ. ಜನವರಿ 22 ರಂದು ಪವಿತ್ರ ನಗರದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಇತರ ಗಣ್ಯರ ಸಮ್ಮುಖದಲ್ಲಿ ರಾಮಲಲ್ಲಾನ ಪ್ರಾಣ ಪ್ರತಿಷ್ಠೆ ನಡೆಯಲಿದೆ. ಸಮಾರಂಭದಲ್ಲಿ ಸುಮಾರು 7,000 ಜನರು ಪಾಲ್ಗೊಳ್ಳುವ ನಿರೀಕ್ಷೆಯಿದೆ.

‘ಭಗವಾನ್ ಶ್ರೀ ರಾಮಲಲ್ಲಾ ಸರ್ಕಾರ್ ಅವರ ಗರ್ಭಗೃಹದ ಚಿನ್ನದ ಬಾಗಿಲುಗಳ ಸ್ಥಾಪನೆಯೊಂದಿಗೆ, ನೆಲ ಮಹಡಿಯಎಲ್ಲಾ ಚಿನ್ನದ ಬಾಗಿಲುಗಳ ಸ್ಥಾಪನೆಯ ಕಾರ್ಯವು ಪೂರ್ಣಗೊಂಡಿದೆ’ ಎಂದು ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಸಾಮಾಜಿಕ ಮಾಧ್ಯಮ ಎಕ್ಸ್​​​ನಲ್ಲಿ ಸಂದೇಶ ಪ್ರಕಟಿಸಿದೆ.

ಇತ್ತೀಚೆಗೆ, ದೇವಾಲಯದ ಚಿನ್ನ ಲೇಪಿತ ಬಾಗಿಲುಗಳ ಚಿತ್ರವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗಿತ್ತು. ರಾಮನ ವಿಗ್ರಹವಿರುವ ದೇವಾಲಯದ ಗರ್ಭಗುಡಿ ಅಥವಾ ‘ಗರ್ಭ ಗೃಹ’ದ ಭಾರವಾದ ಚಿನ್ನ ಲೇಪಿತ ಬಾಗಿಲುಗಳ ಚಿತ್ರವನ್ನು ಟ್ರಸ್ಟ್ ಸಾಮಾಜಿಕ ಮಾಧ್ಯಮಗಳ ಮೂಲಕ ಬಹಿರಂಗಪಡಿಸಿತ್ತು. ಎಲ್ಲಾ ಬಾಗಿಲುಗಳನ್ನು ಹೈದರಾಬಾದ್ ಮೂಲದ ಕುಶಲಕರ್ಮಿಗಳು ಮಾಡಿದ್ದಾರೆ.

ಸಾಂಪ್ರದಾಯಿಕ ನಾಗರ ಶೈಲಿಯಲ್ಲಿ ನಿರ್ಮಿಸಲಾಗಿರುವ ರಾಮ ಮಂದಿರ ಸಂಕೀರ್ಣವು 380 ಅಡಿ ಉದ್ದ, 250 ಅಡಿ ಅಗಲ ಮತ್ತು 161 ಅಡಿ ಎತ್ತರವನ್ನು ಹೊಂದಿರುವುದು ಗಮನಾರ್ಹ. ಇವುಗಳಲ್ಲದೆ ರಾಮ ಮಂದಿರದ ಪ್ರತಿ ಮಹಡಿ 20 ಅಡಿ ಎತ್ತರ ಇರಲಿದೆ. ಒಟ್ಟಾರೆಯಾಗಿ, ದೇವಾಲಯವು ಒಟ್ಟು 392 ಕಂಬಗಳು ಮತ್ತು 44 ದ್ವಾರಗಳನ್ನು ಹೊಂದಿರುತ್ತದೆ.

ದೇವಸ್ಥಾನದ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರೈ ಅವರು ಸೋಮವಾರ ಮಾಧ್ಯಮಗಳೊಂದಿಗೆ ಮಾತನಾಡಿ, ಮೈಸೂರು ಮೂಲದ ಅರುಣ್ ಯೋಗಿರಾಜ್ ಅವರು ನಿರ್ಮಿಸಿದ ರಾಮಲಲ್ಲಾನ ಹೊಸ ಮೂರ್ತಿಯನ್ನು ದೇವಸ್ಥಾನದಲ್ಲಿ ಪ್ರತಿಷ್ಠಾಪನೆಗೆ ಆಯ್ಕೆ ಮಾಡಲಾಗಿದೆ ಎಂಬ ಅಧಿಕೃತ ಘೋಷಣೆ ಮಾಡಿದ್ದರು. ಪ್ರಸ್ತುತ ರಾಮಲಲ್ಲಾನ ವಿಗ್ರಹವನ್ನು ದೇವಾಲಯದ ಗರ್ಭಗುಡಿಯಲ್ಲಿ ಇರಿಸಲಾಗುವುದು ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ರಾಮಮಂದಿರದಲ್ಲಿ ಪ್ರತಿಷ್ಠಾಪನೆ ಆಗಲಿದೆ ಮೈಸೂರಿನ ಅರುಣ್ ಯೋಗಿರಾಜ್ ನಿರ್ಮಿಸಿದ ರಾಮಲಲ್ಲಾ ವಿಗ್ರಹ

ಹರಿಯಾಣದಲ್ಲಿ ಡ್ರೈ ಡೇ

ಈ ಮಧ್ಯೆ, ಅಯೋಧ್ಯೆಯ ರಾಮಮಂದಿರ ಉದ್ಘಾಟನೆ ಕಾರಣ ಹರಿಯಾಣ ಸರ್ಕಾರ ಸೋಮವಾರ ಜನವರಿ 22 ರಂದು ‘ಡ್ರೈ ಡೇ’ ಘೋಷಿಸಿದೆ. ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಅವರು ಈ ಘೋಷಣೆ ಮಾಡಿದ್ದಾರೆ. ಮಧ್ಯಪ್ರದೇಶ ಮತ್ತು ರಾಜಸ್ಥಾನದ ರಾಜ್ಯ ಸರ್ಕಾರಗಳು ಕೂಡ ರಾಮ ಮಂದಿರ ಉದ್ಘಾಟನೆ ದಿನ ಎಲ್ಲಾ ಮದ್ಯದ ಅಂಗಡಿಗಳನ್ನು ಮುಚ್ಚುವುದಾಗಿ ಈಗಾಗಲೇ ಘೋಷಿಸಿವೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:57 am, Tue, 16 January 24

ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್