ಅಯೋಧ್ಯೆ ರಾಮ ಮಂದಿರ ಪ್ರಾಣ ಪ್ರತಿಷ್ಠೆ: 200 ಕೆಜಿ ಇದೆ ರಾಮ ಲಲ್ಲಾ ಮೂರ್ತಿ!

Ayodhya Ram Mandir: ಜನವರಿ 22 ರಂದು ನಡೆಯುವ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಖ್ಯಸ್ಥ ಮೋಹನ್ ಭಾಗವತ್, ಉತ್ತರ ಪ್ರದೇಶದ ರಾಜ್ಯಪಾಲ ಆನಂದಿಬೆನ್ ಪಟೇಲ್, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಇತರ ಗಣ್ಯರು ಭಾಗವಹಿಸಲಿದ್ದಾರೆ.

ಅಯೋಧ್ಯೆ ರಾಮ ಮಂದಿರ ಪ್ರಾಣ ಪ್ರತಿಷ್ಠೆ: 200 ಕೆಜಿ ಇದೆ ರಾಮ ಲಲ್ಲಾ ಮೂರ್ತಿ!
ಅಯೋಧ್ಯೆ ರಾಮ ಮಂದಿರ ಪ್ರಾಣ ಪ್ರತಿಷ್ಠೆ: 200 ಕೆಜಿ ಇದೆ ರಾಮ ಲಲ್ಲಾ ಮೂರ್ತಿ!
Follow us
TV9 Web
| Updated By: Ganapathi Sharma

Updated on:Jan 17, 2024 | 3:01 PM

ಅಯೋಧ್ಯೆ, ಜನವರಿ 17: ಅಯೋಧ್ಯೆಯ ರಾಮ ಮಂದಿರದಲ್ಲಿ (Ayodhya Ram Mandir) ರಾಮಲಲ್ಲಾ (Ram Lalla) ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ಸಿದ್ಧತೆಗಳು ಪೂರ್ಣಗೊಂಡಿವೆ. ಜನವರಿ 22ರಂದು ಮಧ್ಯಾಹ್ನ 12:20ಕ್ಕೆ ಅಭಿಜಿತ್ ಮುಹೂರ್ತದಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ನಡೆಯಲಿದೆ. ಕಾಶಿಯ ಜ್ಯೋತಿಷಿ ಗಣೇಶ ಶಾಸ್ತ್ರಿ ಈ ಶುಭ ಮುಹೂರ್ತವನ್ನು ನಿಗದಿ ಮಾಡಿದ್ದಾರೆ. ಗರ್ಭಗುಡಿಯಲ್ಲಿ ಪ್ರತಿಷ್ಠಾಪಿಸಲಿರುವ ರಾಮಲಲ್ಲಾ ವಿಗ್ರಹವು ಅಂದಾಜು 200 ಕೆ.ಜಿ. ಇದೆ. ಈ ವಿಗ್ರಹವು ಮಗುವಿನ ರೂಪದ ರಾಮನದ್ದಾಗಿದ್ದು ಜನವರಿ 18 ರಂದು ಗರ್ಭಗುಡಿಯಲ್ಲಿ ಇಡಲಾಗುತ್ತದೆ.

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್​​ನ ಪ್ರಧಾನ ಕಾರ್ಯದರ್ಶಿ ಚಂಪತ್ ರೈ ಮಾತನಾಡಿ, ಜನವರಿ 22 ರಾಮಲಲ್ಲಾ ದೇವರ ಪವಿತ್ರ ದಿನವಾಗಿದೆ. ಶಾಸ್ತ್ರೀಯ ವಿಧಾನ ಅನುಸರಿಸಿ ಅಭಿಜಿತ್ ಮುಹೂರ್ತದಲ್ಲಿ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮ ನಡೆಯಲಿದೆ. ಜನವರಿ 16ರಿಂದಲೇ ಪ್ರಾಣಪ್ರತಿಷ್ಠೆಯ ಆಚರಣೆ ಆರಂಭವಾಗಿದೆ. ಜನವರಿ 18 ರಂದು ಸಂಜೆ ತೀರ್ಥೋದ್ಭವ ಪೂಜೆ ಮತ್ತು ಜಲ ಮೆರವಣಿಗೆಯನ್ನು ಮಾಡಲಾಗುವುದು. 121 ಆಚಾರ್ಯರು ಧಾರ್ಮಿಕ ವಿಧಿಯಲ್ಲಿ ಉಪಸ್ಥಿತರಿರುವರು. ಈ ಆಚರಣೆಯ ಸಂಯೋಜಕರು ಗಣೇಶ್ವರ ಶಾಸ್ತ್ರಿ ಮತ್ತು ಆಚಾರ್ಯ ಶ್ರೀ ಲಕ್ಷ್ಮೀಕಾಂತ್ ದೀಕ್ಷಿತ್ ಆಗಿದ್ದಾರೆ ಎಂದು ತಿಳಿಸಿದ್ದಾರೆ.

ಜನವರಿ 22 ರಂದು ನಡೆಯುವ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಖ್ಯಸ್ಥ ಮೋಹನ್ ಭಾಗವತ್, ಉತ್ತರ ಪ್ರದೇಶದ ರಾಜ್ಯಪಾಲ ಆನಂದಿಬೆನ್ ಪಟೇಲ್, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಇತರ ಗಣ್ಯರು ಭಾಗವಹಿಸಲಿದ್ದಾರೆ. ಈ ಅವಧಿಯಲ್ಲಿ 150ಕ್ಕೂ ಹೆಚ್ಚು ಸಂತರು, ಮಹಾಮಂಡಲೇಶ್ವರ, ಮಂಡಲೇಶ್ವರ, ಶ್ರೀಮಹಾಂತ್, ಮಹಾಂತ್, ನಾಗಾ ಸಾಧುಗಳು ಸಾನ್ನಿಧ್ಯ ವಹಿಸಲಿದ್ದಾರೆ. ಪ್ರಾಣ ಪ್ರತಿಷ್ಠೆ ಕಾರ್ಯಕ್ರಮಕ್ಕಾಗಿ ದೇಶದಾದ್ಯಂತ ನದಿಗಳ ನೀರನ್ನು ತರಲಾಗಿದೆ. ದೇವಸ್ಥಾನದ ಆವರಣದಲ್ಲಿ ಅತಿಥಿಗಳಿಗಾಗಿ 8000 ಕುರ್ಚಿಗಳನ್ನು ಅಳವಡಿಸಲಾಗುತ್ತದೆ. ಜನವರಿ 20 ಮತ್ತು 21 ರಂದು ಸಾರ್ವಜನಿಕ ದರ್ಶನ್ ಬಂದ್ ಆಗಿರಲಿದೆ ಎಂದು ಚಂಪತ್ ರೈ ತಿಳಿಸಿದ್ದಾರೆ.

ಇದನ್ನೂ ಓದಿ: ಕನಸಲ್ಲಿ ಕಂಡ ರಾಮನ ದರ್ಶನಕ್ಕೆ ಅಯೋಧ್ಯೆಗೆ 700 ಕಿಮೀ ಪಾದಯಾತ್ರೆ ಹೊರಟ ಮುಸ್ಲಿಂ ಮಹಿಳೆ!

ರಾಮ ಲಲ್ಲಾ ಪ್ರತಿಷ್ಠಾಪನೆ ಕಾರ್ಯಕ್ರಮಕ್ಕಾಗಿ ದೇಶಾದ್ಯಂತದ ಋಷಿಗಳು ಮತ್ತು ಸಂತರನ್ನು ಅಯೋಧ್ಯೆಗೆ ಆಹ್ವಾನಿಸಲಾಗಿದೆ. ಇದೇ ವೇಳೆ ಅಯೋಧ್ಯೆಯ ಭದ್ರತೆಯನ್ನು ಹೆಚ್ಚಿಸಲಾಗಿದೆ. ಆಹ್ವಾನಿತರು ಮತ್ತು ಅಯೋಧ್ಯೆಯ ನಿವಾಸಿಗಳು ಮಾತ್ರ ಜನವರಿ 22 ರಂದು ರಾಮ ಮಂದಿರಕ್ಕೆ ಭೇಟಿ ನೀಡಲು ಅವಕಾಶವಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:58 pm, Wed, 17 January 24

ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ