Ayodhya Ram Mandir: ಅಯೋಧ್ಯೆಯಲ್ಲಿ ಪ್ರಧಾನಿ ಮೋದಿಯ ಇಂದಿನ ಕಾರ್ಯಕ್ರಮಗಳ ವಿವರ ಇಲ್ಲಿದೆ

ಅಯೋಧ್ಯೆ ರಾಮಮಂದಿರದಲ್ಲಿ ಸೋಮವಾರ ಶ್ರೀರಾಮಲಲ್ಲಾ ಮೂರ್ತಿ ‘ಪ್ರಾಣ ಪ್ರತಿಷ್ಠೆ’ ಸಮಾರಂಭ ನಡೆಯಲಿದೆ. ಈ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಭಾಗಿಯಾಗಲಿದ್ದಾರೆ. ಹಾಗಿದ್ದರೆ ಪ್ರಧಾನಿ ಮೋದಿಯವರ ಸೋಮವಾರದ ವೇಳಾಪಟ್ಟಿ ಹೇಗಿರಲಿದೆ? ಇಲ್ಲಿದೆ ಓದಿ..

Ayodhya Ram Mandir: ಅಯೋಧ್ಯೆಯಲ್ಲಿ ಪ್ರಧಾನಿ ಮೋದಿಯ ಇಂದಿನ ಕಾರ್ಯಕ್ರಮಗಳ ವಿವರ ಇಲ್ಲಿದೆ
ಪ್ರಧಾನಿ ನರೇಂದ್ರ ಮೋದಿ
Follow us
H P
| Updated By: ವಿವೇಕ ಬಿರಾದಾರ

Updated on:Jan 22, 2024 | 10:20 AM

ಅಯೋಧ್ಯೆ, ಜನವರಿ 21: ಅಯೋಧ್ಯೆ ರಾಮಮಂದಿರದಲ್ಲಿ (Ayodhya Ram Mandir) ಇಂದು (ಜ.22) ಶ್ರೀರಾಮಲಲ್ಲಾನ (Ram Lalla)  ‘ಪ್ರಾಣ ಪ್ರತಿಷ್ಠೆ’ ಸಮಾರಂಭ ನಡೆಯಲಿದೆ. ಈ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮವನ್ನು ಕಣ್ತುಂಬಿಕೊಳ್ಳಲು ಕೋಟ್ಯಾಂತರ ಭಕ್ತಾದಿಗಳು ಕಾತುರರಾಗಿದ್ದಾರೆ. ಪ್ರಾಣ ಪ್ರತಿಷ್ಠೆ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು (Narendra Modi) ಭಾಗಿಯಾಗಲಿದ್ದಾರೆ. ಹಾಗಿದ್ದರೆ ಪ್ರಧಾನಿ ಮೋದಿಯವರ ಸೋಮವಾರದ ವೇಳಾಪಟ್ಟಿ ಹೇಗಿರಲಿದೆ? ಇಲ್ಲಿದೆ ಓದಿ..

ಪ್ರಧಾನಿ ನರೇಂದ್ರ ಮೋದಿಯವರು ಅಯೋಧ್ಯೆಯಲ್ಲಿ ಸುಮಾರು ಐದು ಗಂಟೆಗಳ ಕಾಲ ಇರಲಿದ್ದಾರೆ. ಪ್ರಧಾನಿ ಮೋದಿಯವರು ಬೆಳಗ್ಗೆ 10.30ಕ್ಕೆ ಅಯೋಧ್ಯೆಯ ಮಹರ್ಷಿ ವಾಲ್ಮೀಕಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತಲಪುತ್ತಾರೆ. 10.45ಕ್ಕೆ ಹೆಲಿಪ್ಯಾಡ್​ಗೆ ಹೋಗುತ್ತಾರೆ. ಬಳಿಕ ಹೆಲಿಕಾಪ್ಟರ್​ ಮೂಲಕ 10.55ಕ್ಕೆ ಶ್ರೀರಾಮ ಮಂದಿರದ ಬಳಿ ನಿರ್ಮಿಸಲಾದ ಹೆಲಿಪ್ಯಾಡ್​​ನಲ್ಲಿ ಲ್ಯಾಂಡ್​ ಆಗುತ್ತಾರೆ. ಬೆಳಗ್ಗೆ 11ರಿಂದ ಮಧ್ಯಾಹ್ನ 12 ಗಂಟೆವರೆಗೂ ಸಮಯ ಕಾಯ್ದಿರಿಸಲಾಗಿದೆ.

ಮಧ್ಯಾಹ್ನ 12.05-12.55ರವರೆಗೆ ಪ್ರಾಣ ಪ್ರತಿಷ್ಠೆ ಕಾರ್ಯದಲ್ಲಿ ಭಾಗಿಯಾಗಲಿದ್ದಾರೆ. ಮಧ್ಯಾಹ್ನ 12.55ಕ್ಕೆ ಪೂಜಾ ಸ್ಥಳದಿಂದ ಹೊರಡಲಿರುವ ಪ್ರಧಾನಿ ಮೋದಿ, ಮಧ್ಯಾಹ್ನ 1 ಗಂಟೆಗೆ ಸಾರ್ವಜನಿಕ ಕಾರ್ಯಕ್ರಮ ನಡೆಯುವ ಸ್ಥಳವನ್ನು ಮುಟ್ಟಲಿದ್ದಾರೆ. ಮಧ್ಯಾಹ್ನ 2 ಗಂಟೆವರೆಗೆ ಸಾರ್ವಜನಿಕ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಾರೆ. ತದನಂತರ ಮಧ್ಯಾಹ್ನ 2.10ಕ್ಕೆ ಕುಬೇರ್ ತಿಲಾಗೆ ಭೇಟಿ ನೀಡಲಿದ್ದಾರೆ.

ಇದನ್ನೂ ಓದಿ: Ayodhya Ram Mandir: ಹೂಗಳಿಂದ ಶೃಂಗಾರಗೊಂಡ ಅಯೋಧ್ಯೆ ರಾಮಮಂದಿರ, ಫೋಟೋಗಳು ಇಲ್ಲಿವೆ

11 ದಿನಗಳ ಕಾಲ ವಿಶೇಷ ಅನುಷ್ಠಾನ ಕೈಗೊಂಡ ಪ್ರಧಾನಿ ಮೋದಿ

ಪ್ರಾಣ ಪ್ರತಿಷ್ಠೆ ಸಮಾರಂಭದಲ್ಲಿ ಭಾಗಿಯಾಗುವ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರು 11 ದಿನ ‘ಅನುಷ್ಠಾನ’ ಕೈಗೊಂಡಿದ್ದಾರೆ. ಪ್ರಧಾನಿ ಮೋದಿ ಅವರು ಜನವರಿ 12 ರಂದಿ ಅನುಷ್ಠಾನ ಆರಂಭಿಸಿದ್ದಾರೆ. ಅನುಷ್ಠಾನದ ಭಾಗವಾಗಿ ಪ್ರತಿ ದಿನ ಬೆಳಗ್ಗೆ ಒಂದು ಗಂಟೆ ಕಾಲ ವಿಶೇಷ ಮಂತ್ರವನ್ನು ಪಠಿಸುತ್ತಿದ್ದಾರೆ.

ಅನುಷ್ಠಾನದ ವೇಳೆ ಪ್ರಧಾನಿ ಮೋದಿಯವರು ಶಿಸ್ತಿನ ದಿನಚರಿಯನ್ನು ಅನುಸರಿಸುತ್ತಿದ್ದಾರೆ. ಅವರು ನೆಲದ ಮೇಲೆ ಮಲಗುತ್ತಿದ್ದಾರೆ. ಗೋ ಪೂಜೆ ಮತ್ತು ಹಸುಗಳಿಗೆ ಆಹಾರ ನೀಡುವಂತಹ ದೈನಂದಿನ ಭಕ್ತಿ ಕಾರ್ಯಗಳಲ್ಲಿ ತೊಡಗಿದ್ದಾರೆ.

ಹಾಗೇ ಅವರು ದೇಶದಾದ್ಯಂತ ಮಹತ್ವದ ದೇವಾಲಯಗಳಿಗೆ ಭೇಟಿ ನೀಡುತ್ತಿದ್ದಾರೆ. ರಾಮಾಯಣ ಪಠಣದಲ್ಲಿ ಪಾಲ್ಗೊಂಡಿದ್ದಾರೆ. ಮಹಾರಾಷ್ಟ್ರದ ನಾಸಿಕ್‌ನ ರಾಮಕುಂಡ್ ಮತ್ತು ಶ್ರೀ ಕಾಳರಾಮ್ ದೇವಾಲಯ, ಗುರುವಾಯೂರಿನ ಕೃಷ್ಣ ದೇವಾಲಯ ಮತ್ತು ಕೇರಳದ ತ್ರಿಪ್ರಯಾರ್ ಶ್ರೀ ರಾಮಸ್ವಾಮಿ ದೇವಾಲಯ ಮತ್ತು ಆಂಧ್ರಪ್ರದೇಶದ ವೀರಭದ್ರ ದೇವಾಲಯ, ತಮಿಳುನಾಡಿನ ತಿರುಚಿರಾಪಳ್ಳಿಯಲ್ಲಿರುವ ಶ್ರೀ ರಂಗನಾಥಸ್ವಾಮಿ ದೇವಾಲಯ ಮತ್ತು ರಾಮೇಶ್ವರಂನಲ್ಲಿರುವ ಶ್ರೀ ಅರುಲ್ಮಿಗು ರಾಮನಾಥಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:34 pm, Sun, 21 January 24

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ