‘ಶ್ರೀ ರಾಮ್, ಜೈ ರಾಮ್, ಜೈ ಜೈ ರಾಮ್’ ಪಠಿಸುವಂತೆ ಮುಸ್ಲಿಮರಿಗೆ ಆರ್​​ಎಸ್​ಎಸ್​​ ನಾಯಕ ಮನವಿ

|

Updated on: Jan 01, 2024 | 10:29 AM

ಶಾಂತಿ, ಸೌಹಾರ್ದತೆ ಮತ್ತು ಸಹೋದರತ್ವದ ಸಾಮೂಹಿಕ ಅಭಿವ್ಯಕ್ತಿಗೆ ಇದೊಂದು ಸದವಕಾಶವಾಗಿದೆ. ಇದನ್ನು ಗಮನದಲ್ಲಿಟ್ಟುಕೊಂಡು ಇಸ್ಲಾಂ, ಕ್ರಿಶ್ಚಿಯನ್, ಸಿಖ್ ಧರ್ಮ ಮತ್ತು ಇತರ ನಂಬಿಕೆಗಳನ್ನು ಆಚರಿಸುವ ಜನರು ಧಾರ್ಮಿಕ ಸ್ಥಳಗಳಲ್ಲಿ ಒಳಗೊಳ್ಳುವಿಕೆಯ ಉತ್ಸಾಹದೊಂದಿಗೆ ಪ್ರಾರ್ಥನೆ ಸಲ್ಲಿಸಬೇಕು ಎಂದು ಕುಮಾರ್ ಮನವಿ ಮಾಡಿದ್ದಾರೆ.

‘ಶ್ರೀ ರಾಮ್, ಜೈ ರಾಮ್, ಜೈ ಜೈ ರಾಮ್’ ಪಠಿಸುವಂತೆ ಮುಸ್ಲಿಮರಿಗೆ ಆರ್​​ಎಸ್​ಎಸ್​​ ನಾಯಕ ಮನವಿ
‘ಶ್ರೀ ರಾಮ್, ಜೈ ರಾಮ್, ಜೈ ಜೈ ರಾಮ್’ ಪಠಿಸುವಂತೆ ಮುಸ್ಲಿಮರಿಗೆ ಆರ್​​ಎಸ್​ಎಸ್​​ ನಾಯಕ ಮನವಿ
Follow us on

ನವದೆಹಲಿ, ಜನವರಿ 1: ಅಯೋಧ್ಯೆಯಲ್ಲಿ (Ayodhya) ಜನವರಿ 22 ರಂದು ರಾಮಲಲ್ಲಾನ ಪ್ರಾಣ ಪ್ರತಿಷ್ಠೆ ನಡೆಯುವ ಪ್ರಯುಕ್ತ ‘ಶ್ರೀ ರಾಮ್, ಜೈ ರಾಮ್, ಜೈ ಜೈ ರಾಮ್’ ಎಂಬ ಮಂತ್ರ ಪಠಿಸುಂತೆ ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಸ್ಲಿಂ ರಾಷ್ಟ್ರೀಯ ಮಂಚ್ (MRM) ಮುಖ್ಯ ಪೋಷಕ ಮತ್ತು ಆರ್‌ಎಸ್‌ಎಸ್‌ನ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯ ಇಂದ್ರೇಶ್ ಕುಮಾರ್ ಅವರು ಮುಸ್ಲಿಮರು ಮತ್ತು ಇತರರಿಗೆ ಕರೆ ನೀಡಿದ್ದಾರೆ. ದರ್ಗಾಗಳು, ಮಕ್ತಬ್​ಗಳು, ಮದರಸಾಗಳು ಮತ್ತು ಮಸೀದಿಗಳಲ್ಲಿ ‘ಶ್ರೀ ರಾಮ್, ಜೈ ರಾಮ್, ಜೈ ಜೈ ರಾಮ್’ ಪಠಣ ಮಾಡಬೇಕು ಎಂಬುದಾಗಿ ಎಂಆರ್​ಎಂ ಮನವಿ ಮಾಡಿದೆ. ಅದನ್ನೇ ಪುನರುಚ್ಚರಿಸುತ್ತೇನೆ ಎಂದು ಇಂದ್ರೇಶ್ ಕುಮಾರ್ ಹೇಳಿದ್ದಾರೆ.

ದೇಶದ ವೈವಿಧ್ಯಮಯ ಧಾರ್ಮಿಕ ಸಮುದಾಯಗಳ ಪರಂಪರೆ ಮತ್ತು ವಂಶಾವಳಿಯನ್ನು ಪ್ರಸ್ತಾಪಿಸಿದ ಅವರು, ಸುಮಾರು ಶೇ 99 ರಷ್ಟು ಮುಸ್ಲಿಮರು ಮತ್ತು ಇತರ ಹಿಂದೂಯೇತರರು ಭಾರತದ ಭಾಗವಾಗಿದ್ದಾರೆ ಎಂದು ಹೇಳಿದ್ದಾರೆ.

“ರಾಮ ಮಂದಿರ್, ರಾಷ್ಟ್ರ ಮಂದಿರ್ – ಎ ಕಾಮನ್ ಹೆರಿಟೇಜ್” ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ ಕುಮಾರ್, ಮನೆತನ, ಧಾರ್ಮಿಕ ನಂಬಿಕೆ ಇತ್ಯಾದಿ ವ್ಯತ್ಯಾಸಗಳ ಹೊರತಾಗಿಯೂ ದೇಶದ ಮುಸ್ಲಿಮರು ಹಾಗೂ ಇತರ ಹಿಂದೂಯೇತರರು ಭಾರತದ ಅವಿಭಾಜ್ಯ ಅಂಗವೇ ಆಗಿದ್ದಾರೆ ಎಂದಿದ್ದಾರೆ. ಜತೆಗೆ, ಶಾಂತಿ, ಸೌಹಾರ್ದತೆ ಮತ್ತು ಸಹೋದರತ್ವದ ಸಾಮೂಹಿಕ ಅಭಿವ್ಯಕ್ತಿಗೆ ಕರೆ ನೀಡಿದ್ದಾರೆ.

ಶಾಂತಿ, ಸೌಹಾರ್ದತೆ ಮತ್ತು ಸಹೋದರತ್ವದ ಸಾಮೂಹಿಕ ಅಭಿವ್ಯಕ್ತಿಗೆ ಇದೊಂದು ಸದವಕಾಶವಾಗಿದೆ. ಇದನ್ನು ಗಮನದಲ್ಲಿಟ್ಟುಕೊಂಡು ಇಸ್ಲಾಂ, ಕ್ರಿಶ್ಚಿಯನ್, ಸಿಖ್ ಧರ್ಮ ಮತ್ತು ಇತರ ನಂಬಿಕೆಗಳನ್ನು ಆಚರಿಸುವ ಜನರು ಧಾರ್ಮಿಕ ಸ್ಥಳಗಳಲ್ಲಿ ಒಳಗೊಳ್ಳುವಿಕೆಯ ಉತ್ಸಾಹದೊಂದಿಗೆ ಪ್ರಾರ್ಥನೆ ಸಲ್ಲಿಸಬೇಕು ಎಂದು ಕುಮಾರ್ ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಅಯೋಧ್ಯೆಗೆ ಹೋಗುವವರು ಈ ಐತಿಹಾಸಿಕ ಸ್ಥಳಗಳಿಗೂ ಭೇಟಿ ನೀಡಿ

ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರಾಣಪ್ರತಿಷ್ಠೆ ಕಾರ್ಯಕ್ರಮಕ್ಕೆ ಸಿದ್ಧತೆಗಳು ಭರದಿಂದ ಸಾಗಿವೆ. ಈ ಮಧ್ಯೆ, ಶನಿವಾರ ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ ಹಲವು ಯೋಜನೆಗಳಿಗೆ ಚಾಲನೆ ನೀಡಿದ್ದಾರೆ. ಅಯೋಧ್ಯಾ ಧಾಮ್ ರೈಲು ನಿಲ್ದಾಣ ಹಾಗೂ ವಿಮಾನ ನಿಲ್ದಾಣವನ್ನು ಲೋಕಾರ್ಪಣೆಗೊಳಿಸಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ